ಎಸ್ ಎಸ್ ಎಲ್ ಸಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

Thursday, January 6th, 2022
Karnataka PUBoard

ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ಪ್ರಕಟಿಸಿದೆ. ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ಪರೀಕ್ಷೆಗಳು ನಡೆಯಲಿದೆ ಎಂದು ತಾತ್ಕಾಲಿಕ ವೇಳಾಪಟ್ಟಿಯಲ್ಲಿ ತಿಳಿಸಲಾಗಿದೆ. ಮಾರ್ಚ್ 28 ರಂದು ಪ್ರಥಮ ಭಾಷೆ –ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ, ಮಾರ್ಚ್ 30 ದ್ವಿತೀಯ ಭಾಷೆ –ಇಂಗ್ಲಿಷ್, ಕನ್ನಡ, ಏಪ್ರಿಲ್ 1 ಕೋರ್ ಸಬ್ಜೆಕ್ಟ್, ಏಪ್ರಿಲ್ 4 ಗಣಿತ, ಸಮಾಜಶಾಸ್ತ್ರ, ಏಪ್ರಿಲ್ 6 ಸಮಾಜ ವಿಜ್ಞಾನ, ಏಪ್ರಿಲ್ 8 […]

ನವದೆಹಲಿಯ ಕರ್ನಾಟಕ ಭವನದಲ್ಲಿ ಖಾಲಿಯಿರುವ ವಿವಿಧ ವೃಂದದ ಹುದ್ದೆಗಳಿಗೆ ಆಯ್ಕೆ ಪಟ್ಟಿ ಪ್ರಕಟ

Saturday, August 7th, 2021
Karnataka Bhavan

ಬೆಂಗಳೂರು : ನವದೆಹಲಿಯ ಕರ್ನಾಟಕ ಭವನದಲ್ಲಿ ದಿನಾಂಕ:20-02-2021ರ ಅಧಿಸೂಚನೆಯಲ್ಲಿ ನವದೆಹಲಿಯ ಕರ್ನಾಟಕ ಭವನದಲ್ಲಿ ಖಾಲಿ ಇರುವ ಗ್ರೂಪ್-ಸಿ ಮತ್ತು ಗ್ರೂಪ್-ಡಿ ಹುದ್ದೆಗಳನ್ನು (ಉಳಿಕೆ ವೃಂದದ 25 ಹಾಗೂ ಹೈದ್ರಾಬಾದ್ ಕರ್ನಾಟಕ ವೃಂದದ 7 ಹುದ್ದೆ ಒಟ್ಟು 32 ಹುದ್ದೆಗಳು) ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳ ದಾಖಲೆ ಪರಿಶೀಲನೆಗಾಗಿ ಹಾಗೂ ಪ್ರಾವೀಣ್ಯತೆ ಪರೀಕ್ಷೆಗಳಿಗಾಗಿ (ಅನ್ವಯಿಸುವ ಹುದ್ದೆಗಳಿಗೆ ಮಾತ್ರ) 1:5 ಅನುಪಾತದಲ್ಲಿ ಆಯ್ಕೆಯಾಗಿರುವ ಅಭ್ಯರ್ಥಿಗಳ ಪಟ್ಟಿಯನ್ನು www.karnatakabhavan.karnataka.gov.in ರಲ್ಲಿ ದಿನಾಂಕ: 14-07-2021 […]

ಕೊವಿಡ್‌ ನಡುವೆಯೂ ಮೊದಲ ದಿನ ಸಾಂಗವಾಗಿ ನಡೆದ ಪರೀಕ್ಷೆ

Monday, August 2nd, 2021
VV-Exam

ಮಂಗಳೂರು:  ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಬಾಕಿ ಉಳಿದಿದ್ದ ಪರೀಕ್ಷೆಗಳು ಆರಂಭವಾಗಿದ್ದು, ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಇಂದು (ಆಗಸ್ಟ್‌ 2) 839 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ (ಬೆಳಗ್ಗೆ 456, ಮಧ್ಯಾಹ್ನ 383). ಪ್ರಥಮ ಬಿ.ಎ (36), ಬಿ.ಎಸ್ಸಿ (109), ಬಿ.ಕಾಂ (289), ತೃತೀಯ ಬಿಸಿಎ (12), ಅಂತಿಮ ಬಿ.ಎ (29), ಬಿ.ಎಸ್ಸಿ (127), ಬಿ. ಕಾಂ (224) ಮತ್ತು ಅಂತಿಮ ಬಿಬಿಎಂ (3) ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಕೊರೋನಾ- 19 ದಿಂದ ಪೀಡಿತವಾಗಿರುವ ಕೇರಳದ […]

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ದ.ಕ ಜಿಲ್ಲೆ ಈ ಬಾರಿಯೂ ರಾಜ್ಯದಲ್ಲಿ ಮೊದಲ ಸ್ಥಾನ

Wednesday, July 21st, 2021
II Puc

ಮಂಗಳೂರು:  ದ್ವಿತೀಯ ಪಿಯುಸಿ ಪರೀಕ್ಷೆ ನಡೆಸದೇ ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿ ಅಂಕಗಳ ಆಧಾರದಲ್ಲಿ ಪಪೂ ಶಿಕ್ಷಣ ಇಲಾಖೆ ಎಲ್ಲರನ್ನೂ ಉತ್ತೀರ್ಣ ಮಾಡಿದೆ. ದ.ಕ ಜಿಲ್ಲೆಯಲ್ಲಿ 600ರಲ್ಲಿ 600 ಅಂಕ ಪಡೆದ 445 ಮಂದಿ ವಿದ್ಯಾರ್ಥಿಗಳು ಇರುವ ಹಿನ್ನೆಲೆಯಲ್ಲಿ ಜಿಲ್ಲೆ ರಾಜ್ಯದಲ್ಲಿ ಮೊದಲ ಸ್ಥಾನ ತನ್ನದಾಗಿಸಿಕೊಂಡಿದೆ. ಸತತ ಎರಡನೇ ಬಾರಿ ದ.ಕ ಜಿಲ್ಲೆ ಈ ಸಾಧನೆ ಮಾಡಿದಂತಾಗಿದೆ. ಕಳೆದ ವರ್ಷದ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲೂ ದ.ಕ ಜಿಲ್ಲೆಯ ಮೊದಲ ಸ್ಥಾನ ಪಡೆದಿತ್ತು,  ದ.ಕ ಜಿಲ್ಲೆಯಲ್ಲಿ ಖಾಸಗಿ ಹೊರತುಪಡಿಸಿ, […]

ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಧೈರ್ಯ ಹೇಳಿದ ಸಚಿವ ಆರ್ ಅಶೋಕ್

Sunday, July 18th, 2021
R Ashoka

ಬೆಂಗಳೂರು  : ಕೋವಿಡ್-19 ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಕಂದಾಯ ಸಚಿವ ಆರ್ ಅಶೋಕ್ ಧೈರ್ಯ ತುಂಬಿದರು. ಆ ವೇಳೆ ಮಾತನಾಡಿದ ಸಚಿವರು “ಯಾರನ್ನೂ ಫೇಲ್ ಮಾಡುವದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಆದ ಶ್ರೀ ಸುರೇಶ್ ಕುಮಾರ್ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಮಾಸ್ಕ್ ಗಳನ್ನು ನಾವೇ ಕೊಡುತ್ತೇವೆ, ಪರೀಕ್ಷಾ ಮೇಲ್ವಿಚಾರಕರಿಗೆ ಲಸಿಕೆ ಹಾಕಲಾಗಿದೆ. ಪ್ರತಿ ಬೆಂಚ್‍ಗೆ ಒಬ್ಬ ವಿದ್ಯಾರ್ಥಿ ಮಾತ್ರ, ಸರ್ಕಾರ ಎಲ್ಲ ರೀತಿಯ ಸುರಕ್ಷಾ ಕ್ರಮಗಳನ್ನು ತೆಗೆದುಕೊಂಡಿದೆ. […]

ಎಸ್‌ಎಸ್‌ಎಲ್‌ಸಿ ಪ್ರವೇಶ ಪತ್ರದ ಮಾಹಿತಿಗೆ ಸಹಾಯವಾಣಿ

Sunday, July 18th, 2021
sslc Exam

ಮಂಗಳೂರು : 2021ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಜುಲೈ 19 ಮತ್ತು 22 ರಂದು ಜಿಲ್ಲೆಯ 179 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, 32,657 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪ್ರವೇಶ ಪತ್ರಗಳು ಆಯಾ ಶಾಲಾ ಲಾಗಿನ್‌ನಲ್ಲಿ ಲಭ್ಯವಿದ್ದು ಶಾಲಾ ಮುಖ್ಯಸ್ಥರ ಮೂಲಕ ವಿದ್ಯಾರ್ಥಿಗಳಿಗೆ ಈಗಾಗಲೇ ಪ್ರವೇಶಪತ್ರಗಳನ್ನು ವಿತರಿಸಲಾಗಿದೆ. ಯಾವುದಾದರೂ ವಿದ್ಯಾರ್ಥಿಗಳಿಗೆ ಜಿಲ್ಲೆಯ ಯಾವುದೇ ಪ್ರೌಢಶಾಲೆಗಳು ಪ್ರವೇಶಪತ್ರವನ್ನು ಸಕಾಲದಲ್ಲಿ ವಿತರಿಸದೇ ಇದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ದೂರವಾಣಿಯಲ್ಲಿ ಸಂಪರ್ಕಿಸಿ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಡಳಿತ ಉಪನಿರ್ದೇಶಕರ ಮೊ.ಸಂ: 9448999337, […]

ಪರೀಕ್ಷೆಗೆ ಸ್ಯಾನಿಟೈಸರ್, ಮಾ‌ಸ್ಕ್ ಗಳ ಕೊಡುಗೆ

Friday, July 9th, 2021
Exam

ಬೆಂಗಳೂರು: ಈ ಬಾರಿಯ ಎಸ್ಸೆಸ್ಸೆಲ್ಲಿ ಪರೀಕ್ಷೆಯು ಸುರಕ್ಷಿತ ವಾತಾವರಣದಲ್ಲಿ ನಡೆಸುವ ಸಲುವಾಗಿ ಹಲವಾರು ಸಂಘ ಸಂಸ್ಥೆಸಗಳು ಮಾಸ್ಕ್, ಸ್ಯಾನಿಟೈಸರ್ ಗಳನ್ನು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಗೆ ನೀಡಿದ್ದಾರೆ. ಈ ಸಂಘ ಸಂಸ್ಥೆಗಳವರು ತಾವು ಪರೀಕ್ಷಾ‌ರ್ಥಿಗಳಿಗೆ ಒದಗಿಸುವ ಪರಿಕರಗಳನ್ನು ಶುಕ್ರವಾರ ಡಿ.ಎಸ್‍.ಇ.ಆರ್.ಟಿ.ಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಕಳೆದ ವರ್ಷದಂತೆಯೇ ಅನೇಕ ಸಂಘಸಂಸ್ಥೆಗಳವರು ನಮ್ಮ ಮಕ್ಕಳ ಹಿತಕ್ಕೋಸ್ಕರ ಮತ್ತು ಪರೀಕ್ಷೆಯ ಸಂದರ್ಭದಲ್ಲಿ […]

ಪಿಯುಸಿ ಸೀಟುಗಳ ಹೆಚ್ಚಳಕ್ಕೆ ಕ್ರಮ – ಸಚಿವ ಸುರೇಶ್ ಕುಮಾರ್

Friday, July 9th, 2021
suresh Kumar

ಬೆಂಗಳೂರು: ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪರೀಕ್ಷೆಗೆ ನೊಂದಾಯಿಸಿದ ಎಲ್ಲ ವಿದ್ಯಾರ್ಥಿಗಳನ್ನು ಪಿ.ಯು.ಸಿ ತರಗತಿಗಳ ಪ್ರವೇಶಕ್ಕೆ ಅವಕಾಶ ನೀಡಲು ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಗಳ ಕುರಿತು ರಾಜ್ಯದ ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬಲು ಶುಕ್ರವಾರ ಡಿ.ಎಸ್.ಇ.ಆರ್.ಟಿ ಯಲ್ಲಿ “ಬನ್ನಿ ವಿದ್ಯಾರ್ಥಿಗಳೇ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಆತ್ಮಸ್ಥೈರ್ಯದಿಂದ ಬರೆಯೋಣ” ಎಂಬ ಧ್ಯೇಯದೊಂದಿಗೆ ರಾಜ್ಯದ […]

ಸಿಬಿಎಸ್ಇ (CBSC)12ನೇ ಪರೀಕ್ಷೆಯನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರ

Tuesday, June 1st, 2021
cbsc

ನವದೆಹಲಿ : ಕೋವಿಡ್ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಸಿಬಿಎಸ್ಇ 12ನೇ ಪರೀಕ್ಷೆಯನ್ನುರದ್ದುಗೊಳಿಸಿದೆ.  ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ. ಕೋವಿಡ್ ಪರಿಸ್ಥಿತಿ ಹಿನ್ನಲೆ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ನಮ್ಮ ವಿದ್ಯಾರ್ಥಿಗಳ ಆರೋಗ್ಯ ಮತ್ತು ಸುರಕ್ಷತೆ ಅತ್ಯಂತ ಮಹತ್ವದ್ದಾಗಿದೆ ಮತ್ತು ಈ ವಿಷಯದಲ್ಲಿ ಯಾವುದೇ ರಾಜಿ ಇಲ್ಲ ಎಂದು ಪ್ರಧಾನಿ ಹೇಳಿದ್ದಾರೆ. ಸಿಬಿಎಸ್‌ಇ ಫಲಿತಾಂಶಗಳನ್ನು ಘೋಷಣೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಸಭೆಯ […]

ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ

Tuesday, July 14th, 2020
PU Karnataka

ಬೆಂಗಳೂರು: ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಬೆಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಮಂಗಳವಾರ ಪ್ರಕಟಿಸಿದರು ಈ ವರ್ಷ ಒಟ್ಟಾರೆ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳ ಪ್ರಮಾಣ ಶೇಕಡಾ 61.80 ಆಗಿದೆ. ಕಳೆದ ವರ್ಷಕ್ಕಿಂತ ಶೇಕಡಾ 0.7ರಷ್ಟು ಫಲಿತಾಂಶ ಹೆಚ್ಚಾಗಿದ್ದು ಕಳೆದ ವರ್ಷ ಶೇಕಡಾ 61.73 ಫಲಿತಾಂಶ ಬಂದಿತ್ತು. ಶೇಕಡಾ 68.73ರಷ್ಟು ಫಲಿತಾಂಶ ಗಳಿಸಿ ಹುಡುಗಿಯರೇ ಮೇಲಗೈ ಸಾಧಿಸಿದ್ದಾರೆ. ರಾಜ್ಯದಲ್ಲಿ ತೇರ್ಗಡೆ ಹೊಂದಿದ ಒಟ್ಟಾರೆ ಹುಡುಗರ ಸಂಖ್ಯೆ […]