ಸಿಸಿಆರ್‌ಬಿ ಘಟಕಕ್ಕೆ ವರ್ಗಾವಣೆ ಗೊಂಡ ಹೆಡ್‌ಕಾನ್‌ಸ್ಟೇಬಲ್ ನಾಪತ್ತೆ

Monday, January 15th, 2024
police

ಮಂಗಳೂರು : ಪೊಲೀಸ್ ಇಲಾಖೆಯಲ್ಲಿ ಸುಮಾರು 15 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜುನಾಥ ಹೆಗ್ಡೆ (41) ನಾಪತ್ತೆಯಾಗಿರುವ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಂಕನಾಡಿ ನಗರ ಠಾಣೆಯಲ್ಲಿ ಹೆಡ್‌ಕಾನ್‌ಸ್ಟೇಬಲ್ ಆಗಿದ್ದ ಮಂಜುನಾಥ ಹೆಗ್ಡೆ ಅವರನ್ನು ಮಂಗಳೂರು ನಗರ ಸಿಸಿಆರ್‌ಬಿ ಘಟಕಕ್ಕೆ ಒಒಡಿ ನೆಲೆಯಲ್ಲಿ ವರ್ಗಾವಣೆಗೊಳಿಸಲಾಗಿತ್ತು. ಅಲ್ಲಿ ಕೆಲಸಕ್ಕೆ ವರದಿ ಮಾಡುವುದಾಗಿ ಹೇಳಿ ಜ.13ರಂದು ಮನೆಯಿಂದ ಹೋಗಿದ್ದರು. ಆ ದಿನ ಮಧ್ಯಾಹ್ನ 1 ಗಂಟೆಗೆ ಮನೆಮಂದಿ ಮಂಜುನಾಥ್‌ರ ಮೊಬೈಲ್‌ಗೆ ಕರೆ ಮಾಡಿದಾಗ ಫೋನ್ ಸ್ವಿಚ್ ಆಫ್ […]

ಕೇರಳ – ಕರ್ನಾಟಕ ಗಡಿಪ್ರದೇಶಗಳಲ್ಲಿ ಕಟ್ಟು ನಿಟ್ಟಿನ ಕ್ರಮ – ಎಡಿಜಿಪಿ ಪ್ರತಾಪ್ ರೆಡ್ಡಿ

Tuesday, August 3rd, 2021
Kerala Border

ಮಂಗಳೂರು  :  ದ.ಕ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಜೊತೆ ಕೇರಳ – ಕರ್ನಾಟಕ ಗಡಿ ಪ್ರದೇಶವಾಗಿರುವ ವಿಟ್ಲ ಠಾಣಾ ವ್ಯಾಪ್ತಿಯ ಸಾಲೆತ್ತೂರು ಸಮೀಪದ ಕೊಡಂಗೆ ಚೆಕ್ ಪೋಸ್ಟ್ ಗೆ  ಕಾನೂನು ಸುವ್ಯವಸ್ಥೆ ಎಡಿಜಿಪಿ ಪ್ರತಾಪ್ ರೆಡ್ಡಿಯವರು ಆಗಮಿಸಿ ಪರಿಶೀಲನೆ ನಡೆಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೇರಳದಲ್ಲಿ ಕೊರೊನಾ ಪ್ರಕರಣ ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳ – ಕರ್ನಾಟಕ ಗಡಿಪ್ರದೇಶಗಳಲ್ಲಿ ಕಟ್ಟು ನಿಟ್ಟಿನ ಕ್ರಮ ಪಾಲಿಸಲಾಗುತ್ತಿದೆ.  ತಲಪಾಡಿಯಲ್ಲಿ ತೆರೆಯಲಾಗಿರುವ ಚೆಕ್ ಪೋಸ್ಟ್,  ವಿಟ್ಲ ಠಾಣಾ ವ್ಯಾಪ್ತಿಯ […]

ಲಿಂಗತ್ವ ಅಲ್ಪಸಂಖ್ಯಾತರು ಆರ್ಥಿಕವಾಗಿ ಸಬಲರಾಗಿ ಸ್ವಾವಲಂಬಿಗಳಾಗಬೇಕು: ಶಿಲ್ಪಾ ಎ.ಜಿ

Monday, November 30th, 2020
Transgender

ಮಂಗಳೂರು : ಸರ್ಕಾರ ತೃತೀಯ ಲಿಂಗದವರ ಅಭಿವೃದ್ಧಿಗೆ ಹಲವಾರು ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ, ಇದರ ಸದ್ಭಳಕೆ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಿ ಸ್ವಾವಲಂಬಿಗಳಾಗಬೇಕು ಎಂದು ಜಿಲ್ಲಾ ಕಾನೂನು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಶಿಲ್ಪಾ ಎ.ಜಿ ಕರೆ ನೀಡಿದರು. ಅವರು ಭಾನುವಾರ ಕದ್ರಿಯ ಬಾಲಭವನದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಮಂಗಳೂರು ವಕೀಲರ ಸಂಘ ಇವರ ಸಂಯುಕ್ತಾ […]

ಮಹಿಳೆಯರ ಸುರಕ್ಷತೆಗಾಗಿ 751 ದ್ವಿಚಕ್ರ ವಾಹನಗಳ ಹಸ್ತಾಂತರ

Wednesday, November 11th, 2020
bicycle

ಬೆಂಗಳೂರು : ಪೊಲೀಸ್ ಇಲಾಖೆಯನ್ನು ಮತ್ತಷ್ಟು ಬಲಿಷ್ಠಗೊಳಿಸುವ ಹಾಗೂ ಮಹಿಳೆಯರ ಸುರಕ್ಷತೆ ಮತ್ತು ಭದ್ರತೆಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ ನಿರ್ಭಯ ಯೋಜನೆಯಡಿ 751 ದ್ವಿಚಕ್ರ  ವಾಹನಗಳನ್ನು ರಾಜ್ಯ ಪೊಲೀಸ್ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಮುಂಭಾಗದಲ್ಲಿ ಇಂದು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ನಿರ್ಭಯ ಯೋಜನೆಯಡಿ ರಾಜ್ಯ ಪೊಲೀಸ್ ಇಲಾಖೆಗೆ 751 ದ್ವಿ-ಚಕ್ರ ವಾಹನಗಳನ್ನು ಹಸ್ತಾಂತರಿಸಿ ಮಾತನಾಡಿದ ಅವರು ಪೊಲೀಸ್ ಇಲಾಖೆಗೆ ಇದರಿಂದ ಮತ್ತಷ್ಟು ವೇಗವನ್ನು ನೀಡಿದಂತಾಗುತ್ತದೆ. ಬೆಂಗಳೂರಿನಂತ ಬೃಹತ್ […]

ಡ್ರಗ್ಸ್ ಜಾಲವನ್ನು ಕೊನೆಗಾಣಿಸಲು ಪೊಲೀಸ್ ಇಲಾಖೆಗೆ ಸಂಪೂರ್ಣ ಸ್ವಾತಂತ್ರ್ಯ : ನಳಿನ್ ಕುಮಾರ್ ಕಟೀಲ್

Saturday, September 5th, 2020
Nalin Kumar

ಮಂಗಳೂರು : ಡ್ರಗ್ಸ್ ಜಾಲವನ್ನು ಕೊನೆಗಾಣಿಸಲು ಪೊಲೀಸ್ ಇಲಾಖೆಯ ಕರ್ತವ್ಯದಲ್ಲಿ ಅವರಿಗೆ ಸಂಪೂರ್ಣ ಸ್ವಾತಂತ್ರ್ಯವನ್ನು ನೀಡಲಾಗುವುದು ಎಂದು ಗೃಹಸಚಿವರ ಹೇಳಿಕೆಗೆ ನಮ್ಮ ಕಾರ್ಯಕರ್ತರು, ಪ್ರಜ್ಞಾವಂತ ನಾಗರಿಕರು ಸ್ವಾಗತಿಸಿದ್ದಾರೆ. ಎಷ್ಟೇ ಪ್ರಭಾವಿ ವ್ಯಕ್ತಿಯಾದರೂ ಈ ನೆಲದ ಕಾನೂನನ್ನು ಮುರಿದರೆ ಕ್ಷಮಿಸಲು ಸಾಧ್ಯವೇ ಇಲ್ಲ ಎಂದು ಬಿಜೆಪಿ ಸಂಸದ  ನಳಿನ್ ಕುಮಾರ್ ಕಟೀಲ್ ಟ್ವೀಟ್‌ ಮಾಡಿದ್ದಾರೆ. ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನದ ಮೂಲಕ ಡ್ರಗ್ಸ್ ಜಾಲವನ್ನು ಬುಡಸಮೇತ ಕಿತ್ತು ಹಾಕುವ ತನಕ ವಿರಮಿಸುವ ಪ್ರಶ್ನೆನೆ ಇಲ್ಲ ಎಂದು  ಅವರು ಹೇಳಿದ್ದಾರೆ ಡ್ರಗ್ಸ್ ಜಾಲವನ್ನು ಕೊನೆಗಾಣಿಸಲು […]

ಡ್ರಗ್ ಜಿಹಾದ್ : ಡ್ರಗ್ ಮಾಫೀಯಾದಲ್ಲಿ ರಾಜಕಾರಣಿಗಳು ಹಾಗೂ ಪೊಲೀಸ್ ಇಲಾಖೆ ಕೈವಾಡ ಇದೆ

Thursday, September 3rd, 2020
Drug Jihad

ದಾವಣಗೆರೆ: ಮೈತ್ರಿ ಸರ್ಕಾರ ಪತನಗೊಳಿಸಲು ಬಿಜೆಪಿ ಕಾಂಗ್ರೆಸ್ ನಾಯಕರು ಡ್ರಗ್ ಮಾಫೀಯಾ ಹಣವನ್ನು ಬಳಸಿಕೊಂಡಿದ್ದಾರೆ ಎಂದು ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನೂ ಸಹ ವಿಚಾರಣೆಗೊಳಪಡಿಸಬೇಕೆಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಮೋದ್ ಮುತಾಲಿಕ್, ಡ್ರಗ್ ಮಾಫೀಯಾದಲ್ಲಿ ರಾಜಕಾರಣಿಗಳು ಹಾಗೂ ಪೊಲೀಸ್ ಇಲಾಖೆ ಕೈವಾಡ ಇದೆ, ಪ್ರತಿಯೊಂದು ಮಾಹಿತಿ ಪೊಲೀಸರಿಗೆ ಗೊತ್ತು. ಆದರೆ ರಾಜಕಾರಣಿಗಳು ಅವರ ಕೈ ಕಟ್ಟಿಹಾಕಿದ್ದಾರೆ ಎಂದರು. ಮಾಜಿ ಮುಖ್ಯಮಂತ್ರಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪುತ್ರ ದಿ.ರಾಕೇಶ್ […]

ಮಾದಕ ವಸ್ತು ಇನ್ನಿತರ ಕಾನೂನು ಬಾಹಿರ ಚಟುವಟಿಕೆಗಳು ಕಂಡು ಬಂದಲ್ಲಿ ಪೊಲೀಸ್ ಇಲಾಖೆಯನ್ನು ಸಂಪರ್ಕಿಸಿ

Saturday, February 1st, 2020
bengre

ಮಂಗಳೂರು : ಮಕ್ಕಳ ಹಕ್ಕುಗಳ ರಕ್ಷಣೆಗಾಗಿ, ಚೈಲ್ಡ್‌ಲೈನ್-1098ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವರೇ ತೋಟ ಬೆಂಗರೆ ಸ್ಯಾಂಡ್ಸ್‌ಪಿಟ್ ಅಂಗನವಾಡಿ ಕೇಂದ್ರದಲ್ಲಿ ತೆರೆದ ಮನೆ ಎಂಬ ಕಾರ್ಯಕ್ರಮ ಜರುಗಿತು. ಈ ಕಾರ್ಯಕ್ರಮದಲ್ಲಿ ಮಕ್ಕಳ ಸ್ನೇಹಿ ಮತ್ತು ಜನಸ್ನೇಹಿ ಪೊಲೀಸ್ ವ್ಯವಸ್ಥೆ ಜಾರಿಯಾಗಿದ್ದು, ಸ್ಥಳೀಯ ಪ್ರದೇಶದಲ್ಲಿ ಗಾಂಜಾ, ಡ್ರಗ್ಸ್, ಮಾದಕ ವಸ್ತು ಸೇವನೆ, ಮಾರಾಟ ಇನ್ನಿತರ ಕಾನೂನು ಬಾಹಿರ ಚಟುವಟಿಕೆಗಳು ಕಂಡುಬಂದಲ್ಲಿ ಪೊಲೀಸ್ ಇಲಾಖೆಯನ್ನು ಭಯಮುಕ್ತವಾಗಿ ಸಂಪರ್ಕಿಸುವಂತೆ ಪಣಂಬೂರು ಪೊಲೀಸ್ ಠಾಣೆಯ ಎ.ಎಸ್.ಐ ಅಶೋಕ್ ಕುಮಾರ್ ತಿಳಿಸಿದರು. ಚೈಲ್ಡ್‌ಲೈನ್-1098 ದಿನದ24 ಗಂಟೆಯೂ […]

ಸುಬ್ರಹ್ಮಣ್ಯ : ಕುಮಾರ ಪರ್ವತ ಚಾರಣಕ್ಕೆ ಹೋದ ಯುವಕ ನಾಪತ್ತೆ

Tuesday, September 17th, 2019
santosh

ಸುಬ್ರಹ್ಮಣ್ಯ : ಪುಷ್ಪಗಿರಿ ವನ್ಯಧಾಮ ವ್ಯಾಪ್ತಿಯ ಕುಮಾರ ಪರ್ವತ ಚಾರಣಕ್ಕೆ ಶನಿವಾರ ತೆರಳಿದ ತಂಡದ ಪೈಕಿ ಬೆಂಗಳೂರು ಗಾಯತ್ರಿ ನಗರದ ನಿವಾಸಿ ಸಂತೋಷ್ ನಾಪತ್ತೆಯಾಗಿದ್ದು, ಹುಡುಕಾಟಕ್ಕೆ ನಾಲ್ಕು ತಂಡಗಳು ಮಂಗಳವಾರ ಬೆಳಿಗ್ಗೆ ಪುಷ್ಪಗಿರಿ ವನ್ಯಧಾಮದ ಗಿರಿಗದ್ದೆ ಕಡೆಗೆ ತೆರಳಿದ್ದಾರೆ. ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ಗ್ರಾ.ಪಂಚಾಯತ್ ಅಧಿಕಾರಿಗಳನ್ನು ಒಳಗೊಂಡ ತಂಡದ ಜತೆ ಸುಬ್ರಹ್ಮಣ್ಯ ಸ್ಥಳಿಯ ಹಾಗೂ ದೇವರಗದ್ದೆಯ ನುರಿತ ಯುವಕರ ತಂಡ ಶೋಧಕ್ಕೆ ತೆರಳಿದೆ. ಸುಬ್ರಹ್ಮಣ್ಯ ಪೊಲೀಸ್ ಠಾಣೆ ಅರಣ್ಯ ಇಲಾಖೆ ಅಧಿಕಾರಿಗಳು ಅಲ್ಲದೆ ಪುತ್ತೂರು, ಬೆಳ್ಳಾರೆ, […]

ಅಜಿತ್ ಕುಮಾರ್ ರೈ ಮಾಲಾಡಿಯಿಂದ ಚುನಾವಣಾಧಿಕಾರಿ, ಪೊಲೀಸ್ ಇಲಾಖೆಗೆ ದೂರು

Wednesday, March 20th, 2019
Ajith Kumar

ಮಂಗಳೂರು: ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ದ್ವೇಷದಿಂದ ಅಥವಾ ರಾಜಕೀಯ ಲಾಭಗಳನ್ನು ಪಡೆಯುವ ಉದ್ದೇಶಕ್ಕಾಗಿ ಸಾಮಾಜಿಕ ಜಾಲತಾಣದಲ್ಲಿ ನನ್ನ ಹೆಸರಿನಲ್ಲಿ ಸುಳ್ಳು ಸುದ್ದಿಗಳನ್ನು ಪಸರಿಸುತ್ತಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಪೊಲೀಸ್ ಇಲಾಖೆಗೆ ದೂರು ನೀಡಲಾಗಿದೆ ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈ ತಿಳಿಸಿದ್ದಾರೆ. ತನ್ನನ್ನು ಎಲ್ಲ ರಾಜಕೀಯ ಪಕ್ಷದ ಅಭ್ಯರ್ಥಿಗಳೂ ಸಂಪರ್ಕಿಸಿದ್ದಾರೆ. ಆದರೆ, ಚುನಾವಣೆಯಲ್ಲಿ ತಾನು ತಟಸ್ಥ ಧೋರಣೆಯನ್ನು ಅನುಸರಿಸುವುದಾಗಿ ಸ್ಪಷ್ಟಪಡಿಸಿದ್ದೇನೆ. ಸಂಘವು ಯಾವುದೇ ವ್ಯಕ್ತಿ, ಪಕ್ಷ ಅಥವಾ […]

ಪೊಲೀಸ್​​​ ಇಲಾಖೆಗೆ ಮತ್ತೆ ಸರ್ಜರಿ… 29 ಪಿಎಸ್ಐಗಳ ವರ್ಗಾವಣೆ

Tuesday, December 4th, 2018
police

ಬೆಂಗಳೂರು: ಕರ್ನಾಟಕ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್. ರಾಜು ಅವರು 29 ಪಿಎಸ್ಐಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ್ದಾರೆ. ಈಗಾಗಲೇ ಸಿಲಿಕಾನ್ ಸಿಟಿಯಲ್ಲಿ ಹಾಗೂ ರಾಜ್ಯದ ವಿವಿಧ ಜಿಲ್ಲೆಯಲ್ಲಿ‌ ಕಾರ್ಯನಿರ್ವಹಿಸುತ್ತಿದ್ದ 29 ಪಿಎಸ್ಐಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ. ವರ್ಗಾವಣೆಗೊಂಡ ಪಿಎಸ್ಐಗಳು ಆದಷ್ಟು‌ ಬೇಗ‌ ತಮಗೆ ನೀಡಿದ ಠಾಣಾ ವ್ಯಾಪ್ತಿಯಲ್ಲಿ ಕೆಲಸ‌ ನಿರ್ವಹಿಸಬೇಕೆಂದು ತಿಳಿಸಲಾಗಿದೆ.