ಉಡುಪಿ ನೇಜಾರಿನಲ್ಲಿ ನಾಲ್ವರ ಬರ್ಬರ ಹತ್ಯೆ, ಶಂಕಿತ ಆರೋಪಿಯನ್ನು ಪತ್ತೆ ಹಚ್ಚಿದ ಪೊಲೀಸರು

Wednesday, November 15th, 2023
praveen-arun-chowwgule

ಉಡುಪಿ : ಸಿಸಿಟಿವಿ ದೃಶ್ಯಾವಳಿ ಹಾಗೂ ಫೋನ್ ಕರೆಗಳ ದಾಖಲೆಗಳ ಆಧಾರದ ಮೇಲೆ ಉಡುಪಿ ಯಲ್ಲಿ ಮೂವರು ಮಕ್ಕಳು ಸೇರಿದಂತೆ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಭಂದಿಸಿದಂತೆ ಮಹಾರಾಷ್ಟ್ರದ ಸಾಂಗ್ಲಿ ಮೂಲದ ಓರ್ವ ವ್ಯಕ್ತಿ ಬೆಳಗಾವಿಯಲ್ಲಿ ವಶಕ್ಕೆ ಪಡೆದು ಉಡುಪಿಗೆ ಕರೆ ತರಲಾಗುತ್ತಿದೆ. ವಶಕ್ಕೆ ಪಡೆದ ಶಂಕಿತನನ್ನು ಪ್ರವೀಣ್ ಅರುಣ್ ಚೌಗಲೆ ಎಂದು ಗುರುತಿಸಲಾಗಿದೆ. ಆತನ ಚಹರೆ, ಎತ್ತರ ಮತ್ತು ಫೋನ್ ಲೊಕೇಶನ್ ಹೊಂದಿಕೆಯಾಗಿದೆ. ಇದರಿಂದ ಆತನನ್ನು ಪೊಲೀಸರು ವಶಕ್ಕೆ ಪಡೆದು ಉಡುಪಿಗೆ ಕರೆ ತರುತ್ತಿದ್ದಾರೆ. ಮೃತಪಟ್ಟ […]

ಬಂಟ್ವಾಳ ತಾಲೂಕು ಆಸ್ಪತ್ರೆಯಲ್ಲಿ ಮೊಬೈಲ್ ಕಳ್ಳತನ, ಸಿ.ಸಿ.ಕ್ಯಾಮರಾದಲ್ಲಿ ಸೆರೆ

Thursday, September 21st, 2023
ಬಂಟ್ವಾಳ ತಾಲೂಕು ಆಸ್ಪತ್ರೆಯಲ್ಲಿ ಮೊಬೈಲ್ ಕಳ್ಳತನ, ಸಿ.ಸಿ.ಕ್ಯಾಮರಾದಲ್ಲಿ ಸೆರೆ

ಬಂಟ್ವಾಳ : ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ರೋಗಿಗಳ ಮೊಬೈಲ್ ಕಳ್ಳತನ ಮಾಡಿದ ಆರೋಪಿಯ ಚಹರೆ ಗಮ‌ನಿಸಿದವರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಎಂದು ಫೋಟೋ ಅಂಟಿಸಲಾಗಿದೆ. ಪೊಲೀಸ್ ಸಿಬ್ಬಂದಿಯೋರ್ವರ ಎರಡು ಮೊಬೈಲ್ ಫೋನ್ ಕಳವಾದ ಬಗ್ಗೆ ಹಾಗೂ ಕಳೆದ ವಾರ ಐಸಿಯು ಘಟಕದೊಳಗೆ ನುಗ್ಗಿ ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧೆಯೋರ್ವರಲ್ಲಿ “ಒಮ್ಮೆ ಫೋನ್ ಕೊಡಿ ಅಜ್ಜಿ ಅರ್ಜೆಂಟಾಗಿ ಫೋನ್ ಮಾಡಲು ಇದೆ” ಎಂದು ಹೇಳಿ ಮೊಬೈಲ್ ಪಡೆದುಕೊಂಡು ಹೋದ ವ್ಯಕ್ತಿ ಮೊಬೈಲ್ ನೊಂದಿಗೆ […]

ವೃದ್ಧೆ ತಾಯಿಯನ್ನೇ ರಸ್ತೆಯಲ್ಲಿ ಬಿಟ್ಟ ಪೊಲೀಸ್ ಸಿಬ್ಬಂದಿ, ಆಶಾ ಕಾರ್ಯಕರ್ತೆ ಹಾಗೂ ಮನೆಯವರು

Tuesday, February 2nd, 2021
elderly Woman

ಬೆಳ್ತಂಗಡಿ  : ಐದು ಜನ ಮಕ್ಕಳು  ವೃದ್ಧೆ ತಾಯಿಯನ್ನು ರಸ್ತೆಯಲ್ಲೇ ಬಿಟ್ಟು ಹೋಗಿರುವ ಘಟನೆ ಬೆಳ್ತಂಗಡಿಯ ಕಳಿಯದ ನಾಳ ಎಂಬಲ್ಲಿ ನಡೆದಿದೆ. ಈ ವೃದ್ಧೆ ತಾಯಿಯ ಮಕ್ಕಳ ಪೈಕಿ ಒಬ್ಬರು ಆಶಾ ಕಾರ್ಯಕರ್ತೆಯಾಗಿದ್ದು, ಪುತ್ರನೊಬ್ಬ ಪೊಲೀಸ್ ಸಿಬ್ಬಂದಿಯಾಗಿ ಸೇವೆಯಲ್ಲಿದ್ದಾನೆ ಎಂದು ಹೇಳಲಾಗಿದೆ. ಒಬ್ಬ ಪುತ್ರ ಮಂಗಳೂರಿನಲ್ಲಿ  ಪೊಲೀಸ್ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇನ್ನಿಬ್ಬರು ಪುತ್ರರು ಖಾಸಗಿಯಾಗಿ ಕೆಲಸ ಮಾಡುತ್ತಿದ್ದಾರೆ. ಪುತ್ರಿಯರಲ್ಲಿ ಒಬ್ಬರು ಗೃಹಿಣಿಯಾಗಿದ್ದು, ಮತ್ತೊಬ್ಬರು ಆಶಾ ಕಾರ್ಯಕರ್ತೆಯಾಗಿದ್ದಾರೆ. ಬೀದಿಯಲ್ಲಿದ್ದ ವೃದ್ದೆಯನ್ನು ಗಮನಿಸಿದ ಸಾರ್ವಜನಿಕರು ದ.ಕ. ಜಿಲ್ಲಾ ಸಹಾಯವಾಣಿಗೆ ಕರೆ […]

ಬೇಜವಾಬ್ದಾರಿ ಪೊಲೀಸ್ ಸಿಬ್ಬಂದಿಯಿಂದ ಮನೆಯ ಆವರಣದಲ್ಲಿ ವಾಹನ ತೊಳೆಯುತ್ತಿದ್ದ ಯೋಧನ ಬಂಧನ ಖಂಡನೀಯ

Monday, April 27th, 2020
Ganesh-Karnik

ಮಂಗಳೂರು  :  ಅರೆ ಸೈನಿಕ ಪಡೆಯ ಯೋಧ ಸಚಿನ್ ಸಾವಂತ್ ತನ್ನ ಮನೆಯ ಆವರಣದಲ್ಲಿ ವಾಹನ ತೊಳೆಯುತ್ತಿರುವ ಸಂದರ್ಭದಲ್ಲಿ ಮಾಸ್ಕ್ ಧರಿಸಿಲ್ಲ ಎನ್ನುವ ಒಂದೇ ಒಂದು ಕಾರಣಕ್ಕೆ ಅವರನ್ನು ಸಾರ್ವಜನಿಕವಾಗಿ ಹಿಂಸಿಸಿ ‘ಕೋಳ ಹಾಗೂ ಚೈನ್’ ಮೂಲಕ ಬಂಧಿಸಿ ಪೊಲೀಸ್ ಸ್ಟೇಷನಿನಲ್ಲಿರಿಸಿದ ಅಮಾನುಷ ವರ್ತನೆಯನ್ನು ಅತ್ಯಂತ ಕಟು ಶಬ್ದಗಳಿಂದ ಖಂಡಿಸುತ್ತೇನೆ ಎಂದು ವಿಧಾನ ಪರಿಷತ್ತಿನ ಮಾಜಿ ಸದಸ್ಯ  ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದ್ದಾರೆ ಲಾಕ್ ಡೌನ್ ಸಂದರ್ಭದಲ್ಲಿ ರಾಜ್ಯಾದ್ಯಂತ ಅತ್ಯಂತ ಶ್ಲಾಘನೆಗೆ ಪಾತ್ರರಾದ ಪೊಲೀಸ್ ಇಲಾಖೆ ಇಂತಹ ಕೆಲವೇ […]

ಉಪ ಚುನಾವಣೆ : ಮೂರು ಸಾವಿರಕ್ಕೂ ಅಧಿಕ ಪೊಲೀಸರ ಕಣ್ಗಾವಲು

Tuesday, December 3rd, 2019
Baskar

ಬೆಂಗಳೂರು : ನಗರದ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಉಪ ಚುನಾವಣೆಗೆ ಭಾರೀ ಪೊಲೀಸ್‌ ಬಂದೋಬಸ್ತ್ನಿ ಯೋಜಿಸಲಾಗಿದ್ದು, ಮೂರು ಸಾವಿರಕ್ಕೂ ಅಧಿಕ ಪೊಲೀಸ್‌ ಸಿಬ್ಬಂದಿ ಹಾಗೂ ಅಧಿಕಾರಿಗಳು ಕರ್ತವ್ಯ ನಿರ್ವಹಿಸಲಿದ್ದಾರೆ. ಈ ಕುರಿತು ಸೋಮವಾರ ಮಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್‌, ನಗರ ಕಮಿಷನರೇಟ್‌ ವ್ಯಾಪ್ತಿಗೆ ಬರುವ ಕೆ.ಆರ್‌.ಪುರ, ಯಶವಂತಪುರ, ಮಹಾಲಕ್ಷ್ಮೀ ಲೇಔಟ್‌ ಹಾಗೂ ಶಿವಾಜಿನಗರ ವಿಧಾನಸಭಾ ಕ್ಷೇತ್ರಗಳಲ್ಲಿ 28 ಪೊಲೀಸ್‌ ಠಾಣೆಗಳು ಬರಲಿದ್ದು, ಈ ವ್ಯಾಪ್ತಿಯಲ್ಲಿ ಡಿ.3ರಂದು ಸಂಜೆ 6 ಗಂಟೆಯಿಂದ ಡಿ.6ರಂದು […]

ಕಾಲುವೆಗೆ ಉರುಳಿದ ಬಸ್​… 6 ಮಂದಿ ದುರ್ಮರಣ

Tuesday, October 16th, 2018
accident

ಹೂಗ್ಲಿ: ಬಸ್ವೊಂದು ಕಾಲುವೆಗೆ ಉರುಳಿ ಬಿದ್ದ ಪರಿಣಾಮ 6 ಮಂದಿ ಮೃತಪಟ್ಟಿರುವ ಘಟನೆ ಪಶ್ಚಿಮ ಬಂಗಾಳದ ಹರಿಪಾಲ್ ಎಂಬಲ್ಲಿ ಇಂದು ನಡೆದಿದೆ. ಹೂಗ್ಲಿ ಜಿಲ್ಲೆಯಲ್ಲಿ ನಡೆದ ಅಪಘಾತದಲ್ಲಿ 20 ಮಂದಿ ಗಾಯಗೊಂಡಿದ್ದಾರೆ. ಕೋಲ್ಕತ್ತಾಗೆ ತೆರಳುತ್ತಿದ್ದ ಬಸ್ ಗೊಜಾರಮೋರ್ನ ದಕಾತಿಯ ಕಾಲುವೆಗೆ ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಉರುಳಿ ಬಿದ್ದಿದೆ ಎಂದು ಜಿಲ್ಲಾ ಪೊಲೀಸ್ ಮುಖ್ಯಸ್ಥ ಸುಖೇಶ್ ಜೈನ್ ತಿಳಿಸಿದ್ದಾರೆ. ಸ್ಥಳೀಯರು ಹಾಗೂ ಪೊಲೀಸ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು […]

ಸಿಎಂ ಅವರನ್ನು ಅವಮಾನಿಸಿದ ಪೊಲೀಸ್ ಸಿಬ್ಬಂದಿ ಅಮಾನತು

Friday, November 3rd, 2017
police suspend

ಮಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯದ ಸಂದೇಶ ಪ್ರಕಟಿಸಿದ ಪೊಲೀಸ್ ಸಿಬ್ಬಂದಿಯೊಬ್ಬರನ್ನು ಅಮಾನತು ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಯ ಕಾನ್ಸ್’ಟೇಬಲ್ ರಾಜ ಶಿವಪ್ಪ ಬೆಣ್ಣೆ ಅಮಾನತುಗೊಂಡ ಪೊಲೀಸ್ ಸಿಬ್ಬಂದಿಯಾಗಿದ್ದಾರೆ. ಇವರು ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವಮಾನಿಸಿ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಪ್ರಕಟಿಸಿದ್ದರು. ಇದರ ವಿರುದ್ಧ ದೂರು ಕೂಡ ಸಲ್ಲಿಕೆಯಾಗಿತ್ತು. ಇದೀಗ ಅವರನ್ನು ಕೆಲಸದಿಂದ ವಜಾ ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ […]

ದ.ಕ ಜಿಲ್ಲೆಯಲ್ಲಿ ನಕಲಿ ಅಂಕ ಪಟ್ಟಿ ನೀಡಿ ಪೊಲೀಸ್ ಕೆಲಸ ; ಕಾಂಗ್ರೆಸ್ ಸೇವಾ ದಳದ ಆರೋಪ

Monday, July 8th, 2013
District Congress Seva Dal

ಮಂಗಳೂರು :  ಪೊಲೀಸ್ ಸಿಬ್ಬಂದಿಗಳು ನಕಲಿ ಅಂಕ ಪಟ್ಟಿ ನೀಡಿ ಕೆಲಸ ಪಡೆದಿದ್ದು , ಈ ಹಿನ್ನೆಲೆಯಲ್ಲಿ ಇಂತಹ ಪೊಲೀಸ್ ಅಭ್ಯರ್ಥಿಗಳ ಅಂಕ ಪಟ್ಟಿ ಪರಿಶೀಲಿಸಬೇಕು ಎಂದು ಸೋಮವಾರ ವುಡ್ ಲ್ಯಾಂಡ್ಸ್ ಹೋಟೇಲಿನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ದ.ಕ ಜಿಲ್ಲಾ ಕಾಂಗ್ರೆಸ್ ಸೇವಾ ದಳದ ಮುಖ್ಯ ಸಂಘಟಕರಾದ ಹೆಚ್.ಎಮ್.ಅಶ್ರಫ್ ಆಗ್ರಹಿಸಿದ್ದಾರೆ. 2011ರಲ್ಲಿ ದ.ಕ ಜಿಲ್ಲೆಯಲ್ಲಿ ಆಯ್ಕೆಯಾದ 150 ಅಭ್ಯರ್ಥಿಗಳು ಬೇರೆ ಜಿಲ್ಲೆಗಳಿಂದ ಬಂದವರಾಗಿದ್ದು, ಅವರಿಗೆ ಇಂಗ್ಲೀಷ್ ಭಾಷೆಯ ಸಾಮಾನ್ಯ ಜ್ಞಾನ  ಕೂಡ ಇರಲಿಲ್ಲ. ಇಂತಹ ಅಭ್ಯರ್ಥಿಗಳಿಗೆ ವಾಹನ ಚಾಲಕರ […]