ಯಾವುದೇ ದಾಖಲೆ ಇಲ್ಲದೆ ದೇಶಕ್ಕೆ ಬಂದರೆ ಅದನ್ನ ಸಹಿಸಲು ಆಗಲ್ಲ : ಸಂಸದೆ ಶೋಭಾ ಕರಂದ್ಲಾಜೆ

Saturday, January 18th, 2020
shobha

ಚಿಕ್ಕಮಗಳೂರು : ವೀಸಾದ ಸಮಯ ಮುಗಿದ ಬಳಿಕ ಯಾವ ದೇಶದಲ್ಲೂ ಇರುವಂತಿಲ್ಲ. ಅದೇ ರೀತಿ ನಮ್ಮ ದೇಶದಲ್ಲೂ ಮಾಡುವುದು ತಪ್ಪಲ್ಲ. ಯಾವುದೇ ದಾಖಲೆ ಇಲ್ಲದೆ ಭಾರತಕ್ಕೆ ಬಂದರೆ ಅದನ್ನ ಸಹಿಸಲು ಆಗಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಚಿಕ್ಕಮಗಳೂರಿನ ರಾಷ್ಟ್ರ ಜಾಗರಣಾ ಸಮಿತಿ ವತಿಯಿಂದ ನಗರದಲ್ಲಿ ನಡೆದ ಪೌರತ್ವ ಕಾಯ್ದೆ ಕುರಿತ ಜನ ಜಾಗರಣಾ ಸಮಾವೇಶದಲ್ಲಿ ಅವರು ಮಾತನಾಡಿದರು. ಭಾರತ ಮೊದಲಿನಿಂದಲೂ ವಿಶ್ವದ ಸಾಕಷ್ಟು ಜನಾಂಗಗಳಿಗೆ ಆಶ್ರಯ ನೀಡಿದೆ. ಬಾಂಗ್ಲಾದೇಶ, ಅಫ್ಘಾನಿಸ್ತಾನ ಹಾಗೂ ಪಾಕಿಸ್ತಾನದಲ್ಲಿನ ಧಾರ್ಮಿಕ […]

ಶೇ99 ರಷ್ಟು ಮಂದಿ ಕಾಯ್ದೆಯ ಪರವಾಗಿದ್ದಾರೆ : ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್

Saturday, January 18th, 2020
ravi-kumar

ಮಡಿಕೇರಿ : ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಮಾತನಾಡಿ ಶೇ.1 ರಷ್ಟಿರುವ ಸುಶಿಕ್ಷಿತ ಅನಾಗರೀಕರು ಪೌರತ್ವ ಕಾಯ್ದೆಯನ್ನು ವಿರೋಧಿಸುತ್ತಿದ್ದು, ಶೇ.99 ರಷ್ಟು ಮಂದಿ ಕಾಯ್ದೆಯ ಪರವಾಗಿದ್ದಾರೆ ಎಂದರು. ಭಾರತದ ಪಕ್ಕದ ರಾಷ್ಟ್ರಗಳಲ್ಲಿ ಧಾರ್ಮಿಕ ದೌರ್ಜನ್ಯಕ್ಕೆ ತುತ್ತಾಗಿ ಸಂಕಷ್ಟಕ್ಕೆ ಸಿಲುಕುವ ಆರು ಧರ್ಮದವರಿಗೆ ದೇಶದಲ್ಲಿರಲು ಅವಕಾಶ ಕಲ್ಪಿಸುವುದಕ್ಕಾಗಿ ಪೌರತ್ವವನ್ನು ನೀಡುವ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಪಘಾನಿಸ್ತಾನದಲ್ಲಿರುವ ಮುಸಲ್ಮಾನರ ಮೇಲೆ ಧಾರ್ಮಿಕ ಶೋಷಣೆ ನಡೆಯುತ್ತಿದೆಯೇ ಎಂದು ಅವರು ಪ್ರಶ್ನಿಸಿದರು. […]

ಪ್ರತಿಭಟನೆಯನ್ನು ಶಾಸಕರು ನಿರ್ಲಕ್ಷಿಸಿದ್ದಾರೆ : ಕಾಂಗ್ರೆಸ್ ವಕ್ತಾರ ಟಿ.ಈ.ಸುರೇಶ್ ಟೀಕೆ

Thursday, January 9th, 2020
ಪ್ರತಿಭಟನೆಯನ್ನು ಶಾಸಕರು ನಿರ್ಲಕ್ಷಿಸಿದ್ದಾರೆ : ಕಾಂಗ್ರೆಸ್ ವಕ್ತಾರ ಟಿ.ಈ.ಸುರೇಶ್ ಟೀಕೆ

ಮಡಿಕೇರಿ : ಕೇಂದ್ರದ ಪೌರತ್ವ ಕಾಯ್ದೆ ವಿರುದ್ಧ ಕೊಡಗು ಜಿಲ್ಲೆಯಲ್ಲೂ ಕಾಂಗ್ರೆಸ್ ಸೇರಿದಂತೆ ವಿವಿಧ ಸಂಘಟನೆಗಳು, ಸಮಾನ ಮನಸ್ಕ ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಬೃಹತ್ ಪ್ರತಿಭಟನೆಗಳು ನಡೆಸಿದ್ದಾರೆ. ಆದರೆ ಕೊಡಗಿನಲ್ಲಿ ಕಾಯ್ದೆ ವಿರುದ್ಧ ದೊಡ್ಡ ಮಟ್ಟದ ವಿರೋಧ ವ್ಯಕ್ತವಾಗಿಲ್ಲವೆಂದು ದಕ್ಷಿಣ ಕೊಡಗಿನ ಶ್ರೀಮಂಗಲದಲ್ಲಿ ಪೌರತ್ವ ಕಾಯ್ದೆ ಜಾಗೃತಿ ಕಾರ್ಯಕ್ರಮದಲ್ಲಿ ಶಾಸಕ ಕೆ.ಜಿ.ಬೋಪಯ್ಯ ಅವರು ನೀಡಿರುವ ಹೇಳಿಕೆ ಖಂಡನೀಯವೆಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಟಿ.ಈ.ಸುರೇಶ್ ತಿಳಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು ಬಿಜೆಪಿ ನೇತೃತ್ವದ ಸರ್ಕಾರ ನಿರಂತರವಾಗಿ […]

ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿ ಮಾಡುವವರಿಗೆ ಕಠಿಣ ಕ್ರಮವಾಗಬೇಕು : ಸಂಸದ ಪ್ರತಾಪ್ ಸಿಂಹ

Thursday, January 9th, 2020
pratap-simha

ಮಡಿಕೇರಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಲವು ಚಾರಿತ್ರಿಕ ಕ್ರಮ ಕೈಗೊಂಡಿದೆ. ಪೌರತ್ವ ಕಾಯ್ದೆಗೆ ಸಂಬಂಧಿಸಿದಂತೆ ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ತೊಂದರೆ ಮಾಡುವವರ ವಿರುದ್ಧ ಉತ್ತರ ಪ್ರದೇಶ ಸರ್ಕಾರದ ಮಾದರಿಯಲ್ಲಿ ಕಠಿಣ ಕಾನೂನು ಜಾರಿಯಾಗಬೇಕು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮಡಿಕೇರಿಯಲ್ಲಿ ಮಾತನಾಡಿದ ಅವರು ಕೇಂದ್ರ ಸರ್ಕಾರ 370 ನೇ ವಿಧಿ ಹಾಗೂ ತ್ರಿವಳಿ ತಲಾಕ್ ರದ್ದು ಪಡಿಸಿದೆ. ಅಯೋಧ್ಯೆ ತೀರ್ಪು ಸಂದರ್ಭದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿದೆ. ಉತ್ತರ ಭಾರತದ ಗಡಿ ದೇಶಗಳಲ್ಲಿ […]

ಕೇಂದ್ರದ ಪೌರತ್ವ ಕಾಯ್ದೆಗಳಿಂದ ಸರ್ವ ಭಾರತೀಯರಿಗೆ ಅವಮಾನ : ಕೆ.ಹರೀಶ್ ಕುಮಾರ್

Wednesday, January 8th, 2020
harish-kumar

ಮಂಗಳೂರು : ಬಿ.ಜೆ.ಪಿ ನೇತೃತ್ವದ ಕೇಂದ್ರ ಸರಕಾರ ಅಸಮರ್ಪಕ ಆರ್ಥಿಕ ನೀತಿಯಿಂದ ದೇಶದ ಜನತೆ ಕಂಗೆಟ್ಟಿರುವಾಗ ಅವನ್ನೆಲ್ಲಾ ಮರೆ ಮಾಚಲು ಪೌರತ್ವ ಸಂಬಂಧಪಟ್ಟ ಕಾಯ್ದೆಗಳನ್ನು ತರಾತುರಿಯಲ್ಲಿ ಅನುಷ್ಠಾನಗೊಳಿಸಲು ಉದ್ದೇಶಿಸಿರುವುದು ಸರ್ವ ಭಾರತೀಯರಿಗೂ ಸಂವಿಧಾನಕ್ಕೂ ಮಾಡಿದ ಅವಮಾನವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಇಂದು ಹೇಳಿದರು. ದಿನಾಂಕ 07.01.2020ರಂದು ಮಲ್ಲಿಕಟ್ಟೆಯಲ್ಲಿ ಜರುಗಿದ ಜಿಲ್ಲಾ ಕಾಂಗ್ರೆಸ್ ಮಾಸಿಕ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ದೇಶದ ಮಾನವ ಸಂಪನ್ಮೂಲಕ್ಕೆ ಕೊಡಲಿಯೇಟು ನೀಡಲಿರುವ ಈ ಕಾಯ್ದೆಯು ಮತೀಯ ಘರ್ಷಣೆ ಹುಟ್ಟು ಹಾಕಿ […]

ಪೌರತ್ವ ಕಾಯ್ದೆ ಬಗ್ಗೆ ಮುಸ್ಲಿಮರಿಗೆ ಆತಂಕ ಬೇಡ : ಶಾಸಕ ಕೆ.ಜಿ.ಬೋಪಯ್ಯ ಸ್ಪಷ್ಟನೆ

Monday, January 6th, 2020
bommayya

ಮಡಿಕೇರಿ : ಮುಸಲ್ಮಾನರು ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಯಾವುದೇ ಆತಂಕ ಮತ್ತು ಗೊಂದಲ ಪಡುವ ಅಗತ್ಯವಿಲ್ಲವೆಂದು ಶಾಸಕ ಕೆ.ಜಿ.ಬೋಪಯ್ಯ ಸ್ಪಷ್ಟಪಡಿಸಿದ್ದಾರೆ. ಮಡಿಕೇರಿ ನಗರ ಬಿಜೆಪಿ ಘಟಕದ ವತಿಯಿಂದ ಪೌರತ್ವ ಕಾಯ್ದೆ ಬೆಂಬಲಿಸಿ ಜಾಗೃತಿ ಅಭಿಯಾನಕ್ಕೆ ನಗರದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು. ವಿನಾಕಾರಣ ನಡೆಯುತ್ತಿರುವ ಅಪಪ್ರಚಾರಗಳಿಗೆ ಕಿವಿಗೊಡದೆ ಪೌರತ್ವ ತಿದ್ದುಪಡಿ ವಿಧೇಯಕದ ಬಗ್ಗೆ ಸಮಗ್ರ ಮಾಹಿತಿಯನ್ನು ಅರ್ಥ ಮಾಡಿಕೊಂಡಾಗ ಇದು ಮುಸ್ಲಿಂ ವಿರೋಧಿ ಅಲ್ಲ ಎನ್ನುವುದು ಸ್ಪಷ್ಟವಾಗುತ್ತದೆ ಎಂದು ಹೇಳಿದರು. ಅಪಪ್ರಚಾರ ಮಾಡುತ್ತಾ, ಕಾಯ್ದೆ ವಿರುದ್ದ […]

ಕಲಬುರಗಿಯಲ್ಲಿ ಪೌರತ್ವ ಕಾಯ್ದೆ ವಿರೋಧಿಸಿ ಬೃಹತ್ ಪ್ರತಿಭಟನೆಯ ನಡುವೆ ನಮಾಜ್

Thursday, December 19th, 2019
kalaburagi

ಕಲಬುರಗಿ : ಪೌರತ್ವ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಬೃಹತ್ ಪ್ರತಿಭಟನೆಯಲ್ಲಿ ಮುಸ್ಲಿಮರು ನಮಾಜ್ ಮಾಡಿದರು. ನಿಷೇಧಾಜ್ಞೆ ಮಧ್ಯೆಯೇ ನಗರದ ನಗರೇಶ್ವರ ಶಾಲೆಯಿಂದ ಪ್ರಮುಖ ರಸ್ತೆಗಳ ಮೂಲಕ‌ ಐದು ಕಿ.ಮೀ. ದೂರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ ಸಾವಿರಾರು ಮುಸ್ಲಿಮರು ಜಗತ್ ವೃತ್ತದಲ್ಲಿ ಜಮಾವಣೆಗೊಂಡರು. ಮೆರವಣಿಗೆಗೆ ಉದ್ದಕ್ಕೂ ಕೇಂದ್ರ ಸರ್ಕಾರ, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ವಿರುದ್ಧ ಘೋಷಣೆಗಳನ್ನು ಕೂಗಿದರು. ಕಪ್ಪ ಬಾವುಟ, ಕಪ್ಪು ಪಟ್ಟಿ ಧರಿಸಿ ಪೌರತ್ವ ಕಾಯ್ದೆಯನ್ನು ಖಂಡಿಸಿದರು. ಜಗತ್ ವೃತ್ತದಲ್ಲಿ ಮಧ್ಯಾಹ್ನ […]

ಪೌರತ್ವ ಕಾಯ್ದೆಯಿಂದ ಭಾರತೀಯ ಮುಸ್ಲಿಮರಿಗೆ ಧಕ್ಕೆ ಇಲ್ಲ, ದಯವಿಟ್ಟು ಶಾಂತಿ ಪಾಲಿಸಿ; ಶಾಹಿ ಇಮಾಮ್

Wednesday, December 18th, 2019
shahi

ನವದೆಹಲಿ : ದೇಶದ ಹಲವೆಡೆ ಉಗ್ರ ಪ್ರತಿಭಟನೆಗೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಜಾಮಾ ಮಸೀದಿಯ ಶಾಹಿ ಇಮಾಮರು ಪ್ರತಿಕ್ರಿಯಿಸಿದ್ಧಾರೆ. ಪೌರತ್ವ ಕಾಯ್ದೆಯಲ್ಲಿ ಭಾರತೀಯ ಮುಸ್ಲಿಮರಿಗೆ ಧಕ್ಕೆ ಆಗುವಂಥದ್ದೇನಿಲ್ಲ. ಇಂಥ ಸಂದರ್ಭದಲ್ಲಿ ಜನರು ಭಾವಾವೇಶಕ್ಕೆ ಒಳಗಾಗದೇ ಸಂಯಮ ಕಾಯ್ದುಕೊಳ್ಳಬೇಕೆಂದು ಪ್ರತಿಭಟನಾನಿರತ ಮುಸ್ಲಿಮ್ ಬಾಂಧವರಿಗೆ ಶಾಹಿ ಇಮಾಮ್ ಸಯದ್ ಅಹ್ಮದ್ ಬುಖಾರಿ ಕರೆ ನೀಡಿದ್ದಾರೆ. “ಪೌರತ್ವ ತಿದ್ದುಪಡಿ ಕಾಯ್ದೆಯ ಪ್ರಕಾರ ಪಾಕಿಸ್ತಾನ, ಆಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶ ನಾಡುಗಳಿಂದ ಬರುವ ಮುಸ್ಲಿಮ್ ವಲಸಿಗರಿಗೆ ಭಾರತೀಯ ಪೌರತ್ವ ಸಿಗುವುದಿಲ್ಲ. ಆದರೆ, […]