ನೂತನ ಪ್ರವಾಸೋದ್ಯಮ ನೀತಿಯು ಮೂಲ ಸೌಕರ್ಯಗಳ ಅಭಿವೃದ್ಧಿಗೆ ಸಹಕಾರಿ : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ 

Sunday, September 27th, 2020
Tourism day

ಬೆಂಗಳೂರು : ನೂತನ ಪ್ರವಾಸೋದ್ಯಮ ನೀತಿಯು ರಾಜ್ಯದ ಪ್ರಮುಖ ಪ್ರವಾಸಿ ತಾಣಗಳ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಹಾಗೂ ರಾಜ್ಯ ಪ್ರವಾಸೋದ್ಯಮ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಮುಖ್ಯಮಂತ್ರಿ ಬಿಎಸ್. ಯಡಿಯೂರಪ್ಪ ತಿಳಿಸಿದರು. ಅವರು ಇಂದು ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ನೂತನ ಪ್ರವಾಸೋದ್ಯಮ ನೀತಿ 2020-25 ರ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿ, ಪ್ರವಾಸೋದ್ಯಮ ಅಭಿವೃದ್ಧಿಯ ಗುರಿ ಸಾಧಿಸಬೇಕಾದರೆ ಸಮರ್ಪಕ ರೂಪುರೇಷೆಗಳು ಹಾಗೂ ಯೋಜನೆಗಳನ್ನು ಒಳಗೊಂಡ ಒಂದು ನೀತಿಯನ್ನು ರೂಪಿಸಿಕೊಳ್ಳುವುದು ಅನಿವಾರ್ಯವಾಗಿದ್ದು, ಪ್ರವಾಸೋದ್ಯಮದ ಸಮಗ್ರ […]

ಪ್ರವಾಸಿ ತಾಣಗಳಲ್ಲಿ ಸ್ವಚ್ಚತೆಗೆ ಆದ್ಯತೆ ನೀಡಿ : ನಗರಸಭಾ ಪೌರಾಯುಕ್ತ ಎಂ.ಎಲ್. ರಮೇಶ್ ಮನವಿ

Friday, January 3rd, 2020
karyagara

ಮಡಿಕೇರಿ : ಮುಂದಿನ ಪೀಳಿಗೆಗೆ ಪ್ರವಾಸಿ ಸ್ಥಳಗಳು ಹಾಗೂ ಪವಿತ್ರ ಯಾತ್ರ ಸ್ಥಳಗಳನ್ನು ರಕ್ಷಣೆಯೊಂದಿಗೆ ಸ್ವಚ್ಛತೆಗೆ ಆದ್ಯತೆ ನೀಡಬೇಕೆಂದು ನಗರಸಭೆ ಆಯುಕ್ತ ಎಂ.ಎಲ್.ರಮೇಶ್ ಅವರು ಮನವಿ ಮಾಡಿದ್ದಾರೆ. ಭಾರತ ಸರ್ಕಾರದ ಪ್ರವಾಸೋದ್ಯಮ ಇಲಾಖೆ ವತಿಯಿಂದ ಸ್ವಚ್ಛ ಭಾರತ್ ಸ್ವಚ್ಛ ಪರ್ಯಟನ್ ಯೋಜನೆಯ ಪ್ರವಾಸೋದ್ಯಮ ಪಾಲುದಾರರಿಗೆ ಪ್ರವಾಸಿ ಸ್ಥಳಗಳಲ್ಲಿ ಸ್ವಚ್ಛತೆಯ ಮಹತ್ವದ ಕುರಿತು ಕಾರ್ಯಾಗಾರವು ನಗರದ ಹೊಟೇಲ್ ಮಯೂರ ವ್ಯಾಲಿ ವ್ಯೂ ಸಭಾಂಗಣದಲ್ಲಿ ಗುರುವಾರ ನಡೆಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ನಗರಸಭೆ ವತಿಯಿಂದ ಸ್ವಚ್ಛ ಭಾರತ್ ಯೋಜನೆಯಡಿ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಇನ್ನೂ ಅಭಿವೃದ್ಧಿಗೊಳ್ಳಬೇಕಾಗಿದೆ: ಡಾ. ಜಗದೀಶ್

Thursday, December 15th, 2016
Tourism

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಬೆಳೆಯಬೇಕು ಎಂಬ ಕೂಗು ಕೇಳಿಬರುತ್ತಿದ್ದರೂ ಇನ್ನೂ ಅಭಿವೃದ್ಧಿಗೊಳ್ಳಬೇಕಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಡಾ. ಜಗದೀಶ್ ಅಧ್ಯಕ್ಷತೆಯಲ್ಲಿ ಸಾರ್ವಜನಿಕ ಸಂವಾದ, ಸಮಾಲೋಚನಾ ಸಭೆ ನಡೆಯಿತು. ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಫುಲ ಅವಕಾಶಗಳಿದ್ದರೂ ಇದರ ಸದುಪಯೋಗವಾಗುತ್ತಿಲ್ಲ. ಆ ನಿಟ್ಟಿನಲ್ಲಿ ಪ್ರವಾಸಿ ತಾಣಗಳಲ್ಲಿ ಮೂಲಭೂತ ಸೌಕರ್ಯಗಳೊಂದಿಗೆ ಸುಸಜ್ಜಿತ ಸಂಪರ್ಕ ವ್ಯವಸ್ಥೆ, ಶುಚಿತ್ವಕ್ಕೆ ಗಮನಹರಿಸಬೇಕು ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು. ಜಿಲ್ಲೆಯ ಪ್ರವಾಸಿ ತಾಣಗಳಲ್ಲಿರುವ ಸಮಸ್ಯೆಗಳನ್ನು ಬಗೆಹರಿಸಲು ಮತ್ತು ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾದ ಯೋಜನೆ ಅನುಷ್ಠಾನಗೊಳಿಸಲು […]

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಬಾಂಬ್ ನಿಷ್ಕ್ರೀಯ ದಳದಿಂದ ತಪಾಸಣೆ

Friday, August 12th, 2016
Bomb nishkriya dala

ಬಂಟ್ವಾಳ: ಮಂಗಳೂರು ಪೋಲೀಸ್ ವರಿಷ್ಟಾಧಿಕಾರಿ ಭೂಷಣ್ ಜಿ.ಬೋರಾಸೆ ಅವರ ನೇತೃತ್ವದ ಪಶ್ಚಿಮವಲಯದ ಬಾಂಬ್ ನಿಷ್ಕ್ರೀಯ ದಳ ಇವರ ತಂಡದಿಂದ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲೇಯಾದ್ಯಂತ ಪ್ರಮುಖ ಸ್ಥಳಗಳಾದ ಬಸ್ ನಿಲ್ದಾಣ, ಕೋರ್ಟು, ರೈಲ್ವೆ ನಿಲ್ದಾಣ ಮತ್ತು ಪ್ರವಾಸಿ ತಾಣಗಳಲ್ಲಿ ವಿಶೇಷ ತಪಾಸಣೆ ನಡೆಸಿದರು. ಬಂಟ್ವಾಳದಲ್ಲೂ ಖಾಸಗಿ ಬಸ್ ನಿಲ್ದಾಣ, ಕೋರ್ಟು ಮತ್ತು ರೈಲ್ವೆ ನಿಲ್ದಾಣಗಳಲ್ಲಿ ಸಂಚರಿಸಿ ತಪಾಸಣೆ ನಡೆಸಿದರು. ಮೈಸೂರು ನಲ್ಲಿ ನಡೆದ ಘಟನೆಯ ಹಿನ್ನಲೆಯಲ್ಲಿ ಮುಂಜಾಗ್ರತೆಯ ಕ್ರಮವಾಗಿ […]

ಮಂಗಳೂರು :ನೂತನ ಪ್ರವಾಸಿ ತಾಣ “ಕುಡ್ಲ ಕುದ್ರು” ಉದ್ಘಾಟನೆ

Monday, November 26th, 2012
Kudla Kudru island

ಮಂಗಳೂರು :ಶಾಸಕ ಕೃಷ್ಣ ಜೆ ಪಾಲೆಮಾರ್ ರವರು ನಗರದ ಬೊಕ್ಕಪಟ್ಟಣದ ನಡುಕುದ್ರುವಿನಲ್ಲಿ ನೂತನ ಪ್ರವಾಸಿ ತಾಣ ‘ಕುಡ್ಲ ಕುದ್ರುವನ್ನು’ ವನ್ನು ರವಿವಾರ ಸಂಜೆ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಕರಾವಳಿ ಜನತೆಯ ಆಧ್ಯತೆಯ ಮೇರೆಗೆ ಇಲ್ಲಿ ಪ್ರವಾಸಿ ತಾಣಗಳು ರೂಪುಗೊಳ್ಳುತ್ತಿರುವುದು ಒಂದು ಉತ್ತಮ ಬೆಳವಣಿಗೆಯಾಗಿದ್ದು ಈ ಪ್ರವಾಸಿ ತಾಣವು ಕರಾವಳಿ ಪ್ರವಾಸೋಧ್ಯಮಕ್ಕೆ ಹೊಸ ಮುನ್ನುಡಿ ಎಂದವರು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದಾನಸಭಾ ಉಪಸಭಾಪತಿ ಎನ್ ಯೋಗೀಶ್ ಭಟ್ ವಹಿಸಿದ್ದರು. ಮಂಗಳೂರು ಮೇಯರ್ ಗುಲ್ಜಾರ್ ಬಾನು, ಉಪ ಮೇಯರ್ […]