ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಬಾಧಿತ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ ಭೇಟಿ

Thursday, July 29th, 2021
Bommai

ಅಂಕೋಲಾ : ಮುಖ್ಯಮಂತ್ರಿ ಬಸವರಾಜ.ಎಸ್. ಬೊಮ್ಮಾಯಿ ಅವರು ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆ ನಡೆಸಿದರು. ಜುಲೈ 23 ರಂದು ಜಿಲ್ಲೆಯಲ್ಲಿ ಧಾರಕಾರ ಮಳೆಯಾದ ಪರಿಣಾಮ ಪ್ರವಾಹ ಪರಿಸ್ಥಿತಿ ಎದುರಾಗಿತ್ತು ಕಾಳಿ, ಗಂಗಾವಳಿ, ಅಘನಾಶಿನಿ ಸೇರಿದಂತೆ ನದಿಗಳು ಉಕ್ಕಿ ಹರಿದ ಪರಿಣಾಮ ಹಲವಾರು ಮನೆಗಳು .ಹಾನಿಗೊಳಗಾಗಿರುವುದಲ್ಲದೆ ಕೋಟ್ಯಂತರ ರೂಪಾಯಿ ನಷ್ಟವಾಗಿದೆ. ತಾಲ್ಲೂಕು ಆಸ್ಪತ್ರೆಯಲ್ಲಿ ಆಂಬುಲೆನ್ಸ್ ಗಳನ್ನು ಉದ್ಘಾಟಿಸಿದ ಮುಖ್ಯಮಂತ್ರಿಗಳು, ನೆರೆ ಪರಿಹಾರ ವೀಕ್ಷಣೆಗೆ ತೆರಳಿ ಮೊದಲಿಗೆ ಗುಡ್ಡ ಕುಸಿತದಿಂದ ಹಾನಿಗೊಳಗಾದ ಕಳಚೆ ಗ್ರಾಮವನ್ನು ಪರಿಶೀಲಿಸಿದರು. […]

ಪ್ರವಾಹ: ಬಾಕಿ ಪರಿಹಾರ ಬಿಡುಗಡೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ

Sunday, July 25th, 2021
Yediyurappa

ಬೆಳಗಾವಿ : ರಾಜ್ಯದಲ್ಲಿ ಕೋವಿಡ್ ಸಂಕಷ್ಟದ ಮಧ್ಯೆಯೂ ಪ್ರವಾಹ ಸ್ಥಿತಿ ಉದ್ಭವಿಸಿದೆ.‌ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಜಿಲ್ಲಾಡಳಿತಗಳು ಸಂವೇದನಾಶೀಲತೆಯಿಂದ ಕೆಲಸ ಮಾಡಬೇಕು. ಹಣಕಾಸು ಸೇರಿದಂತೆ ಯಾವುದೇ ತೊಂದರೆ ಇದ್ದರೂ ತಕ್ಷಣವೇ ಸಂಬಂಧಿಸಿದವರ ಗಮನಕ್ಕೆ ತಂದು ಸರಿಪಡಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೂಚನೆ ನೀಡಿದರು. ನಗರದ ಪ್ರವಾಸಿಮಂದಿರದಲ್ಲಿ ಭಾನುವಾರ (ಜು.25) ನಡೆದ ಅತಿವೃಷ್ಟಿ/ಪ್ರವಾಹ ಕುರಿತ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಳೆದ ವಾರದಿಂದ ದಾಖಲೆ ಪ್ರಮಾಣದ ಮಳೆಯಾಗಿದೆ. ರಾಜ್ಯದ […]

ಕಂದಾಯ ಸಚಿವ ಆರ್ ಅಶೋಕ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ

Sunday, July 25th, 2021
Ashok-Flood-Area

ಬೆಂಗಳೂರು  : ಅತಿವೃಷ್ಠಿಯಿಂದ ಹಾನಿಗೊಳಗಾಗಿರುವ ಹಾಸನ ಜಿಲ್ಲೆಯ ದೊಣಿಗಲ್‍ಗೆ ಕಂದಾಯ ಸಚಿವ ಆರ್ ಅಶೋಕ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅಶೋಕ, “ಈಗಾಗಲೇ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸುವಂತೆ ಸೂಚನೆ ನೀಡಿದ್ದೇನೆ. ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡುವಂತೆ ಮತ್ತು ರಸ್ತೆ ದುರಸ್ತಿ ಕಾರ್ಯಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದ್ದೇನೆ. ಎನ್‍ಡಿಆರ್‍ಎಫ್ ನಿಧಿಯಡಿ ಪರಿಹಾರ ನೀಡುವಂತೆ ಡಿಸಿಗಳಿಗೆ ಆದೇಶಿಸಲಾಗಿದೆ. ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಸಚಿವರು ಮತ್ತು ಅಧಿಕಾರಿಗಳೊಂದಿಗೆ ನಿರಂತರ […]

ಕೃಷ್ಣಾ ಮತ್ತು ಭೀಮಾ ಪ್ರದೇಶದ ಕರ್ನಾಟಕ ಮತ್ತು ಮಹಾರಾಷ್ಟ್ರದ ಅಂತರರಾಜ್ಯ ಪ್ರವಾಹ ಪರಿಶೀಲನಾ ಸಮಿತಿಯ ಸಭೆ

Sunday, June 20th, 2021
Inter-state-flood

ಬೆಂಗಳೂರು  : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಕೃಷ್ಣಾ ಮತ್ತು ಭೀಮಾ ಪ್ರದೇಶದ ಕರ್ನಾಟಕ ಮತ್ತು ಮಹಾರಾಷ್ಟ್ರದ ಅಂತರರಾಜ್ಯ ಪ್ರವಾಹ ಪರಿಶೀಲನಾ ಸಮಿತಿಯ ಸಭೆ ನಡೆಸಿದರು. ಮಹಾರಾಷ್ಟ್ರ ರಾಜ್ಯದ ಜಲಸಂಪನ್ಮೂಲ ಸಚಿವ ಜಯಂತ್ ಪಾಟೀಲ್, ಕರ್ನಾಟಕದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ, ಜಲಸಂಪನ್ಮೂಲ ಇಲಾಖೆಯ ಅಪರಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಕರ್ನಾಟಕ ಮತ್ತು ಮಹಾರಾಷ್ಟ್ರದ ರಾಜ್ಯ ಸರ್ಕಾರಗಳ […]

ಇತ್ತೀಚೆಗೆ ಸುರಿದ ಮಹಾಮಳೆಯ ನಂತರ ನಿಂತು ಹೋಗಿದ್ದ ಮಳೆ ಮತ್ತೆ ಶುರು..!

Thursday, June 7th, 2018
heavy-rain

ಮಂಗಳೂರು: ಮಂಗಳೂರಿನಲ್ಲಿ ಇತ್ತೀಚೆಗೆ ಸುರಿದ ಮಹಾಮಳೆಯ ನಂತರ ನಿಂತು ಹೋಗಿದ್ದ ಮಳೆ ಮತ್ತೆ ಶುರುವಾಗಿದೆ. ಇತ್ತೀಚೆಗೆ ಸುರಿದ ಮಹಾಮಳೆಗೆ‌ ಮಂಗಳೂರು ನಗರದಲ್ಲಿ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿ ಅಪಾರ ಆಸ್ತಿ ಪಾಸ್ತಿ ನಷ್ಟವಾಗಿತ್ತು. ಒಂದೇ ದಿನ ಸುರಿದ ಮಹಾಮಳೆಗೆ‌ ಮಂಗಳೂರು ನಗರವೇ ತತ್ತರಿಸಿ ಹೋಗಿತ್ತು. ಜೂನ್ 7 ರಿಂದ ಮಂಗಳೂರಿನಲ್ಲಿ ‌ಮತ್ತೆ ಮಳೆ ಕಾಣಿಸಿಕೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ನಿನ್ನೆ ರಾತ್ರಿಯಿಂದ ಮಂಗಳೂರಿನಲ್ಲಿ ಮಳೆಯಾಗುತ್ತಿದೆ.