ಹೈದರಾಬಾದ್ ಕರ್ನಾಟಕ ಅಭಿವೃದ್ಧಿಗೆ ಒತ್ತು ಸಮಗ್ರ ಅಭಿವೃದ್ಧಿ ಸೂಚ್ಯಂಕ ಪರಿಷ್ಕರಣೆ ಖಾಲಿ ಹುದ್ದೆಗಳ ಭರ್ತಿ ಕ್ರಮ: ಕೃಷ್ಣ ಭೈರೆಗೌಡ

Wednesday, December 12th, 2018
bore-gouda

ಬೆಳಗಾವಿ: ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿಗೆ ಸಂವಿಧಾನದ ಪರಿಚ್ಛೇಧದ 371 (ಜೆ) ಅಡಿಯಲ್ಲಿ ಕಲ್ಪಿಸಲಾಗಿರುವ ವಿಶೇಷ ಆದ್ಯತೆ ನೀಡಿ ಶಿಕ್ಷಣ, ಆರೋಗ್ಯ, ರಸ್ತೆ ಮತ್ತಿತರ ಮೂಲಭೂತ ಸೌಕರ್ಯಗಳನ್ನು ಒಳಗೊಂಡ ಸಮಗ್ರ ಅಭಿವೃದ್ಧಿ ಸೂಚ್ಯಂಕವನ್ನು ಪರಿಷ್ಕರಣೆ ಮಾಡಲು ಕ್ರಮ ಕೈಗೊಳ್ಳಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣ ಭೈರೇಗೌಡ ಅವರು ರಾಜ್ಯ ವಿಧಾನಪರಿಷತ್ತಿನಲ್ಲಿ ಮಂಗಳವಾರ ್ರಕಟಿಸಿದರು. ಕೆ. ಸಿ. ಕೊಂಡಿಯ್ಯ ಮತ್ತು ಶರಣಪ್ಪ ಮಟ್ಟರ್ ಅವರು ನಿಯಮ 330 ರ […]

ಸುಮಾರು 3,500 ಹಾಸ್ಟೆಲ್​ಗಳ ಸ್ವರೂಪವನ್ನು ಸಮಗ್ರವಾಗಿ ಬದಲಾಯಿಸಲಾಗುವುದು: ಪ್ರಿಯಾಂಕ್ ಖರ್ಗೆ

Wednesday, October 17th, 2018
priyanka-kharge

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ರಾಜ್ಯದಲ್ಲಿ ನಡೆಸುತ್ತಿರುವ ಸುಮಾರು 3,500 ಹಾಸ್ಟೆಲ್ಗಳ ಸ್ವರೂಪವನ್ನು ಸಮಗ್ರವಾಗಿ ಬದಲಾಯಿಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು. ಸಮಾಜ ಕಲ್ಯಾಣ ಇಲಾಖೆಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (ಕ್ರೈಸ್) ರಾಜ್ಯಾದ್ಯಂತ ನಡೆಸುತ್ತಿರುವ ವಸತಿ ಶಿಕ್ಷಣ ಶಾಲೆಗಳ ಪ್ರಿನ್ಸಿಪಾಲರುಗಳು ಹಾಗೂ ವಿದ್ಯಾರ್ಥಿ ನಿಲಯಗಳ ವಾರ್ಡನ್ಗಳ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಹಾಸ್ಟೆಲ್ಗಳ ಸಮಗ್ರ ಸುಧಾರಣೆಗಾಗಿ ವರದಿ ನೀಡಲು ಸಮಿತಿಯೊಂದನ್ನು ರಚಿಸಲಾಗಿದ್ದು, ಸಮಿತಿ ವರದಿ ನೀಡಿದ ನಂತರ ಹಾಸ್ಟೆಲ್ಗಳ ಕಾರ್ಯವೈಖರಿಯಲ್ಲಿ […]

ಖರ್ಗೆ ವಿರುದ್ಧ ಬಿಜೆಪಿ ದಲಿತ ಯುವ ಮೋರ್ಚಾ ಕಾರ್ಯಕರ್ತರು ಆಕ್ರೋಶ!

Friday, June 29th, 2018
dalith-yuva-morcha

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ದಲಿತರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆದರೂ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಸಂಸದ ಮಲ್ಲಿಕಾರ್ಜುನ ಖರ್ಗೆ ಚಕಾರ ಎತ್ತದಿರುವುದು ಖಂಡನೀಯ ಎಂದು ಬಿಜೆಪಿ ದಲಿತ ಯುವ ಮೋರ್ಚಾ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಯುವಮೋರ್ಚಾ ಅಧ್ಯಕ್ಷ ರಾಘವೇಂದ್ರ ಚಿಂಚನಸೂರ ನೇತೃತ್ವದಲ್ಲಿ ಸರದಾರ ವಲ್ಲಭಬಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಖರ್ಗೆಯವರ ವಿರುದ್ಧ ಕಿಡಿಕಾರಿದರು. ಜಿಲ್ಲೆಯಲ್ಲಿ ನಿರಂತರವಾಗಿ ದಲಿತರ ಮೇಲೆ ದೌರ್ಜನ್ಯಗಳು ನಡೆದಿವೆ. ಇಲ್ಲಿವರೆಗೆ ಆಗಿರುವ ದೌರ್ಜನ್ಯದ ಬಗ್ಗೆ […]

ಸಮ್ಮಿಶ್ರ ಸರಕಾರದ ನೂತನ ಸಚಿವರಿಂದ ಪ್ರಮಾಣವಚನ ಸ್ವೀಕಾರ

Wednesday, June 6th, 2018
revanna

ಬೆಂಗಳೂರು: ರಾಜ್ಯ ಸಚಿವ ಸಂಪುಟಕ್ಕೆ ನೂತನವಾಗಿ ಸೇರ್ಪಡೆಗೊಂಡಿರುವ ಸಚಿವರುಗಳು ಬೆಂಗಳೂರಿನ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ವಜೂಭಾಯ್ ವಾಲಾ ಪ್ರಮಾಣ ವಚನ ಬೋಧಿಸಿದರು. ಕಾಂಗ್ರೆಸ್ ನಿಂದ 15 ಮತ್ತು ಜೆಡಿಎಸ್ ನಿಂದ 10 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮೊದಲು ಎಚ್.ಡಿ. ರೇವಣ್ಣ ಸಂಪುಟ ದರ್ಜೆ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಅವರನ್ನು ರಾಜ್ಯಪಾಲರು ಹೂಗುಚ್ಚ ನೀಡಿ ಅಭಿನಂದಿಸಿದರು. ಬಳಿಕ ಆರ್.ವಿ.ದೇಶಪಾಂಡೆ ,ಬಂಡೆಪ್ಪ ಕಾಶೆಂಪುರ್‌ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣವಚನ ಸ್ವೀಕರಿಸಲು ವೇದಿಕೆಗೆ […]

ಸಮ್ಮಿಶ್ರ ಸರಕಾರದ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಯು.ಟಿ.ಖಾದರ್

Wednesday, June 6th, 2018
u-t-kader-minister

ಮಂಗಳೂರು: ಸಮ್ಮಿಶ್ರ ಸರಕಾರದ ನೂತನ ಸಚಿವರಾಗಿ ಯು.ಟಿ.ಖಾದರ್ ಬೆಂಗಳೂರಿನ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ವಜುಬಾಯಿ ವಾಲಾ ಪ್ರಮಾಣವಚನ ಬೋಧಿಸಿದರು. ಎಚ್.ಡಿ.ರೇವಣ್ಣ, ಆರ್.ವಿ.ದೇಶಪಾಂಡೆ, ಬಂಡೆಪ್ಪ ಕಾಶೆಂಪೂರ್, ಡಿ.ಕೆ.ಶಿವಕುಮಾರ್, ಜಿ.ಟಿ.ದೇವೇಗೌಡ, ಕೆ.ಜೆ.ಜಾರ್ಜ್ , ಡಿ.ಸಿ.ತಮ್ಮಣ್ಣ, ಕೃಷ್ಣ ಭೈರೇಗೌಡ, ಎಂ.ಸಿ. ಮನಗುಳಿ, ಎನ್.ಎಚ್.ಶಿವಶಂಕರ ರೆಡ್ಡಿ, ಎಸ್.ಆರ್.ಶ್ರೀನಿವಾಸ್, ರಮೇಶ್ ಜಾರಕಿಹೊಳಿ, ವೆಂಕಟರಾವ್ ನಾಡಗೌಡ, ಪ್ರಿಯಾಂಕ್ ಖರ್ಗೆ, ಸಾ.ರಾ.ಮಹೇಶ್, ಝಮೀರ್ ಅಹ್ಮದ್ ಖಾನ್ ಹಾಗು ಎನ್. ಮಹೇಶ್ ಈಗಾಗಲೇ ಪ್ರಮಾಣವಚನ ಸ್ವೀಕರಿಸಿದ್ದಾರೆ.