ಪಠ್ಯದಲ್ಲಿ ಸ್ಥಳೀಯತೆಗೆ ಒತ್ತು : ಕುಲಪತಿ ಪ್ರೊ ಯಡಪಡಿತ್ತಾಯ ಅಭಿಮತ

Thursday, June 3rd, 2021
12books

ಮಂಗಳಗಂಗೋತ್ರಿ  : ಶಿಕ್ಷಣ ವ್ಯವಸ್ಥೆಯಲ್ಲಿ ಆಯಾ ಪ್ರದೇಶದ ಜ್ಞಾನ, ಕೌಶಲ ಮತ್ತು ಪ್ರತಿಭೆಗಳಿಗೆ ಅವಕಾಶ ಒದಗುವಂತಾಗಬೇಕು. ಪಠ್ಯಗಳಲ್ಲಿ ಜಾಗತಿಕ ಮತ್ತು ಸಾರ್ವಕಾಲಿಕ ಅಂಶಗಳೊಂದಿಗೆ ಸ್ಥಳೀಯತೆಗೆ ಒತ್ತು ಸಿಕ್ಕಾಗ ಇದು ಸಾಧ್ಯವಾಗುತ್ತದೆ. ಮಂಗಳೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗ ಪ್ರಕಟಿಸುತ್ತಿರುವ ಕನ್ನಡ ಪಠ್ಯಪುಸ್ತಕಗಳಲ್ಲಿ ಸ್ಥಳೀಯತೆಗೆ ಅವಕಾಶ ಒದಗಿರುವುದು ಸಂತೋಷದ ವಿಷಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಹೇಳಿದರು. ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸಭಾಂಗಣದಲ್ಲಿ ಗುರುವಾರ ಮಂಗಳೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗವು ಪ್ರಕಟಿಸಿದ ಪದವಿ ತರಗತಿಗಳ ದ್ವಿತೀಯ ಮತ್ತು ಚತುರ್ಥ ಸೆಮಿಸ್ಟರಿನ […]

ವಿದ್ಯಾರ್ಥಿಗಳ ಶೈಕ್ಷಣಿಕ ಸಂಶೋಧನೆಗೆ ಪ್ರೋತ್ಸಾಹ ನೀಡಿ : ಮಂಗಳೂರು ವಿ.ವಿ ಕುಲಪತಿ ಪ್ರೊ.ಯಡಪಡಿತ್ತಾಯ ಸಲಹೆ

Thursday, February 13th, 2020
college

ಮಡಿಕೇರಿ : ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವಿಷಯದ ಬಗ್ಗೆ ಸಂಶೋದನೆ ಮಾಡಲು ಪ್ರೋತ್ಸಾಹಿಸುವುದು ಆದ್ಯ ಕರ್ತವ್ಯ ಎಂದು ಮಂಗಳೂರು ವಿ.ವಿಯ ಕುಲಪತಿಗಳಾದ ಪ್ರೊ.ಪಿ.ಎಸ್.ಯಡಪಡಿತ್ತಾಯ ಅವರು ಹೇಳಿದರು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ರಸಾಯನ ಶಾಸ್ತ್ರ ವಿಭಾಗದ ವತಿಯಿಂದ “ನ್ಯಾಶನಲ್ ನೋವೆಲ್ ಅಪ್ರೋಚಸ್ ಇನ್ ಕೆಮಿಕಲ್ ಸೈನ್ಸ್” ಎಂಬ ಶೀರ್ಷಿಕೆಯಡಿಯಲ್ಲಿ ಬುಧವಾರ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿಜ್ಞಾನ ಜ್ಞಾನವನ್ನು ನೀಡುತ್ತದೆ. ಸೃಜನಶೀಲತೆ ಕಲ್ಪನೆಯಿಲ್ಲದೆ ಹೊಸ ಆವಿಷ್ಕಾರಗಳನ್ನು ಕೈಗೊಳ್ಳಲು […]

ವಿದ್ಯಾರ್ಥಿ ಶಿಕ್ಷಕರಲ್ಲಿ ಪಠ್ಯಕ್ರಮವನ್ನು ಮೀರಿದಚಿಂತನೆ ಬಹುಮುಖ್ಯ : ಪ್ರೊ. ಯಡಪಡಿತ್ತಾಯ

Monday, November 11th, 2019
shakti

ಮಂಗಳೂರು : ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ ಅಗತ್ಯವಾಗಿರುವಜತೆಯಲ್ಲೇ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪಠ್ಯಕ್ರಮವನ್ನು ಮೀರಿಚಿಂತಿಸಬೇಕಾಗುತ್ತದೆ. ಇದಕ್ಕೆ ಸುಧಾರಿತ ಕಲಿಕಾ ಕ್ರಮಅತ್ಯಂತ ಪೂರಕಎಂದು ಮಂಗಳೂರು ವಿಶ್ವವಿದ್ಯಾಲಯದ ಉಪ ಕುಲಪತಿ ಪ್ರೊ.ಯಡಪಡಿತ್ತಾಯ ಹೇಳಿದರು. ಶಕ್ತಿನಗರದ ಶಕ್ತಿ ಎಜ್ಯುಕೇಶನ್‌ಟ್ರಸ್ಟ್ ನಡೆಸುತ್ತಿರುವ ಶಕ್ತಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದಅನ್ವಯವಾಗಲಿರುವ ಶಕ್ತಿ ಎಡ್ವಾನ್ಸ್‌ಡ್ ಲರ್ನಿಂಗ್ ವ್ಯವಸ್ಥೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಬಗ್ಗೆ ನಿಖರವಾದಗುರಿ, ಶಿಸ್ತು ಹಾಗೂ ಸಮರ್ಪಣಾ ಮನೋಭಾವದಿಂದ ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ತಮ್ಮ ವ್ಯಕ್ತಿತ್ವವನ್ನು […]