ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ ಕಷ್ಟ ಸಾಧ್ಯ ಮನಪಾ ಆಯುಕ್ತ

Friday, December 21st, 2012
Dr Harish Kumar

ಮಂಗಳೂರು :ಪ್ಲಾಸ್ಟಿಕ್ ನ್ನು ನಿಷೇಧಿಸಿ ಎಂದು ಜಿಲ್ಲಾಡಳಿತ ಆದೇಶ ಹೊರಡಿಸಿದೆಯಾದರೂ ಇದನ್ನು ಸಂಪೂರ್ಣವಾಗಿ ನಿಷೇಧಿಸುವ ಮತ್ತು ಇದಕ್ಕೆ ಸೂಕ್ತವಾದ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಶ್ರಮದಾಯಕವಾದ ಕೆಲಸ ಎಂದು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಡಾ.ಹರೀಶ್ ಕುಮಾರ್ ಅಭಿಪ್ರಾಯಪಟ್ಟರು. ಪತ್ರಿಕಾಭವನದಲ್ಲಿ ಗುರುವಾರ ನಡೆದ ಪತ್ರಿಕಾ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು ಈ ಹಿಂದಿನ ಜಿಲ್ಲಾಧಿಕಾರಿಯವರು ನಗರದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸುವಂತೆ ಕಾನೂನು ಜಾರಿಗೊಳಿಸಿ ಆದೇಶ ನೀಡಿದ್ದರೂ ಇದನ್ನು ಜಾರಿಗೊಳಿಸಲು ನ್ಯಾಯಾಲಯದ ತೀರ್ಮಾನ ಬರಬೇಕಿದೆ ಎಂದರು. ಪ್ಲಾಸ್ಟಿಕ್ ಕೈ ಚೀಲಗಳಿಗೆ […]

ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ನಿಷೇಧ ಮೂರ್ಖತನದ ನಿರ್ಧಾರ

Saturday, November 24th, 2012
Plastic Bag

ಮಂಗಳೂರು :ದಕ್ಷಿಣ ಕನ್ನಡ ಜಿಲ್ಲಾಡಳಿತ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ನಿಷೇಧ ಎನ್ನುವ ಬೋರ್ಡ್ ತಗಲಿಸಿ ಬಹಳ ದಿನಗಳೇ ಸರಿದು ಹೋದವು.. ಆದರೆ ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ಗೊತ್ತಿಲ್ಲ. ಕರ್ನಾಟಕದ ಮಟ್ಟಿಗೆ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ತಯಾರಿಸುವ ಅತಿ ಹೆಚ್ಚು ಕಂಪೆನಿಗಳು ಇರುವುದು ಮಂಗಳೂರಿನಲ್ಲಿ. ಇದಕ್ಕಾಗಿ ಉದ್ಯಮಿಗಳು ಕೋಟಿಗಳ ರೂಪದಲ್ಲಿ ಬ್ಯಾಂಕ್ ಸಾಲ ಮಾಡಿ ಬಂಡವಾಳ ಹೂಡಿದ್ದಾರೆ. ದ.ಕ. ಜಿಲ್ಲೆಯಲ್ಲಿ ಅಂದಾಜು 50ರಷ್ಟು ಪ್ಲಾಸ್ಟಿಕ್ ತಯಾರಿಕೆ ಘಟಕಗಳು ಮತ್ತು ವರ್ತಕರು ಇದ್ದಾರೆ. ಸುಮಾರು ಐದು ಸಾವಿರ ಮಂದಿ ನೇರವಾಗಿ […]

ಪ್ಲಾಸ್ಟಿಕ್ ನಿಷೇಧದ ಬಗ್ಗೆ ಜಾಗೃತಿ ಮೂಡಿಸುವ ವಾಹನ ಜಾಥಕ್ಕೆ ಚಾಲನೆ

Saturday, October 27th, 2012
Plastic awareness program

ಮಂಗಳೂರು: ಮಂಗಳೂರು ತಾಲೂಕಿನಾದ್ಯಂತ ಪ್ಲಾಸ್ಟಿಕ್ ನಿಂದ ತಯಾರಿಸಲ್ಪಟ್ಟ ವಸ್ತುಗಳನ್ನು ನವೆಂಬರ್ 1ರಿಂದ ನಿಷೇಧಿಸಲು ಹಂತಹಂತವಾಗಿ ಕ್ರಮ ಕೈಗೊಳ್ಳಲಾಗುತ್ತಿದ್ದು, ಈ ಬಗ್ಗೆ ಸಾಕಷ್ಟು ಎಚ್ಚರಿಕೆ ನೀಡಲಾಗಿದೆ. ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಗುಲ್ಜಾರ್ ಬಾನುರವರು ಶುಕ್ರವಾರ ಜಿಲ್ಲಾಧಿಕಾರಿ ಬಳಿಯಲ್ಲಿ ಪ್ಲಾಸ್ಟಿಕ್ ಬಗ್ಗೆ ನಾಗರೀಕರಲ್ಲಿ ಜಾಗೃತಿ ಮೂಡಿಸುವ ವಾಹನಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಪ್ಲಾಸ್ಟಿಕ್ ನಿಂದಾಗುವ ತೊಂದರೆಯ ಬಗ್ಗೆ ಜನರಲ್ಲಿ ಈ ವಾಹನವು ಜಾಗೃತಿ ಮೂಡಿಸಲಿದ್ದು ಸಾರ್ವಜನಿಕರು ಇದಕ್ಕೆ ಸಹಕರಿಸಬೇಕು ಎಂದರು. […]

ಪಣಂಬೂರು ಮತ್ತು ತಣ್ಣೀರುಬಾವಿ ಕಡಲತೀರದಲ್ಲಿ ಪ್ಲಾಸ್ಟಿಕ್ ನಿಷೇಧ

Thursday, July 28th, 2011
Plastic Ban by MCC

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಣಂಬೂರು ಮತ್ತು ತಣ್ಣೀರುಬಾವಿ ಕಡಲ ತೀರದ ಪ್ರದೇಶಗಳಲ್ಲಿ ಬಳಸಿ ಎಸೆಯಲ್ಪಟ್ಟ ಪ್ಲಾಸ್ಟಿಕ್ ವಸ್ತುಗಳು ಮತ್ತು ತ್ಯಾಜ್ಯಗಳು ಕಡಲ ಕಿನಾರೆಯ ಪರಿಸರಕ್ಕೆ ಹಾನಿ ಮಾಡುತ್ತಿದ್ದು,ಇದನ್ನು ಮನಗಂಡ ಮಹಾನಗರ ಪಾಲಿಕೆ ಆಯುಕ್ತರು ಈ ವಲಯವನ್ನು ಪ್ಲಾಸ್ಟಿಕ್ ನಿಷೇಧ ಪ್ರದೇಶವೆಂದು ಘೋಷಿಸಿ ದಿನಾಂಕ 15-7-11 ರಂದು ಆದೇಶ ಹೊರಡಿಸಿದ್ದಾರೆ.ನಿಷೇಧಿತ ಪ್ರದೇಶದಲ್ಲಿ ಯಾವುದೇ ವ್ಯಕ್ತಿ ಯಾವುದೇ ರೀತಿಯ ಪ್ಲಾಸ್ಟಿಕ್ ಕವರುಗಳು,ಲೋಟಗಳು,ತಟ್ಟೆಗಳನ್ನು ಕ್ಯಾರಿ ಬ್ಯಾಗ್ಗಳ ಉಪಯೋಗ,ದಾಸ್ತಾನು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಅಲ್ಲದೆ ಪ್ರವೇಶ ದ್ವಾರದಲ್ಲಿ ತನಿಖಾ […]

ಪ್ಲಾಸ್ಟಿಕ್ ನಿಷೇಧ ಆದೇಶ ಅನುಷ್ಠಾನಕ್ಕೆ ತನ್ನಿ: ಜಿಲ್ಲಾಧಿಕಾರಿ ಸೂಚನೆ

Saturday, March 12th, 2011
ಜಿಲ್ಲಾಧಿಕಾರಿ ಸುಬೋಧ್ ಯಾದವ್

ಮಂಗಳೂರು : ಜಿಲ್ಲೆಯಾದ್ಯಂತ ಪ್ಲಾಸ್ಟಿಕ್ ನಿಷೇಧ ಆದೇಶ ಸಮಗ್ರವಾಗಿ ಜಾರಿಗೆ ತರಲು ಮಾರ್ಚ್ 30 ಅಂತಿಮ ದಿನವಾಗಿದ್ದು, ಪರ್ಯಾಯವನ್ನು ಜನರಿಗೆ ನೀಡಿ ಆದೇಶ ಪಾಲನೆಗೆ ಸಜ್ಜಾಗಿ ಎಂದು ಜಿಲ್ಲಾಧಿಕಾರಿ ಶ್ರೀ ಸುಬೋಧ್ ಯಾದವ್ ಅವರು ಅಧಿಕಾರಿಗಳಿಗೆ ಆದೇಶಿಸಿದರು. ಇಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು. ಜಿಲ್ಲಾಡಳಿತ ವೈಜ್ಞಾನಿಕ ತ್ಯಾಜ್ಯ ವಿಲೇವಾರಿ ಮತ್ತು ಪ್ಲಾಸ್ಟಿಕ್ ಮುಕ್ತ ವಾತಾವರಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದು ಅಧಿಕಾರಿಗಳ ಕರ್ತವ್ಯಲೋಪಕ್ಕೆ ಕಠಿಣ […]