ಮೂಲರಪಟ್ಣ ನೂತನ ಸೇತುವೆ ವಾಹನ ಸಂಚಾರಕ್ಕೆ ಮುಕ್ತ

Friday, November 12th, 2021
mularapatna

ಬಂಟ್ವಾಳ: ಬಂಟ್ವಾಳ ಹಾಗೂ ಮಂಗಳೂರು ತಾಲೂಕುಗಳನ್ನು ಸಂಪರ್ಕಿಸುವ ಮೂಲರಪಟ್ಣ ನೂತನ ಸೇತುವೆಯನ್ನು ಊರಿನ ಹಿರಿಯರು ತೆಂಗಿನಕಾಯಿ ಒಡೆದು ಸಂಚಾರಕ್ಕೆ ಮುಕ್ತಗೊಳಿಸಿದರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಸೇತುವೆಯಲ್ಲಿ ಊರಿನ ಪ್ರಮುಖರ ಜತೆ ಸಾಗಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸೇತುವೆ ನಿರ್ಮಾಣ ಸಂಸ್ಥೆ ಕಾವೂರು ಮುಗ್ರೋಡಿ ಕನ್ ಸ್ಟ್ರಕ್ಷನ್ಸ್ ಮಾಲಕ ಸುಧಾಕರ ಶೆಟ್ಟಿ ಮುಗ್ರೋಡಿ, ದಾಮೋದರ್, ಅರಳ ಗ್ರಾ.ಪಂ.ಅಧ್ಯಕ್ಷ ಲಕ್ಷ್ಮೀಧರ ಶೆಟ್ಟಿ, ಉಪಾಧ್ಯಕ್ಷೆ ಪ್ರೇಮಾ, ಮುತ್ತೂರು […]

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಹರಕೆ ಸೀರೆಗಳನ್ನು ಪ್ರಸಾದ ರೂಪದಲ್ಲಿ ವಿತರಣೆ

Sunday, October 10th, 2021
Polali Temple

ಬಂಟ್ವಾಳ : ಲಲಿತಾಪಂಚಮಿಯ ದಿನದಂದು ಪೊಳಲಿ ಶ್ರೀ ರಾಜರಾಜೇಶ್ವರಿ ಅಮ್ಮನವರ ಸನ್ನಿಧಾನದಲ್ಲಿ ಪ್ರಾರ್ಥನೆಯನ್ನು ಸಲ್ಲಿಸಿ ಭಕ್ತಾದಿಗಳಿಗೆ ಅಮ್ಮನವರಿಗೆ ಹರಕೆ ರೂಪದಲ್ಲಿ ಬಂದ ಸೀರೆಗಳನ್ನು ಪ್ರಸಾದ ರೂಪದಲ್ಲಿ ವಿತರಿಸಲು ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ಉಳಿಪ್ಪಾಡಿಗುತ್ತು ರಾಜೇಶ್ ನಾಯ್ಕ್, ಆಡಳಿತ ಮೋಕ್ತೇಸರರಾದ ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು,ಚೇರಾ ಸೂರ್ಯನಾರಾಯಣ ರಾವ್,ಪವಿತ್ರಪಾಣಿ ಮಾಧವ ಭಟ್,ಮಾಜಿ ಸಚಿವರಾದ ಬಿ.ನಾಗರಾಜ ಶೆಟ್ಟಿ ಪ್ರಮುಖರು ಉಪಸ್ಥಿತರಿದ್ದರು.ಊರ ಪರವೂರ ಭಕ್ತಾದಿಗಳು ಈ ಸಂದರ್ಭದಲ್ಲಿ ಸೀರೆ ಪ್ರಸಾದ ಸ್ವೀಕರಿಸಿದರು.  

ನಾರಾಯಣಗುರುಗಳನ್ನು ಆದರ್ಶಗಳನ್ನು ನಮ್ಮಲ್ಲಿ ಮೈಗೂಡಿಸಿಕೊಂಡರೆ ಭಾರತ ವಿಶ್ವಗುರುವಾಗುವುದರಲ್ಲಿ ಸಂದೇಹವಿಲ್ಲ : ರಾಜೇಶ್ ನಾಯ್ಕ್

Monday, August 23rd, 2021
Narayana Guru

ಬಂಟ್ವಾಳ: ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶಗಳನ್ನು ಅನುಷ್ಠಾನಗೊಳಿಸುವ ಕಾರ್ಯ ಇಂದು ನಡೆಯಬೇಕಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು. ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಸೋಮವಾರ ಬಿಜೆಪಿ ಒಬಿಸಿ ಮೋರ್ಚಾ ವತಿಯಿಂದ ಏರ್ಪಡಿಸಲಾದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ನಾರಾಯಣಗುರುಗಳನ್ನು ಪೂಜಿಸುವುದರೊಂದಿಗೆ ಅವರ ಆದರ್ಶಗಳನ್ನು ನಮ್ಮಲ್ಲಿ ಮೈಗೂಡಿಸಿಕೊಂಡರೆ ಭಾರತ ವಿಶ್ವಗುರುವಾಗುವುದರಲ್ಲಿ ಸಂದೇಹವಿಲ್ಲ ಎಂದು ಹೇಳಿದರು. ಕಿಯೋನಿಕ್ಸ್ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ್ ಈ ಸಂದರ್ಭ ಮಾತನಾಡಿ, ಹಿಂಸೆಯ ಭಾವ ನಮ್ಮಲ್ಲಿ ತೊಲಗಬೇಕಿದ್ದರೆ, ನಾರಾಯಣಗುರುಗಳ […]

ಒಬ್ಬ ಶಾಸಕನ ಹಿಂದೆ ಜನ ಓಡಾಡುವುದಕ್ಕಿಂತಲೂ, ಪಕ್ಷದ ಹಿಂದೆ ಹೋಗಿ : ರಾಜೇಶ್ ನಾಯ್ಕ್ ಉಳಿಪ್ಪಾಡಿ

Sunday, July 25th, 2021
Bantwal MLA

ಬಂಟ್ವಾಳ  : ಒಬ್ಬ ಶಾಸಕನ ಹಿಂದೆ ಜನ ಓಡಾಡುವುದಕ್ಕಿಂತಲೂ ಪಕ್ಷದ ಹಿಂದೆ ಕಾರ್ಯಕರ್ತರು ಹೋದಾಗ ಪಕ್ಷ ಗಟ್ಟಿಯಾಗಲು ಸಾಧ್ಯವಿದ್ದು, ಈ ನಿಟ್ಟಿನಲ್ಲಿ ಬಂಟ್ವಾಳದಲ್ಲಿ ಬಿಜೆಪಿಯನ್ನು ಬಲಿಷ್ಠ ಪಡಿಸುವ ದೃಷ್ಟಿಯಿಂದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಲಹೆ ಪಡೆದು ಕೆಲಸ ಮಾಡಲಾಗುತ್ತಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು. ಅವರು ಬಿಸಿರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಬಿಜೆಪಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಪಕ್ಷವನ್ನು ಬಲಪಡಿಸಿದಾಗ ಮಾತ್ರ ಕಾರ್ಯಕರ್ತರಿಗೆ ಅಧಿಕಾರ ಸಿಗುತ್ತದೆ, ಅಮೂಲಕ […]

ನಗ್ರಿ ಶ್ರೀ ಶಾರದ ಭಜನಾ ಮಂದಿರದ ಸಮುದಾಯದ ಭವನಕ್ಕೆ ಶಿಲಾನ್ಯಾಸ

Tuesday, July 13th, 2021
Nagri Sharadha Bajana Mandali

ಬಂಟ್ವಾಳ: ಬಂಟ್ವಾಳ ಶಾಸಕರ ರೂ .50 ಲಕ್ಷ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ನಗ್ರಿ ಶ್ರೀ ಶಾರದ ಭಜನಾ ಮಂದಿರದ ಸಮುದಾಯದ ಭವನಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಧಾರ್ಮಿಕ ವಿಧಿವಿಧಾನಗಳ ಮೂಲಕ ನೆರವೇರಿತು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಶಿಲಾನ್ಯಾಸ ನೆರವೇರಿಸಿ ಬಳಿಕ ಮಾತನಾಡಿ, ಸರಕಾರದ ಅನುದಾನಗಳ ಮೂಲಕ ಗ್ರಾಮದ ಎಲ್ಲಾ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿ ಗೆ ಮೊದಲ ಆಧ್ಯತೆ ನೀಡಲಾಗುತ್ತದೆ ‌ಎಂದರು. ಧಾರ್ಮಿಕ ಕೇಂದ್ರ ಗಳ ಅಭಿವೃದ್ಧಿಗೆ ಗ್ರಾಮಸ್ಥರ ಒಗ್ಗಟ್ಟಿನ ಸಹಕಾರ ಸದಾ ಇರಲಿ ಎಂದು ಹೇಳಿದರು. […]

ಬಂಟ್ವಾಳ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿಸಿ ವಿತರಣೆ

Tuesday, June 29th, 2021
Bantwal Tablet

ಬಂಟ್ವಾಳ : ವಿಧ್ಯಾಭ್ಯಾಸ ನಿರಂತರವಾಗಿ ನಡೆಯಬೇಕು ಎಂಬ ಉದ್ದೇಶದಿಂದ ಹೊಸ ಸವಾಲುಗಳನ್ನು ಸ್ವೀಕರಿಸಿ ವಿದ್ಯಾರ್ಥಿಗಳು ಜೀವನ ರೂಪಿಸಬೇಕು ಎಂದು ಟ್ಯಾಬ್ಲೆಟ್ ಪಿಸಿಗಳನ್ನು ಸರಕಾರ ಉಚಿತವಾಗಿ ಎಲ್ಲಾ ವಿದ್ಯಾರ್ಥಿಗಳಿಗೆ ನೀಡಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು. ಅವರು ಮಂಗಳವಾರ ಬಂಟ್ವಾಳ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿಸಿ ವಿತರಣೆ ಹಾಗೂ ಕೋವಿಡ್ ಲಸಿಕಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು. ಜನರ ಜೀವನ ಹಾಗೂ ಜೀವನಕೋಸ್ಕರ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಲಸಿಕಾ […]

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಕಚೇರಿಗೆ ಭೇಟಿ ನೀಡಿದ ಮಾಣಿಲ ಸ್ವಾಮೀಜಿ

Tuesday, January 12th, 2021
Rajesh Naik

ಬಂಟ್ವಾಳ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು ಅವರನ್ನು ಮಾಣಿಲ ಶ್ರೀ ಮಹಾಲಕ್ಷ್ಮಿ ಕ್ಷೇತ್ರದ ಕರ್ಮ ಯೋಗಿ ಶ್ರೀಶ್ರೀಶ್ರೀ ಮೋಹನದಾಸ ಸ್ವಾಮೀಜಿ ಅವರು ಶಾಸಕರ ಕಚೇರಿಯಲ್ಲಿ ಬೇಟಿ ಮಾಡಿದರು. ಶಾಸಕರ ಜೊತೆ ಕೆಲಹೊತ್ತು  ಸಮಾಜದ ಹಾಗುಹೋಗುಗಳ ಬಗ್ಗೆ ಚರ್ಚೆ ನಡೆಸಿದರು. ತಾಲೂಕಿನಲ್ಲಿ ಕೃಷಿ ಚಟುವಟಿಕೆಗಳನ್ನು ಇನ್ನಷ್ಟು ಬೆಳೆಸುವ ದೃಷ್ಟಿಯಿಂದ ವಿದ್ಯಾರ್ಥಿಗಳಿಗೆ ಪೂರಕವಾಗಿ ಹೊಸ ಕಾರ್ಯಕ್ರಮ ಗಳನ್ನು ರೂಪಿಸುವಂತೆ ಮಾನವಿ ಮಾಡಿದರು.  ಈ ಸಂದರ್ಭದಲ್ಲಿ ಬೂಡ ಅಧ್ಯಕ್ಷ ದೇವದಾಸ ಶೆಟ್ಟಿ,  ಕಲಾವಿದ ಮಾಣಿಲ ಕ್ಷೇತ್ರದ ಟ್ರಸ್ಟಿಗಳಾದ ಮಂಜುವಿಟ್ಲ, […]

ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಬಂಟ್ವಾಳ ಶಾಸಕರ ಉಸ್ತುವಾರಿಯಲ್ಲಿ ಸಿದ್ಧತಾ ಸಭೆ

Tuesday, June 2nd, 2020
Rajesh Naik

ಬಂಟ್ವಾಳ :  ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಜೂನ್ 25 ರಂದ ಆರಂಭಗೊಳ್ಳಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಯ ಸಿದ್ಧತಾ ಪೂರ್ವಬಾವಿ ಸಭೆಯು ಈ ದಿನ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಬಂಟ್ವಾಳ ತಾಲೂಕಿನಲ್ಲಿ5, 200 ವಿದ್ಯಾರ್ಥಿಗಳು 12 ಪರೀಕ್ಷಾಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದು ಶಿಕ್ಷಕರ ಜೊತೆ ಇತರ ಇಲಾಖಾಧಿಕಾರಿಗಳು ಸಹಕರಿಸುವಂತೆ ಶಾಸಕರು ಸೂಚಿಸಿದರು. ಪರೀಕ್ಷಾ ಕೇಂದ್ರಕ್ಕೆ ಹಾಜರಾಗಲು ವಿದ್ಯಾರ್ಥಿಗಳಿಗೆ ವಾಹನದ ವ್ಯವಸ್ಥೆ, ಆಹಾರ ಮತ್ತು ಕುಡಿಯುವ ನೀರಿನ ವ್ಯವಸ್ಥೆಯ ಬಗ್ಗೆ ಚರ್ಚಿಸಲಾಯಿತು. ಪ್ರತಿಯೊಂದು […]

ಕಾಸರಗೋಡು ವಿಧ್ಯಾರ್ಥಿಗಳಿಗೆ ಮಂಗಳೂರಿನಲ್ಲಿ ಪರೀಕ್ಷೆ ಬರೆಯಲು ಬಂಟ್ವಾಳ ಶಾಸಕರ ಮಾತುಕತೆ

Wednesday, May 20th, 2020
Rajesh Naik

ಮಂಗಳೂರು  : ಕರ್ನಾಟಕ ರಾಜ್ಯದಲ್ಲಿ ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಧ್ಯಾಬ್ಯಾಸ ಮಾಡುತ್ತಿರುವ ಕೇರಳದ ಕಾಸರಗೋಡು ಜಿಲ್ಲೆಯ ವಿಧ್ಯಾರ್ಥಿಗಳಿಗೆ ಎಸ್.ಎಲ್.ಎಲ್.ಸಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ  ಅವಕಾಶ ಮಾಡಿಕೊಡುವಂತೆ ಈ ದಿನ ಬೆಂಗಳೂರಿನಲ್ಲಿ ಮಾನ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್ ರವರನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಬೇಟಿ ಮಾಡಿ ಮಾತುಕತೆ ನಡೆಸಿದರು. ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ಮಾನ್ಯ ಸಚಿವರು ನೀಡಿದರು. ಈ ಸಮಸ್ಯೆ ಬಗ್ಗೆ ಮಂಜೇಶ್ವರ ಮಂಡಲ ಬಿಜೆಪಿ […]

ಅನಾರೋಗ್ಯದಿಂದ ಬಳಲುತ್ತಿದ್ದ ಕುಟುಂಬಕ್ಕೆ ರೂ.2,00,000 ಪರಿಹಾರ ನೀಡಿದ ಬಂಟ್ವಾಳ ಶಾಸಕ

Saturday, June 1st, 2019
Rajesh Naik

ಬಂಟ್ವಾಳ : ತಾಲೂಕಿನ ಕುಕ್ಕಿಪ್ಪಾಡಿ ಗ್ರಾಮದ ನೇಲ್ಯರುಮೇರು ನಿವಾಸಿಯಾದ ಶ್ರೀಮತಿ ತ್ರಿವೇಣಿ ಎಂಬವರು ಅನಾರೋಗ್ಯದಿಂದ ಬಳಲುತ್ತಿದ್ದು ಇವರ ಕುಟುಂಬಸ್ಥರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ರೂ.2,00,000 ಪರಿಹಾರ ನಿಧಿಯ ಚೆಕ್‌ನ್ನು ಶಾಸಕರ ಕಚೇರಿಯಲ್ಲಿ ವಿತರಿಸಿದರು.