36 ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಉದ್ಘಾಟನೆ : ಗ್ರಾಮೀಣ ಪತ್ರಕರ್ತರ ಆರೋಗ್ಯ ಕಾರ್ಡು ಬಸ್‌ಪಾಸ್ ಸೌಲಭ್ಯಗಳಿಗೆ ಬಜೆಟ್‌ನಲ್ಲಿ ಆದ್ಯತೆ

Tuesday, January 4th, 2022
Kalburgi-Working-Journalist

ಕಲಬುರಗಿ : ಸಣ್ಣ ಪತ್ರಿಕೆಗಳು ಪ್ರಸಾರದಲ್ಲಿ ಕಡಿಮೆ ಸಂಖ್ಯೆ ಹೊಂದಿದ್ದರೂ ಕೂಡ ಅಲ್ಲಿನ ಸುದ್ದಿ,ಲೇಖನ,ಅಂಕಣಗಳ ಮೌಲ್ಯ ದೊಡ್ಡದು.ಗ್ರಾಮೀಣ ಪತ್ರಕರ್ತರಿಗೆ ಆರೋಗ್ಯ ಕಾರ್ಡು, ಬಸ್‌ಪಾಸ್ ಸೇರಿದಂತೆ ಇತರ ಸೌಲಭ್ಯಗಳಿಗೆ ಬರುವ ಬಜೆಟ್‌‌ನಲ್ಲಿ ಆದ್ಯತೆ ನೀಡಲಾಗುವುದು.ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಮಂಡಳಿ ಹಾಗೂ ಕೋಶಕ್ಕೆ ವಾರಾಂತ್ಯದೊಳಗೆ ಪೂರ್ಣ ನೇಮಕಾತಿ ಮಾಡಿ 3 ಸಾವಿರ ಕೋಟಿ ರೂ.ಕ್ರಿಯಾ ಯೋಜನೆಯನ್ನು ಒಂದು ವರ್ಷದ ಅವಧಿಯೊಳಗೆ ಅನುಷ್ಠಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಇಲ್ಲಿನ ಬಸವರಾಜಪ್ಪ ಅಪ್ಪ […]

ಸಿದ್ದರಾಮಯ್ಯ ಬಜೆಟ್ ಟೀಕೆಗೆ ಸದಾನಂದಗೌಡ ತಿರುಗೇಟು

Tuesday, February 2nd, 2021
sadananda Gowda

ನವದೆಹಲಿ : ಕೊರೊನಾದಂತಹ ಸಾಂಕ್ರಾಮಿಕ ರೋಗವು ತಂದೊಡ್ಡಿರುವ ಆರ್ಥಕ ಸಂಕಷ್ಟದ ಮಧ್ಯೆಯೂ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್‌ ಅವರು ಅತ್ಯುತ್ತಮವಾದ ಬಜೆಟ್‌ ಮಂಡಿಸಿದ್ದಾರೆ ಎಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಶ್ರೀ ಡಿ ವಿ ಸದಾನಂದಗೌಡ ಅವರು ತಿಳಿಸಿದ್ದಾರೆ. ಬಜೆಟ್‌ ನಂತರ ಇಲ್ಲಿ ಸುದ್ದಿಗಾರರೊಂದಿವೆ ಮಾತನಾಡಿದ ಸಚಿವರು – ಆಯವ್ಯಯವು ತಾತ್ಕಾಲಿಕ ಅವಶ್ಯಕತೆಗಳ ಜೊತೆಗೇ ದೇಶವನ್ನು ಅಭಿವೃದ್ಧಿ ಪಥದ ಮೇಲೆ ಕೊಂಡೊಯ್ಯುವ ದೂರದೃಷ್ಟಿ ಪ್ರಸ್ತಾವನೆಗಳನ್ನು ಒಳಗೊಂಡಿದೆ, ಕೈಗಾರಿಕೆ ಸೇರಿದಂತೆ ಎಲ್ಲ ವಲಯಗಳನ್ನೂ ಸ್ವಾವಲಂಬಿಯಾಗಿ ರೂಪಿಸುವ […]

2.38 ಲಕ್ಷ ಕೋಟಿ ರೂ. ಬಜೆಟ್ ಗಾತ್ರದ ಬಜೆಟ್ ಮಂಡಿಸಿದ ಸಿಎಂ ಬಿ ಎಸ್ ಯಡಿಯೂರಪ್ಪ

Thursday, March 5th, 2020
bsy

ಬೆಂಗಳೂರು : ಸಿಎಂ ಬಿ ಎಸ್ ಯಡಿಯೂರಪ್ಪ ಅವರು ಈ ಬಾರಿ 2,37,893 ಕೋಟಿ ಗಾತ್ರದ ಬಜೆಟ್ ಮಂಡಿಸಿದ್ದಾರೆ. ಕಳೆದ ಬಾರಿಯ ಸರ್ಕಾರ ಮಂಡಿಸಿದ್ದ ಬಜೆಟ್ ಗಾತ್ರದಕ್ಕಿಂತ ಈ ಬಾರಿ 3 ಸಾವಿರ ಕೋಟಿ ಹೆಚ್ಚು ಇದೆ. ಮಹದಾಯಿ ಯೋಜನೆ ಮೊದಲಾದ ನೀರಾವರಿ ಮತ್ತು ಕುಡಿಯುವ ನೀರಿನ ಯೋಜನೆಗಳಿಗೆ ಹೆಚ್ಚು ಒತ್ತುಕೊಡಲಾಗಿದೆ. ಹಾಗೆಯೇ, ಸಿದ್ದರಾಮಯ್ಯ ಸರ್ಕಾರದ ಬಹುತೇಕ ಯೋಜನೆಗಳನ್ನು ಮುಂದುವರಿಸಲಾಗುತ್ತಿದೆ. ಭಾಗ್ಯಲಕ್ಷ್ಮೀ ಯೋಜನೆ, ಮಕ್ಕಳಿಗೆ ಬೈಸಿಕಲ್ ವಿತರಣೆ ಇತ್ಯಾದಿ ಯೋಜನೆಗಳನ್ನು ಮುಂದುವರಿಸಲು ಬಜೆಟ್ನಲ್ಲಿ ನಿರ್ಧರಿಸಲಾಗಿದೆ. ಪ್ರಧಾನಿ ಮೋದಿ ಆಶಯದಂತೆ […]

ನಟ ನಿಖಿಲ್‌ ಕುಮಾರ್‌ ಮೂವತ್ತನೇ ವರ್ಷದ ಜನ್ಮದಿನಾಚರಣೆ

Wednesday, January 22nd, 2020
nikil-kumar

ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ ಪುತ್ರ ನಟ ಕಂ ರಾಜಕಾರಣಿ ನಿಖಿಲ್‌ ಕುಮಾರ್‌ ಇಂದು (ಜ. 22) ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಮೂವತ್ತನೇ ವರ್ಷಕ್ಕೆ ಕಾಲಿಡುತ್ತಿರುವ ನಿಖಿಲ್‌ ಕುಮಾರ್‌ಗೆ ಚಿತ್ರರಂಗ ಮತ್ತು ರಾಜಕೀಯ ರಂಗದ ಅನೇಕ ಗಣ್ಯರು, ಅಭಿಮಾನಿಗಳು, ಬೆಂಬಲಿಗರು ಶುಭಾಶಯ ಕೋರುತ್ತಿದ್ದಾರೆ. ಇನ್ನು ರಾಜಕೀಯ ರಂಗದ ಜೊತೆ ಚಿತ್ರರಂಗದಲ್ಲೂ ಗುರುತಿಸಿಕೊಂಡಿರುವ ನಿಖಿಲ್‌ ಕುಮಾರ್‌ ಸದ್ಯ ಮೂರು ಬಿಗ್‌ ಬಜೆಟ್‌ನ ದೊಡ್ಡ ಚಿತ್ರಗಳಲ್ಲಿ ನಾಯಕ ನಟನಾಗಿ ಅಭಿನಯಿಸುತ್ತಿದ್ದಾರೆ. ರಜನಿಕಾಂತ್‌ ಅಭಿನಯದ ದಕ್ಷಿಣ ಭಾರತದ ಖ್ಯಾತ ನಿರ್ಮಾಣ ಸಂಸ್ಥೆ “ಲೈಕಾ […]

ಬಜೆಟ್ ನಲ್ಲಿ ಗೃಹ ಖರೀದಿದಾರರಿಗೆ 3.5 ಲಕ್ಷ ರೂಪಾಯಿ ಬಡ್ಡಿ ವಿನಾಯಿತಿ

Friday, July 5th, 2019
Nirmala-Seetharaman

ನವದೆಹಲಿ: ನಿರ್ಮಲಾ ಸೀತಾರಾಮನ್ ಮಂಡಿಸಿರುವ ತಮ್ಮ ಚೊಚ್ಚಲ ಕೇಂದ್ರ ಬಜೆಟ್ 2019-20 ನಲ್ಲಿ ಮಧ್ಯಮ ವರ್ಗದ ಗೃಹ ಖರೀದಿದಾರರಿಗೆ ಅತಿ ಹೆಚ್ಚು ಪ್ರಯೋಜನವಾಗುವ ಬದಲಾವಣೆಗಳನ್ನು ಘೋಷಿಸಿದ್ದಾರೆ. 45 ಲಕ್ಷ ರೂಪಾಯಿ ವರೆಗಿನ ಮನೆಯನ್ನು ಸಾಲ ಪಡೆದು ಕೊಳ್ಳುವವರಿಗೆ ಹೆಚ್ಚುವರಿಯಾಗಿ 1.50 ಲಕ್ಷ ರೂಪಾಯಿ ಬಡ್ಡಿ ಕಡಿತವನ್ನು ಕೇಂದ್ರ ಸರ್ಕಾರ ಘೋಷಿಸಿದ್ದು, ಈ ಹಿಂದಿದ್ದ 2 ಲಕ್ಷ ರೂಪಾಯಿ ಬಡ್ಡಿ ಕಡಿತ ಪ್ರಯೋಜನವೂ ಸೇರಿ ಈಗ ಒಟ್ಟಾರೆ 3.5 ಲಕ್ಷ ರೂಪಾಯಿ ಬಡ್ಡಿ ವಿನಾಯಿತಿ ಸಿಗಲಿದೆ. ಮಾರ್ಚ್ 31, […]

ಸಮ್ಮಿಶ್ರ ಸರ್ಕಾರದ ಬಜೆಟ್ ಮಂಡನೆ ವಿಚಾರ ಸಭೆಯಲ್ಲಿ ಚರ್ಚಿಸಿದ್ದೇವೆ: ಹೆಚ್ ಕೆ ಪಾಟೀಲ್

Wednesday, July 11th, 2018
h-k-patil

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಬಜೆಟ್ ಮಂಡನೆ ವಿಚಾರ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚಿಸಿದ್ದೇವೆ ಎಂದು ಮಾಜಿ ಸಚಿವ ಹೆಚ್ ಕೆ ಪಾಟೀಲ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಮ್ಮ ಶಾಸಕಾಂಗ ನಾಯಕರಿಗೆ ಈ ಸಂಬಂಧ ಪತ್ರ ಬರೆದಿದ್ದೇವೆ. ಮೂರು ವಿಚಾರಗಳ ಬಗ್ಗೆ ಪತ್ರದಲ್ಲಿ ಪ್ರಸ್ತಾಪ ಮಾಡಿಲಾಗಿದ್ದು, ಉತ್ತರ ಕರ್ನಾಟಕಕ್ಕೆ ಅನ್ಯಾಯ, ಅಲ್ಪಸಂಖ್ಯಾತರ ಕಲ್ಯಾಣ ಕಾರ್ಯಕ್ರಮಗಳಾಗಲಿ, ಹೊಸ ಯೋಜನೆ ಘೋಷಣೆ ಮಾಡೋದಾಗಲಿ ಆಗಿಲ್ಲ ಈ ವಿಚಾರ ತಿಳಿಸಿದ್ದೇವೆ. ಇವುಗಳ ಬಗ್ಗೆ ಶಾಸಕಾಂಗ ಸಭೆಯಲ್ಲೂ ಚರ್ಚೆ ಮಾಡಿದ್ದೇವೆ […]

ಕುಮಾರಸ್ವಾಮಿ ಮಂಡಿಸಿದ ಬಜೆಟ್ ಜೆ‌ಡಿಎಸ್ ಶಾಸಕರಿಗೆ ಮಂಡಿಸಿದ ಬಜೆಟ್ ಆಗಿದೆ: ಶ್ರೀನಿವಾಸ ಪೂಜಾರಿ

Saturday, July 7th, 2018
kota-srinivas-poojary

ಮಂಗಳೂರು: ಬಜೆಟ್ ಮಂಡನೆ ವೇಳೆ ಸಿದ್ದರಾಮಯ್ಯ ಸರ್ಕಾರ ಮಂಡಿಸಿದ ಬಜೆಟ್ ಮುಂದುವರಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದು, ಅದನ್ನು ಅನುಷ್ಠಾನ ಮಾಡುವವರೆಗೆ ಬಿಜೆಪಿ ಬಿಡುವುದಿಲ್ಲ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ವಿಧಾನ ಪರಿಷತ್ ಪ್ರತಿಪಕ್ಷ ನಾಯಕನಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಮಂಗಳೂರು ಬಿಜೆಪಿ ಕಚೇರಿಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಬಜೆಟ್ನಲ್ಲಿ ಹಿಂದಿನ ಸರ್ಕಾರದ ಬಜೆಟ್ ಮುಂದುವರಿಸುವುದಾಗಿ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಅವರು ಅದನ್ನು ಮಾಡುವ ಬಗ್ಗೆ ಅನುಮಾನವಿದೆ. ಆದರೆ ಬಜೆಟ್ ಅನುಷ್ಠಾನ ಮಾಡುವವರೆಗೆ ಬಿಜೆಪಿ […]

ಉ. ಕ. ಭಾಗಕ್ಕೆ ಅನ್ಯಾಯ..ಮುಂದಿನ‌ ದಿನಗಳಲ್ಲಿ ಸರಿಪಡಿಸುವ ಕೆಲಸ ಸರ್ಕಾರ ಮಾಡಲಿದೆ: ಶಿವಶಂಕರ ರೆಡ್ಡಿ

Saturday, July 7th, 2018
shishankar

ಬೆಳಗಾವಿ: ಸಿಎಂ‌ ಹೆಚ್. ಡಿ.‌ ಕುಮಾರಸ್ವಾಮಿ ಮಂಡಿಸಿರುವ ಬಜೆಟ್‌ ಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಅನ್ಯಾಯವಾಗಿದ್ದರೆ ಮುಂದಿನ‌ ದಿನಗಳಲ್ಲಿ ಅದನ್ನು ಸರಿಪಡಿಸುವ ಕೆಲಸ ಸಮ್ಮಿಶ್ರ ಸರ್ಕಾರ ಮಾಡಲಿದೆ ಎಂದು ಕೃಷಿ ಸಚಿವ ಶಿವಶಂಕರ ರೆಡ್ಡಿ ಸ್ಟಷ್ಟನೆ ನೀಡಿದ್ದಾರೆ. ಬೆಳಗಾವಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರೈತರ ಸಾಲ‌‌ ಮನ್ನಾ ಹಳೇ‌ ಮೈಸೂರು ಭಾಗಕ್ಕೆ ಮಾತ್ರ ಸೀಮಿತವಲ್ಲ. ಇಡೀ‌ ರಾಜ್ಯದ ರೈತರು ಇದರ ಸದುಪಯೋಗ ಪಡೆಯಲಿದ್ದಾರೆ. ಜೊತೆಗೆ ಇದೇನು ನಮ್ಮ ಸರ್ಕಾರದ ಅಂತಿಮ ಬಜೆಟ್ ಅಲ್ಲ.‌ ಇನ್ನೂ‌ ಸಪ್ಲಿಮೆಂಟರಿ […]

ಕರಾವಳಿಗೆ ಹೆಚ್ಚುವರಿ ಅನುದಾನಕ್ಕೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ : ಯು.ಟಿ. ಖಾದರ್

Thursday, July 5th, 2018
ut Khader

ಮಂಗಳೂರು :  ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇಂದು ಮಂಡಿಸಿರುವ ಬಜೆಟ್‍ನಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಕಳೆದ ಫೆಬ್ರವರಿಯಲ್ಲಿ ಮಂಡಿಸಿರುವ ಬಜೆಟ್‍ನಲ್ಲಿ ನೀಡಿರುವ ಎಲ್ಲಾ ಯೋಜನೆಗಳು ಮುಂದುವರಿಯಲಿದ್ದು, ಇಂದು ಹೆಚ್ಚುವರಿಯಾಗಿ ಬಜೆಟ್‍ನಲ್ಲಿ ಯೋಜನೆಗಳನ್ನು ಘೋಷಿಸಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರಾಜ್ಯದ ಆರ್ಥಿಕ ಶಿಸ್ತು ಕಾಪಾಡಿಕೊಂಡು, ರೈತರ ಸಾಲಮನ್ನಾದಂತಹ ದಿಟ್ಟ ಕಾರ್ಯಕ್ರಮ ಜಾರಿಗೆ ತಂದಿದ್ದಾರೆ. ರೈತರ ರೂ. 2 ಲಕ್ಷ ಸಾಲಮನ್ನಾ ಐತಿಹಾಸಿಕವಾಗಿದೆ. ಗರ್ಭಿಣಿ ಮಹಿಳೆಯರಿಗೆ ಮಾಸಿಕ ಧನ […]

ಬಜೆಟ್​ನಲ್ಲಿ ಹಾಸನ, ಮಂಡ್ಯ ಜಿಲ್ಲೆಗಳಿಗೆ ಹೆಚ್ಚಿನ ಆದ್ಯತೆ…ಬಿಜೆಪಿ ಶಾಸಕರು ಮೇಜು ಕುಟ್ಟಿ ವ್ಯಂಗ್ಯ!

Thursday, July 5th, 2018
BJP-MLA

ಬೆಂಗಳೂರು: ಆಯವ್ಯಯ ಭಾಷಣದ ಸಂದರ್ಭ ಲೋಕೋಪಯೋಗಿ ಇಲಾಖೆಯ ಯೋಜನೆಯನ್ನು ಸಿಎಂ ಓದುತ್ತಿದ್ದ ಹಾಗೇ ಬಿಜೆಪಿ ಶಾಸಕರು ಮೇಜು ಕುಟ್ಟಿ ವ್ಯಂಗ್ಯವಾಡಿದರು. ಆಯವ್ಯಯದಲ್ಲಿ ಲೋಕೋಪಯೋಗಿ ಇಲಾಖೆಯನ್ನು ಕೇವಲ ಹಾಸ್ಯಕ್ಕೆ ಸೀಮಿತಗೊಳಿಸಿರುವ ಬಗ್ಗೆ ಬಿಜೆಪಿ ಶಾಸಕರು ಮೇಜು ಕುಟ್ಟಿ ತಮ್ಮ ಆಕ್ಷೇಪ ವ್ಯಕ್ತಪಡಿಸಿದರು. ಲೋಕೋಪಯೋಗಿ ಇಲಾಖೆಯಲ್ಲಿ ಹಾಸನಕ್ಕೆ ಹೊರ ವರ್ತುಲ ರಸ್ತೆ ನಿರ್ಮಾಣಕ್ಕಾಗಿ 30 ಕೋಟಿ ರೂ. ಮೀಸಲಿರಿಸಲಾಗಿದೆ. ಉಳಿದಂತೆ ಇತರ ಯಾವುದೇ ಜಿಲ್ಲೆಗಳಲ್ಲಿನ ಲೋಕೋಪಯೋಗಿ ಕಾಮಗಾರಿಗಳ ಬಗ್ಗೆ ಪ್ರಸ್ತಾಪಿಸಿಲ್ಲ. ಈ ಬಗ್ಗೆ ಬಿಜೆಪಿ ಶಾಸಕರು ಆಕ್ಷೇಪ ವ್ಯಕ್ತಪಡಿಸಿದರು. ಇದೇ […]