ರಾಜ್ಯಪಾಲರು, ಕಾಂಗ್ರೆಸ್, ಜೆಡಿಎಸ್ ನಾಯಕರ ವರ್ತನೆಗೆ ದ.ಕ ಜಿಲ್ಲಾ ಬಿಜೆಪಿ ಖಂಡನೆ.

Wednesday, October 13th, 2010
ಬಿ.ಜೆಪಿಯ ಜಿಲ್ಲಾಧ್ಯಕ್ಷ ಪದ್ಮನಾಭ ಕೊಟ್ಟಾರಿ

ಮಂಗಳೂರು:  ಕಳೆದ ಒಂದು ವಾರದ ರಾಜ್ಯದ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿದಾಗ ಈ ರಾಜ್ಯದಲ್ಲಿ ಜನಾದೇಶದೊಂದಿಗೆ ಜನಪರ ಆಡಳಿತ ನೀಡುವ  ಒಂದು ಸರಕಾರವನ್ನು ಅಧಿಕಾರದಿಂದ ಕೆಳಗಿಳಿಸಲು ಪ್ರತಿಪಕ್ಷಗಳು ಯಾವ ರೀತಿ ಕಾರ್ಯೋನ್ಮುಖವಾಗಿದೆ ಎನ್ನುವುದರ ಜ್ವಲಂತ ಸಾಕ್ಷಿಯಾಗಿದೆ. ರಾಜ ಭವನವನ್ನು ರಾಜಕೀಯ ಚಟುವಟಿಕೆಗಳ ಕೇಂದ್ರವಾಗಿರಿಸಿಕೊಂಡು ರಾಜ್ಯಪಾಲರನ್ನು ಪಕ್ಷದ ಏಜಂಟರಂತೆ ಉಪಯೋಗಿಸಿಕೊಂಡ ಕಾಂಗ್ರೆಸ್-ಜೆಡಿಎಸ್ನ ಕುತಂತ್ರ ಬಯಲಾಗಿದೆ ಎಂದು ಬಿ.ಜೆಪಿಯ ಜಿಲ್ಲಾಧ್ಯಕ್ಷ ಪದ್ಮನಾಭ ಕೊಟ್ಟಾರಿಯವರು ಇಂದು ಬಿಜೆಪಿ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಸರಕಾರದ ಭಾಗವಾಗಿ ಕಾರ್ಯನಿರ್ವಹಿಸಿದ ಸಚಿವರನ್ನು, ಶಾಸಕರನ್ನು ರೆಸಾರ್ಟ್ ಗಳಲ್ಲಿ […]