ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ರಾಜ್ಯ ಉಪಾಧ್ಯಕ್ಷ ಬಿ.ನಾಗರಾಜ ಶೆಟ್ಟಿ, ಕಾರ್ಯದರ್ಶಿ ಎಂ.ಜಿ.ಹೆಗಡೆ

Saturday, March 23rd, 2013
Nagaraj Shetty, MG Hegde resign

ಮಂಗಳೂರು : ಜಾತ್ಯಾತೀತ ಜನತಾದಳದ ಕರಾವಳಿ ಭಾಗದ ಪ್ರಮುಖ ಮುಖಂಡರಾದ ಪಕ್ಷದ ರಾಜ್ಯ ಉಪಾಧ್ಯಕ್ಷ ಬಿ.ನಾಗರಾಜ ಶೆಟ್ಟಿ ಹಾಗೂ ರಾಜ್ಯ ಕಾರ್ಯದರ್ಶಿ ಎಂ.ಜಿ.ಹೆಗಡೆ ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಜಿಲ್ಲ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಸ್ಲಂ ಹಾಗೂ ಜಿಲ್ಲ ಪ್ರಧಾನ ಕಾರ್ಯದರ್ಶಿ ಶಶಿರಾಜ್ ಶೆಟ್ಟಿ ಪಕ್ಷದ ಜಿಲ್ಲಾಧ್ಯಕ್ಷ ಎಂ.ಬಿ.ಸದಾಶಿವ ರವರ ಬಗ್ಗೆ ಸಭೆಯೊಂದರಲ್ಲಿ ಅಸಮಧಾನ ವನ್ನು ವ್ಯಕ್ತಪಡಿಸಿದರ ಹಿನ್ನಲೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಹೆಚ್. ಡಿ. ಕುಮಾರ ಸ್ವಾಮಿಯವರು ಈ ಇಬ್ಬರನ್ನು ಪಕ್ಷದಿಂದ ಉಚ್ಚಾಟಿಸಿದ್ದರು. ರಾಜ್ಯಾಧ್ಯಕ್ಷರ […]

ಮಹಾನಗರ ಪಾಲಿಕೆ ಚುನಾವಣೆ ಜೆಡಿಎಸ್ ನಿಂದ ಚುನಾವಣಾ ಪ್ರಣಾಳಿಕೆ ಬಿಡುಗಡೆ

Thursday, February 28th, 2013
ಮಹಾನಗರ ಪಾಲಿಕೆ ಚುನಾವಣೆ ಜೆಡಿಎಸ್ ನಿಂದ ಚುನಾವಣಾ ಪ್ರಣಾಳಿಕೆ ಬಿಡುಗಡೆ

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಗೆ ಮಾರ್ಚ್  7ರಂದು ನಡೆಯುವ ಚುನಾವಣೆಗೆ ಸಂಬಂಧಿಸಿದಂತೆ ಬುಧವಾರ ನಗರದಲ್ಲಿ ಜಾತ್ಯಾತೀತ ಜನತಾ ದಳದ ರಾಜ್ಯ ಉಪಾಧ್ಯಕ್ಷ- ಮಾಜಿ ಸಚಿವ ಬಿ. ನಾಗರಾಜ ಶೆಟ್ಟಿ ಜಾತ್ಯಾತೀತ ಜನತಾದಳದ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದರು. ಮಂಗಳೂರು ಮಹಾ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವ ಜೆಡಿ‌ಎಸ್, ಮನಪಾ ವ್ಯಾಪ್ತಿಯ 60ವಾರ್ಡ್‌ಗಳಿಗೆ ಸಂಬಂಧಿಸಿದಂತೆ ವಿವಿಧ ಸಮಸ್ಯೆಗಳನ್ನು ಗಮನದಲ್ಲಿ ಇರಿಸಿಕೊಂಡು ವಿವಿಧ ನಾಗರಿಕ ಸೌಲಭ್ಯಗಳನ್ನು ಒದಗಿಸಿಕೊಡುವ ಭರವಸೆಗಳನ್ನು ಪ್ರಣಾಳಿಕೆಯಲ್ಲಿ ಸೇರಿಸಲಾಗಿದೆ. ಈ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ನಾಗರಾಜ […]

ಅಂಗವಿಕಲರಲ್ಲೂ ವಿಶೇಷ ಪ್ರತಿಭೆ ಇದೆ: ಪಾಲೆಮಾರ್

Friday, December 3rd, 2010
ಜೆ. ಕೃಷ್ಣ ಪಾಲೆಮಾರ್

ಮಂಗಳೂರು: ದ.ಕ ಜಿಲ್ಲಾಡಳಿತ, ದ.ಕ ಜಿಲ್ಲಾ ಪಂಚಾಯತ್ ಮಂಡಳಿ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಗಳೂರು, ಅಂಗವಿಕಲರ ಹಾಗೂ ಹಿರಿಯ ನಾಗರಿಕ ಕಲ್ಯಾಣ ಇಲಾಖೆ, ಅಂಗವಿಕಲರಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ದ.ಕ ಹಾಗೂ ಲಯನ್ಸ್ ಕ್ಲಬ್ ಮಂಗಳೂರು, ಗಾಂಧಿನಗರ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಅಂಗವಿಕಲರ ದಿನಾಚರಣೆ 2010′ ಕಾರ್ಯಕ್ರಮವನ್ನು ಇಂದು, ಬೆಳಿಗ್ಗೆ ನಗರದ ಪುರಭವನದಲ್ಲಿ ಆಚರಿಸಲಾಯಿತು. ಸಮಾರಂಭದ ಉದ್ಘಾಟನೆಯನ್ನು ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ. ಕೃಷ್ಣ ಪಾಲೆಮಾರ್ ದೀಪ ಬೆಳಗಿಸುವುದರ ಮೂಲಕ ನೆರವೇರಿಸಿದರು. […]

ಕರಾವಳಿ ಪ್ರಾಧಿಕಾರ ಅಧ್ಯಕ್ಷರಿಂದ ರಸ್ತೆ ಕಾಮಗಾರಿ ಅಭಿವೃದ್ಧಿ ಪರಿಶೀಲನಾ ಸಭೆ

Tuesday, November 23rd, 2010
ಕರಾವಳಿ ಪ್ರಾಧಿಕಾರ ಅಧ್ಯಕ್ಷರಿಂದ ರಸ್ತೆ ಕಾಮಗಾರಿ ಅಭಿವೃದ್ಧಿ ಪರಿಶೀಲನಾ ಸಭೆ

ಮಂಗಳೂರು : ದಕ್ಷಿಣ ಕನ್ನಡ  ಜಿಲ್ಲೆಯ ಹದಗೆಟ್ಟ ನಗರ ಹಾಗೂ ಗ್ರಾಮೀಣ ರಸ್ತೆಗಳನ್ನು ಸಂಚಾರಯೋಗ್ಯವನ್ನಾಗಿ ಮಾಡಲು ಹಾಗೂ ದೊಡ್ಡ ದೊಡ್ಡ ಹೊಂಡಗಳನ್ನು ನವೆಂಬರ್ 10 ರೊಳಗೆ ಮುಚ್ಚಬೇಕೆಂದು ಕರಾವಳಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಬಿ. ನಾಗರಾಜ ಶೆಟ್ಟಿ ಅವರು ಇಲಾಖಾಧಿಕಾರಿಗಳಿಗೆ ಗಡುವು ನೀಡಿದ್ದರು. ಈ ಆದೇಶ ಪರಿಪಾಲನೆಗೆ ಸಂಬಂಧಿಸಿದಂತೆ ರಸ್ತೆ ಕಾಮಗಾರಿ ಅಭಿವೃದ್ಧಿ ಕುರಿತ ಸಭೆಯನ್ನು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರಾಧಿಕಾರದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಕರೆಯಲಾಗಿತ್ತು. ಲೋಕೋಪಯೋಗಿ, ಮಹಾನಗರಪಾಲಿಕೆ, ರಾಷ್ಟ್ರೀಯ ಹೆದ್ದಾರಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು […]

ಮಂಗಳೂರಿನಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ

Monday, September 27th, 2010
ವಿಶ್ವ ಪ್ರವಾಸೋದ್ಯಮ ದಿನಾಚರಣೆ

ಮಂಗಳೂರು: ಪ್ರವಾಸೋದ್ಯಮ ಇಲಾಖೆ, ಜಿಲ್ಲಾಡಳಿತ ದಕ್ಷಿಣ ಕನ್ನಡ ಜಿಲ್ಲೆ, ಪಣಂಬೂರ್ ಬೀಚ್  ಅಭಿವೃದ್ಧಿ ಯೋಜನಾ ಸಂಸ್ಥೆ ಹಾಗೂ ಮಂಗಳೂರು ಅಸೋಸಿಯೇಷನ್ ಆಫ್ ಟ್ರಾವೆಲ್ ಏಜೆಂಟ್ಸ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪ್ರವಾಸೋಧ್ಯಮ ದಿನಾಚರಣೆ 2010ನ್ನು ಇಂದು ಬೆಳಿಗ್ಗೆ ನಗರದ ಪುರಭವನದಲ್ಲಿ ಆಚರಿಸಲಾಯಿತು. ಪ್ರವಾಸೋಧ್ಯಮ ಮತ್ತು ಜೈವಿಕ ವೈವಿಧ್ಯತೆ ಎಂಬ ಸಂದೇಶದೊಂದಿಗೆ ಆಚರಿಸಲ್ಪಟ್ಟ ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ. ನಾಗರಾಜ ಶೆಟ್ಟಿಯವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ತೀರ ಪ್ರದೇಶವನ್ನು ಹೊಂದಿರುವ […]