ಆರೋಗ್ಯ ಸಚಿವ ಬಿ. ಶ್ರೀರಾಮುಲು ಗೆ ಮಾತೃ ವಿಯೋಗ

Friday, August 21st, 2020
Ramulu mother

ಬಳ್ಳಾರಿ: ಕೋವಿಡ್ ಸೋಂಕಿಗೆ ತುತ್ತಾಗಿ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸಂಪೂರ್ಣವಾಗಿ ಗುಣಮುಖರಾಗಿ ಬಳ್ಳಾರಿಯ ಮನೆಗೆ ಹಿಂದಿರುಗಿ ದ  ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರ ತಾಯಿ ಹೊನ್ನೂರಮ್ಮ (95) ಬುಧವಾರ ತಡರಾತ್ರಿ ವಯೋಸಹಜ ಕಾರಣದಿಂದ ನಿಧನರಾದರು. ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಸಂಪೂರ್ಣ ಗುಣಮುಖರಾದ ಬಳಿಕ ಬಳ್ಲಾರಿಯ ತಮ್ಮ ನಿವಾಸಕ್ಕೆ ತೆರಳಿದ್ದರು. ತಾಯಿಯ ನಿಧನದ ಬಗೆಗೆ ಸಚಿವ ಶ್ರೀರಾಮುಕು ಟ್ವೀಟ್ ಮಾಡಿದ್ದು “ನನ್ನ ತಾಯಿಯವರಾದ ಹೊನ್ನೂರಮ್ಮ ಅವರು ನಿನ್ನೆ ತಡ ರಾತ್ರಿ ವಯೋಸಹಜ […]

ಪ್ರತಿಪಕ್ಷಗಳ ಆರೋಪ ನಿರಾಧಾರ -ಆರೋಗ್ಯ ಸಚಿವ ಬಿ.ಶ್ರೀರಾಮುಲು

Monday, July 20th, 2020
sriramulu

ಬೆಂಗಳೂರು: ಮಾರಕ ಕೋವಿಡ್-19 ಸಾಂಕ್ರಾಮಿಕ ರೋಗದ ಸಮಯದಲ್ಲಿ ಚಿಕಿತ್ಸೆಗಾಗಿ ಅಗತ್ಯವಿರುವ ಆರೋಗ್ಯ ಸಂಬಂಧಿತ ಉಪಕರಣಗಳ ಖರೀದಿಯಲ್ಲಿ ರಾಜ್ಯ ಸರ್ಕಾರ ಅವ್ಯವಹಾರ ನಡೆಸಿದೆ ಎನ್ನುವ ಪ್ರತಿಪಕ್ಷಗಳ ಆರೋಪ ನಿರಾಧಾರವಾಗಿದ್ದು, ಇಂತಹ ಯಾವುದೇ ಪ್ರಕರಣಗಳು ನಡೆದಿರುವುದಿಲ್ಲ, ಅವ್ಯವಹಾರ ಸಾಭೀತದಾದಲ್ಲಿ ತಕ್ಷಣವೇ ರಾಜಿನಾಮೆ ನೀಡಲು ಸಿದ್ಧ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರು ಸ್ಪಷ್ಟಪಡಿಸಿದ್ದಾರೆ. ಪ್ರತಿಪಕ್ಷಗಳ ಆರೋಪ ಕುರಿತು ಇಂದು ವಿಕಾಸಸೌಧದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿನ್ನು ಉದ್ದೇಶಿಸಿ ಮಾತನಾಡಿದ ಅವರು ಪ್ರತಿಪಕ್ಷಗಳು ಕಳೆದ ಮಾರ್ಚ್‍ನಲ್ಲಿ ಇದ್ದ ರಾಜ್ಯದ ಪರಿಸ್ಥಿತಿಯನ್ನು […]

ಕಾರ್ಕಳ : ತಾಯಿ ಮತ್ತು ಮಕ್ಕಳ ಆಸ್ಪತ್ರೆ ರಚನೆಗೆ ಆರೋಗ್ಯ ಸಚಿವ ಬಿ. ಶ್ರೀರಾಮುಲು ಗ್ರೀನ್ ಸಿಗ್ನಲ್

Wednesday, November 13th, 2019
Karkala

ಕಾರ್ಕಳ : ಕಾರ್ಕಳಕ್ಕೆ ಶೀಘ್ರದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ರಚನೆಗೆ ಆರೋಗ್ಯ ಸಚಿವ ಬಿ. ಶ್ರೀರಾಮುಲು ಗ್ರೀನ್ ಸಿಗ್ನಲ್ ನೀಡಿದ್ದು, ಜತೆಗೆ ಎರಡು ಹೊಸ ತುರ್ತು ಚಿಕಿತ್ಸಾ ವಾಹನ ಹಾಗೂ ಮೂರು ಹಿಂದುಳಿದ ವರ್ಗಗಳ ಸಮುದಾಯ ಭವನಕ್ಕೆ ತಲಾ 10 ಲಕ್ಷ ರೂ. ನೀಡುವ ಕುರಿತು ಘೋಷಿಸಿದ್ದಾರೆ. ಅವರು ಮಂಗಳವಾರ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲೆ ಹಾಗೂ ಇಂಜಿನಿಯರಿಂಗ್ ಉಪವಿಭಾಗ ಮಂಗಳೂರು ಇದರ 100 ಹಾಸಿಗೆಗಳ ಕಾರ್ಕಳ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ನೂತನ […]

ರೈತರ ಮತ್ತು ನೇಕಾರ ಸಾಲಮನ್ನಾ ವಿಚಾರದಲ್ಲಿ ಸಿ.ಎಂ ಬಳಿ ಚರ್ಚಿಸಲಾಗುವುದು : ಸಚಿವ ಬಿ.ಶ್ರೀರಾಮುಲು

Wednesday, October 16th, 2019
sri-ramulu

ಬಳ್ಳಾರಿ : ನೆರೆ ಹಾವಳಿಯಿಂದಾಗಿ ರೈತರು ಮತ್ತು ನೇಕಾರರಿಂದ ಸಾಲಮನ್ನಾ ಮಾಡುವಂತೆ ಒತ್ತಾಯ ಬರುತ್ತಿದೆ. ಈ ಕುರಿತು ಸಿಎಂ ಯಡಿಯೂರಪ್ಪ ಬಳಿ ಚರ್ಚಿಸಲಾಗುವುದು ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಲಮನ್ನಾ ವಿಚಾರದಲ್ಲಿ ಗೊಂದಲ ಇದೆ. ಹಿಂದಿನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಕುಮಾರಸ್ವಾಮಿ ಅವರಿಗೂ ಸ್ಪಷ್ಟತೆ ಇರಲಿಲ್ಲ. ಹಾಗಾಗಿ ಈ ಬಗ್ಗೆ ನಾಳೆ ನಾಡಿದ್ದು ಸಿಎಂ ಬಳಿ ಕೂಲಂಕುಷವಾಗಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿರುವ ಐತಿಹಾಸಿಕ […]

ಕುಂಭಾಸಿ : ಆಟೋ ರಿಕ್ಷಾ ಪಲ್ಟಿ; ಮಹಿಳೆಗೆ ಗಾಯ, ಮಾನವೀಯತೆ ಮೆರೆದ ಸಚಿವ ಬಿ ಶ್ರೀರಾಮುಲು

Saturday, September 28th, 2019
awto-riksha

ತೆಕ್ಕಟ್ಟೆ : ಕುಂಭಾಶಿಯಲ್ಲಿ ಅಪಘಾತಕ್ಕೀಡಾದ ಮಹಿಳೆಯನ್ನು ಸ್ವತ ಆರೋಗ್ಯ ಸಚಿವ ಶ್ರೀರಾಮುಲು ಅವರು ತನ್ನ ವಾಹನದಲ್ಲಿ ಕರೆದುಕೊಂಡು ಆಸ್ಪತ್ರೆ ಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಕುಂಭಾಶಿ ರಸ್ತೆಯಲ್ಲಿ ಬೈಕ್ ಸವಾರರೋರ್ವರು ಲಾರಿ ಗೆ ಡಿಕ್ಕಿಯಾಗಿ ರಸ್ತೆಗೆ ಬಿದ್ದರು. ಇದೇ ಸಮಯದಲ್ಲಿ ಹಿಂದಿನಿಂದ ಬರುತ್ತಿದ್ದ ಆಟೋ ರಿಕ್ಷಾ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ಪಲ್ಟಿಯಾಯಿತು. ಕುಂದಾಪುರ ಕಡೆಗೆ ಕಾರ್ಯಕ್ರಮಕ್ಕೆಂದು ಆಗಮಿಸುತ್ತಿದ್ದ ಅರೋಗ್ಯ ಸಚಿವ ಬಿ ಶ್ರೀರಾಮುಲು ಅವರು ಮಹಿಳೆಯನ್ನು ಕಂಡು ತಮ್ಮ ಕಾರಿನಲ್ಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು […]

ಪಕ್ಷದ ನಿರ್ಣಯಕ್ಕೆ ನಾನು ಬದ್ಧ : ಬಿ.ಶ್ರೀರಾಮುಲು

Wednesday, August 28th, 2019
sri-ramulu

ಬಳ್ಳಾರಿ : ಭಾರತೀಯ ಜನತಾ ಪಕ್ಷ ನನಗೆ ತಾಯಿಯ ಸಮಾನ ಇದ್ದಂತೆ. ಪಕ್ಷದ ನಿರ್ಣಯಕ್ಕೆ ನಾನು ಬದ್ಧನಾಗಿದ್ದು, ವೈಯಕ್ತಿಕ ಅಭಿಪ್ರಾಯವನ್ನು ಬದಿಗಿರಿಸಿ ನಾವೆಲ್ಲರೂ ಪಕ್ಷಕ್ಕಾಗಿ ದುಡಿಯಬೇಕು ಎಂದು ತಮ್ಮ ಅಭಿಮಾನಿಗಳು ಹಾಗೂ ಬೆಂಬಲಿಗರಲ್ಲಿ ಆರೋಗ್ಯ ಸಚಿವ ಬಿ.ಶ್ರೀರಾಮುಲು ಮನವಿ ಮಾಡಿಕೊಂಡಿದ್ದಾರೆ. ನಗರದಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಶ್ರೀರಾಮುಲು ಅವರು, ತಮ್ಮ ಪರವಾಗಿ ಯಾರೂ ಯಾವುದೇ ರೀತಿಯ ಪ್ರತಿಭಟನೆಯನ್ನು ಮಾಡದಿರುವಂತೆ ರಾಜ್ಯದ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಎಲ್ಲರಿಗೂ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಪಕ್ಷದೊಂದಿಗೆ ನಾನು […]

ಬಿ ಶ್ರೀರಾಮುಲುಗೆ ಭಾರಿ ಅಂತರದ ಮುನ್ನಡೆ

Tuesday, May 15th, 2018
sriramulu

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯ ಜನಾದೇಶ ಪಡೆಯುವ ಕಾಲ ಇದೀಗ ಬಂದಿದೆ. 224 ವಿಧಾನಸಭಾ ಕ್ಷೇತ್ರಗಳ ಪೈಕಿ 222 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಮೇ 12ರಂದು ಮತದಾನವಾಗಿದ್ದು, ಚುನಾವಣಾ ಪೂರ್ವ ಸಮೀಕ್ಷೆ, ಅಭಿಪ್ರಾಯಗಳ ಸಂಗ್ರಹ ಕುತೂಹಲಕಾರಿ ಫಲಿತಾಂಶವನ್ನು ನೀಡಿದೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಅಲ್ಲದೆ ಸರಿ ಸುಮಾರು 28ಕ್ಕೂ ಅಧಿಕ ಪ್ರಮುಖ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದವು. 2,622 ಅಭ್ಯರ್ಥಿಗಳಿದ್ದು, ಪುರುಷ ಅಭ್ಯರ್ಥಿಗಳು 2,405, ಮಹಿಳೆಯರು 217. ಪಕ್ಷವಾರು: ಬಿಜೆಪಿ 222, ಕಾಂಗ್ರೆಸ್ 220, ಜೆಡಿಎಸ್ […]

ಶ್ರೀರಾಮುಲು ಬಿಜೆಪಿ ಸೇರ್ಪಡೆಗೆ ಸುಷ್ಮಾ ನಕಾರ

Thursday, March 6th, 2014
Sushma-Swaraj

ನವದೆಹಲಿ: ನಾನು ಬಿಜೆಪಿ ಸೇರುವುದಕ್ಕೆ ಸುಷ್ಮಾ ಸ್ವರಾಜ್ ಸೇರಿದಂತೆ ಬಿಜೆಪಿಯ ರಾಷ್ಟ್ರೀಯ ನಾಯಕರು ಒಪ್ಪಿಗೆ ಸೂಚಿಸಿದ್ದಾರೆ ಎಂದು ನಿನ್ನೆ ಬಿಎಸ್‌ಆರ್ ಕಾಂಗ್ರೆಸ್ ಸಂಸ್ಥಾಪಕ ಬಿ.ಶ್ರೀರಾಮುಲು ಹೇಳಿದ ಮಾತು ಎಷ್ಟರ ಮಟ್ಟಿಗೆ ನಿಜ ಎಂಬ ಗೊಂದಲ ಮೂಡಿದೆ. ಬಿ.ಶ್ರೀರಾಮುಲು ಬಿಜೆಪಿ ಸೇರ್ಪಡೆಗೆ ಸರ್ವಾನುಮತದಿಂದ ನಿರ್ಧಾರ ಕೈಗೊಳ್ಳಲಾಗಿದೆ ಎಂದಿರುವ ಬೆನ್ನಲ್ಲೇ, ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್ ಬಿಎಸ್‌ಆರ್ ಪಕ್ಷ ಮತ್ತು ಬಿಜೆಪಿ ವಿಲೀನಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಬಿ.ಶ್ರೀರಾಮುಲು ನೇತೃತ್ವದ ಬಿಎಸ್‌ಆರ್ ಕಾಂಗ್ರೆಸ್ ಮತ್ತು ಬಿಜೆಪಿ ವಿಲೀನಕ್ಕೆ ನನ್ನ ವಿರೋಧವಿದೆ ಎಂದು […]