ಧರ್ಮಸ್ಥಳ : ಭಗವಾನ್ ಬಾಹುಬಲಿ ಸ್ವಾಮಿಗೆ 216 ಕಲಶಗಳಿಂದ ಪಾದಾಭಿಷೇಕ

Wednesday, February 5th, 2020
ujire

ಉಜಿರೆ : ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ವಿರಾಜಮಾನರಾಗಿರುವ ಭಗವಾನ್ ಬಾಹುಬಲಿ ಸ್ವಾಮಿಗೆ ಮಂಗಳವಾರ ಬೆಳಿಗ್ಯೆ ಭವ್ಯ ಅಗ್ರೋದಕ ಮೆರವಣಿಗೆ ಬಳಿಕ 216 ಕಲಶಗಳಿಂದ ಪಾದಾಭಿಷೇಕ ನಡೆಯಿತು. ಮಂಗಲ ಪ್ರವಚನ ನೀಡಿದ ಕಾರ್ಕಳದ ಲಲಿತಕೀರ್ತಿ ಭಟ್ಟಾರಕ ಸಾಮೀಜಿ ಮಾತನಾಡಿ, ಎಲ್ಲೆಲ್ಲೂಅನ್ಯಾಯ, ಕ್ರೋಧ, ದ್ವೇಷ, ವಂಚನೆ ತಾಂಡವವಾಡುತ್ತಿರುವ ಇಂದು ಬಾಹುಬಲಿಯ ತ್ಯಾಗ ಸಂದೇಶ ವಿಶ್ವಮಾನ್ಯವಾಗಿದೆಎಂದು ಹೇಳಿದರು. ಭಾರತ ದೇಶವು ಧರ್ಮ, ಸಂಸ್ಕೃತಿಯ ನೆಲೆವೀಡಾಗಿದ್ದು ಪಂಚಕಲ್ಯಾಣ ಪೂರ್ವಕ ಪ್ರತಿಷ್ಠಾಪನೆಗೊಂಡ ಭಗವಾನ್ ಬಾಹುಬಲಿ ಮೂರ್ತಿಯ ಆರಾಧನೆಯಿಂದ ತ್ಯಾಗ, ಅಹಿಂಸೆ, ಸಂಯಮ, ಇಂದ್ರಿಯ ನಿಗ್ರಹ ಮೊದಲಾದ ಮಾನವೀಯ […]

ಧರ್ಮಸ್ಥಳ : ಇಂದು ಭಗವಾನ್ ಬಾಹುಬಲಿ ಸ್ವಾಮಿಗೆ ಪಾದಾಭಿಷೇಕ

Monday, February 3rd, 2020
ratna-giri

ಉಜಿರೆ : ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ (ಬಾಹುಬಲಿ ಬೆಟ್ಟ) ವಿರಾಜಮಾನರಾಗಿರುವ ಭಗವಾನ್ ಬಾಹುಬಲಿ ಸ್ವಾಮಿಗೆ ಮಂಗಳವಾರ ಭವ್ಯಅಗ್ರೋದಕ ಮೆರವಣಿಗೆ ಬಳಿಕ 216 ಕಲಶಗಳಿಂದ ಪಾದಾಭಿಷೇಕ ನಡೆಯುತ್ತದೆ. ಕಾರ್ಕಳ ಜೈನಮಠದ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಮಂಗಲ ಪ್ರವಚನ ನೀಡುವರು. ಇದಕ್ಕೆ ಪೂರ್ವಭಾವಿಯಾಗಿ ಸೋಮವಾರ ರತ್ನಗಿರಿಯಲ್ಲಿ ತೋರಣ ಮುಹೂರ್ತ, ವಿಮಾನಶುದ್ಧಿ, ನಾಂದಿ ಮಂಗಲ ಮೊದಲಾದಧಾರ್ಮಿಕ ವಿಧಿ-ವಿಧಾನಗಳು ನಡೆದವು.    

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಮಹೋತ್ಸವ- ಸಂತ ಸಮ್ಮೇಳನ

Saturday, February 9th, 2019
Jaina-Muni

ಧರ್ಮಸ್ಥಳ : ಸಕಲ ಪಾಪಕರ್ಮಗಳ ಕ್ಷಯ ಮಾಡಿ ಮೋಕ್ಷ ಪ್ರಾಪ್ತಿಯೇ ಸಕಲ ಜೀವಿಗಳ ಗುರಿಯಾಗಿದೆ. ಆತ್ಮ ವೈಭವವೇ ಶ್ರೇಷ್ಠ ವೈಭವ ಎಂದು ಆಚಾರ್ಯ ಶ್ರೀ 108 ವರ್ಧಮಾನ ಸಾಗರ ಮುನಿಮಹಾರಾಜರು ಹೇಳಿದರು. ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಮಹಾಮಸ್ತಕಾಭಿಷೇಕ ಮಹೋತ್ಸವ ಸಂದರ್ಭದಲ್ಲಿ ಶುಕ್ರವಾರ ಆಯೋಜಿಸಿದ ಸಂತ ಸಮ್ಮೇಳನದಲ್ಲಿ ಆಶೀರ್ವಚನ ನೀಡಿಅವರು ಮಾತನಾಡಿದರು. ಲೌಕಿಕ ಸುಖ-ಭೋಗಗಳಿಂದ ಶಾಂತಿ, ನೆಮ್ಮದಿ ಸಿಗುವುದಿಲ್ಲ. ಅಹಿಂಸೆ, ತ್ಯಾಗ, ಮೈತ್ರಿ, ಮತ್ತುಧ್ಯಾನದಿಂದ ಶಾಶ್ವತ ಸುಖ-ಶಾಂತಿ, ನೆಮ್ಮದಿ ಸಿಗುತ್ತದೆ ಎಂದು ಬಾಹುಬಲಿಯಜೀವನದಿಂದ ನಮಗೆ ಉತ್ತಮ ಸಂದೇಶದೊರಕುತ್ತದೆ.ಆತ್ಮ ವೈಭವವೇ ಶ್ರೇಷ್ಠ […]

ಫೆ. 9 ರಿಂದ ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ

Wednesday, January 30th, 2019
Masthakabhisheka

ಉಜಿರೆ: ಧರ್ಮಸ್ಥಳದಲ್ಲಿ ಫೆ. 9 ರಿಂದ 18ರ ವರೆಗೆ ನಡೆಯಲಿರುವಭಗವಾನ್ ಬಾಹುಬಲಿ ಮಹಾಮಸ್ತಕಾಭಿಷೇಕದ ಪೂರ್ವಸಿದ್ಧತೆಗಳ ಬಗ್ಗೆ ಪ್ರಗತಿ ಪರಿಶೀಲನಾ ಸಭೆ ಮಂಗಳವಾರ ಧರ್ಮಸ್ಥಳದ ಶ್ರೀ ಸನ್ನಿಧಿಅತಿಥಿಗೃಹದಲ್ಲಿ ನಡೆಯಿತು. ಸಚಿವಯು.ಟಿ.ಖಾದರ್‌ಎಲ್ಲಾ ಇಲಾಖಾ ಅಧಿಕಾರಿಗಳಿಂದ ಪ್ರಗತಿ ಬಗ್ಗೆ ಸವಿವರ ಮಾಹಿತಿ ಪಡೆದು ಫೆ.೧೦ ರೊಳಗೆ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಬೇಕೆಂದು ನಿರ್ದೇಶನ ನೀಡಿದರು. ನೇತ್ರಾವತಿ ಸ್ನಾನಘಟ್ಟದಿಂದಧರ್ಮಸ್ಥಳದವರೆಗೆ, ಬಾಹುಬಲಿ ಬೆಟ್ಟ ಸಂಪರ್ಕರಸ್ತೆ, ಕೆ.ಎಸ್.ಆರ್.ಟಿ.ಸಿ.ಬಸ್ ನಿಲ್ದಾಣದರಸ್ತೆಯಕಾಮಗಾರಿ ಮುಕ್ತಾಯದ ಹಂತದಲ್ಲಿದ್ದು ಫೆಬ್ರವರಿ ಪ್ರಥಮ ವಾರದಲ್ಲಿ ಪೂರ್ಣಗೊಳ್ಳಲಿದೆ ಎಂದು ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕಎಂಜಿನಿಯರ್ ಶಿವಪ್ರಸಾದ ಅಜಿಲ ತಿಳಿಸಿದರು. ಮಸ್ತಕಾಭಿಷೇಕ […]