ದೇಶದಲ್ಲಿ ಮತ್ತೊಂದು ಅವಗಢ : ಕೋಡಿಮಠದ ಸ್ವಾಮೀಜಿ ಭವಿಷ್ಯ

Friday, December 24th, 2021
Kodimatha

ರಾಣೆಬೆನ್ನೂರ: ಸಂಕ್ರಾತಿಯೊಳಗೆ ಮತ್ತೊಂದು ರಾಜಕೀಯ ಅವಘಡ ಸಂಭವಿಸುವ ಲಕ್ಷಣವಿದೆ. ಇದರಿಂದ ಜಗತ್ತು ತಲ್ಲಣಗೊಳ್ಳಲಿದೆ ಎಂದು ಹಾರನಹಳ್ಳಿ ಕೋಡಿಮಠದ ಡಾ. ಶಿವಾನಂದ ಶಿವಯೋಗೀಂದ್ರ ಸ್ವಾಮೀಜಿ ಭವಿಷ್ಯ ನುಡಿದರು. ನಗರಕ್ಕೆ ಶುಕ್ರವಾರ ಖಾಸಗಿ ಕಾರ್ಯಕ್ರಮವೊಂದರ ನಿಮಿತ್ತ ಆಗಮಿಸಿದ ಅವರು ಮಾಧ್ಯಮದರೊಂದಿಗೆ ಮಾತನಾಡಿ, ನಾನು ಈ ಹಿಂದೆಯೇ ದೊಡ್ಡಮಟ್ಟದ ಅವಘಡ ಸಂಭವಿಸುವ ಕುರಿತು ಹೇಳಿದ್ದೆ. ಅದರಂತೆ ಭಾರತೀಯ ಸೇನೆಯ ಮುಖ್ಯಸ್ಥರ ಹೆಲಿಕಾಪ್ಟರ್ ದುರಂತ ಪ್ರಕರಣ ನಡೆದು ಹೋಯಿತು. ಮೊನ್ನೆ ನಡೆದ ಭಾರತೀಯ ಸೇನೆಯ ಮುಖ್ಯಸ್ಥರ ಅವಘಡದಂತೆ  ಮತ್ತೆ ಅಂಥದ್ದೇ ದುರಂತ ಸಂಭವಿಸುವ […]

ಕೆಂದ್ರದ ನಾಯಕರು ಮಠಾಧೀಶರಿಗೆ ಅಗೌರವ ತೋರಿದ್ದಾರೆ, ಸಂಕ್ರಾಂತಿ ಒಳಗೆ ರಾಷ್ಟ್ರಮಟ್ಟದಲ್ಲಿ ದೊಡ್ಡ ಅವಘಡ ಆಗಲಿದೆ : ಕೋಡಿಮಠ

Friday, July 30th, 2021
Kodimatha-Swamiji

ಕೋಲಾರ: ನೂತನ‌ ಮುಖ್ಯಮಂತ್ರಿ ಕುರಿತು ಏನನ್ನೂ ಈಗಲೇ ಹೇಳುವುದಿಲ್ಲ. ಕಾರ್ತಿಕ ಮಾಸ ಕಳೆದ ನಂತರ ಹೇಳುತ್ತೇನೆ. ಆಶ್ವೀಜ ಮಾಸ ನಂತರ ಸಂಕ್ರಾಂತಿ ಒಳಗೆ ರಾಷ್ಟ್ರಮಟ್ಟದಲ್ಲಿ ದೊಡ್ಡ ಅವಘಡ ಆಗಲಿದೆ ಎಂದು ಅರಸೀಕೆರೆ ಹಾರನಹಳ್ಳಿ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ಅಶುಭ ನುಡಿಗಳು ಈಗ ಬೇಡ. ಕೆರೆ ಕಟ್ಟೆಗಳು ತುಂಬಿ ಜಲಗಂಡಾಂತರ ಇನ್ನೂ ಇದೆ ಎಂದಿದ್ದಾರೆ. ನಾವು‌ ಯಡಿಯೂರಪ್ಪ ‌ಅವರನ್ನು ಉಳಿಸಿ ಅಂತ ಹೇಳಲಿಲ್ಲ. ಬದಲಾಗಿ ಸ್ವಾಮೀಜಿಗಳು ಬೀದಿಗೆ ಬಂದಾಗ, ಕೆಂದ್ರದ […]

ಮುಂದಿನ ಚುನಾವಣೆಯಲ್ಲಿ ಎಚ್​ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುತ್ತಾರೆ – ವಿನಯ್ ಗುರೂಜಿ ಭವಿಷ್ಯ

Saturday, July 3rd, 2021
vinaya Guruji

ಬೆಂಗಳೂರು : ಗೌರಿಗದ್ದೆಯ ಅವಧೂತ ವಿನಯ್ ಗುರೂಜಿ ಭವಿಷ್ಯ ನುಡಿದಿದ್ದು ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಗೆದ್ದು, ಎಚ್ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗುತ್ತಾರೆ, ಅಲ್ಲದೇ, ನಿಖಿಲ್ ಕುಮಾರಸ್ವಾಮಿ ಅವರಿಗೆ ರಾಜಕೀಯದಲ್ಲಿ ಉತ್ತಮ ಭವಿಷ್ಯವಿದ್ದು, ಅವರು ಶಾಸಕರಾಗುತ್ತಾರೆ ಎಂದಿದ್ದಾರೆ. ಜೆಡಿಎಸ್ ನಾಯಕ, ಮಾಜಿ ಪರಿಷತ್ ಸದಸ್ಯ ಶರವಣ ಮನೆಗೆ ಶುಕ್ರವಾರ ವಿನಯ್ ಗುರೂಜಿ ಭೇಟಿ ನೀಡಿ ರಾಜ್ಯ ರಾಜಕಾರಣದ ಕುರಿತು ಚರ್ಚೆ ನಡೆಸಿದ್ದಾರೆ. ಈ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ ಕೂಡ ಭೇಟಿ ನೀಡಿ ಗುರೂಜಿ ಆಶೀರ್ವಾದ ಪಡೆದಿದ್ದಾರೆ. ಈ ವೇಳೆ […]

ಈಗ ಹೂಳುತ್ತಿರುವ ಹೆಣಗಳು ಆಗ ಮಾತನಾಡುತ್ತವೆ : ಕೋಡಿಮಠದ ಶ್ರೀ

Monday, May 31st, 2021
kodi math seer

ಹಾಸನ: ಮನುಷ್ಯ ಹೋಗು ಹೋಗುತ್ತಲೇ ಬಿದ್ದು ಸಾಯುವ ಕಾಲ ಬಂದೇ ಬರುತ್ತದೆ ಎಂದು ಅರಸೀಕೆರೆ ತಾಲೂಕು ಹಾರನಹಳ್ಳಿ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಹಿಂದೆ ನೆಲಪಟ್ಟು ಎಂಬ ಕಾಯಿಲೆ ಇತ್ತು. ಅದಕ್ಕೆ ರಾಹು ಅಂತ ಹಿರಿಯರು ಕರೆಯುತ್ತಿದ್ದರು. ರಾಹು ಬಡೀತು, ಹೋಗ ಹೋಗ್ತಾ ಬಿದ್ದ ಅನ್ನೋರು. ಅಂತಹ ಕಾಯಿಲೆಗಳು ಮುಂದಿನ ದಿನಗಳಲ್ಲಿ ಬಂದೇ ಬರುತ್ತವೆ ಎಂದು ಭಾನುವಾರ ಹೇಳಿದರು. ಕರೊನಾ ಸಂಪೂರ್ಣ ಮಾಯವಾಗಲು ಇನ್ನೂ 10 ವರ್ಷ ಬೇಕಾಗುತ್ತದೆ. ಜೂನ್ 20ರ […]

ಪತ್ರಿಕೋದ್ಯಮದ ಭವಿಷ್ಯ ಮಸುಕಾಗಿಲ್ಲ : ಪತ್ರಕರ್ತ ಸುರೇಶ್ ಬೆಳಗಜೆ

Wednesday, July 1st, 2020
press day

ಮಂಗಳೂರು: ಮಾಧ್ಯಮ ಕ್ಷೇತ್ರದಲ್ಲಿ ಇಂದು ಸಾಕಷ್ಟು ಬದಲಾವಣೆಗಳಾಗಿವೆ. ಆದರೆ, ಪತ್ರಿಕೋದ್ಯಮದ ಭವಿಷ್ಯ ಮಸುಕಾಗಿಲ್ಲ. ಬಹುಮುಖ ಕೌಶಲಗಳ ಮೂಲಕ ಪ್ರತಿಭೆ ವಿಸ್ತಾರ ಮಾಡಿಕೊಂಡಾಗ ಅವಕಾಶಗಳಿಗೆ ಕೊರತೆ ಇಲ್ಲ ಎಂದು ಹಿರಿಯ ಪತ್ರಕರ್ತ ಸುರೇಶ್ ಬೆಳಗಜೆ ಅಭಿಪ್ರಾಯಪಟ್ಟರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್‌ಕ್ಲಬ್, ಪತ್ರಿಕಾ ಭವನ ಟ್ರಸ್ಟ್ ಸಹಕಾರದಲ್ಲಿ ಬುಧವಾರ ಪತ್ರಿಕಾ ಭವನದಲ್ಲಿ ಆಯೋಜಿಸಿದ ಪತ್ರಿಕಾ ದಿನಾಚರಣೆ ಹಾಗೂ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು `ಪತ್ರಕರ್ತ, ಪತ್ರಿಕೋದ್ಯಮ ಮತ್ತು ಪ್ರಸ್ತುತತೆ ‘ವಿಷಯದಲ್ಲಿ […]

ಪತ್ರಿಕೋದ್ಯಮದ ಭವಿಷ್ಯ ಮಸುಕಾಗಿಲ್ಲ : ಪತ್ರಕರ್ತ ಸುರೇಶ್ ಬೆಳಗಜೆ

Wednesday, July 1st, 2020
press day

ಮಂಗಳೂರು: ಮಾಧ್ಯಮ ಕ್ಷೇತ್ರದಲ್ಲಿ ಇಂದು ಸಾಕಷ್ಟು ಬದಲಾವಣೆಗಳಾಗಿವೆ. ಆದರೆ, ಪತ್ರಿಕೋದ್ಯಮದ ಭವಿಷ್ಯ ಮಸುಕಾಗಿಲ್ಲ. ಬಹುಮುಖ ಕೌಶಲಗಳ ಮೂಲಕ ಪ್ರತಿಭೆ ವಿಸ್ತಾರ ಮಾಡಿಕೊಂಡಾಗ ಅವಕಾಶಗಳಿಗೆ ಕೊರತೆ ಇಲ್ಲ ಎಂದು ಹಿರಿಯ ಪತ್ರಕರ್ತ ಸುರೇಶ್ ಬೆಳಗಜೆ ಅಭಿಪ್ರಾಯಪಟ್ಟರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್‌ಕ್ಲಬ್, ಪತ್ರಿಕಾ ಭವನ ಟ್ರಸ್ಟ್ ಸಹಕಾರದಲ್ಲಿ ಬುಧವಾರ ಪತ್ರಿಕಾ ಭವನದಲ್ಲಿ ಆಯೋಜಿಸಿದ ಪತ್ರಿಕಾ ದಿನಾಚರಣೆ ಹಾಗೂ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು `ಪತ್ರಕರ್ತ, ಪತ್ರಿಕೋದ್ಯಮ ಮತ್ತು ಪ್ರಸ್ತುತತೆ ‘ವಿಷಯದಲ್ಲಿ ಉಪನ್ಯಾಸ ನೀಡಿದರು. ಮುದ್ರಣ ಮಾಧ್ಯಮ ಮುಂದಿನ ದಿನಗಳಲ್ಲಿ ಸೀಮಿತ ಚೌಕಟ್ಟಿನಲ್ಲಿ ಮುಂದುವರಿಯಲಿದೆ. ಸಂಪೂರ್ಣ ಸ್ಥಗಿತಗೊಳ್ಳುವ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದವರು ಹೇಳಿದರು. ಮಂಗಳೂರು ವಿವಿ ಪರಿಕ್ಷಾಂಗ ಕುಲಸಚಿವ ಡಾ.ಪಿ.ಎಲ್.ಧರ್ಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸವಾಲುಗಳ ನಡುವೆ ಮಾಹಿತಿಯನ್ನು ನೀಡುವ ಪತ್ರಕರ್ತರ ಸೇವೆ ಮಹತ್ತರ. ಇದು ಹೋಲಿಕೆ ಮಾಡಲಾಗದ ಬಹು ದೊಡ್ಡ ಕಾರ್ಯ ಎಂದರು. ಮೆಸ್ಕಾಂ ಪ್ರಧಾನ ವ್ಯವಸ್ಥಾಪಕ ಎಚ್.ಕೆ.ಕೃಷ್ಣಮೂರ್ತಿ ಅವರು ಪತ್ರಕರ್ತ ಮುಹಮ್ಮದ್ ಅನ್ಸಾರ್ ಇನೋಳಿ ಅವರಿಗೆ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ ಮಾಡಿದರು. ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಯ ತೀರ್ಪುಗಾರರಲ್ಲೊಬ್ಬರಾದ ಸ್ಮಿತಾ ಶೆಣೈ ಅನಿಸಿಕೆ ವ್ಯಕ್ತಪಡಿಸಿದರು. ಜಿಲ್ಲಾವಾರ್ತಾಧಿಕಾರಿ ಖಾದರ್ ಷಾ, ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ ಉಪಸ್ಥಿತರಿದ್ದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ  ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸ್ವಾಗತಿಸಿದರು. ಕಾರ್ಯ ಕಾರಿ ಸಮಿತಿ ಸದಸ್ಯ ಭಾಸ್ಕರ ರೈ ಕಟ್ಟ ಪ್ರಶಸ್ತಿ ಪತ್ರ ವಾಚಿಸಿದರು. ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಪಿ.ಬಿ.ಹರೀಶ್ ರೈ ಕಾರ್ಯಕ್ರಮ ನಿರೂಪಿಸಿದರು.