ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣಕ್ಕೆ ನಿರೀಕ್ಷೆಗೂ ಮೀರಿದ ಹಣ ಸಂಗ್ರಹ

Tuesday, June 1st, 2021
ramamadhir

ಉಡುಪಿ: ಕಳೆದ ವರ್ಷ ಆ.5ರಂದು ಪ್ರಧಾನಿ ಮೋದಿಯವರು ಮಂದಿರ ನಿರ್ಮಾಣದ ಭೂಮಿಪೂಜೆ ನೆರವೇರಿಸಿದ ನಂತರ ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, ನಿಧಿ ಸಮರ್ಪಣಾ ಅಭಿಯಾನ ಯಶಸ್ವಿಯಾಗಿ ಪೂರ್ಣಗೊಂಡಿದೆ. ಮಾ.31ರ ವರೆಗಿನ ಲೆಕ್ಕಾಚಾರದ ಪ್ರಕಾರ ಮಂದಿರಕ್ಕೆ 3,200 ಕೋಟಿ ರೂ.ಸಮರ್ಪಣೆಯಾಗಿದೆ. ಕಟ್ಟಡ ನಿರ್ಮಾಣ ಕಾರ್ಯಕ್ಕಾಗಿ 2 ಸಾವಿರ ಕೋಟಿ ರೂ.ವೆಚ್ಚ ಅಂದಾಜು ಮಾಡಲಾಗಿದೆ. ಉಳಿದ ಧನದ ಸದುಪಯೋಗ ಕುರಿತು ಆರ್ಥಿಕ ತಜ್ಞರ ಸಮಿತಿಯ ಸಲಹೆಯನ್ನೂ ಪಡೆಯಲಾಗಿದೆ. ಈ ಬಗ್ಗೆ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟಿನ ಮುಂದಿನ […]

ಶ್ರೀರಾಮ ಮಂದಿರ ಭೂಮಿ ಪೂಜೆ ಹಿನ್ನೆಲೆ : ಅಯೋಧ್ಯೆಯಲ್ಲಿ ಕರಸೇವಕರಾಗಿ ಪಾಲ್ಗೊಂಡವರಿಗೆ ಗೌರವ ಸನ್ಮಾನ

Thursday, August 6th, 2020
Karasevak

ಮಂಗಳೂರು : ಅಯೋಧ್ಯೆಯಲ್ಲಿ ಇಂದು ಶ್ರೀರಾಮ ಮಂದಿರ ಭೂಮಿ ಪೂಜೆ ಹಿನ್ನೆಲೆಯಲ್ಲಿ ವಿಶ್ವಹಿಂದು ಪರಿಷತ್, ಬಜರಂಗದಳ, ಮಾತೃಶಕ್ತಿ, ದುರ್ಗಾವಾಹಿನಿ ವತಿಯಿಂದ ಕರಸೇವಕರಿಗೆ ಗೌರವಾರ್ಪಣೆ ಕಾರ್ಯಕ್ರಮ ಬುಧವಾರ ಬೆಳಗ್ಗೆ  ಮಂಗಳೂರಿನ ಕದ್ರಿ ಸಮೀಪವಿರುವ ವಿಶ್ವಹಿಂದು ಪರಿಷತ್ ನ ಜಿಲ್ಲಾ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ 1991 ಮತ್ತು 1992ರಲ್ಲಿ ಕರಸೇವಕರಾಗಿ ಅಯೋಧ್ಯೆಗೆ ತೆರಳಿದ್ದ ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಶಾಸಕ ಯೋಗಿಶ್ ಭಟ್, ವಿಹಿಂಪ ರಾಜ್ಯ ಮುಖಂಡ ಎಂ.ಬಿ.ಪುರಾಣಿಕ್, ವಿವಿಧ ಹಿಂದೂ ಸಂಘಟನೆಗಳ ಪ್ರಮುಖರಾದ ಗೋಪಾಲ್ ಕುತ್ತಾರ್, […]

ಅಯೋಧ್ಯೆ ರಾಮ ಮಂದಿರಕ್ಕೆ ಪ್ರದಾನಮಂತ್ರಿ ನರೇಂದ್ರ ಮೋದಿಯವರು ಹಸ್ತದಿಂದ ಭೂಮಿಪೂಜೆ

Wednesday, August 5th, 2020
Ayodhya

ಅಯೋಧ್ಯೆ: ಕೋಟ್ಯಾಂತರ ಭಾರತೀಯರ ಕನಸಾಗಿರುವ ಅಯೋಧ್ಯೆ ರಾಮ ಮಂದಿರ ಬುಧವಾರ ಮಧ್ಯಾಹ್ನ 12.44ರ ಶುಭ ಮುಹೂರ್ತದಲ್ಲಿ ಪ್ರದಾನಮಂತ್ರಿ ನರೇಂದ್ರ ಮೋದಿಯವರು ಹಸ್ತದಿಂದ ಭೂಮಿಪೂಜೆ ನೆರವೇರಲಿದೆ. ಇದರೊಂದಿಗೆ ಪ್ರಧಾನಿಯವರು ತಾವು ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ರಾಮಮಂದಿರ ನಿರ್ಮಾಣ ವಾಗ್ಧಾನವನ್ನು ಸಕಾರಗೊಳಿಸಲಿದ್ದಾರೆ. ಮಧ್ಯಾಹ್ನ 12.44.08 ಗಂಟೆಯಿಂದ 12.44.40 ಗಂಟೆಯ 32 ಸೆಕೆಂಡುಗಳ ಶುಭಮುಹೂರ್ತ ನಿಗದಿಯಾಗಿದ್ದು, ಇಷ್ಟು ಅವಧಿಯಲ್ಲಿಯೇ ಮೋದಿಯವರು ಬೆಳ್ಳಿ ಇಟ್ಟಿಗೆ ಇರಿಸಿ ಸಾಂಕೇತಿಕ ಭೂಮಿ ಪೂಜೆ ನೆರವೇರಿಸಲಿದ್ದಾರೆ. ಈ ಬೆಳ್ಳಿ ಇಟ್ಟಿಗೆ ಸಾಂಕೇತಿಕವಾದ ಕಾರಣ ಬಳಿಕ, ಅದನ್ನು ಭೂಮಿಪೂಜಾ […]

ಆಗಸ್ಟ್ 5ರಂದು ಬೆಳಗ್ಗೆ11:30ರಿಂದ 12:30ರವರೆಗೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಭೂಮಿಪೂಜೆ

Saturday, August 1st, 2020
sudarshan

ಮಂಗಳೂರು : ಆಗಸ್ಟ್  5ರಂದು ನಡೆಯಲಿರುವ  ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಭವ್ಯ ರಾಮಮಂದಿರದ ಭೂಮಿಪೂಜೆಯ ಪ್ರಯುಕ್ತ ದ.ಕ. ಜಿಲ್ಲೆಯಲ್ಲೂ ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡುಬಿದಿರೆ ತಿಳಿಸಿದ್ದಾರೆ. ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಅದರಂತೆ, ಜಿಲ್ಲೆಯಲ್ಲಿ ಮನೆ ಮನೆಯಲ್ಲಿ ದೀಪ ಹಚ್ಚುವುದು, ರಾಮನಾಮ ಪಠಣ ಜತೆಗೆ ಮಠಮಂದಿರಗಳಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ನಡೆಸಲು ವಿನಂತಿಸಲಾಗುವುದು ಎಂದರು. […]

ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಾಸಕರಿಂದ ಚಾಲನೆ

Friday, December 27th, 2019
MLA

ಮಡಿಕೇರಿ : ಕಿರಗಂದೂರು, ಚೌಡ್ಲು ಶಾಂತಳ್ಳಿ, ಹಾನಗಲ್ಲು ಬೆಟ್ಟದಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಒಟ್ಟು 15.55ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಭೂಮಿಪೂಜೆ ನೆರವೇರಿಸಿದ್ದಾರೆ. ಬಳಿಕ ಮಾತನಾಡಿದ ಶಾಸಕರು ಸರ್ಕಾರ ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದು, ಅವುಗಳನ್ನು ಸದ್ಬಬಳಕೆ ಮಾಡಿಕೊಳ್ಳಬೇಕು ಎಂದರು. ಜಿ.ಪಂ.ಸದಸ್ಯರಾದ ಲೋಕೇಶ್ವರಿ ಗೋಪಾಲ್ ಹಾಜರಿದ್ದರು. ಹೆಬ್ಬಾಲೆ, ಕೂಡಿಗೆ ಕೂಡುಮಂಗಳೂರು ಹಾಗೂ ಕುಶಾಲನಗರ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಒಟ್ಟು8 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ಗುದ್ದಲಿ […]