ಕಲ್ಲಡ್ಕ ಪ್ರಭಾಕರ್ ಭಟ್ ಮಂಗಳೂರು ವಿಶ್ವ ವಿದ್ಯಾಲಯ ಪ್ರವೇಶ ವಿರೋಧಿಸಿ, ಕ್ಯಾಂಪಸ್ ಫ್ರಂಟ್ ಪ್ರತಿಭಟನೆ

Wednesday, March 30th, 2022
Campus-front

ಮಂಗಳೂರು: ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್  ಅವರನ್ನು ಮಂಗಳೂರು ವಿಶ್ವ ವಿದ್ಯಾಲಯದ ವಿದ್ಯಾರ್ಥಿ ಪರಿಷತ್ ಕಾರ್ಯಕ್ರಮಕ್ಕೆ  ಅಥಿತಿಯಾಗಿ ಆಹ್ವಾನಿಸಿರುವುದನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ವಿದ್ಯಾರ್ಥಿಗಳು ಬುಧವಾರ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ಹಿನ್ನಲೆಯಲ್ಲಿ ಪೋಲೀಸ್ ಭದ್ರತೆ ಹಾಕಿದ್ದು, ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ವಿವಿ ಪ್ರವೇಶ ದ್ವಾರದಲ್ಲೇ ತಡೆದು ನಿಲ್ಲಿಸಿದ್ದಾರೆ. ಕೋಮು ದ್ವೇಷದ ಭಾಷಣ ಮಾಡುವ ಆರ್ ಎಸ್‍ ಎಸ್ ಮುಖಂಡ ಪ್ರಭಾಕರ್ ಭಟ್ ಅವರನ್ನು ಯಾವುದೇ ಕಾರಣಕ್ಕೂ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವಕಾಶ […]

ಡಾ.ಚಂದ್ರಶೇಖರ ಕಂಬಾರ, ಎ.ಬಿ.ಸುಬ್ಬಯ್ಯ ಹಾಗು ಡಾ.ಕದ್ರಿ ಗೋಪಾಲನಾಥ್ ರಿಗೆ ಮಂಗಳೂರು ವಿಶ್ವ ವಿದ್ಯಾಲಯದಿಂದ ಗೌರವ ಡಾಕ್ಟರೇಟ್

Thursday, February 21st, 2013
Mangalore University

ಮಂಗಳೂರು : ಫೆಬ್ರವರಿ 23ರಂದು ನಡೆಯಲಿರುವ ಮಂಗಳೂರು ವಿಶ್ವವಿದ್ಯಾನಿಲಯದ 31ನೇ ಘಟಿಕೋತ್ಸವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಮೂರು ಮಂದಿ ಗಣ್ಯರಿಗೆ ಗೌರವ ಡಾಕ್ಟರೇಟ್ ನೀಡಲು ವಿಶ್ವವಿದ್ಯಾನಿಲಯವು ತೀರ್ಮಾನಿಸಿರುವುದಾಗಿ ಗುರುವಾರ ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿವಿ ಉಪಕುಲಪತಿ ಪ್ರೊ.ಟಿ.ಸಿ.ಶಿವಶಂಕರಮೂರ್ತಿ ತಿಳಿಸಿದರು. ಸಾಹಿತ್ಯದಲ್ಲಿನ ಸೇವೆಗಾಗಿ ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಹಾಗೂ ನಾಟಕಕಾರ ಡಾ.ಚಂದ್ರಶೇಖರ ಕಂಬಾರ, ಕ್ರೀಡೆಯಲ್ಲಿನ ಸಾಧನೆಗಾಗಿ ಹಿರಿಯ ಹಾಕಿ ಪಟು ಕೊಡಗಿನ ಎ.ಬಿ.ಸುಬ್ಬಯ್ಯ, ಸಂಗೀತ ಕ್ಷೇತ್ರದಲ್ಲಿನ ಸಾಧನೆಗಾಗಿ ಹೆಸರಾಂತ ಸ್ಯಾಕ್ಸೊಫೋನ್ ವಾದಕ ಡಾ.ಕದ್ರಿ […]

ಮಂಗಳೂರು ವಿಶ್ವ ವಿದ್ಯಾಲಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಂಶೋಧನೆ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ

Saturday, January 19th, 2013
Laptops distributed Mangalore University

ಮಂಗಳೂರು : ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ನೀಡಲಾಗುವ ಅದೆಷ್ಟೋ ಅನುದಾನಗಳು ಸೂಕ್ತ ಫಲಾನುಭವಿಗಳಿಗೆ ದೊರಕದೆ ವೈಯುಕ್ತಿಕ ನೆಲೆಯಲ್ಲಿ ದುರುಪಯೋಗವಾಗುತ್ತಿವೆ. ಆದರೆ ವಿಶ್ವ ವಿದ್ಯಾಲಯಗಳಲ್ಲಿ ಅಂತಹ ಪ್ರಕರಣ ಕಡಿಮೆ, ವಿಶ್ವ ವಿದ್ಯಾಲಯ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಅನುದಾನ ಅವರಿಗೆ ಆಸರೆಯಾಗಬೇಕೇ ಹೊರತು ಅದು ಶಾಶ್ವತ ಊರುಗೋಲಾಗಬಾರದು. ಅನುದಾನ ಪಡೆದವರು ಮುಂದಿನ ದಿನಗಳಲ್ಲಿ ತಮಗಿಂತಲೂ ಬಡವರು, ತುಳಿತಕ್ಕೊಳಗಾದವರು ಮತ್ತು ಅಸಹಾಯಕರಿಗೆ ದೊರಕುವಂತೆ ಮಾಡುವ ಉದಾರವಾದಿಗಳಾಗಬೇಕು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ಹೇಳಿದರು. ಅವರು ಶುಕ್ರವಾರ ಮಂಗಳೂರು […]

ಮಂಗಳೂರು ವಿಶ್ವ ವಿದ್ಯಾಲಯದ ಪ್ರಾಧ್ಯಾಪಕಿ ಅನಿತಾ ರವಿಶಂಕರ್ ಲೋಕಾಯುಕ್ತ ಬಲೆಗೆ

Wednesday, December 5th, 2012
Mangalore University Professor

ಮಂಗಳೂರು :ಮಂಗಳೂರು ವಿಶ್ವ ವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಡಾ. ಅನಿತಾ ರವಿಶಂಕರ್ ರವರನ್ನು ಲಂಚ ಸ್ವೀಕಾರದ ಹಿನ್ನಲೆಯಲ್ಲಿ ಮಂಗಳವಾರ ಬಂಧಿಸಿದ್ದಾರೆ. ಪ್ರಾಧ್ಯಾಪಕಿ ಅನಿತಾ ರವಿಶಂಕರ್ ಪಿಎಚ್‌ಡಿ ಆಕಾಂಕ್ಷಿ ವಿದ್ಯಾರ್ಥಿಗಳಿಂದ ತಲಾ 5 ಸಾವಿರ ರೂಪಾಯಿಗಳನ್ನು ಸ್ವೀಕರಿಸುತ್ತಿದ್ದರೆನ್ನಲಾಗಿದೆ. ಈ ಹಿನ್ನಲೆಯಲ್ಲಿ ಪಿಎಚ್‌ಡಿ ಆಕಾಂಕ್ಷಿ ಪ್ರೇಮ ಡಿಸೋಜ ಎಂಬವರು ಪಿಎಚ್‌ಡಿಗಾಗಿ ವಿದ್ಯಾರ್ಥಿಗಳಿಂದ ಲಂಚ ಸ್ವೀಕರಿಸುವ ಉಪನ್ಯಾಸಕರಿಗೆ ಸರಿಯಾಗಿ ಪಾಠ ಕಲಿಸಬೇಕೆಂದು ಈ ಬಗ್ಗೆ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಪ್ರೇಮ ಅವರಿಗೆ ಧ್ವನಿ […]