ಮಂಗಳೂರು ಸ್ಮಾರ್ಟ್ ಸಿಟಿ ಲಿ.ನ ಆಡಳಿತ ನಿರ್ದೇಶಕ ಮುಹಮ್ಮದ್ ನಝೀರ್ ವರ್ಗಾವಣೆ

Tuesday, October 20th, 2020
Mohammed Nazir

ಮಂಗಳೂರು : ಮಂಗಳೂರು ಸ್ಮಾರ್ಟ್ ಸಿಟಿ ಲಿ.ನ ಆಡಳಿತ ನಿರ್ದೇಶಕ ಮುಹಮ್ಮದ್ ನಝೀರ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಮಂಗಳೂರು ಮಹಾನಗರ ಪಾಲಿಕೆ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿದ್ದ ನಝೀರ್ ಅವರನ್ನು ಒಂದು ವರ್ಷದಿಂದ ಸ್ಮಾರ್ಟ್ ಸಿಟಿ ಲಿ.ಇದರ ನಿರ್ದೇಶಕರಾಗಿ ನಿಯುಕ್ತಿಗೊಳಿಸಲಾಗಿತ್ತು. ಮುಹಮ್ಮದ್ ನಝೀರ್ ಅವರಿಗೆ ಹೊಸ ಹುದ್ದೆ ಇನ್ನೂ ನಿಗದಿಯಾಗಿಲ್ಲ. ಅವರ ಸ್ಥಾನಕ್ಕೆ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್ ಅವರನ್ನು ನೇಮಿಸಲಾಗಿದೆ.

ಮಂಗಳೂರು ಸ್ಮಾರ್ಟ್ ಸಿಟಿ ಕುರಿತು ಸಂವಾದ ಕಾರ್ಯಕ್ರಮ

Tuesday, January 28th, 2020
smart-city

ಮಂಗಳೂರು : ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಲ್ಲಿ 47 ಕಾಮಗಾರಿಗಳ ಪೈಕಿ 27 ಸರಕಾರಿ ಕಟ್ಟಡಗಳಿಗೆ ಎಲ್‌ಇಡಿ ಲೈಟಿಂಗ್ ವ್ಯವಸ್ಥೆ ಅಳವಡಿಕೆ ಮತ್ತು ಹಂಪನಕಟ್ಟೆಯಲ್ಲಿ ಕ್ಲಾಕ್ ಟವರ್ ಸ್ಥಾಪನೆ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದೆ. ಇಂಟೆಗ್ರೇಟೆಡ್ ಕಮಾಂಡ್ ಕಂಟ್ರೋಲ್ ಸೆಂಟರ್‌ಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಮುಹಮ್ಮದ್ ನಜೀರ್ ತಿಳಿಸಿದರು. ದ.ಕ. ಜಿಲ್ಲಾ ಕಾರ್ಯನಿತರ ಪತ್ರಕರ್ತರ ಸಂಘದ ವತಿಯಿಂದ ನಗರದ ಪ್ರೆಸ್‌ಕ್ಲಬ್‌ನಲ್ಲಿ ಮಂಗಳವಾರ ನಡೆದ ಮಂಗಳೂರು ಸ್ಮಾರ್ಟ್ ಸಿಟಿ ಕುರಿತು […]