ಮಕ್ಕಳು ಆತಂಕಕ್ಕೆ ಒಳಗಾಗದೇ ಶಾಲೆಗಳಿಗೆ ಹಾಜರಾಗಲು ಮುಖ್ಯಮಂತ್ರಿಗಳ ಕರೆ

Sunday, August 22nd, 2021
Basavaraja Bommai

ಬೆಂಗಳೂರು : ಆಗಸ್ಟ್ 23 ರಿಂದ ಶಾಲೆಗಳು ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳು ಆತಂಕಕ್ಕೆ ಒಳಗಾಗದೇ ಶಾಲೆಗಳಿಗೆ ಹಾಜರಾಗುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರೆ ನೀಡಿದರು. ಇಂದು ಮುಖ್ಯಮಂತ್ರಿಗಳು ತಮ್ಮ ನಿವಾಸದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡುತ್ತಿದ್ದರು. ಶಾಲೆ ಆರಂಭಕ್ಕೆ ಎಲ್ಲ ರೀತಿಯ ತಯಾರಿ ಮಾಡಿಕೊಳ್ಳಲಾಗಿದೆ. ಸರ್ಕಾರಿ ಹಾಗೂ ಖಾಸಗಿ ಶಾಲೆಗೆ ಸೂಕ್ತ ನಿರ್ದೇಶನ ನೀಡಲಾಗಿದೆ. ಮಕ್ಕಳನ್ನು ಶಾಲೆಗೆ ಕಳಿಸಲು ಪಾಲಕರ ಅನುಮತಿ, ಕೋವಿಡ್ ಸುರಕ್ಷತೆಯೊಂದಿಗೆ ಶಾಲೆಗಳಲ್ಲಿ ಕಲಿಕೆ, ಶಾಲೆಗಳನ್ನು ಸ್ಯಾನಿಟೈಸ್, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಪರ್ಯಾಯ […]

ಮಕ್ಕಳಾಗದವರಿಗೆ ಮಕ್ಕಳು ಮಾಡುವ ಔಷಧಿ ನೀಡುವುದಾಗಿ ನಂಬಿಸಿ ಹಲವರಿಗೆ ಮೋಸ, ಓರ್ವನ ಬಂಧನ

Friday, October 2nd, 2020
manjunatha

ಕಾರವಾರ: ಮಕ್ಕಳಾಗದವರಿಗೆ ಮಕ್ಕಳು ಮಾಡುವ ಔಷಧಿ ನೀಡುವುದಾಗಿ ನಂಬಿಸಿ ವಂಚಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ,  ಮಕ್ಕಳಾಗದ ಕುಟುಂಬದವರನ್ನು ಸಂಪರ್ಕಿಸಿ ಅವರಿಗೆ ಮಕ್ಕಳಾಗುವ ಗಿಡುಮೂಲಿಕೆ ಔಷಧಿ ಈತ ನೀಡುತ್ತಿದ್ದ. ಬಂಧಿತನನ್ನು ಆಂಧ್ರಪ್ರದೇಶದ ಅನಂತಪುರ ಮೂಲದ ಬಂಡಿ ಮಂಜುನಾಥ ಎಂದು ಗುರುತಿಸಲಾಗಿದೆ. ಶಿರಸಿ ಗ್ರಾಮೀಣ ಪ್ರದೇಶದಲ್ಲಿ ಪರಿಚಯಸ್ಥರಂತೆ ವರ್ತಿಸಿ ಅವರಿಗೆ ಮಕ್ಕಳಾಗುವ ಗಿಡಮೂಲಿಕೆ ಔಷಧಿ ನೀಡುವುದಾಗಿ ಹೇಳಿ ಸಾವಿರಾರು ರೂಪಾಯಿಗಳನ್ನು ಪಡೆದು ವಂಚಿಸುತ್ತಿದ್ದ ಎನ್ನಲಾಗಿದ್ದು. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಆತ ಈಗ ನ್ಯಾಯಾಂಗ ಬಂಧನದಲ್ಲಿ ಇರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಮಕ್ಕಳಾಗದ ಕುಟುಂಬಗಳ ಮಾಹಿತಿ ಸಂಗ್ರಹಿಸಿ […]

ವಿಷವುಣಿಸಿ ತಂದೆಯನ್ನು ಕೊಲ್ಲಲು ಮುಂದಾದ ಮಕ್ಕಳು

Sunday, July 26th, 2020
sullia

ಸುಳ್ಯ : ಸಾಕಿ ಬೆಳೆಸಿದ ಮಕ್ಕಳೇ ತಂದೆಯನ್ನು ವಿಷ ಹಾಕಿ ಕೊಲ್ಲಲು ಯೋಚಿಸುತ್ತಾರೆಂದರೆ ಅವರ  ಮನಸ್ಥಿತಿ ಹೇಗಿರಬೇಕು ನೀವೇ ಯೋಚಿಸಿ, ಸುಳ್ಯ ತಾಲೂಕಿನ  ನಾಲ್ಕೂರು ಗ್ರಾಮದ ಅಂಜೇರಿ ಎಂಬಲ್ಲಿ ಮಕ್ಕಳಿಬ್ಬರು ಸೇರಿ ಆಹಾರಕ್ಕೆ ವಿಷ ಬೆರೆಸಿ ತಂದೆಯ ಹತ್ಯೆಗೆ ಮುಂದಾದ ಘಟನೆಯೊಂದು ಜು.24 ರ ಗುರುವಾರ ನಡೆದಿದೆ. ಮಕ್ಕಳಾದ ದೇವಿಪ್ರಸಾದ್ ಮತ್ತು ಲೋಕೇಶ್ ಎಂಬಿಬ್ಬರು ತಂದೆಗೆ ವಿಷವುಣಿಸಿದ್ದು, ತಂದೆ, ಹೊನ್ನಪ್ಪ ನಾಯ್ಕ ಅಂಜೇರಿ ವಿಷಯುಕ್ತ ಆಹಾರ ಸೇವಿಸಿ ಅಸ್ವಸ್ಥಗೊಂಡ ವ್ಯಕ್ತಿ.  ಪೊಲೀಸರು ಮಕ್ಕಳನ್ನು  ವಶಕ್ಕೆ ಪಡೆದಿದ್ದಾರೆ. ಪುತ್ರ ಲೊಕೇಶ್ […]

ರಾಷ್ಟ್ರವ್ಯಾಪಿ ಲಾಕ್ ಡೌನ್ ಮೇ 31ರವರೆಗೂ ಮುಂದುವರಿಕೆ, ಗರ್ಭಿಣಿಯರು, ಮಕ್ಕಳು, ವೃದ್ಧರು ಮನೆಯ ಹೊರಗೆ ಬರುವಂತಿಲ್ಲ

Sunday, May 17th, 2020
lockdown

ನವದೆಹಲಿ: ಕೇಂದ್ರ ಗೃಹ ಸಚಿವಾಲಯದ ಆದೇಶದ ಮೇರೆಗೆ  ಮೇ 31ರ ವರೆಗೂ ದೇಶಾದ್ಯಂತ ಲಾಕ್ ಡೌನ್ ವಿಸ್ತರಣೆಯಾಗಿದ್ದು, ಕೋವಿಡ್-19 ನಿಯಂತ್ರಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳು, ರಾಜ್ಯಸರ್ಕಾರ , ಕೇಂದ್ರಾಡಳಿತ ಸರ್ಕಾರಗಳು ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ ಕೋವಿಡ್ ಸಂಬಂಧಿತ ರಾಷ್ಟ್ರವ್ಯಾಪಿ ಲಾಕ್ ಡೌನ್ ಇನ್ನೆರಡು ವಾರಗಳ ಕಾಲ ಮುಂದುವರಿಯಲಿದೆ.   ದೇಶಾದ್ಯಂತ ಈ ಎಲ್ಲಾ ಚಟುವಟಿಕೆಗಳ ಮೇಲೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ಕೇಂದ್ರ ಗೃಹಸಚಿವಾಲಯದ ಅನುಮತಿ ಮೇರೆಗೆ ತುರ್ತು ವೈದ್ಯಕೀಯ […]

ಬಡತನ ನೆಪದಲ್ಲಿ ಮಕ್ಕಳು ದುಡಿಯಲು ಹೋಗುವುದು ಮಹಾಪರಾದ : ಐಡಾ ಸುರೇಶ್

Wednesday, March 25th, 2015
Child labor

ಬಂಟ್ವಾಳ: ಕಾರ್ಮಿಕ ಇಲಾಖೆ ಬಂಟ್ವಾಳ ಮತ್ತು ಸಮಗ್ರ ಶಿಶು ಅಭಿವೃದ್ದಿ ಸೇವಾ ಯೋಜನೆ ಬಂಟ್ವಾಳ ಇದರ ಜಂಟಿ ಆಶ್ರಯದಲ್ಲಿ ಬಂಟ್ವಾಳ ತಾಲೂಕಿನ ಸ್ತ್ರೀಶಕ್ತಿ ಸಂಘದ ಅಧ್ಯಕ್ಷರು ಮತ್ತು ಸದಸ್ಯರಿಗೆ ಬಾಲ ಕಾರ್ಮಿಕ ನಿಷೇದ ಮತ್ತು ನಿಯಂತ್ರಣ ಕಾಯ್ದೆ ಮಾಹಿತಿ ಕಾರ‍್ಯಗಾರ ಬಂಟ್ವಾಳ ಸ್ತ್ರೀ ಶಕ್ತಿ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸ್ಥಾಯಿ ಸಮಿತಿ ಅಧ್ಯಕ್ಷೆ ಐಡಾ ಸುರೇಶ್ ಬಡತನ ನೆಪದಲ್ಲಿ ಮಕ್ಕಳು ದುಡಿಯಲು ಹೋಗುವುದು ಮಹಾಪರಾದ. ಮಕ್ಕಳಿಗೆ ಶಿಕ್ಷಣ ಅಗತ್ಯ ಶಿಕ್ಷಣದಿಂದ ಮಕ್ಕಳ ಭವಿಷ್ಯ ರೂಪಿಸಿಕೊಳ್ಳಲು […]