ಅಡಿಕೆ ಕದ್ದಿದ್ದಾನೆ ಎಂದು ಆರೋಪಿಸಿ ಬಾಲಕನಿಗೆ ಹಲ್ಲೆ, ಮಕ್ಕಳ ಕಲ್ಯಾಣ ಇಲಾಖೆಗೆ ದೂರು

Friday, November 5th, 2021
Arecanut Thief

ಸುಳ್ಯ :  ಅಡಿಕೆ ಕದ್ದಿದ್ದಾನೆ ಎಂದು ಆರೋಪಿಸಿ ಬಾಲಕನಿಗೆ ಹಲ್ಲೆ ನಡೆಸುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಗುತ್ತಿಗಾರಿನ ಸಮೀಪದ ಪುರ್ಲುಮಕ್ಕಿಯಲ್ಲಿ ಕಳೆದ ವಾರ  ನಡೆದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಹಲ್ಲೆಗೊಳಗಾದ ಬಾಲಕ ಮಕ್ಕಳ ಕಲ್ಯಾಣ ಇಲಾಖೆಗೆ ದೂರು ನೀಡಿದ್ದು ಹಲ್ಲೆ ನಡೆಸಿದ 10 ಮಂದಿಯ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಗುತ್ತಿಗಾರಿನ 16 ವರ್ಷದ ಬಾಲಕನಿಗೆ ಅಡಿಕೆ ಕದ್ದ ಆರೋಪದಲ್ಲಿ ಮಾರಣಾಂತಿಕ ಹಲ್ಲೆ ಮಾಡಲಾಗಿದ್ದು ಮಾತ್ರವಲ್ಲದೆ ಹಲ್ಲೆ ನಡೆಸಿದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗಿತ್ತು. […]

ರಾಜ್ಯದಲ್ಲಿರುವ ಸಾಹಿತ್ಯ ಅಕಾಡೆಮಿಗಳಿಗೆ ತಲಾ 10 ಲಕ್ಷ ರೂ. ಅನುದಾನ: ಜಯಮಾಲಾ

Tuesday, July 24th, 2018
jayamala

ಮಂಗಳೂರು: ರಾಜ್ಯದಲ್ಲಿರುವ ಸಾಹಿತ್ಯ ಅಕಾಡೆಮಿಗಳಿಗೆ ತಲಾ 10 ಲಕ್ಷ ರೂ. ಅನುದಾನ ಘೋಷಣೆ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಜಯಮಾಲಾ ಹೇಳಿದ್ದಾರೆ. ಸಚಿವೆಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಭೇಟಿ ನೀಡಿದ ಜಯಮಾಲಾ ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದರು. ನನಗೆ ನೀಡಿರುವ ಎಲ್ಲ ಇಲಾಖೆಗಳಲ್ಲಿ ಸಮರ್ಪಕವಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು. ಶಬರಿ ಮಲೆಗೆ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಿರುವ ವಿಚಾರದ ಬಗ್ಗೆ ಮಾತನಾಡಿದ ಅವರು, […]

ಕಾಣೆಯಾದ ಮಕ್ಕಳ ಬ್ಯೂರೋಃ ಜಿಲ್ಲಾ ಘಟಕಕ್ಕೆ ಚಾಲನೆ

Tuesday, February 18th, 2014
A.B.-Ibrahim

ಮಂಗಳೂರು : ಹಿರಿಯ ಮುಖ್ಯ ನ್ಯಾಯಿಕ ದಂಡಾಧಿಕಾರಿ ಹಾಗೂ ಬಾಲ ನ್ಯಾಯ ಮಂಡಳಿ ಅಧ್ಯಕ್ಷ ಪಾಟೀಲ್‌ ನಾಗಲಿಂಗನ ಗೌಡ, ಕಾಣೆಯಾದ ಮಕ್ಕಳನ್ನು ಪತ್ತೆಹಚ್ಚಿ ಮರಳಿ ಮನೆಗೆ ಸೇರಿಸುವ ಮಕ್ಕಳ ಬ್ಯೂರೋ, ದಕ್ಷಿಣ ಕನ್ನಡ ಜಿಲ್ಲಾ ಘಟಕಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಘಟಕವನ್ನು ಸೋಮವಾರ  ಉದ್ಘಾಟಿಸಿದರು. ಕಾಣೆಯಾದ ಮಕ್ಕಳನ್ನು ಪತ್ತೆಹಚ್ಚಿ ಅವರನ್ನು ಮನೆಗೆ ಸೇರಿಸುವ ಈ ಘಟಕವು ಪರಿಣಾಮಕಾರಿಯಾಗಿ ಕಾರ್ಯವೆಸಗಬೇಕು ಎಂದವರು ಸಲಹೆ ನೀಡಿದರು. ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಅಧ್ಯಕ್ಷತೆ ವಹಿಸಿದ್ದರು. ಮಕ್ಕಳ ಬ್ಯೂರೋದ ಮಾಹಿತಿ ಮತ್ತು ಶೈಕ್ಷಣಿಕ ಪರಿಕರಗಳನ್ನು […]