ಭಾರತವನ್ನು ಮುನ್ನಡೆಸಲು ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ: ರಾಹುಲ್ ಗಾಂಧಿ

Saturday, March 17th, 2018
rahul-gandhi

ನವದೆಹಲಿ : ಎಐಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಕಾಂಗ್ರೆಸ್ ಸಮಗ್ರ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಭಾರತವನ್ನು ಮುನ್ನಡೆಸಲು ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ ಎಂದು ವಿಶ್ವಾಸ ವ್ಯಕ್ತಪಡಿಸಿದರು. 84ನೇ ಕಾಂಗ್ರೆಸ್ ಸಮಗ್ರ ಅಧಿವೇಶನದ 2ನೇ ದಿನ ಮಾತನಾಡಿದ ಅವರು, ಭಾರತವನ್ನು ಒಗ್ಗೂಡಿಸಲು, ಮುನ್ನಡೆಸಲು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ. ದೇಶದ ಜನತೆ ಬಿಜೆಪಿ ಆಡಳಿತದಿಂದ ಬೇಸತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಬಿಜೆಪಿಯವರು ಕೋಪವನ್ನು ಬಳಸುತ್ತಾರೆ, ನಾವು ಪ್ರೀತಿಯನ್ನು ಬಳಸೋಣ. ಇದೇ ನಮ್ಮ ಮತ್ತು […]

ಪ್ರಧಾನಿ ಮೋದಿಗೆ ನಾಚಿಕೆಯಾಗಬೇಕು: ಮನಮೋಹನ್ ಸಿಂಗ್ ವಿರುದ್ಧ ಆರೋಪಕ್ಕೆ ಶರದ್ ಪವಾರ್ ಕಿಡಿ

Wednesday, December 13th, 2017
shard-power

ನಾಗ್ಪುರ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಗುಜರಾತ್ ನಲ್ಲಿ ಬಿಜೆಪಿಯನ್ನು ಸೋಲಿಸಲು ಪಾಕಿಸ್ತಾನದ ಜತೆಗೆ ಪಿತೂರಿ ನಡೆಸಿದ್ದಾರೆ ಎಂದು ಆರೋಪ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾಚಿಕೆಯಾಗಬೇಕು ಎಂದು ಎನ್ಸಿಪಿ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಶರದ್ ಪವಾರ್ ಹೇಳಿದ್ದಾರೆ. ಮನಮೋಹನ್ ಸಿಂಗ್ ಬೆಂಬಲಕ್ಕೆ ನಿಂತಿರುವ ಪವಾರ್, ವಿಶ್ವದಲ್ಲಿ ಯಾರು ಕೂಡಾ ಮನಮೋಹನ್ ಸಿಂಗ್ ಅವರ ಕಡೆ ಬೊಟ್ಟು ಮಾಡಲಾಗದಂತ ವ್ಯಕ್ತಿತ್ವ ಅವರದ್ದು ಅಂತಹವರ ವಿರುದ್ಧ ನರೇಂದ್ರ ಮೋದಿ ಅವರು ಕೀಳುಮಟ್ಟದ ಆರೋಪ […]

ಆರೋಪ-ಪ್ರತ್ಯಾರೋಪಗಳ ನಂತ್ರ ಕೈಕುಲುಕಿದ ಹಾಲಿ-ಮಾಜಿ ಪ್ರಧಾನಿಗಳು!

Wednesday, December 13th, 2017
Narendra-modi

ನವದೆಹಲಿ: ಗುಜರಾತ್ ಚುನಾವಣಾ ಪ್ರಚಾರದ ವೇಳೆ ಆರೋಪ-ಪ್ರತ್ಯಾರೋಪಗಳನ್ನು ನಡೆಸಿದ ಬೆನ್ನಲ್ಲೇ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿಯಾಗಿ ಕೈಕುಲುಕಿ ಮಾತನಾಡಿದರು. 2001ರ ಸಂಸತ್ ದಾಳಿಯ ವರ್ಷಾಚರಣೆ ಹಿನ್ನೆಲೆಯಲ್ಲಿ ಮೃತಪಟ್ಟವರಿಗೆ ಗೌರವ ನಮನ ಸಲ್ಲಿಸಲು ಆಗಮಿಸಿದ್ದ ವೇಳೆ ಹಾಲಿ ಹಾಗೂ ಮಾಜಿ ಪ್ರಧಾನಿಗಳ ಸಮಾಗಮ ಆಗಿದೆ. ದಾಳಿಯಲ್ಲಿ ಮೃತಪಟ್ಟವರಿಗೆ ಗೌರವ ನಮನ ಸಲ್ಲಿಸಲು ಸಂಸತ್‌ ಕಟ್ಟಡ ಪ್ರವೇಶಿಸುವ ಮುನ್ನ ಉಭಯ ನಾಯಕರು ಪರಸ್ಪರ ಭೇಟಿಯಾಗಿ ಕೈಕುಲುಕಿ ಕುಶಲೋಪರಿ ವಿಚಾರಿಸಿದರು. ಗುಜರಾತ್ ಚುನಾವಣಾ […]

ಲೋಕಪಾಲ ಆಯ್ಕೆ ಸಮಿತಿ ಅಧ್ಯಕ್ಷ ನ್ಯಾ.ಥಾಮಸ್ ರಾಜಿನಾಮೆ

Tuesday, March 4th, 2014
Justice-KT-Thomas

ನವದೆಹಲಿ: ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ಲೋಕಪಾಲ ಆಯ್ಕೆ ಮತ್ತು ಹುಡಕಾಟ ಸಮಿತಿಯ ಅಧ್ಯಕ್ಷ ನ್ಯಾಯಮೂರ್ತಿ ಕೆ.ಟಿ.ಥಾಮಸ್ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎಂದು ಸೋಮವಾರ ವರದಿಗಳು ತಿಳಿಸಿವೆ. ಕಳೆದ ವಾರವಷ್ಟೆ ಲೋಕಪಾಲರ ಆಯ್ಕೆ ಪ್ರಕ್ರಿಯೆಯಲ್ಲಿ ತಾವು ಪಾಲ್ಗೊಳ್ಳಬೇಕು ಎಂಬ ಕೇಂದ್ರ ಸರ್ಕಾರದ ಆಹ್ವಾನವನ್ನು ಹಿರಿಯ ವಕೀಲ ಫಾಲಿ ನಾರಿಮನ್ ಅವರು ತಿರಸ್ಕರಿಸಿದ್ದರು. ಅಲ್ಲದೆ ಲೋಕಪಾಲ ಹುಡುಕಾಟ ಸಮಿತಿಯನ್ನು ಅರ್ಥಹೀನ ಮತ್ತು ಹಾಸ್ಯಾಸ್ಪದ ಎಂದು ಕರೆದಿದ್ದರು. ಇದೀಗ ಸಮತಿಯ ಅಧ್ಯಕ್ಷರೇ ರಾಜಿನಾಮೆ ನೀಡಿರುವುದರಿಂದ […]

ಪದೇ ಪದೆ ಕಲಾಪ ಮುಂದೂಡಿಕೆ; ಪ್ರತಿಭಟನೆ ಮಧ್ಯೆ ತೆಲಂಗಾಣ ಬಿಲ್ ಪಾಸ್; 29ನೇ ರಾಜ್ಯ ಉದಯ

Friday, February 21st, 2014
ಪದೇ ಪದೆ ಕಲಾಪ ಮುಂದೂಡಿಕೆ; ಪ್ರತಿಭಟನೆ ಮಧ್ಯೆ ತೆಲಂಗಾಣ ಬಿಲ್ ಪಾಸ್; 29ನೇ ರಾಜ್ಯ ಉದಯ

ನವದೆಹಲಿ: ದೇಶಕ್ಕೆ ಇನ್ನೊಂದು ರಾಜ್ಯದ ಸಂತಸ. 29ನೇ ರಾಜ್ಯವಾಗಿ ತೆಲಂಗಾಣ ಉದಯಕ್ಕೆ ಗುರುವಾರ ರಾಜ್ಯಸಭೆ ಸಾಕ್ಷಿಯಾಯಿತು. ಮಂಗಳವಾರವಷ್ಟೇ ಲೋಕಸಭೆಯಲ್ಲಿ ತೆಲಂಗಾಣ ಮಸೂದೆಗೆ ಒಪ್ಪಿಗೆ ಸಿಕ್ಕಿದ್ದು, ಎರಡು ದಿನಗಳ ಹಗ್ಗಜಗ್ಗಾಟದ ನಡುವೆ ಗುರುವಾರ ರಾತ್ರಿ 08.07 ಗಂಟೆಗೆ ಹೊಸ ರಾಜ್ಯದ ಉದಯವಾಯಿತು. ಆದರೆ ಈ ಮಸೂದೆಗೆ ರಾಷ್ಟ್ರಪತಿ ಅಂಕಿತ ಬೇಕು. ಆಗಷ್ಟೇ ಈ ರಾಜ್ಯ ಉದಯವಾಗಿದೆ ಎಂಬುದು ಅಧಿಕೃತವಾಗುತ್ತದೆ. ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ಮಾತಿನ ಸಮರ ನಡೆದರೂ ಕೂಡ, ಮಸೂದೆಗೆ ಬೆಂಬಲ ನೀಡುತ್ತೇವೆ ಎಂಬ […]

‘ರಾಜೀವ್’ ಹಂತಕರ ಬಿಡುಗಡೆಗೆ ಪ್ರಧಾನಿ ಆಕ್ಷೇಪ

Thursday, February 20th, 2014
Manmohan-Singh

ನವದೆಹಲಿ: ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಹಂತಕರನ್ನು ಮೂರು ದಿನಗಳೊಳಗೆ ಬಿಡುಗಡೆ ಮಾಡಲು ಮುಂದಾಗಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ನಿರ್ಧಾರಕ್ಕೆ ಪ್ರಧಾನಿ ಮನಮೋಹನ್ ಸಿಂಗ್ ಅವರು ಗುರುವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆ ಮಾಡದಂತೆ ತಮಿಳುನಾಡು ಸಿಎಂಗೆ ಒತ್ತಾಯಿಸಿದ್ದಾರೆ. ಅಲ್ಲದೆ ತಾವು ತೆಗೆದುಕೊಂಡಿರುವ ನಿರ್ಧಾರವನ್ನು ಹಿಂಪಡೆಯುವಂತೆ ಜಯಲಲಿತಾಗೆ ಪ್ರಧಾನಿ ಆಗ್ರಹಿಸಿದ್ದಾರೆ. ಮಾಜಿ ಪ್ರಧಾನಿ ಅವರನ್ನು ಹತ್ಯೆ ಮಾಡಿರುವುದು ಸಣ್ಣ ವಿಷಯವಲ್ಲ. […]

ಅಣ್ಣಾ ಬೇಡಿಕೆ : ಕೊನೆಗೂ ಧ್ವನಿಮತದಿಂದ ಸಮ್ಮತಿಸಿದ ಸರಕಾರ

Saturday, August 27th, 2011
Anna Hazare/ ಅಣ್ಣಾ ಹಜಾರೆ

ನವ ದೆಹಲಿ: ಲೋಕಸಭೆಯಲ್ಲಿ ಲೋಕಪಾಲ ಮಸೂದೆಯ ಚರ್ಚೆಯ ನಂತರ ಸಂಸತ್ತಿನಲ್ಲಿ ಧ್ವನಿಮತದ ಪ್ರಸ್ತಾವನೆಗೆ ಕೊನೆಗೂ ಕೇಂದ್ರ ಸರಕಾರ ಒಪ್ಪಿಕೊಂಡಿದೆ. ಲೋಕಪಾಲ ಚರ್ಚೆಯ ನಂತರ ಧ್ವನಿಮತಕ್ಕೆ ಹಾಕುವ ಕೇಂದ್ರ ಸರಕಾರದ ನಿರ್ಧಾರದಿಂದ ಸಂತೋಷವಾಗಿದೆ ಎಂದು ಅಣ್ಣಾ ತಂಡದ ಸದಸ್ಯರಾದ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಸಂಸತ್ತಿನಲ್ಲಿ ನಿರ್ಣಯ ಅಂಗೀಕಾರವಾದ ನಂತರ ಪ್ರಧಾನಿಮಂತ್ರಿ ಮನಮೋಹನ್ ಸಿಂಗ್ ಅವರ ಪತ್ರದೊಂದಿಗೆ ಕೇಂದ್ರ ಸಚಿವ ವಿಲಾಸರಾವ್ ದೇಶಮುಖ್, ಅಣ್ಣಾ ಹಜಾರೆಯವರ ಭೇಟಿಗೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಣ್ಣಾ ಹಜಾರೆ, ಜನಲೋಕಪಾಲ ಮಸೂದೆ ಜಾರಿಗೊಳಿಸುವಂತೆ […]