ನಂದಿನಿ‌ ಉತ್ಪನ್ನಗಳ ಮಾರುಕಟ್ಟೆ ವಿಸ್ತರಣೆ ಮಾಡಿ : ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ

Thursday, September 30th, 2021
Nandini

ಬೆಂಗಳೂರು: ಹಾಲು ಮತ್ತು ಸಕ್ಕರೆಯ ಉಪ ಉತ್ಪನ್ನಗಳು ಬಹಳಷ್ಟಿವೆ. ಕೆಎಂಎಫ್‌ನ ಉತ್ಪನ್ನಗಳು ಕೂಡ ಉತ್ತಮವಾಗಿವೆ. ಹೀಗಾಗಿ ತನ್ನ ಉತ್ಪನ್ನಗಳ ಮಾರುಕಟ್ಟೆಯನ್ನು ವಿಸ್ತರಣೆ ಮಾಡುವ ಮೂಲಕ ಹೆಚ್ಚಿನ ಲಾಭ ಗಳಿಸುವಂತೆ ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ಕರ್ನಾಟಕ ಹಾಲು ಮಹಾಮಂಡಲದ ನೂತನ ಯೋಜನೆಗಳಿಗೆ ಚಾಲನೆ ನೀಡಿ ನಂದಿನಿ ಉತ್ಪನ್ನಗಳನ್ನು ಬಿಡುಗಡೆ ಮಾಡಿ ಮಾತನಾಡುತ್ತಿದ್ದರು. ಹಾಲಿನ‌ ಉಪ ಉತ್ಪನ್ನಗಳ ಮಾರುಕಟ್ಟೆಯನ್ನು ಪರಿಣಾಮಕಾರಿಯಾಗಿ ವಿಸ್ತರಣೆ ಮಾಡಬೇಕು. ಈ ಉತ್ಪನ್ನಗಳಿಗೆ ಹೆಚ್ಚಿನ ಮಾರುಕಟ್ಟೆ ದೊರೆತರೆ ಹೆಚ್ಚು ಹಾಲು ಉತ್ಪಾದನೆ ಆಗುತ್ತದೆ. […]

ಎರಡು ವಾರಗಳ ಕಠಿಣ ಲಾಕ್‌ಡೌನ್‌ ಅಗತ್ಯ ವಸ್ತುಗಳ ಖರೀದಿಗೆ ನೂಕು ನುಗ್ಗಲು

Monday, May 10th, 2021
Heavy Rush

ಮಂಗಳೂರು : ಎರಡು ವಾರಗಳ ಕಠಿಣ ಲಾಕ್‌ಡೌನ್‌ ಸೋಮವಾರದಿಂದ ಜಾರಿಯಾಗಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರು ನಗರ ಸೇರಿದಂತೆ ದ.ಕ. ಜಿಲ್ಲೆಯಲ್ಲಿ ಬಹುತೇಕ ಕಡೆಗಳಲ್ಲಿ ಇಂದು ಬೆಳಗ್ಗೆ ಅಗತ್ಯ ವಸ್ತುಗಳ ಖರೀದಿಗೆ ಜನರು ಮಾರುಕಟ್ಟೆಗಳಿಗೆ ಮುಗಿಬಿದ್ದರು. ಮಂಗಳೂರಿನ ಮಲ್ಲಿಕಟ್ಟೆ, ನಗರ ಹೊರ ವಲಯದ ತೊಕ್ಕೊಟ್ಟು ಒಳಪೇಟೆ, ತಲಪಾಡಿ ಕೆ.ಸಿ.ರೋಡ್ ನಲ್ಲಿ ಜನರು ಖರೀದಿಯ ಅವಸರದಲ್ಲಿ ಸಾಮಾಜಿಕ ಅಂತರವನ್ನೇ ಮರೆತಿದ್ದರು ಜನ ಮಾಸ್ಕ್ ಧಾರಣೆಯನ್ನು ಮರೆತಿದ್ದರು. ಮಾರುಕಟ್ಟೆಯನ್ನು ಸಂಪರ್ಕಿಸುವ ರಸ್ತೆಗಳಂತೂ ವಾಹನಗಳು ಹಾಗೂ ಜನಜಂಗುಳಿಯಿಂದ ಗಿಜಿಗುಡುತ್ತಿತ್ತು. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ […]

ಬೈಕಂಪಾಡಿ ಎಪಿಎಂಸಿ ವರ್ತಕರು ಶೀಘ್ರದಲ್ಲೇ ವಾಪಾಸ್ ; ನಾಲ್ಕು ತಿಂಗಳಲ್ಲಿ ಟೌನ್ ಹಾಲ್ ಬಳಿ ತಾತ್ಕಾಲಿಕ ಮಾರುಕಟ್ಟೆ ನಿರ್ಮಾಣ

Tuesday, April 28th, 2020
MCC market

ಮಂಗಳೂರು: ಬೈಕಂಪಾಡಿಯಲ್ಲಿರುವ ಎಪಿಎಂಸಿ ಆವರಣಕ್ಕೆ ಸ್ಥಳಾಂತರಿಸಿದ ಕೇಂದ್ರ ಮಾರುಕಟ್ಟೆಯ ಮಾರಾಟಗಾರರಿಗೆ ಸ್ಥಳಾವಕಾಶ ಕಲ್ಪಿಸಲು 5.25 ಕೋಟಿ ರೂ.ಗಳ ವೆಚ್ಚದಲ್ಲಿ ಟೌನ್ ಹಾಲ್ ಬಳಿ ತಾತ್ಕಾಲಿಕ ಮಾರುಕಟ್ಟೆ ನಿರ್ಮಿಸಲಾಗುವುದು. 115 ಕೋಟಿ ರೂ.ಗಳ ವೆಚ್ಚದಲ್ಲಿ ಹಳೆಯ ಕಟ್ಟಡವನ್ನು ನೆಲಸಮಗೊಳಿಸಿದ ನಂತರ ಹೊಸ ಕೇಂದ್ರ ಮಾರುಕಟ್ಟೆ ನಿರ್ಮಾಣ ಗೊಳ್ಳಲಿದೆ. ಮಾರುಕಟ್ಟೆಯ ಪುನರ್ ನಿರ್ಮಾಣವು  ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ (ಎಂಎಸ್ಸಿಎಲ್) ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ನಡೆಯಲಿದೆ. ಇದಕ್ಕಾಗಿ ಎಂಎಸ್‌ಸಿಎಲ್ ಶೀಘ್ರದಲ್ಲೇ ಟೆಂಡರ್ ಕರೆಯಲಿದೆ. ತಾತ್ಕಾಲಿಕ ಮಾರುಕಟ್ಟೆ ರಚನೆಯು 150 ಕ್ಕೂ ಹೆಚ್ಚು […]

ದ.ಕ. ಜಿಲ್ಲೆಯಲ್ಲಿ ಬೆಳಿಗ್ಗೆ 6 ರಿಂದ ಮಧ್ಯಾಹ್ನ 12 ರವರೆಗೆ ಮಾರುಕಟ್ಟೆ ತೆರೆದಿರುತ್ತದೆ

Tuesday, March 24th, 2020
mangalore-market

ಮಂಗಳೂರು : ಮಾನ್ಯ ಜಿಲ್ಲಾಧಿಕಾರಿಗಳು ಇಂದು ಹೊರಡಿಸಿರುವ ಆದೇಶವು ಉಲ್ಲೇಖ (3) ರಲ್ಲಿ ರಾಜ್ಯ ಸರಕಾರ ಇಂದು ಹೊರಡಿಸಿರುವ ಲಾಕ್ ಡೌನ್ ಅದೇಶಕ್ಕೆ ಪೂರಕ ಆದೇಶವಾಗಿದೆ. ರಾಜ್ಯ ಸರಕಾರದ ಲಾಕ್ ಡೌನ್ ಆದೇಶದಲ್ಲಿರುವ ಎಲ್ಲಾ ನಿರ್ಬಂಧಗಳು ಜಿಲ್ಲೆಗೆ ಸಂಪೂರ್ಣವಾಗಿ ಅನ್ವಯವಾಗಲಿದೆ. ಆದರೆ, ದ.ಕ. ಜಿಲ್ಲೆಯಲ್ಲಿ ಆಹಾರ ಸಾಮಗ್ರಿ, ದಿನಸಿ ಅಂಗಡಿ, ಮಾಂಸ,ಮೀನು ಮಾರುಕಟ್ಟೆ ಬೆಳಿಗ್ಗೆ 6 ರಿಂದ ಮಧ್ಯಾಹ್ನ 12 ರವರೆಗೆ ಮಾತ್ರ ತೆರೆಯಲು ಅವಕಾಶವಿರುತ್ತದೆ.