ದಕ್ಷಿಣ ಕನ್ನಡ ಡಿಸಿ ಭೇಟಿ ಮಾಡಿದ ಮಂಗಳೂರು ಲಾರಿ ಮಾಲೀಕರ ಯೂನಿಯನ್ : ಬೇಡಿಕೆ ಈಡೇರದಿದ್ದಲ್ಲಿ ಲಾರಿ ಮುಷ್ಕರ

Saturday, September 16th, 2023
Lorry-Union

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಲಾರಿ ಮಾಲೀಕರ ಸಂಘ (ರಿ.) ಇದರ ಪದಾಧಿಕಾರಿಗಳು ಇಂದು ಲಾರಿ ಮಾಲೀಕರ ಸಮಸ್ಯೆಗಳ ಕುರಿತಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಅವರಿಗೆ ಸೆ. 16 ರಂದು ಮನವಿ ಸಲ್ಲಿಸಿದರು. ಸರಕಾರ ನಿಗದಿ ಪಡಿಸಿದ ಬಾಡಿಗೆ ದರ ನೀಡುವಂತೆ ಹಾಗೂ ಇತರ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಸಾರಿಗೆ ಅಧಿಕಾರಿಗಳ ಸಭೆ ನಡೆಸುವಂತೆ ಕೋರಲಾಯಿತು. ವಾರದೊಳಗೆ ಬಾಡಿಗೆ ದರ ನಿಗದಿಪಡಿಸದೇ ಇದ್ದಲ್ಲಿ ಕಲ್ಲಿದ್ದಲು ಸೇರಿದಂತೆ ಇತರ ಎಲ್ಲ ಸರಕು ಸಾಗಾಣಿಕೆಯನ್ನು ಸ್ವಯಂಪ್ರೇರಿತ […]

ಖಾಸಗಿ ವಾಹನಗಳಲ್ಲಿ ಪ್ರಯಾಣಿಕರಿಂದ ದುಬಾರಿ ದರವನ್ನು ಪಡೆಯುವಂತಿಲ್ಲ : ಜಿಲ್ಲಾಧಿಕಾರಿ

Wednesday, April 7th, 2021
RTO-meeting

ಮಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತು ಅನಿರ್ಧಿಷ್ಟ ಅವಧಿಯ ಮುಷ್ಕರದ ಹಿನ್ನೆಲೆ ಜಿಲ್ಲೆಯ ಸಾರ್ವಜನಿಕರಿಗೆ ಸಾರಿಗೆ ವ್ಯವಸ್ಥೆಯಲ್ಲಿ ಯಾವುದೇ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ. ಕೆ. ವಿ ಸೂಚನೆ ನೀಡಿದರು. ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅನಿರ್ದಿಷ್ಠಾವಧಿ ಮುಷ್ಕರ ಹಿನ್ನೆಲೆ ಪರ್ಯಾಯ ವ್ಯವಸ್ಥೆ ಕೈಗೊಳ್ಳುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ […]

ನಾಳೆ ಭಾರತ ಬಂದ್‌ : ಕಾರ್ಮಿಕ ಸಂಘಟನೆಗಳಿಂದ ಮುಷ್ಕರಕ್ಕೆ ಕರೆ

Tuesday, January 7th, 2020
bharat-band

ಬೆಂಗಳೂರು : ಕೇಂದ್ರ ಸರಕಾರ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ದೇಶದ ಪ್ರಮುಖ ಕಾರ್ಮಿಕ ಸಂಘಟನೆಗಳು ಬುಧವಾರ “ಭಾರತ ಬಂದ್‌’ಗೆ ಕರೆ ನೀಡಿದ್ದು, ಬ್ಯಾಂಕಿಂಗ್‌ ಸಹಿತ ಕೆಲವು ಸೇವೆಗಳಿಗೆ ಅಡಚಣೆಯಾಗುವ ಸಂಭವವಿದೆ. ರಾಜ್ಯದಲ್ಲೂ ಕೆಲವು ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿದ್ದು, ಜನಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಮುಷ್ಕರದ ದಿನ ರಾಜ್ಯದಲ್ಲಿ ತುರ್ತು ಸೇವೆಗಳಾದ ಆಸ್ಪತ್ರೆ, ಔಷಧ ಮಳಿಗೆ, ಆ್ಯಂಬುಲೆನ್ಸ್‌ ಸೇವೆ ಗಳನ್ನು ಹೊರತುಪಡಿಸಿ ಉತ್ಪಾ ದನ ವಿಭಾಗ, ಅಸಂಘಟಿತ ಕಾರ್ಮಿಕ ವಲಯಗಳ ಸೇವೆಗಳಲ್ಲಿ ವ್ಯತ್ಯಯ ವಾಗುವ […]

ಡಿ.12ರಂದು ಮಂಗಳೂರು ಮೀನು ಸಾಗಾಟ ಲಾರಿಗಳ ಮುಷ್ಕರ

Wednesday, December 4th, 2019
meenu

ಮಂಗಳೂರು : ಮೀನು ಸಾಗಾಟದ ಸಂದರ್ಭ ಲಾರಿಗಳ ತ್ಯಾಜ್ಯ ನೀರನ್ನು ನಿರ್ದಿಷ್ಟ ಪ್ರದೇಶಗಳಲ್ಲಿ ಚೆಲ್ಲಲು ಅವಕಾಶವಿಲ್ಲದೆ ವಿನಾಕಾರಣ ಲಾರಿ ಚಾಲಕರು ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸೂಕ್ತ ಸ್ಥಳಾವಕಾಶಕ್ಕೆ ಒತ್ತಾಯಿಸಿ ಡಿ.12ರಂದು 24 ಗಂಟೆಯ ಲಾರಿ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಮೋಟಾರ್ ಟ್ರಾನ್ಸ್‌ಪೋರ್ಟ್ ಮತ್ತು ಇಂಜಿನಿಯರಿಂಗ್ ವರ್ಕರ್ಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ವಸಂತ ಆಚಾರಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು ಈ ವಿಷಯ ತಿಳಿಸಿದರು. ಲಾರಿ ಚಾಲಕರು ದುಡಿಯುವ ವರ್ಗದವರಾಗಿದ್ದಾರೆ. ಹಿಂದೆ ಮೀನು ಸಾಗಾಟ ಮಾಡುವ ಲಾರಿಗಳಲ್ಲಿ […]

ಓಲಾ ಉಬರ್ ಆನ್ ಲೈನ್ ಟ್ಯಾಕ್ಸಿ ಅಪರೇಟರುಗಳಿಂದ ಅನಿರ್ದಿಷ್ಟಾವಧಿ ಮುಷ್ಕರ

Thursday, August 10th, 2017
uber

ಮಂಗಳೂರು : ಆ್ಯಪ್ ಆಧಾರಿತ ಟ್ಯಾಕ್ಸಿ ಅಪರೇಟರುಗಳಿಗೆ ಓಲಾ ಮತ್ತು ಉಬರ್ ಕಂಪೆನಿಗಳು ದರಗಳಲ್ಲಿ ಭಾರೀ ಇಳಿಕೆ ಮತ್ತು  ಪ್ರೋತ್ಸಾಹ ಧನಗಳಲ್ಲಿ ಭಾರೀ ಕಡಿತ ಮಾಡಿರುವುದರಿಂದ ಅಪರೇಟರುಗಳು ತೀವ್ರ ನಷ್ಟ ಅನುಭವಿಸುತ್ತಿದ್ದು ಕಂಪೆನಿಗಳು ಅಪರೇಟರುಗಳಿಗೆ ನೀಡಲಾಗುವ ದರಗಳಲ್ಲಿ ಬದಲಾವಣೆ ಮಾಡದೆ ಹಠಮಾರಿ ಧೋರಣೆ ತಳೆದಿರುವುದನ್ನು ವಿರೋಧಿಸಿ ಆ್ಯಪ್ ಆಧಾರಿತ ಟ್ಯಾಕ್ಸಿ ಅಪರೇಟರುಗಳು ಆನ್ ಲೈನ್ ಟ್ಯಾಕ್ಸಿ ಸೇವೆಯನ್ನು ಸ್ಥಗಿತಗೊಳಿಸಿ ಓಲಾ ಮತ್ತು ಉಬರ್ ಕಂಪೆನಿಗಳ ವಿರುದ್ಧ ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ಇಂದು ನಗರದ ಸರ್ಕಾರಿ ನೌಕರರ […]

ಎರಡನೇ ದಿನದ ಕಾರ್ಮಿಕ ಸಂಘಟನೆಗಳ ಮುಷ್ಕರಕ್ಕೆ ಕರಾವಳಿಯಲ್ಲಿ ಮಿಶ್ರ ಪ್ರತಿಕ್ರಿಯೆ

Thursday, February 21st, 2013
Strike mixed response in DK

ಮಂಗಳೂರು : ವಿವಿಧ ಕಾರ್ಮಿಕ ಸಂಘಟನೆಗಳು ನೀಡಿದ ಎರಡು ದಿನಗಳ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಮಂಗಳೂರಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು ಆದರೆ ಎರಡನೇ ದಿನವಾದ ಇಂದು ಯಾವುದೇ ರೀತಿಯ ಮುಷ್ಕರಗಳು ನಡೆಯದೆ ಎಂದಿನಂತೆ ಜನರು ತಮ್ಮ ಕಾರ್ಯಗಳಲ್ಲಿ ತೊಡಗಿಕೊಂಡಿದ್ದು, ಬಸ್ ಸಂಚಾರ ಆರಂಭವಾಗಿದೆ. ಬೆಲೆ ಏರಿಕೆ ವಿರುದ್ಧ ಭುಗಿಲೆದ್ದ ರಾಷ್ಟ್ರವ್ಯಾಪಿ ಪ್ರತಿಭಟನೆಯಲ್ಲಿ ಕಾರ್ಮಿಕ ಸಂಘಟನೆಗಳು ಹಲವಾರು ಬೇಡಿಕೆಗಳನ್ನು ಮುಂದಿಟ್ಟಿದ್ದರು. ಎಲ್ಲ ಕಾರ್ಮಿಕರು ಹತ್ತು ಸಾವಿರ ಕನಿಷ್ಠ ಕೂಲಿ ನಿಗದಿ ಪಡಿಸಿ, ಬೋನಸ್ ಗಿರುವ ಎಲ್ಲ ಮಿತಿಗಳನ್ನು ತೆಗೆದುಹಾಕಬೇಕು, ಆಟೋ ಚಾಲಕರ ನೋಂದಾವಣೆ […]