ಮಳೆಯಿಂದ ಹಾನಿ, ಶೀಘ್ರ ಪರಿಹಾರಕ್ಕೆ ಸೂಚನೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Tuesday, November 23rd, 2021
Bengaluru-Flood

ಬೆಂಗಳೂರು :  ಬೆಂಗಳೂರಿನ ಯಲಹಂಕ ಪ್ರದೇಶದಲ್ಲಿ ನೀರು ನುಗ್ಗಿರುವ  ಮನೆಗಳಿಗೆ 10 ಸಾವಿರ ರೂ.ಗಳು, ಸಂಪೂರ್ಣ ಹಾನಿಯಾಗಿರುವ ಮನೆಗಳಿಗೆ 5 ಲಕ್ಷ ರೂ.ಗಳು ಹಾಗೂ ದೊಡ್ಡ ಪ್ರಮಾಣದಲ್ಲಿ ಹಾನಿಯಾಗಿರುವ ಮನೆಗಳಿಗೆ  1  ಲಕ್ಷ ರೂ.ಗಳ  ತುರ್ತು ಪರಿಹಾರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ಬೆಳಿಗ್ಗೆ ಜಲಾವೃತವಾಗಿರುವ ಯಲಹಂಕದ  ಕೇಂದ್ರೀಯ  ವಿಹಾರ್ ಅಪಾರ್ಟ್ಮೆಂಟ್ ಸಮುಚ್ಚಯಕ್ಕೆ ಭೇಟಿ ನೀಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಈ ಪೈಕಿ ನೀರು ನುಗ್ಗಿರುವ ಮನೆಗಳಿಗೆ 10.ಸಾವಿರ ರೂ.ಗಳನ್ನು ಇಂದೇ […]

20 ದಿನಗಳಲ್ಲಿ ನಿರ್ಮಾಣವಾದ ಯಲಹಂಕ ಕೊವಿಡ್‌ ಆಸ್ಪತ್ರೆ ಲೋಕಾರ್ಪಣೆ

Sunday, June 20th, 2021
Covid care Hospital

ಬೆಂಗಳೂರು: ಕೊವಿಡ್‌ ಅಲೆಗಳನ್ನು ಸಮರ್ಥವಾಗಿ ನಿಭಾಯಿಸುವ ನಿಟ್ಟಿನಲ್ಲಿ ಬೋಯಿಂಗ್‌ ಸಂಸ್ಥೆಯು, ‘ಸೆಲ್ಕೋ’, ‘ಡಾಕ್ಟರ್ಸ್‌ ಫಾರ್‌ ಯು’ ಸಹಯೋಗದೊಂದಿಗೆ ಯಲಹಂಕದಲ್ಲಿ ನಿರ್ಮಿಸಿರುವ 100 ಹಾಸಿಗೆಗಳ ಅತ್ಯಾಧುನಿಕ ಕೊವಿಡ್‌-ಕೇರ್‌ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಶನಿವಾರ ಉದ್ಘಾಟಿಸಿದರು. ಆಸ್ಪತ್ರೆ ನಿರ್ಮಾಣಕ್ಕೆ ಕರ್ನಾಟಕ ವಿದ್ಯುತ್‌ ನಿಗಮ ತನ್ನ ಕ್ಯಾಂಪಸ್‌ನಲ್ಲಿ ಜಾಗ ನೀಡಿದ್ದು, ಸುಮಾರು ಅರ್ಧ ಎಕರೆ ಪ್ರದೇಶದಲ್ಲಿ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯ ಇರುವ ಆಸ್ಪತ್ರೆಯನ್ನು ಕೇವಲ 20 ದಿನದೊಳಗೆ ಪೂರ್ಣಗೊಳಿಸಿರುವುದು ವಿಶೇಷ. […]

ಮತ್ತೆ ರಾಜ್ಯಕ್ಕೆ ಕಾಲಿಟ್ಟ ಮಹಾಮಾರಿ… ಬೆಂಗಳೂರಲ್ಲಿ ಹಕ್ಕಿ ಜ್ವರ ಭೀತಿ

Tuesday, January 2nd, 2018
bird-flue

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಸದ್ದು ಮಾಡಿದ್ದ ಹಕ್ಕಿ ಜ್ವರ ಇದೀಗ ಸಿಲಿಕಾನ್ ಸಿಟಿಯಲ್ಲಿಯೂ ಪತ್ತೆಯಾಗಿದೆ. ದಾಸರಹಳ್ಳಿಯ ಕೆಜಿಎನ್ ಕೋಳಿ ಮಾರಾಟ ಅಂಗಡಿಯಲ್ಲಿನ ಕೋಳಿಗಳಲ್ಲಿ ಹಕ್ಕಿ ಜ್ವರ ಇರುವುದು ಪ್ರಯೋಗಾಲಯದಲ್ಲಿ ಸಾಬೀತಾಗಿದ್ದು ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಹೌದು, ಉದ್ಯಾನನಗರಿಗೆ ಹಕ್ಕಿ ಜ್ವರ ಕಾಲಿಟ್ಟಿದೆ. ತಮಿಳುನಾಡಿನಿಂದ ಬಂದಂತಹ ನಾಟಿ ಕೋಳಿಗಳಲ್ಲಿ ಹಕ್ಕಿ ಜ್ವರ ಪತ್ತೆಯಾಗಿದೆ. ಕಳೆದ ವಾರ ತಮಿಳುನಾಡಿನ ಕೋಳಿ ಮಾರಾಟಗಾರರಿಂದ 15 ಕೋಳಿ ಖರೀದಿಸಿದ್ದ ಕೆಜಿಎನ್ ಅಂಗಡಿ ಮಾಲೀಕರು ನಾಲ್ಕೈದು ಕೋಳಿಗಳು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಮೃತ ಕೋಳಿಗಳನ್ನು ಪರೀಕ್ಷೆ ಒಳಪಡಿಸಿದ್ದರು. […]