ಸಚಿವ ಶ್ರೀರಾಮುಲು ಪುತ್ರಿ ರಕ್ಷಿತಾರ ಅದ್ಧೂರಿ ಮದುವೆ ಸಮಾರಂಭ

Thursday, March 5th, 2020
sri-ramulu

ಬೆಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಅವರ ಪುತ್ರಿ ರಕ್ಷಿತಾ ಅವರು ಇಂದು ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಹೈದರಾಬಾದ್‍ನ ಉದ್ಯಮಿ ಲಲಿತ್ ಸಂಜೀವ್ ರೆಡ್ಡಿ ಅವರ ಜತೆ ರಕ್ಷಿತಾ ಸಪ್ತಪದಿ ತುಳಿಯುವ ಮೂಲಕ ವಿವಾಹ ಬಂಧನಕ್ಕೆ ಒಳಗಾದರು. ಅರಮನೆ ಮೈದಾನದಲ್ಲಿ ಜಗಮಗಿಸುವಂತೆ ಶೃಂಗಾರಗೊಂಡಿದ್ದ ವೇದಿಕೆಯಲ್ಲಿ ಬೆಳಗ್ಗೆ ಲಲಿತ್ ಸಂಜೀವ್‍ರೆಡ್ಡಿ ಅವರು ರಕ್ಷಿತಾಗೆ ಮಾಂಗಲ್ಯಧಾರಣೆ ಮಾಡಿದರು. ನೂತನ ದಂಪತಿಗಳಿಗೆ ಶುಭ ಕೋರಲು ಪಕ್ಷ ಭೇದ ಮರೆತು ವಿವಿಧ ರಾಜಕೀಯ ಮುಖಂಡರು ಆಗಮಿಸಿದ್ದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ […]

ಪ್ಯಾರಾ ಒಲಂಪಿಕ್‌ಗಾಗಿಯೇ ಪ್ರತ್ಯೇಕ ಸ್ಟೇಡಿಯಂ‌ ನಿರ್ಮಾಣಕ್ಕೆ ಯೋಜನೆ: ಡಾ. ಜಿ.ಪರಮೇಶ್ವರ್

Tuesday, November 20th, 2018
parameshwar

ಬೆಂಗಳೂರು: ಅಕ್ಟೋಬರ್‌ನಲ್ಲಿ ಇಂಡೋನೇಷ್ಯಾದಲ್ಲಿ ನಡೆದ ಪ್ಯಾರಾ ಏಷಿಯನ್‌ ಗೇಮ್ಸ್ನಲ್ಲಿ 9 ಪದಕ ಪಡೆದ ಏಳು ವಿಕಲಚೇತನ ಕ್ರೀಡಾಪಟುಗಳಿಗೆ ಉಪ ಮುಖ್ಯಮಂತ್ರಿ ಹಾಗೂ ಯುವಜನ ಮತ್ತು ಕ್ರೀಡಾ ಸಚಿವ ಡಾ. ಜಿ.ಪರಮೇಶ್ವರ್ ಅವರು ಗೃಹ ಕಚೇರಿಯಲ್ಲಿ ಇಂದು ಸನ್ಮಾನಿಸಿದರು. ಪ್ಯಾರಾ ಒಲಂಪಿಕ್‌ನಲ್ಲಿ‌ ಚಿನ್ನ ಗಳಿಸಿದ ರಕ್ಷಿತಾ ಆರ್., ಬೆಳ್ಳಿ ಹಾಗೂ ಕಂಚು ಪದಕ ವಿಜೇತೆ ವಿ.ರಾಧ, ಜಾವಲಿನ್ ಥ್ರೋ ವಿಭಾಗದಲ್ಲಿ ಕಂಚು ಪಡೆದ ಎನ್‌.ಎಸ್‌. ರಮ್ಯಾ, ಪ್ಯಾರ ಬ್ಯಾಡ್ಮಿಂಟನ್‌ನಲ್ಲಿ ಕಂಚು ವಿಜೇತ ಆನಂದ ಕುಮಾರ್, ಚೆಸ್‌ನಲ್ಲಿ ಚಿನ್ನದ ಪದಕ […]

ರೈಲಿಗೆ ತಲೆ ಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ

Friday, October 5th, 2018
kolara

ಕೋಲಾರ : ರೈಲಿಗೆ ತಲೆ ಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಖಾದ್ರಿಪುರ ಗೇಟ್ ಬಳಿ ನಡೆದಿದೆ. ರೈಲಿಗೆ ತಲೆಯಿಟ್ಟು ಆತ್ಮಹತ್ಯೆ ಮಾಡಿಕೊಂಡ ಹಿನ್ನಲೆಯಲ್ಲಿ ವಿದ್ಯಾರ್ಥಿನಿಯ ರುಂಡ ಮತ್ತು ದೇಹ ತುಂಡಾಗಿ ಬೇರ್ಪಟ್ಟು ಬಿದ್ದಿದೆ. ಕೋಲಾರದ ಶಾಂತಿನಗರದ ರಕ್ಷಿತಾ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ. ಬಾಲಕಿ ಆತ್ಮಹತ್ಯೆ ಗೆ‌ ನಿಖರವಾದ ಮಾಹಿತಿ ತಿಳಿದು ಬಂದಿಲ್ಲ. ಇಂದು ನಸುಕಿನಜಾವ ೪ ಗಂಟೆ ಸುಮಾರಿಗೆ ಮನೆ ಬಿಟ್ಟು ಬಂದಿದ್ದಳೆನ್ನಲಾದ ವಿದ್ಯಾರ್ಥಿನಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. […]

ವಿಶೇಷ ಲೋಕ ಅದಾಲತ್‌ನಲ್ಲಿ ಗಂಡ-ಹೆಂಡಿರನ್ನು ಒಂದು ಮಾಡಿದ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ

Monday, August 13th, 2018
high-court

ಹುಬ್ಬಳ್ಳಿ: ಹುಬ್ಬಳ್ಳಿ ನೂತನ ನ್ಯಾಯಾಲಯಗಳ ಸಂಕೀರ್ಣಗಳ ಉದ್ಘಾಟನೆಗಾಗಿ ಆಗಮಿಸಿದ್ದ ಸುಪ್ರಿಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು ಇಂದು ನೂತನ ನ್ಯಾಯಾಲಯದಲ್ಲಿ ಏರ್ಪಡಿಸಲಾಗಿದ್ದ ವಿಶೇಷ ಲೋಕ ಅದಾಲತ್‌ನಲ್ಲಿ ಕೌಟುಂಬಿಕ ವಾಜ್ಯ ಒಂದನ್ನು ಖುದ್ದಾಗಿ ಇತ್ಯರ್ಥ ಪಡಿಸಿದರು. ಹುಬ್ಬಳ್ಳಿ ಕೌಟುಂಬಿಕ ನ್ಯಾಯಾಲಯದ ಮುಂದೆ ಇದ್ದ ಗಂಡ-ಹೆಂಡಿರ ನಡುವಿನ ವಿಚ್ಛೇದನ ಪ್ರಕರಣ ಬಗೆಹರಿಸಿ ದಂಪತಿ ಹಾಗೂ ಮಕ್ಕಳನ್ನು ಒಗ್ಗೂಡಿಸಿದರು. ಇಲ್ಲಿನ ಕೇಶ್ವಾಪುರದ ನಿವಾಸಿ ಜಗದೀಶ್ ಶೆಳಗಿ ಹಾಗೂ ಪಾರ್ವತಿ ದಂಪತಿಗಳ ವಿಚ್ಛೇಧನ ಪ್ರಕರಣ ವಿಶೇಷ ಲೋಕ ಅದಾಲತ್‌ನಲ್ಲಿ ಭಾರತದ […]