ಕರಾವಳಿ ಕಾವಲು ಪೊಲೀಸ್ ಬಲವರ್ಧನೆಗೆ ಸರ್ಕಾರದ ಕ್ರಮ : ಬಸವರಾಜ ಬೊಮ್ಮಾಯಿ ಹೇಳಿಕೆ

Friday, October 25th, 2019
basavaraj

ಬಂಟ್ವಾಳ : ಕರಾವಳಿ ಕಾವಲು ಪೊಲೀಸ್ ಪಡೆ ಬಲವರ್ಧನೆಗೊಳಿಸಿ, ತೀರ ಪ್ರದೇಶ ಸುರಕ್ಷತೆಗೆ ಗರಿಷ್ಠ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಇದಕ್ಕಾಗಿ ಭದ್ರತಾ ಪಡೆಗೆ ಅಗತ್ಯ ಹೆಚ್ಚುವರಿ ಸೌಲಭ್ಯಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ ಘೋಷಣೆಯಾಗಿರುವುದರಿಂದ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಗೃಹಸಚಿವರು ಗುರುವಾರ ಬೆಳಗ್ಗೆ ಪಶ್ಚಿಮ ವಲಯ ಪೊಲೀಸ್ ಅಧಿಕಾರಿಗಳ ಸಭೆಯನ್ನು ಬಂಟ್ವಾಳ ಪ್ರವಾಸಿ ಮಂದಿರದಲ್ಲಿ ನಡೆಸಿದರು. ಪಶ್ಚಿಮ ವಲಯದ ಐಜಿಪಿ ಅರುಣ್ ಚಕ್ರವರ್ತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ […]

ಬಂಟ್ವಾಳ : ತಹಶೀಲ್ದಾರ್ ಕಾರ್ಯನಿರ್ವಹಕ ದಂಡಾಧಿಕಾರಿ ನೇತೃತ್ವದಲ್ಲಿ ನಡೆದ ಸ್ವಚ್ಚತಾ ಕಾರ್ಯಕ್ರಮ

Wednesday, October 2nd, 2019
rashmi

ಬಂಟ್ವಾಳ : ಪ್ರತೀದಿನ ಕೈಯಲ್ಲಿ ಪೆನ್ನು ಹಿಡಿದುಕೊಂಡು ದಂಡಾಧಿಕಾರಿಯ ಖದರ್ ನಲ್ಲಿ ಕಾಣಿಸಿಕೊಳ್ಳುವ ಬಂಟ್ವಾಳ ತಹಶೀಲ್ದಾರರ ರಶ್ಮೀ ಎಸ್.ಆರ್ ರವರು, ಇಂದು ಬೆಳ್ಳಂಬೆಳಿಗ್ಗೆ ಕೈಯಲ್ಲಿ ಪೊರಕೆ ಹಿಡಿದುಕೊಂಡು ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಗಾಂಧಿ ಜಯಂತಿಯ ಅಂಗವಾಗಿ ಬುಧವಾರ ಬೆಳ್ಳಂಬೆಳಿಗ್ಗೆ ಕೈಯಲ್ಲಿ ಪೊರಕೆ ಹಿಡಿದುಕೊಂಡು ಮಿನಿವಿಧಾನ ಸೌಧದಲ್ಲಿ ಕಾಣಿಸಿಕೊಂಡ ತಹಶೀಲ್ದಾರ್ ರಶ್ಮೀ ಎಸ್.ಆರ್ ರವರು, ಸ್ವತಃ ತಾವೇ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದರು. ಅವರ ಜೊತೆ ತಾಲೂಕು ಕಚೇರಿಯ ಇತರ ಉದ್ಯೋಗಸ್ಥರೂ ಕೈ ಜೋಡಿಸಿದರು. ಅಧಿಕಾರಿ- ಸಿಬ್ಬಂದಿಗಳೆಂಬ ಬೇಧ ಇಲ್ಲದೇ […]

ಬಂಟ್ವಾಳ : ಅಕ್ರಮ ಮರಳು ಸಾಗಾಟ ವಿರುದ್ಧ ಕಾರ್ಯಾಚರಣೆ : ಐದು ಲಾರಿಗಳು ವಶ

Saturday, September 14th, 2019
laari

ಬಂಟ್ವಾಳ : ಅಕ್ರಮ ಮರಳು ಸಾಗಾಟದ ಲಾರಿಗಳ ವಿರುದ್ಧ ಶುಕ್ರವಾರ ಮಧ್ಯರಾತ್ರಿ ಕಾರ್ಯಾಚರಣೆ ನಡೆಸಿದ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್. ಆರ್. ನೇತೃತ್ವದ ತಂಡ ದಾಳಿ ನಡೆಸಿ 5 ಲಾರಿಗಳನ್ನು ವಶಪಡಿಸಿ ಪೊಲೀಸರಿಗೆ ಹಸ್ತಾಂತರಿಸಿದೆ. ಅಕ್ರಮವಾಗಿ ದಾಸ್ತಾನು ಇರಿಸಲಾಗಿದ್ದ ಮರಳುಗಳನ್ನು ರಾತ್ರಿ ವೇಳೆ ಹೊರ ಜಿಲ್ಲೆಗಳಿಗೆ ದುಪ್ಪಟ್ಟು ಹಣಕ್ಕೆ ಮಾರಾಟ ಮಾಡಲು ಲಾರಿಗಳಲ್ಲಿ ತುಂಬಿಸಿ ಪರವಾನಿಗೆ ರಹಿತ ಸಾಗಿಸುತ್ತಿದ್ದ ಲಾರಿಗಳನ್ನು ತಡೆಯಲಾಗಿತ್ತು. ಪಾಣೆಮಂಗಳೂರು ನರಹರಿ ಬಳಿಯಲ್ಲಿ ಎರಡು ಲಾರಿ, ಮಾರ್ನಬೈಲುನಲ್ಲಿ ಒಂದು ಲಾರಿ, ಚೇಲೂರಿನಲ್ಲಿ ಒಂದು ಹಾಗೂ […]