ಕಾಶ್ಮೀರಿ ಪಂಡಿತರು ಮತ್ತೆ ಕಣಿವೆ ರಾಜ್ಯಕ್ಕೆ ಮರಳುವುದನ್ನು ತಡೆಯಲು ಯಾವ ಶಕ್ತಿಯಿಂದಲೂ ಸಾಧ್ಯವಿಲ್ಲ : ರಾಜನಾಥ್ ಸಿಂಗ್

Monday, January 27th, 2020
Rajnath Singh

ಮಂಗಳೂರು : ಪೌರತ್ವ ತಿದ್ದುಪಡಿ ಕಾಯಿದೆ – ಸಿಎಎ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ – ಎನ್‌ಆರ್‌ಸಿ ವಿಷಯದಲ್ಲಿ ವಿರೋಧ ಪಕ್ಷಗಳು ದೇಶ ವಿಭಜಿಸುವ ಕೆಲಸ ಮಾಡುತ್ತಿವೆ. ಧರ್ಮದ ಆಧಾರದಲ್ಲಿ ದೇಶವನ್ನು ಒಡೆಯಲು ಯತ್ನಿಸಿದ್ದು ಕಾಂಗ್ರೆಸ್ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು. ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಮೈದಾನದಲ್ಲಿ ಸೋಮವಾರ ನಡೆದ ಸಿಎಎ ಪರವಾದ ಬಿಜೆಪಿ ಜನಜಾಗೃತಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯ್ದೆ ಮಹಾತ್ಮ ಗಾಂಧೀಜಿ ಅವರ ಕನಸಾಗಿತ್ತು. ಗಾಂಧಿ ಕನಸನ್ನು ಬಿಜೆಪಿ ನನಸು ಮಾಡಿದೆ ಎಂದು […]

ಜನವರಿ 27 : ಮಂಗಳೂರಲ್ಲಿ ಪೌರತ್ವ ತಿದ್ದುಪಡಿ ಕಾಯಿದೆಯನ್ನು ಬೆಂಬಲಿಸಿ ಬ್ರಹತ್ ಜನಜಾಗೃತಿ ಸಮಾವೇಶ

Saturday, January 25th, 2020
Rajnath Singh

ಮಂಗಳೂರು :  ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯಿದೆಯನ್ನು ಬೆಂಬಲಿಸಿ ನಡೆಯಲಿರುವ ಜನಜಾಗೃತಿ ಸಮಾವೇಶದಲ್ಲಿ  ಕೇಂದ್ರ ಸಚಿವ ರಾಜನಾಥ್ ಸಿಂಗ್ ರವರು ಭಾಗವಹಿಸಲಿದ್ದಾರೆ. ಜನಜಾಗೃತಿ ಸಮಾವೇಶವು ಕೂಳೂರು ಸಮೀಪದ ಗೋಲ್ಡ್ ಪಿಂಚ್ ಸಿಟಿಯಲ್ಲಿ ಜನವರಿ 27 , ಸೋಮವಾರ ಸಂಜೆ 3 ರಿಂದ ನಡೆಯಲಿರುವುದು. ಪೌರತ್ವ ಕಾಯಿದೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಈ ಕಾರ್ಯಕ್ರಮದಲ್ಲಿ ಲಕ್ಷಾಂತರ ಜನರು ಬಾಗವಹಿಸುವ ನಿರೀಕ್ಷೆ ಇದೆ. ಇದೆ ಸಂಧರ್ಬದಲ್ಲಿ ನಗರದ ಬಸ್ , ಟ್ಯಾಕ್ಸಿ ಮತ್ತು ಆಟೋ […]

ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಜ. 27 ರಂದು ಮಂಗಳೂರಿಗೆ

Tuesday, January 21st, 2020
kendra-sachiva

ಮಂಗಳೂರು : ಸಿಎಎ ಮತ್ತು ಎನ್‌ಆರ್‌ಸಿ ಪರವಾಗಿ ದ.ಕ. ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜ. 27ರ ಮಧ್ಯಾಹ್ನ ಮಂಗಳೂರಿನಲ್ಲಿ ನಡೆಯಲಿರುವ ಬೃಹತ್‌ ಸಮರ್ಥನಾ ಸಮಾವೇಶದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಭಾಗವಹಿಸುವ ನಿರೀಕ್ಷೆಯಿದೆ. ಕೂಳೂರಿನ ಗೋಲ್ಡ್‌ಪಿಂಚ್‌ ಮೈದಾನದಲ್ಲಿ ಮಧ್ಯಾಹ್ನ 3ರ ಸುಮಾರಿಗೆ ಸಮಾವೇಶ ನಡೆಸಲು ಸಿದ್ಧತೆ ನಡೆಸಲಾಗಿದ್ದು, ಈ ಕುರಿತ ಅಂತಿಮ ತಯಾರಿ ಮಾಡಲಾಗುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅಥವಾ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ […]

ಇಂದು ರಫೇಲ್ ಯುದ್ಧ ವಿಮಾನ ಹಸ್ತಾಂತರ ಸಚಿವ ರಾಜನಾಥ ಸಿಂಗ್

Tuesday, October 8th, 2019
Rafale

ನವದೆಹಲಿ : ಮಂಗಳವಾರ ಪ್ಯಾರಿಸ್‌ನಲ್ಲಿ ರಫೇಲ್ ಯುದ್ಧ ವಿಮಾನವನ್ನು ರಕ್ಷಣ ಸಚಿವ ರಾಜನಾಥ ಸಿಂಗ್ ಅವರು ಹಸ್ತಾಂತರ ಮಾಡಿಕೊಳ್ಳಲಿದ್ದಾರೆ. ಭಾರತೀಯ ವಾಯುಪಡೆಯ ಸಂಸ್ಥಾಪನಾ ದಿನ ಹಾಗೂ ವಿಜಯದಶಮಿ ದಿನವಾದ ಮಂಗಳವಾರ ಪ್ಯಾರಿಸ್‌ನಲ್ಲೆ ರಫೇಲ್ ಯುದ್ಧ ವಿಮಾನಕ್ಕೆ ‘ಶಸ್ತ್ರ ಪೂಜೆ’ಯನ್ನು ಅವರು ಸಲ್ಲಿಸಲಿದ್ದಾರೆ. ದಸರಾ ವೇಳೆ ರಾಜನಾಥ್ ಸಿಂಗ್ ಅವರು ಹಲವು ವರ್ಷಗಳಿಂದ ಶಸ್ತ್ರ ಪೂಜೆ ಮಾಡಿಕೊಂಡು ಬಂದಿದ್ದಾರೆ.  

ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಬಲಯುತ ರಾಷ್ಟ್ರವಾಗಿ ರೂಪಿಸುವುದೇ ನಮ್ಮ ಸರ್ಕಾರದ ಧ್ಯೇಯ : ರಾಜನಾಥ್ ಸಿಂಗ್

Saturday, March 9th, 2019
ರಾಜನಾಥ್ ಸಿಂಗ್

ಮಂಗಳೂರು: ಭಾರತವನ್ನು ಶಕ್ತಿಶಾಲಿ ರಾಷ್ಟ್ರವಾಗಿ, ಆರ್ಥಿಕವಾಗಿ ಸುದೃಢ, ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಬಲಯುತ ರಾಷ್ಟ್ರವಾಗಿ ರೂಪಿಸುವುದೇ ನಮ್ಮ ಸರ್ಕಾರದ ಧ್ಯೇಯವಾಗಿದೆ. ಇಂದು ಭಾರತ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ವಿಶ್ವದ 6ನೇ ದೊಡ್ಡ ರಾಷ್ಟ್ರವಾಗಿದೆ. ದೇಶದಲ್ಲಿ ಹಣದುಬ್ಬರದ ವೇಗ ಶೇ. 50ರಷ್ಟು ಕುಸಿತ ಕಂಡಿದೆ. ಅಲ್ಲದೆ ಶೌಚಾಲಯ ನಿರ್ಮಾಣದಲ್ಲೂ ಶೇ. 99ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದರು. ನಗರದ ಎಂಜಿ ರಸ್ತೆಯಲ್ಲಿರುವ ಟಿಎಂಎ ಪೈ ಸಭಾಂಗಣದಲ್ಲಿ ಶನಿವಾರ ಸಂಜೆ ನಡೆದ ಪ್ರಬುದ್ಧರೊಂದಿಗೆ […]

ಸೈನಿಕರೊಂದಿಗೆ ಆಯುಧ ಪೂಜೆ ಆಚರಿಸಿದ ರಾಜನಾಥ್​ ಸಿಂಗ್​​!

Friday, October 19th, 2018
rajnath-singh

ಗುಜರಾತ್: ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಗುಜರಾತ್ನ ಬಿಕಾನೆರ್ನ ಭಾರತ-ಪಾಕ್ ಗಡಿಯಲ್ಲಿರುವ ಸೈನಿಕರೊಂದಿಗೆ ದಸರಾ ಹಬ್ಬ ಆಚರಿಸುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಗುರುವಾರ ಆಯುಧ ಪೂಜೆಯಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗಡಿ ಭದ್ರತಾ ಪಡೆಗಳ ಕುಟುಂಬಗಳ ಜೊತೆ ಹಬ್ಬ ಆಚರಿಸುವುದು ತುಂಬಾ ಖುಷಿ ತಂದಿದೆ. ನಮ್ಮ ಗಡಿ ಭದ್ರತಾ ಪಡೆಗಳ ಸೈನಿಕರಿಗೆ ಅವರ ಕುಟುಂಬಗಳೇ ಬೆನ್ನೆಲುಬು ಎಂದು ಸೈನಿಕರನ್ನು ಹೊಗಳಿದರು. ಸೈನಿಕರ ಕುಟುಂಬಗಳು ನೀಡುವ ಪ್ರೋತ್ಸಾಹವೇ ಸೈನಿಕರು ಗಡಿಯಲ್ಲಿ ನಿಂತು ದೇಶ […]

ಪ್ರಧಾನಿ ನರೇಂದ್ರ ಮೋದಿ ಭೇಟಿ ಸಾಧ್ಯವಾಗಿಲ್ಲ: ದೇವೇಗೌಡ

Friday, October 5th, 2018
narendra-modi

ಬೆಂಗಳೂರು: ಕೊಡಗು ಪ್ರವಾಹ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಅವಕಾಶ ಕೇಳಿದ್ದೆ. ರಷ್ಯಾ ಅಧ್ಯಕ್ಷರ ಭೇಟಿ ಹಿನ್ನೆಲೆಯಲ್ಲಿ ಪ್ರಧಾನಿ ಭೇಟಿ ಸಾಧ್ಯವಾಗಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹೇಳಿದರು. ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಸಚಿವರ ಭೇಟಿಗೆ ಪ್ರಧಾನಿ ಸೂಚಿಸಿದರು. ಹೀಗಾಗಿ, ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿದ್ದೇವೆ. ಸಾಕಷ್ಟು ಪ್ರಮಾಣದಲ್ಲಿ ಪ್ರವಾಹದಿಂದ ಹಾನಿಯಾಗಿದೆ. ಕೇಂದ್ರ ಸರ್ಕಾರದ ತಂಡ […]

ಪೊಲೀಸ್ ಆತ್ಮಹತ್ಯೆಯ ವರದಿ: ರಾಜನಾಥ್ ಸಿಂಗ್ ಮಾಹಿತಿ

Saturday, August 6th, 2016
Rajanath-singh

ಮಂಗಳೂರು: ದೇಶದಲ್ಲಿ 2012ರಿಂದ 2014ರವರೆಗೆ 614 ಮಂದಿ ಪೊಲೀಸರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಆತಂಕಕಾರಿ ವರದಿಯೊಂದು ಬಂದಿದೆ. 2012ರಲ್ಲಿ 214 ಮಂದಿ, 2013 ರಲ್ಲಿ 235 ಹಾಗೂ 2014ರಲ್ಲಿ 165 ಮಂದಿ ಪೊಲೀಸರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಲೋಕಸಭೆಯ ಮುಂಗಾರು ಅಧಿವೇಶದಲ್ಲಿ ಪೊಲೀಸರು ಆತ್ಮಹತ್ಯೆ ಕುರಿತ ಪ್ರಶ್ನೆಗೆ ಉತ್ತರಿಸಿದ ಸಚಿವ ರಾಜನಾಥ್ ಸಿಂಗ್, ಕೇಂದ್ರ ಅಪರಾಧ ದಾಖಲೆಗಳ ಬ್ಯೂರೊ ಅಂಕಿ-ಅಂಶಗಳ […]

ಬೆಂಬಲಿಗರ ಬಂಡಾಯಕ್ಕೆ ಮಣಿದ ಬಿಎಸ್‌ವೈ, ರಾಜನಾಥ್ ಸಿಂಗ್‌ಗೆ ಪತ್ರ

Monday, March 10th, 2014
Yaddyurappa

ಬೆಂಗಳೂರು: ಕೆಜೆಪಿಯನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಿ, ಮಾತೃ ಪಕ್ಷಕ್ಕೆ ಮರುಸೇರ್ಪಡೆಯಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಡೆಗೂ ತಮ್ಮ ಬೆಂಬಲಿಗರ ಬಂಡಾಯಕ್ಕೆ ಮಣಿದು, ಅತಂತ್ರವಾಗಿರುವ ತಮ್ಮ ಬೆಂಬಲಿಗರಿಗೆ ಸೂಕ್ತ ಸ್ಥಾನಮಾನ ನೀಡುವಂತೆ ಬಿಜೆಪಿ ಹೈಕಮಾಂಡ್‌ಗೆ ಒತ್ತಾಯಿಸಿದ್ದಾರೆ. ಈ ಸಂಬಂಧ ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿರುವ ಯಡಿಯೂರಪ್ಪ, ಪತ್ರದಲ್ಲಿ ತಮ್ಮ ಬೆಂಬಲಿಗರಿಗೆ ಸೂಕ್ತ ಸ್ಥಾನಮಾನ ನೀಡುವಂತೆ ಮನವಿ ಮಾಡಿದ್ದಾರೆ. ಇತ್ತೀಚಿಗಷ್ಟೆ ಯಡಿಯೂರಪ್ಪ ಅವರ ಕೆಲವು ಬೆಂಬಲಿಗರನ್ನು ತಮ್ಮನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿ, ಅವರ ವಿರುದ್ಧವೇ ಬಂಡಾಯವೆದ್ದಿದ್ದರು.