ಯಕ್ಷಗಾನ ಕಲಾವಿದ ಕಟೀಲು ಸೀತಾರಾಮ ಕುಮಾರ್​ಗೆ ರಾಜ್ಯೋತ್ಸವ ಪ್ರಶಸ್ತಿ

Thursday, November 29th, 2018
award

ಮಂಗಳೂರು: ಯಕ್ಷರಂಗದ ಚಾರ್ಲಿ ಚಾಪ್ಲಿನ್ ಎಂದು ಬಿರುದಾಂಕಿತರಾದ, ತೆಂಕು-ಬಡಗು ಉಭಯ ತಿಟ್ಟುಗಳ ಪ್ರಸಿದ್ಧ ಹಾಸ್ಯಗಾರ, ಹಲವಾರು ವರ್ಷಗಳಿಂದ ಯಕ್ಷಗಾನದಲ್ಲಿ ಸೇವೆ ಸಲ್ಲಿಸುತ್ತಿರುವ ಸೀತಾರಾಮ ಕುಮಾರ್ ಕಟೀಲು ಈ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸುಮಾರು ನಾಲ್ಕು ದಶಕಗಳಿಗೂ ಅಧಿಕ ಕಾಲ ಯಕ್ಷಗಾನ ಕಲಾವಿದರಾಗಿ ಸೇವೆ ಸಲ್ಲಿಸುತ್ತಿರುವ ಇವರು, ರಂಗಸ್ಥಳದಲ್ಲಿ ಪಾದರಸದಂತೆ ಚುರುಕಾಗಿ ನಟಿಸುತ್ತಾ, ಸದಾ ಹೊಸತನ್ನು ಅನ್ವೇಷಿಸುತ್ತಾ ಹಾಸ್ಯದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದವರು‌. ಸಂಭಾಷಣೆ-ಸಂವಾದಗಳಲ್ಲಿ ಅರಳು ಹುರಿದಂತೆ ಮಾತನಾಡುವ ಇವರು, ಪ್ರಕೃತಿ ವರ್ಣನೆ, ಸೌಂದರ್ಯ […]

ಸಿಐಡಿ ನಿಷ್ಪಕ್ಷಪಾತ ತನಿಖೆ ನಡೆಸುವ ಬಗ್ಗೆ ವಿಶ್ವಾಸ ಇದೆ: ಉಮಾಶ್ರೀ

Friday, December 16th, 2016
Umashree

ಮಂಗಳೂರು: ರಾಸಲೀಲೆ ಸಿ.ಡಿ. ಪ್ರಕರಣದಲ್ಲಿ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿರುವ ಹೆಚ್‌.ವೈ. ಮೇಟಿ ವಿರುದ್ಧ ಈಗಾಗಲೇ ಸಿಐಡಿ ತನಿಖೆಗೆ ಮುಖ್ಯಮಂತ್ರಿ ಆದೇಶಿಸಿದ್ದಾರೆ. ನಮಗೆ ಸಿಐಡಿ ನಿಷ್ಪಕ್ಷಪಾತ ತನಿಖೆ ನಡೆಸುವ ಬಗ್ಗೆ ವಿಶ್ವಾಸ ಇದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಹೇಳಿದ್ದಾರೆ. ಮಂಗಳೂರಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಿಐಡಿ ವರದಿಯ ಆಧಾರದಲ್ಲಿ ಮುಖ್ಯಮಂತ್ರಿಗಳು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ ಎಂದು ಪ್ರತಿಕ್ರಿಯಿಸಿದರು. ಆ ಸಿ.ಡಿ.ಯಲ್ಲಿ ಇರುವುದು ನಾನಲ್ಲ ಎಂದು ಮೇಟಿ ಹೇಳಿದ್ದಾರೆ. ತನಿಖಾ ವರದಿ […]

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬೋಳ ಚಿತ್ತರಂಜನ್ ದಾಸ್ ಶೆಟ್ಟಿ ನಿಧನ

Monday, August 8th, 2016
Bola-Chittaranjan-Das-Shetty

ಮಂಗಳೂರು: ಖ್ಯಾತ ಸಾಹಿತಿ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬೋಳ ಚಿತ್ತರಂಜನ್ ದಾಸ್ ಶೆಟ್ಟಿ (72) ಹೃದಯಾಘಾತದಿಂದ ಭಾನುವಾರ ಸಂಜೆ ನಿಧನರಾಗಿದ್ದಾರೆ. ಅವರ ಹಠಾತ್ ನಿಧನ ಆತ್ಮೀಯ ಬಳಗಕ್ಕೆ ಆಘಾತವುಂಟು ಮಾಡಿದೆ. ಉಡುಪಿ ಜಿಲ್ಲೆಯ ಕಾರ್ಕಳದ ಬೋಳ ಗ್ರಾಮದಲ್ಲಿ ಜನಿಸಿದ ಚಿತ್ತರಂಜನ್ ದಾಸ್ ಶೆಟ್ಟಿ 1973ರಲ್ಲಿ ‘ಪೊಣ್ಣು ಮಣ್ಣು ಬೊಂಬೆ’ ಎಂಬ ತುಳು ನಾಟಕ ರಚಿಸುವ ಮೂಲಕ ಸಾಹಿತ್ಯ ಲೋಕದಲ್ಲಿ ಹೊಸ ಹೆಜ್ಜೆ ಮುಡಿಸಿದ್ದರು. 1983ರಲ್ಲಿ ತುಳುನಾಡಿನ ವಿಶಿಷ್ಟ ಕ್ರೀಡೆ ‘ಕಂಬುಲ’ದ ಕುರಿತು ಪ್ರಬಂಧವನ್ನು ರಚಿಸುವ ಮೂಲಕ […]

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರೋ. ಎಂ.ಬಿ ಪುರಾಣಿಕರಿಗೆ ಅಭಿನಂದನಾ ಸಮಾರಂಭ

Thursday, November 25th, 2010
ಪ್ರೋ. ಎಂ.ಬಿ ಪುರಾಣಿಕ ಅಭಿನಂದನಾ ಸಮಾರಂಭ

ಮಂಗಳೂರು : ಶಾರದಾ ಸಮೂಹ ಸಂಸ್ಥೆಗಳ ಆಡಳಿತ ಮಂಡಳಿ, ಅಧ್ಯಾಪಕ ವೃಂದ ಮತ್ತು ಅಧ್ಯಾಪಕೇತರ ವೃಂದ ಹಾಗೂ ನಗರದ ಹಲವು ಗಣ್ಯರಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶಾರದಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಪ್ರೋ. ಎಂ.ಬಿ ಪುರಾಣಿಕರಿಗೆ ಮತ್ತು ಅವರ ಧರ್ಮ ಪತ್ನಿ ಸುನಂದಾ ಪುರಾಣಿಕರಿಗೆ ಅಭಿನಂದನಾ ಸಮಾರಂಭ ಇಂದು ಸಂಜೆ ಶಾರದಾ ವಿದ್ಯಾಲಯ ಕೊಡಿಯಾಲ್ ಬೈಲು ಇಲ್ಲಿ ನಡೆಯಿತು. ಸಮಾರಂಭದಲ್ಲಿ ಆಶೀರ್ವಚನ ಮಾಡಿದ ಪೇಜಾವರ ಅಧೋಕ್ಷಜ ಮಠದ ಶ್ರೀ ವಿಶ್ವೇಶತೀರ್ಥ ಶ್ರೀ ಪಾದಂಗಳವರು ಮಾತನಾಡಿ ಸರಸ್ವತಿಯ […]