ಬೈಕ್ ಮತ್ತು ರಿಕ್ಷಾ ನಡುವೆ ಭೀಕರ ಅಪಘಾತ ವಿದ್ಯಾರ್ಥಿ ಮೃತ್ಯು

Friday, February 5th, 2021
Abhinav

ಪುತ್ತೂರು: ಕಾಲೇಜ್ ವಿದ್ಯಾರ್ಥಿಯೊಬ್ಬ ಬೈಕ್ ಮತ್ತು ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟ ಘಟನೆ ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಮುರ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಬೈಕ್ ಚಲಾಯಿಸುತ್ತಿದ್ದ ಪುತ್ತೂರು ತಾಲೂಕಿನ ಬನ್ನೂರು ನಿವಾಸಿ ಅಭಿನವ್(23) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ಅಭಿನವ್ ಅವರು ಸುಳ್ಯ ಕೆ.ವಿ.ಜಿ ಕಾಲೇಜ್ ವಿದ್ಯಾರ್ಥಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಪುತ್ತೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.    

ಸಾಲೆತ್ತೂರಿನಲ್ಲಿ ತಲೆ ಎತ್ತುತ್ತಿರುವ ಅಕ್ರಮ ಕಟ್ಟಡ

Monday, November 16th, 2020
salettur

ವಿಟ್ಲ: ರಾಜ್ಯ ಹೆದ್ದಾರಿ ಬದಿಯಲ್ಲಿ ಅಕ್ರಮ ಕಟ್ಟಡ ಕಾಮಗಾರಿ ನಡೆಯುತ್ತಿದ್ದರೂ ಕಂದಾಯ ಮತ್ತು ಲೋಕೋಪಯೋಗಿ ಇಲಾಖೆ ಮೌನ ವಹಿಸುವ ಮೂಲಕ ಜಮೀನು ನುಂಗಣ್ಣರಿಗೆ ಸಾಥ್ ನೀಡುತ್ತಿದೆ. ರಾಜ್ಯ ಹೆದ್ದಾರಿಯ ಸಾಲೆತ್ತೂರು-ವಿಟ್ಲ ಸಂಪರ್ಕ ರಸ್ತೆಯ ತಾಮರಾಜೆ ಮಸೀದಿ ಎದುರಲ್ಲಿ ರಸ್ತೆ ಅಂಚಿನಲ್ಲೇ ಅಕ್ರಮ ಕಟ್ಟಡ ನಿರ್ಮಾಣವಾಗುತ್ತಿದೆ. ವರ್ಷದ ಹಿಂದೆಯೇ ಕೊಳ್ನಾಡು ಮತ್ತು ವಿಟ್ಲ ಪಡ್ನೂರು ಗ್ರಾಮಗಳಲ್ಲಿ ನಡೆಯುತ್ತಿರುವ ಅಕ್ರಮಗಳ ವಿರುದ್ಧ ಸಾರ್ವಜನಿಕ ಸೇವಾ ಸಂಸ್ಥೆಯೊಂದು ಸ್ಥಳೀಯ ಕಂದಾಯ ಅಧಿಕಾರಿಗಳಿಂದ ಜಿಲ್ಲಾಧಿಕಾರಿ ತನಕ ವಿವರವಾದ ದೂರು ನೀಡಿತ್ತು. ಆ ಸಂದರ್ಭ […]

ಸುರಿಯುತ್ತಿರುವ ಭಾರೀ ಮಳೆಗೆ ಒಮ್ನಿ ಕಾರಿನ ಮೇಲೆ ಮುರಿದು ಬಿದ್ದ ಮರ

Saturday, September 12th, 2020
omni car

ಕಡಬ :  ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯ ಕೊಯಿಲ ಸಮೀಪದ ನೀರಾಜೆ ಎಂಬಲ್ಲಿ ಚಲಿಸುತ್ತಿದ್ದ ಒಮ್ನಿ ಕಾರಿನ ಮೇಲೆ ಮರ ಮುರಿದು ಬಿದ್ದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡ ಘಟನೆ ನಡೆದಿದ್ದು, ಚಾಲಕ ಅಪಾಯದಿಂದ ಪಾರಾಗಿದ್ದಾನೆ. ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಕೊಯಿಲ ನೀರಾಜೆ ಸಮೀಪ ರಸ್ತೆ ಬದಿಯಲ್ಲಿದ್ದ ಹಲಸಿನ ಮರವೊಂದು ಮುರಿದುಬಿದ್ದಿದೆ. ಕೊಯಿಲದಿಂದ ಆತೂರಿಗೆ ಯೋಗೀಶ್ ಎಂಬ‌ುವರು ಕಾರು ಚಲಾಯಿಸಿಕೊಂಡು ಹೋಗುತ್ತಿದ್ದಾಗ ಕಾರಿನ ಮೇಲೆ ಮರ ಮುರಿದು ಬಿದ್ದಿದೆ. ಮರ ರಸ್ತೆಗೆ ಮುರಿದು ಬಿದ್ದ ಪರಿಣಾಮ ಸುಮಾರು ಅರ್ಧತಾಸು […]

ಬೆಳ್ತಂಗಡಿ ಬಳಿ ಟ್ಯಾಂಕರ್‌‌ನಿಂದ ಗ್ಯಾಸ್ ಸೋರಿಕೆ…ಹೆದ್ದಾರಿ ಸಂಚಾರ, ವಿದ್ಯುತ್‌ ವ್ಯತ್ಯಯ

Friday, March 9th, 2018
tanker

ಮಂಗಳೂರು: ಗ್ಯಾಸ್ ಟ್ಯಾಂಕರ್‌‌ನಿಂದ ಗ್ಯಾಸ್ ಸೋರಿಕೆಯಾದ ಘಟನೆ ಬೆಳ್ತಂಗಡಿ ತಾಲೂಕಿನ ಸಬರಬೈಲು ಎಂಬಲ್ಲಿ ನಡೆದಿದೆ. ಗ್ಯಾಸ್ ಸೋರಿಕೆಯಾದ ಹಿನ್ನೆಲೆಯಲ್ಲಿ ಮಂಗಳೂರು-ಧರ್ಮಸ್ಥಳ ರಾಜ್ಯ ಹೆದ್ದಾರಿಯಲ್ಲಿ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಯಿತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದವರು ಗ್ಯಾಸ್ ಸೋರಿಕೆ ನಿಯಂತ್ರಣಕ್ಕೆ ಕಾರ್ಯಾಚರಣೆ ನಡೆಸಿದರು. ಅಲ್ಲದೆ ಎಂಆರ್‌‌‌ಪಿಎಲ್‌‌ ತಜ್ಞರು ಸ್ಥಳಕ್ಕೆ ಭೇಟಿ ನೀಡಿದ್ದರು. ಮುನ್ನೆಚ್ಚರಿಕಾ ಕ್ರಮವಾಗಿ ಗ್ರಾಮದಲ್ಲಿ ವಿದ್ಯುತ್‌ ಕಡಿತಗೊಳಿಸಲಾಗಿದೆ.