ರಾಮ ಮಂದಿರ ಕರಸೇವಕನನ್ನು 31 ವರ್ಷಗಳ ಬಳಿಕ ಬಂಧಿಸಿದ ಪೊಲೀಸರು, ಬಿಜೆಪಿಯಿಂದ ಪ್ರತಿಭಟನೆ

Wednesday, January 3rd, 2024
ರಾಮ ಮಂದಿರ ಕರಸೇವಕನನ್ನು 31 ವರ್ಷಗಳ ಬಳಿಕ ಬಂಧಿಸಿದ ಪೊಲೀಸರು, ಬಿಜೆಪಿಯಿಂದ ಪ್ರತಿಭಟನೆ

ಮಂಗಳೂರು : ಹುಬ್ಬಳ್ಳಿಯಲ್ಲಿ ಮೂರು ದಶಕಗಳ ಹಿಂದೆ ರಾಮ ಮಂದಿರ ಹೋರಾಟದಲ್ಲಿ ಭಾಗಿಯಾಗಿದ್ದ 75ರ ಹರೆಯದ ಕರಸೇವಕ ಶ್ರೀಕಾಂತ್ ಪೂಜಾರಿಯನ್ನು 31 ವರ್ಷಗಳ ಬಳಿಕ ಬಂಧಿಸಿರುವುದನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಬುಧವಾರ ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಸಮಾಜದಲ್ಲಿ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿದೆ. ಮೂರು […]

ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅಯೋದ್ಯೆ ರಾಮ ಮಂದಿರ ಭೇಟಿ

Tuesday, November 3rd, 2020
Pejavar Seer

ಉಡುಪಿ :  ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ  ರವಿವಾರ ಟ್ರಸ್ಟ್ ಸಭೆಯಲ್ಲಿ ಭಾಗವಹಿಸಿದ ನಂತರ ಸೋಮವಾರ ಅಯೋಧ್ಯೆಯಲ್ಲಿ ರಾಮಲಲ್ಲಾನ ದರ್ಶನ ಪಡೆದ ರಲ್ಲದೇ ಬಳಿಕ ರಾಮಮಂದಿರ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿ ಭರದಿಂದ ನಡೆಯುತ್ತಿರುವ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿದರು. ಅಯೋದ್ಯೆ ರಾಮ ಮಂದಿರ ತೀರ್ಥಕ್ಷೇತ್ರ ಟ್ರಸ್ಟ್ ಕಾರ್ಯಾಲಯಕ್ಕೂ ಶ್ರೀಗಳು ಭೇಟಿ ನೀಡಿದರು. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ವಿಶ್ವಸ್ಥರೂ ಆಗಿರುವ ಅವರು ಇದೀಗ ಅಯೋಧ್ಯೆಗೆ ತೆರಳಿದ್ದು, ರವಿವಾರ ಟ್ರಸ್ಟ್ ಸಭೆಯಲ್ಲಿ ಭಾಗವಹಿಸಿದ ನಂತರ ಜನ್ಮಭೂಮಿಗೆ […]

ಅಯೋಧ್ಯೆ ರಾಮ ಮಂದಿರಕ್ಕೆ ಪ್ರದಾನಮಂತ್ರಿ ನರೇಂದ್ರ ಮೋದಿಯವರು ಹಸ್ತದಿಂದ ಭೂಮಿಪೂಜೆ

Wednesday, August 5th, 2020
Ayodhya

ಅಯೋಧ್ಯೆ: ಕೋಟ್ಯಾಂತರ ಭಾರತೀಯರ ಕನಸಾಗಿರುವ ಅಯೋಧ್ಯೆ ರಾಮ ಮಂದಿರ ಬುಧವಾರ ಮಧ್ಯಾಹ್ನ 12.44ರ ಶುಭ ಮುಹೂರ್ತದಲ್ಲಿ ಪ್ರದಾನಮಂತ್ರಿ ನರೇಂದ್ರ ಮೋದಿಯವರು ಹಸ್ತದಿಂದ ಭೂಮಿಪೂಜೆ ನೆರವೇರಲಿದೆ. ಇದರೊಂದಿಗೆ ಪ್ರಧಾನಿಯವರು ತಾವು ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ರಾಮಮಂದಿರ ನಿರ್ಮಾಣ ವಾಗ್ಧಾನವನ್ನು ಸಕಾರಗೊಳಿಸಲಿದ್ದಾರೆ. ಮಧ್ಯಾಹ್ನ 12.44.08 ಗಂಟೆಯಿಂದ 12.44.40 ಗಂಟೆಯ 32 ಸೆಕೆಂಡುಗಳ ಶುಭಮುಹೂರ್ತ ನಿಗದಿಯಾಗಿದ್ದು, ಇಷ್ಟು ಅವಧಿಯಲ್ಲಿಯೇ ಮೋದಿಯವರು ಬೆಳ್ಳಿ ಇಟ್ಟಿಗೆ ಇರಿಸಿ ಸಾಂಕೇತಿಕ ಭೂಮಿ ಪೂಜೆ ನೆರವೇರಿಸಲಿದ್ದಾರೆ. ಈ ಬೆಳ್ಳಿ ಇಟ್ಟಿಗೆ ಸಾಂಕೇತಿಕವಾದ ಕಾರಣ ಬಳಿಕ, ಅದನ್ನು ಭೂಮಿಪೂಜಾ […]

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಟ್ರಸ್ಟ್​ ರಚನೆ : ಪ್ರಧಾನಮಂತ್ರಿ ನರೇಂದ್ರ ಮೋದಿ

Wednesday, February 5th, 2020
modi

ನವದೆಹಲಿ : ಅಯೋಧ್ಯೆಯ ವಿವಾದಿತ ಜಾಗವನ್ನು ರಾಮ್ಲಲ್ಲಾಗೆ ನೀಡಿ ಕಳೆದ ವರ್ಷ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ಪ್ರಕಟಿಸಿತ್ತು. ಈ ಮೂಲಕ ಶತಮಾನಗಳ ಹಿಂದಿನ ಬಾಬ್ರಿ ಮಸೀದಿ- ರಾಮಜನ್ಮಭೂಮಿ ವಿವಾದಕ್ಕೆ ಕಾನೂನಾತ್ಮಕವಾಗಿ ತೆರೆಬಿದ್ದಿತ್ತು. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಲು ಟ್ರಸ್ಟ್ ರಚಿಸುವುದಾಗಿ ಸಂಸತ್ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಇಂದು ಈ ಬಗ್ಗೆ ಸಂಸತ್ ಅಧಿವೇಶನದಲ್ಲಿ ಘೋಷಣೆ ಮಾಡಿರುವ ಪ್ರಧಾನಿ ಮೋದಿ, ‘ ಅಯೋಧ್ಯೆ ಟ್ರಸ್ಟ್ ರಚಿಸುವ ಬಗ್ಗೆ ಇಂದು ಬೆಳಗ್ಗೆ ನಡೆದ ಸಂಪುಟ ಸಭೆಯಲ್ಲಿ ನಾವೆಲ್ಲರೂ […]

ರಾಮ ಮಂದಿರ ಕಟ್ಟಿದರೆ ಮುಂದೆ ಹೋರಾಟ ಖಚಿತ: ಆನಂದ ಮಿತ್ತಬೈಲು

Wednesday, December 5th, 2018
protest

ಮಂಗಳೂರು: ಸಂವಿಧಾನಕ್ಕೆ ವಿರುದ್ಧವಾಗಿ ಇತಿಹಾಸ, ದಾಖಲೆಗಳೇ ಇಲ್ಲದೆ ಅಯೋಧ್ಯೆಯಲ್ಲಿ ರಾಮ ಮಂದಿರ ಕಟ್ಟಿದರೆ ಮುಂದಿನ ದಿನಗಳಲ್ಲಿ ಬಹುದೊಡ್ಡ ಕೊರೆಗಾಂವ್ನಂತಹ ಹೋರಾಟ ಖಂಡಿತವಾಗಿ ನಡೆಯಲಿದೆ ಎಂದು ಆರ್ಎಸ್ಎಸ್ನವರು ತಿಳಿಯಬೇಕಾಗಿದೆ ಎಂದು ದಲಿತ ಸಂಘಟನೆಯ ಮುಖಂಡ ಆನಂದ ಮಿತ್ತಬೈಲು ಹೇಳಿದರು. ಎಸ್ಡಿಪಿಐ ವತಿಯಿಂದ ನಡೆದ ಬಾಬರಿ ಮಸೀದ್ ಮರಳಿ ಪಡೆಯೋಣ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ಸ್ಥಾಪನೆ ಮಾಡಿಯೇ ಸಿದ್ಧ ಎಂದು ಈ ದೇಶದ ಗೌರವಾನ್ವಿತ ಮಾಜಿ ಮಂತ್ರಿಯಾಗಿದ್ದಂತಹ ಜನಾರ್ದನ ಪೂಜಾರಿಯವರು ಹೇಳಿದ ಮಾತನ್ನು ಮೊನ್ನೆ […]

ರಾಮ ಮಂದಿರ ನಿರ್ಮಾಣ ಯಾರಿಂದಲೂ ತಡೆಯಲು ಸಾಧ್ಯವಿಲ್ಲ: ಜನಾರ್ದನ ಪೂಜಾರಿ

Monday, December 3rd, 2018
janardhan-poojary

ಮಂಗಳೂರು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ರಾಮ ಮಂದಿರ ನಿರ್ಮಾಣ ಆಗಿಯೇ ಆಗುತ್ತದೆ. ಅದನ್ನು ಯಾರೂ ತಡೆಯಲು ಸಾಧ್ಯವಿಲ್ಲವೆಂದು ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ್ ಪೂಜಾರಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣಕ್ಕೆ ಯಾರೂ ವಿರೋಧ ಮಾಡಬಾರದು ಎಂದರು. ರಾಮಮಂದಿರ ನಿರ್ಮಾಣವಾಗುವುದನ್ನು ಮುಸ್ಲಿಮರು, ಕ್ರಿಶ್ಚಿಯನ್ನರು ಬಯಸುತ್ತಾರೆ. ಸುಮ್ಮನೆ ಯಾವುದೇ ವಿವಾದವನ್ನು ಸ್ಪಷ್ಟಿಸುವುದು ಬೇಡ ಎಂದು ಹಿರಿಯ ನಾಯಕ ತಿಳಿಸಿದ್ರು.

ಚೀನಾದ ವಸ್ತುಗಳನ್ನು ಮತ್ತು ಚೀನಾ ವಸ್ತುಗಳನ್ನು ಖರೀದಿಸುವವರನ್ನು ಭಾರತೀಯರು ಬಹಿಷ್ಕರಿಸಬೇಕು: ರಾಜೇಶ್ ಪಾಂಡೆ

Monday, October 24th, 2016
V H P

ಮಂಗಳೂರು : ಬಹುತೇಕ ಮುಸ್ಲಿಂರು ಮೂಲತ: ಹಿಂದುಗಳೇ ಆಗಿದ್ದು, ಬಲವಂತದ ಮೂಲಕ ಮಾನಪ್ರಾಣ ರಕ್ಷಣೆಗೆ ಹೆದರಿ ಮತಾಂತರಗೊಂಡ ಹೇಡಿಗಳಾಗಿದ್ದು ಅಂತವರನ್ನು ಮನಪರಿವರ್ತಿಸುವ ಕಾರ್ಯವಾಗಬೇಕು ಎಂದು ಬಜರಂಗದಳದ ರಾಷ್ಟ್ರೀಯ ಸಂಯೋಜಕ್ ರಾಜೇಶ್ ಪಾಂಡೆ ಹೇಳಿದ್ದಾರೆ. ಶನಿವಾರ ನಗರದ ಸಂಘನಿಕೇತನದಲ್ಲಿ ಬಜರಂಗದಳ ಘಟಕ ಸಂಯೋಜಕರ ಪ್ರಾಂತ ಅಧಿವೇಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮುಸಲ್ಮಾನ ಆಕ್ರಮಣಕಾರರ ಎದುರು ಪಲಾಯನ ಮಾಡಿದ ಹೇಡಿ ಹಿಂದುಗಳಾಗಿದ್ದಾರೆ. ಅವರ ಮನಪರಿವರ್ತನೆ ಮೂಲಕ ಅವರನ್ನು ವಾಪಸ್ ಹಿಂದು ಧರ್ಮಕ್ಕೆ ಕರೆ ತರುವ ಪ್ರಯತ್ನವಾಗಬೇಕು ಎಂದು ಕರೆ ನೀಡಿದರು. ಭಯೋತ್ಪಾದನೆಗೆ […]