ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ, ಸಾಹಿತ್ಯ ಸಮ್ಮೇಳನದ 89 ನೆ ಅಧಿವೇಶನ

Friday, December 3rd, 2021
Dharmasthala-Deepothsava

ಉಜಿರೆ: ದೀಪ ಬೆಳಕಿನ ಸಂಕೇತ. ಲಕ್ಷದೀಪೋತ್ಸವ ಕೇವಲ ಉತ್ಸವ ಅಲ್ಲ. ಶಿಕ್ಷಣ, ಮಾಹಿತಿ ಮತ್ತು ಜಾಗೃತಿಯೊಂದಿಗೆ ಭಕ್ತಿ ಮತ್ತು ಶರಣಾಗತಿ ಮೂಲಕ ದೇವರಿಗೆ ಕೃತಜ್ಞತೆ ಸಲ್ಲಿಸುವ ಉತ್ಸವವಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್ ಹೇಳಿದರು. ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ಸಂದರ್ಭದಲ್ಲಿ ಆಯೋಜಿಸಿದ ಸಾಹಿತ್ಯ ಸಮ್ಮೇಳನದ 89ನೆ ಅಧಿವೇಶನವನ್ನು ಉದ್ಘಾಟಿಸಿ ಮಾತನಾಡಿದರು. ದೇವರಿಗೆ ದೀಪ ಹಚ್ಚುವುದು ಭಾರತೀಯ ಸಂಸ್ಕೃತಿಯ ಲಕ್ಷಣವಾಗಿದೆ. ಲಕ್ಷದೀಪೋತ್ಸವ ಸಂಸ್ಕೃತಿ ಉಳಿಸುವ, ಅಜ್ಞಾನದ […]

ಧರ್ಮಸ್ಥಳ ಲಕ್ಷದೀಪೋತ್ಸವ : ಉಜಿರೆಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ

Monday, November 29th, 2021
Dharmasthala-Deepothsava1

ಉಜಿರೆ: ತ್ಯಾಗ ಮತ್ತು ಸೇವೆಯ ಮೂಲಕ ಮಾಡುವ ಸತ್ಕಾರ್ಯಗಳಿಂದ ಪುಣ್ಯ ಸಂಚಯದೊಂದಿಗೆ ಶಾಂತಿ, ಸಂತೋಷ ಹಾಗೂ ನೆಮ್ಮದಿ ಸಿಗುತ್ತದೆ. ಜನರ ಪ್ರೀತಿ-ವಿಶ್ವಾಸವೇ ಧರ್ಮಸ್ಥಳದ ಅಮೂಲ್ಯ ಆಸ್ತಿಯಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಲಕ್ಷದೀಪೋತ್ಸವದ ಪ್ರಥಮ ದಿನವಾದ ಕಾರ್ತಿಕ ಸೋಮವಾರ ಉಜಿರೆಯಿಂದ ಧರ್ಮಸ್ಥಳಕ್ಕೆ ಬಂದ ಸುಮಾರು ಹತ್ತು ಸಾವಿರಕ್ಕೂ ಮಿಕ್ಕಿದ ಪಾದಯಾತ್ರಿಗಳನ್ನು ಅಮೃತವರ್ಷಿಣಿ ಸಭಾ ಭವನದಲ್ಲಿ ಉದ್ದೇಶಿಸಿ ಅವರು ಮಾತನಾಡಿದರು. ಬದುಕಿನಲ್ಲಿ ಸಿಗುವ ಅನುಭವದಿಂದ ಪ್ರಗತಿ ಸಾಧ್ಯವಾಗುತ್ತದೆ. ತಾನು ಧರ್ಮಸ್ಥಳದ ವತಿಯಿಂದ ಸದಾ ಲೋಕ […]

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ – ನವೆಂಬರ್ 29 ರಿಂದ ಡಿಸೆಂಬರ್ 3, 2021

Sunday, November 28th, 2021
Dharmasthala-Deepothsava

ಸಾವಿರಕಂಬದ ಬಸದಿಯಲ್ಲಿ ಕೊರೊನಾ ನಿವಾರಣೆಗೆ ಲಕ್ಷದೀಪೋತ್ಸವ

Wednesday, January 27th, 2021
lakshadeepotsava

ಮೂಡುಬಿದಿರೆ: ಮೂಡುಬಿದಿರೆ ತಾಲೂಕಿನ ಸಾವಿರಕಂಬದ ಬಸದಿಯಲ್ಲಿ ಕೊರೊನಾ ನಿವಾರಣೆಯಾಗಬೇಕೆಂಬ ಉದ್ದೇಶದಿಂದ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಅವರು ಸಂಕಲ್ಪಿಸಿದ ಲಕ್ಷದೀಪೋತ್ಸವ ಹರಕೆಯನ್ನು ಮಂಗಳವಾರ ರಾತ್ರಿ ಜರುಗಿಸಲಾಯಿತು. ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಆಶೀರ್ವಚನ ನೀಡಿ, ದೇಶದಲ್ಲಿ ಕೊರೊನಾ ವ್ಯಾಪಿಸಿದ ಸಂದರ್ಭದಲ್ಲಿ ಜನರು ಸಂಕಷ್ಟಕ್ಕೀಡಾಗಿದ್ದು, ಸಂಪತ್ತು ನಷ್ಟದ ಜೊತೆಗೆ ಉದ್ಯೋಗದ ಅಸ್ಥಿರತೆ ಕಾಡಿತ್ತು. ಹಿಂದೆ ರಾಜರು ಅನಾರೋಗ್ಯಕ್ಕೀಡಾದಾಗಲೂ ಸಾವಿರ ಕಂಬದ ಬಸದಿಯ ಚಂದ್ರನಾಥ ಸ್ವಾಮಿಯಲ್ಲಿಯೂ ಪ್ರಾರ್ಥನೆ ಸಲ್ಲಿಸುತ್ತಿದ್ದರು. ಈಗ ಕೊರೊನಾಮುಕ್ತವಾಗಲು ಇಲ್ಲಿ ಲಕ್ಷದೀಪೋತ್ಸವದ ಸಂಕಲ್ಪ ನಡೆಸಲಾಗಿತ್ತು. […]

ಧರ್ಮಸ್ಥಳ ಲಕ್ಷದೀಪೋತ್ಸವ: ಸಾಹಿತ್ಯ ಸಮ್ಮೇಳನದ 88 ನೆ ಅಧೀವೇಶನ

Tuesday, December 15th, 2020
dharmasthala

ಉಜಿರೆ: ಸಾಹಿತ್ಯ ಸಮಾಜದ ಕನ್ನಡಿಯಂತಿದ್ದು ಸಮಾಜದ ರಕ್ಷಣೆ ಮತ್ತು ಪೋಷಣೆಗೆ ಸಾಹಿತ್ಯ ಅಗತ್ಯ  ಎಂದು ಬೆಂಗಳೂರಿನ ಹಿರಿಯ ವಿದ್ವಾಂಸ ಡಾ. ಎಸ್. ರಂಗನಾಥ್ ಹೇಳಿದರು. ಅವರು ಸೋಮವಾರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭ ಆಯೋಜಿಸಿದ ಸಾಹಿತ್ಯ ಸಮ್ಮೇಳನದ 88ನೆ ಅಧಿವೇಶನವನ್ನು ಉದ್ಘಾಟಿಸಿ ಮಾತನಾಡಿದರು. ಸಾಹಿತ್ಯಕ್ಕೆ ಔಷಧೀಯ ಗುಣವೂ ಇದ್ದು ಜೀವನ ಮೌಲ್ಯಗಳ ಆಕರವಾಗಿದೆ. ಸಾಹಿತ್ಯ, ಸಂಗೀತ ಮತ್ತು ಕಲೆಯ ಸ್ಪರ್ಶ ಇಲ್ಲದ ಮನುಷ್ಯ ಕೋಡು, ಬಾಲವಿಲ್ಲದ ಪ್ರಾಣಿಯಂತೆ ಆಗುತ್ತಾನೆ. ಸಾಹಿತ್ಯದಿಂದ ಸಮಾಜ ಸುಧಾರಣೆಯೊಂದಿಗೆ ಮಾನವೀಯ ಮೌಲ್ಯಗಳ ಉದ್ದೀಪನ ಹಾಗೂ […]

ಲಕ್ಷದೀಪೋತ್ಸವದಲ್ಲಿ ಲಲಿತಮ್ಮನ ಅಂಗಡಿಯಲ್ಲಿ ಗಮನಸೆಳೆದ ನೆಲ್ಲಿಕಾಯಿ, ಮಾವಿನ ಮಿಡಿ, ಪೇರಳೆ

Tuesday, November 26th, 2019
lalitamma

ಧರ್ಮಸ್ಥಳ  : ಲಕ್ಷದೀಪೋತ್ಸವ ಸಂದರ್ಭದಲ್ಲಿಅರುವತ್ತು ವರ್ಷದ ಮಹಿಳೆಯೊಬ್ಬರು ಸುಲಲಿತ ವ್ಯವಹಾರ ನಡೆಸಿ ಎಲ್ಲರ ಗಮನ ಸೆಳೆದಿದ್ದಾರೆ. ಜೀವನೋಪಾಯಕ್ಕಾಗಿ ಧರ್ಮಸ್ಥಳದಲ್ಲಿ ನಡೆಯುವ ಲಕ್ಷದೀಪೋತ್ಸವ ಸಂದರ್ಭ ವ್ಯಾಪಾರದ ಪುಟ್ಟ ಅಂಗಡಿಯನ್ನು ತೆರೆದವರು ಲಲಿತಮ್ಮ. ನೆಲ್ಲಿಕಾಯಿ, ಮಾವಿನ ಮಿಡಿ, ಪೇರಳೆ ಮೊದಲಾದ ಸತ್ವಪೂರ್ಣ ಗ್ರಾಮೀಣ ಪೌಷ್ಠಿಕ ಆಹಾರಗಳು ಇವರಲ್ಲಿ ಮಿತದರದಲ್ಲಿ ಸಿಗುತ್ತವೆ. 25  ವರ್ಷಗಳ ಹಿಂದೆ ಇವರ ಗಂಡ ನಿಧನರಾದ ಬಳಿಕ ಕಾಯಕವೇ ಕೈಲಾಸ ಎಂದು ನಂಬಿ ಪುಟ್ಟಅಂಗಡಿ ಪ್ರಾರಂಭಿಸಿದ ಇವರು ಪ್ರಾಮಾಣಿಕ ವ್ಯವಹಾರ ನಡೆಸುತ್ತಾರೆ. ಅತಿಯಾದ ಲಾಭಗಳಿಸುವ ಹಂಬಲ ಈಕೆಗಿಲ್ಲ. ಎಲ್ಲಾಖರ್ಚು, […]

ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ, ಸರ್ವಧರ್ಮ ಸಮ್ಮೇಳನ ಉದ್ಘಾಟನೆ

Tuesday, November 26th, 2019
laksha-deepotsava

ಧರ್ಮಸ್ಥಳ :ಒಳ್ಳೆಯವರಾಗಿ ಮತ್ತು ಒಳ್ಳೆಯ ಕೆಲಸವನ್ನೇ ಮಾಡಿ – ಇದೇಜೀವನ ಸಿದ್ಧಾಂತವಾಗಬೇಕು ಎಂದು ನಿಕಟಪೂರ್ವ ಲೋಕಸಭಾಅಧ್ಯಕ್ಷರಾದ ಸುಮಿತ್ರಾ ಮಹಾಜನ್ ಹೇಳಿದರು. ಅವರು ಸೋಮವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ಆಯೋಜಿಸಿದ ಸರ್ವಧರ್ಮ ಸಮ್ಮೇಳನದ ೮೭ನೇ ಅಧಿವೇಶನವನ್ನು ಉದ್ಘಾಟಿಸಿ ಮಾತನಾಡಿದರು. ನಾವು ಒಳ್ಳೆಯ ವರ್ತನೆಯನ್ನು ಹೊಂದಿದಾಗ ಮಾತ್ರಇತರರೂ ಒಳ್ಳೆಯ ವ್ಯಕ್ತಿಗಳಾಗಿ ರೂಪಿಗೊಳ್ಳಲು ನಾವು ಆದರ್ಶ ವ್ಯಕ್ತಿಗಳಾಗಿ ನಮ್ಮ ವರ್ತನೆಯಿಂದ ಮಾರ್ಗದರ್ಶನ ನೀಡಲು ಸಾಧ್ಯವಾಗುತ್ತದೆ.ಧರ್ಮ ಮತ್ತುಕರ್ತವ್ಯದಲ್ಲಿ ನಿವೃತ್ತಿಎಂಬುದುಇಲ್ಲ. ಸತ್ಯ, ಪ್ರಾಮಾಣಿಕತೆ ಮತ್ತು ಸದಾಚಾರದಿಂದ ಮಾನವನೇ ಮಾಧವನಾಗಬಲ್ಲ ಎಂದುಅವರು ಹೇಳಿದರು. […]

ಎಲ್ಲೆಲ್ಲೂಧರ್ಮ, ನ್ಯಾಯ, ಶಾಂತಿ-ನೆಮ್ಮದಿ ನೆಲೆಸಬೇಕು : ಡಿ. ವೀರೇಂದ್ರ ಹೆಗ್ಗಡೆ

Saturday, November 23rd, 2019
Dharmasthal

ಧರ್ಮಸ್ಥಳ :  ಅನ್ನದಾನ, ಔಷಧಿದಾನ, ವಿದ್ಯಾದಾನ ಮತ್ತುಅಭಯದಾನ ಎಂಬ ಚತುರ್ವಿಧ ದಾನಗಳು ನಿತ್ಯೋತ್ಸವವಾಗಿದ್ದು, ನೊಂದು ಬಂದವರಿಗೆ ಸಾಂತ್ವನ ಹೇಳಿ ಧೈರ್ಯ ಮತ್ತುಆತ್ಮವಿಶ್ವಾಸ ಮೂಡಿಸುವ ಅಭಯದಾನ ಅತ್ಯಂತ ಶ್ರೇಷ್ಠ ಹಾಗೂ ವಿಶಿಷ್ಠ ದಾನವಾಗಿದೆ. ಶ್ರೀ ಮಂಜುನಾಥ ಸ್ವಾಮಿ ಧರ್ಮಾಧಿಕಾರಿಗಳಾದ ಹೆಗ್ಗಡೆಯವರಿಗೆ ನೀಡಿದ ವಿಶೇಷ ಅನುಗ್ರಹ ಇದಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾ ಭವನದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿಉಜಿರೆಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಬಂದ ಹತ್ತು ಸಾವಿರಕ್ಕೂ ಮಿಕ್ಕಿ ಭಕ್ತರನ್ನು ಉದ್ದೇಶಿಸಿ […]

ಲಕ್ಷದೀಪೋತ್ಸವಕ್ಕೆ ಸಜ್ಜುಗೊಂಡ ಧರ್ಮಸ್ಥಳ : ಎಲ್ಲೆಲ್ಲಿ ಏನೇನಿದೆ ಈ ವರದಿ ನೋಡಿ

Thursday, November 21st, 2019
ಲಕ್ಷದೀಪೋತ್ಸವಕ್ಕೆ ಸಜ್ಜುಗೊಂಡ ಧರ್ಮಸ್ಥಳ : ಎಲ್ಲೆಲ್ಲಿ ಏನೇನಿದೆ ಈ ವರದಿ ನೋಡಿ

ಧರ್ಮಸ್ಥಳ :  ಕಾರ್ತಿಕ ಮಾಸದಲ್ಲಿ ನಡೆಯುವ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಶುಕ್ರವಾರ ಹೊಸಕಟ್ಟೆ ಉತ್ಸವದೊಂದಿಗೆ ಶುಭಾರಂಭಗೊಳ್ಳುತ್ತದೆ. ದೇವಸ್ಥಾನ, ಬೀಡು, ವಸತಿ ಛತ್ರಗಳು ಹಾಗೂ ಎಲ್ಲಾ ಕಟ್ಟಡಗಳನ್ನು ಆಕರ್ಷಕ ವಿನ್ಯಾಸದ ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿದೆ. ಪ್ರೌಢಶಾಲಾ ವಠಾರದಲ್ಲಿ ರಾಜ್ಯಮಟ್ಟದ ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ. ಮುಖ್ಯ ಪ್ರವೇಶದ್ವಾರದ ಬಳಿ ಕೆ.ಎಸ್.ಆರ್.ಟಿ.ಸಿ. ವಿಶೇಷ ಕೌಂಟರ್, ಪೊಲೀಸ್ ಕೌಂಟರ್ ತೆರೆಯಲಾಗಿದೆ. ಸ್ವಚ್ಛತಾ ಸೇನಾನಿಗಳು ಸ್ವಚ್ಛತೆ ಕಾಪಾಡಲು ವಿಶೇಷ ಶ್ರಮ ವಹಿಸುತ್ತಿದ್ದಾರೆ. ಶುಕ್ರವಾರ ಸಂಜೆ ಉಜಿರೆಯಿಂದ ಧರ್ಮಸ್ಥಳಕ್ಕೆ ಹೊರಡುವ ಪಾದಯಾತ್ರೆಯ ಯಶಸ್ಸಿಗೆ ಸರ್ವರೂ […]

ಧರ್ಮ ಜಾಗೃತಿ ಮತ್ತು ಧರ್ಮದ ಅನುಷ್ಠಾನದಿಂದ ಆರೋಗ್ಯಪೂರ್ಣ ಸಮಾಜ : ವಿದ್ಯಾ ಪ್ರಸನ್ನತೀರ್ಥ ಸ್ವಾಮೀಜಿ

Friday, November 17th, 2017
Deepotsava

ಉಜಿರೆ: ಸಮಾಜದ ಒಳಿತಿಗಾಗಿ ಧರ್ಮದ ಆಚರಣೆಯ ಅವಶ್ಯಕತೆ ಇದೆ. ನಮ್ಮ ಜೀವನದಲ್ಲಿ ಧರ್ಮವನ್ನು ಬಿಟ್ಟು ಬದುಕಲು ಸಾಧ್ಯವಿಲ್ಲ. ಎಲೆಗೂ, ಮರಕ್ಕೂ ಇರುವ ಅವಿನಾಭಾವ ಸಂಬಂಧ ನಮಗೂ ಧರ್ಮಕ್ಕೂ ಇದೆ. ನಮ್ಮಿಂದ ಧರ್ಮ, ಧರ್ಮದಿಂದ ನಾವು ಎಂಬ ಭಾವನೆ ಇದ್ದಾಗ ಧರ್ಮ ಜಾಗೃತಿಯಾಗುತ್ತದೆ. ಧರ್ಮ ಜಾಗೃತಿ ಮತ್ತು ಧರ್ಮದ ಅನುಷ್ಠಾನದಿಂದ ಆರೋಗ್ಯಪೂರ್ಣ ಸಮಾಜ ನಿರ್ಮಾಣ ವಾಗುತ್ತದೆ ಎಂದು ಸುಬ್ರಹ್ಮಣ್ಯ ಮಠದ ವಿದ್ಯಾ ಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು. ಅವರು ಗುರುವಾರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ಆಯೋಜಿಸಲಾದ ಸರ್ವಧರ್ಮ ಸಮ್ಮೇಳನದ ೮೫ನೇ […]