ಧರ್ಮಸ್ಥಳ ಲಕ್ಷ ದೀಪೋತ್ಸವ: ರಾಜ್ಯಪಾಲರಿಂದ 89 ನೆ ಸರ್ವಧರ್ಮ ಸಮ್ಮೇಳನ ಅಧಿವೇಶನ ಉದ್ಘಾಟನೆ

Thursday, December 2nd, 2021
Dharmasthala-Deepothsava4

ಉಜಿರೆ: ತಮ್ಮ ಧರ್ಮದ ಮರ್ಮವನ್ನರಿತು ಇತರ ಧರ್ಮಗಳನ್ನೂ ಗೌರವಿಸಿದಾಗ ಸಾಮಾಜಿಕ ಸಾಮರಸ್ಯದೊಂದಿಗೆ ವಿಶ್ವಶಾಂತಿ ಸಾಧ್ಯವಾಗುತ್ತದೆ ಎಂದು ಗೌರವಾನ್ವಿತ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಹೇಳಿದರು. ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ಸಂದರ್ಭದಲ್ಲಿ ಗುರುವಾರ ಆಯೋಜಿಸಿದ ಸರ್ವಧರ್ಮ ಸಮ್ಮೇಳನದ 89 ನೆ ಅಧಿವೇಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬದುಕು ಮತ್ತು ಬದುಕಲು ಬಿಡು ಎಂಬುದು ಜೈನಧರ್ಮದ ಶ್ರೇಷ್ಠ ತತ್ವವಾಗಿದೆ. ಸತ್ಯ, ಅಹಿಂಸೆ, ತ್ಯಾಗ, ಪರರ ಸೇವೆಯಿಂದ ಜೀವನ ಪಾವನವಾಗುತ್ತದೆ ಎಂದು ಭಗವಾನ್ ಮಹಾವೀರರು ಬೋಧಿಸಿದ್ದಾರೆ. ಸಾಧಿಸಿ ತೋರಿಸಿದ್ದಾರೆ. ಲೋಕಸಭೆಯಲ್ಲಿ ಹಾಗೂ ಸರ್ವೋಚ್ಛ […]

ಜನಾಕರ್ಷಣೆಯ ಕೇಂದ್ರವಾದ ಲಕ್ಷ ದೀಪೋತ್ಸವ ವಸ್ತುಪ್ರದರ್ಶನ

Monday, November 25th, 2019
Laksh-deepotsava

ಧರ್ಮಸ್ಥಳ :  ಲಕ್ಷ ದೀಪೋತ್ಸವ ಸಂದರ್ಭದಲ್ಲಿ ಧರ್ಮಸ್ಥಳದ  ಪ್ರೌಢಶಾಲಾ ಆವರಣದಲ್ಲಿ ಆಯೋಜಿಸಿದ ರಾಜ್ಯ ಮಟ್ಟದ ವಸ್ತುಪ್ರದರ್ಶನ ಮಾಹಿತಿಯಕಣಜವಾಗಿ, ಜನಾಕರ್ಷಣೆಯಕೇಂದ್ರವಾಗಿ ಪ್ರೇಕ್ಷಕರಕಣ್ಮನ ಸೆಳೆಯುತ್ತಿದೆ. ಕೃಷಿ, ವಾಣಿಜ್ಯ, ಗ್ರಾಮೀಣಗುಡಿಕೈಗಾರಿಕೆ, ಕರಕುಶಲ ವಸ್ತುಗಳು, ಪುಸ್ತಕದ ಮಳಿಗೆಗಳು, ಸಿರಿ ಉತ್ಪನ್ನಗಳ ಮಳಿಗೆ.ಬಿ.ಎಸ್.ಎನ್.ಎಲ್. ಮಳಿಗೆಗಳು, ಜೀವ ವಿಮಾ ನಿಗಮ, ನಾಟಿಔಷಧಿ, ತರಕಾರಿ ಬೀಜಗಳು, ಇಳಕಲ್ ಸೀರೆ ಮಳಿಗೆ, ಸಾವಯವ ಕೃಷಿ ಉತ್ಪನ್ನಗಳು- ಪ್ರಮುಖಆಕರ್ಷಣೆಯ ಕೇಂದ್ರಗಳಾಗಿವೆ. ಒಟ್ಟು 197 ಮಳಿಗೆಗಳಿದ್ದು ಗ್ರಾಹಕರು ವಿಶೇಷ ಆಸಕ್ತಿಯಿಂದ ನೋಡಿ, ಚರ್ಚಿಸಿ, ತಮಗಿಷ್ಟವಾದ ವಸ್ತುಗಳನ್ನು ಖರೀದಿಸುತ್ತಿದ್ದಾರೆ. ವಿಶೇಷವಾಗಿ ರೈತರು, ವಿದ್ಯಾರ್ಥಿಗಳು, ಮಹಿಳೆಯರು […]

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವ: ಸರ್ವಧರ್ಮ ಸಮ್ಮೇಳನದ 86ನೇ ಅಧಿವೇಶನ ಉದ್ಘಾಟನೆ

Thursday, December 6th, 2018
dharmastala

ಮಂಗಳೂರು: ದಾನವನ್ನು‌‌ ಯಾವತ್ತೂ ಪರಿಶುದ್ಧ ಮನಸ್ಸಿನಿಂದ, ಯಾವುದೇ ಫಲಾಪೇಕ್ಷೆ ಇಲ್ಲದೆ ನೀಡಬೇಕು. ದೇವರ ಅನುಗ್ರಹದಿಂದ ಗಳಿಸಿದ ಸಂಪತ್ತನ್ನು ಪರರ ಹಿತಕ್ಕಾಗಿ ದಾನ ಮಾಡಬೇಕು. ಇದರಿಂದ ಜೀವನದಲ್ಲಿ ಪರಿವರ್ತನೆ ಸಾಧ್ಯ ಎಂದು ಗುಜರಾತ್ ದ್ವಾರಕಾ ಸೂರ್ಯ ಪೀಠದ ಜಗದ್ಗುರು ಶ್ರೀ ಕೃಷ್ಣದೇವನಂದಗಿರಿ ಮಹಾರಾಜ್ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷ ದೀಪೋತ್ಸವದ ಅಂಗವಾಗಿ ನಡೆದ ಸರ್ವಧರ್ಮ ಸಮ್ಮೇಳನದ 86ನೇ ಅಧಿವೇಶನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಧರ್ಮಸ್ಥಳದಲ್ಲಿ ನಡೆಯುವ ದಾನ, ಧರ್ಮ, ಸ್ವಚ್ಛತಾ ಕೈಂಕರ್ಯ, ಗೋ ಸೇವೆ ಮುಂತಾದ ಕಾರ್ಯಗಳನ್ನು […]

ಧರ್ಮಸ್ಥಳ ಮಂಜುನಾಥನ ಸನ್ನಿಧಿಯಲ್ಲಿ ಕಾರ್ತಿಕ ಮಾಸ ಸಂಭ್ರಮದ ಲಕ್ಷ ದೀಪೋತ್ಸವ

Wednesday, December 5th, 2018
dharmastala

ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥನ ಸನ್ನಿಧಿಯಲ್ಲಿ ಕಾರ್ತಿಕ ಮಾಸದ ಸಂಭ್ರಮದ ಲಕ್ಷ ದೀಪೋತ್ಸವ ನಡೆಯುತ್ತಿದ್ದು, ಈ ದೀಪಗಳ ಉತ್ಸವದ ಸಡಗರವನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಮಂದಿ ಭಕ್ತಾದಿಗಳು ಕ್ಷೇತ್ರಕ್ಕೆ ಆಗಮಿಸಿದ್ದಾರೆ. ಡಾ‌. ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ವಿವಿಧ ವಿಧಿ-ವಿಧಾನಗಳು ನೆರವೇರಿತು. ಹೊಸಕಟ್ಟೆ ಉತ್ಸವದ ಪ್ರಯುಕ್ತ ಶ್ರೀ ಮಂಜುನಾಥ ಸ್ವಾಮಿಯನ್ನು ಪಲ್ಲಕ್ಕಿಯಲ್ಲಿ ಕೂರಿಸಿ ವಸಂತಮಹಲ್ನ ಹೊಸಕಟ್ಟೆಗೆ ಸಾವಿರಾರು ಭಕ್ತ ವೃಂದದೊಂದಿಗೆ ಮೆರವಣಿಗೆ ಮಾಡಲಾಯಿತು. ದೀಪೋತ್ಸವದ ಅಂಗವಾಗಿ ಸರ್ವಧರ್ಮ ಸಮ್ಮೇಳನ, ಸಾಹಿತ್ಯ ಸಮ್ಮೇಳನ, ವಸ್ತು ಪ್ರದರ್ಶನವನ್ನು‌ ಆಯೋಜಿಸಲಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ […]

ಸಾವಿರ ಕಂಬದ ಬಸದಿಯಲ್ಲಿ ಲಕ್ಷ ದೀಪೋತ್ಸವ

Wednesday, December 27th, 2017
lakshadipostava

ಮೂಡಬಿದಿರೆ: ಸಾವಿರ ಕಂಬದ ಬಸದಿಯಲ್ಲಿ ಸೋಮವಾರ ಶ್ರೀ ಜೈನ ಮಠಾಧೀಶ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಅವರ ಹಿರಿತನದಲ್ಲಿ ಲಕ್ಷ ದೀಪೋತ್ಸವ ಜರಗಿತು. ಪುಷ್ಪಗಿರಿ ಕ್ಷೇತ್ರದ ದಿಗಂಬರ ಸಂತ ಆಚಾರ್ಯ 108 ಪುಷ್ಪದಂತ ಸಾಗರ ಮುನಿ ಮಹಾರಾಜರು, ಅವರ ಶಿಷ್ಯಂದಿರಾದ 108 ಪ್ರಸಂಗಸಾಗರ ಮುನಿಮಹಾರಾಜರು, 108 ಪ್ರಮುಖ ಸಾಗರ ಮುನಿಮಹಾರಾಜರು ಅವರ ಉಪಸ್ಥಿತಿಯಲ್ಲಿ ನಡೆದ ಲಕ್ಷ ದೀಪೋತ್ಸವಕ್ಕೆ ಮೂಡಬಿದಿರೆ ಶಾಸಕ ಕೆ. ಅಭಯ ಚಂದ್ರ ಚಾಲನೆ ನೀಡಿದರು. ಇದೇ ಮೊದಲ ಬಾರಿಗೆ ಜೈನರೊಂದಿಗೆ ಜೈನೇತರರಿಗೂ ದೀಪ […]

ಬದುಕನ್ನು ಪ್ರೀತಿಸಿ, ಹೃದಯ ಶ್ರೀಮಂತಿಕೆಯೊಂದಿಗೆ ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಬೇಕು : ವೀರೇಂದ್ರ ಹೆಗ್ಗಡೆ

Wednesday, November 15th, 2017
deepotsava

ಉಜಿರೆ: ಬದುಕನ್ನು ಪ್ರೀತಿಸಿ, ಹೃದಯ ಶ್ರೀಮಂತಿಕೆಯೊಂದಿಗೆ ಉತ್ತಮ ಆಚಾರ-ವಿಚಾರ, ಸಾತ್ವಿಕತೆ, ಪ್ರೀತಿ-ವಿಶ್ವಾಸ ಮತ್ತು ಮಾನವೀಯತೆಯನ್ನು ಬೆಳೆಸಿಕೊಳ್ಳಬೇಕು. ಸತ್ಯ, ಧರ್ಮ, ನ್ಯಾಯದ ಹಾದಿಯಲ್ಲಿ ನಡೆದು ಸಜ್ಜನರಾಗಿ ಸಾರ್ಥಕ ಬದುಕನ್ನು ನಡೆಸಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ಪ್ರಾರಂಭದ ದಿನವಾದ ಸೋಮವಾರ ಉಜಿರೆಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಬಂದ ಭಕ್ತರು ಮತ್ತು ಅಭಿಮಾನಿಗಳನ್ನು ಉದ್ದೇಶಿಸಿ ಅಮೃತವರ್ಷಿಣಿ ಸಭಾಭವನದಲ್ಲಿ ಅವರು ಮಾತನಾಡಿದರು. ಸುಂದರ ಪ್ರಕೃತಿ-ಪರಿಸರ ಮತ್ತು ಭೂಮಿಯನ್ನು ರಕ್ಷಣೆ ಮಾಡಿ ಸುಸ್ಥಿತಿಯಲ್ಲಿ ಮುಂದಿನ ಜನಾಂಗಕ್ಕೆ […]

ಧರ್ಮಸ್ಥಳ ಲಕ್ಷ ದೀಪೋತ್ಸವ : ಸಮಾಲೋಚನಾ ಸಭೆ

Tuesday, October 31st, 2017
darmasthala

ಮಂಗಳೂರು: ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ನವೆಂಬರ್ 13 ರಿಂದ18 ರ ವರೆಗೆ ನಡೆಯಲಿದ್ದು ಪೂರ್ವ ಸಿದ್ಧತೆಗಳ ಬಗ್ಗೆ ಸಮಾಲೋಚನಾ ಸಭೆ ಮಂಗಳವಾರ ಶ್ರೀ ಸನ್ನಿಧಿ ಅತಿಥಿಗೃಹದಲ್ಲಿ ನಡೆಯಿತು. ಧರ್ಮಸ್ಥಳಕ್ಕೆ ಮಂಗಳೂರು, ಪುತ್ತೂರು, ಪೆರಿಯಶಾಂತಿ, ಚಾರ್ಮಾಡಿ, ಪಟ್ಟಮೆ ಕಾರ್ಕಳ, ಬೆಳಾಲು, ನೆರಿಯಾ ಮೊದಲಾದ ಊರುಗಳಿಂದ ಸಂಪರ್ಕ ಕಲ್ಪಿಸುವ ರಸ್ತೆಗಳ ದುರಸ್ತಿ ಕಾರ್ಯವನ್ನು ಶೀಘ್ರ ಪೂರ್ಣಗೊಳಿಸುವಂತೆ ಸಚಿವ ಬಿ.ರಮಾನಾಥರೈ ಲೋಕೋಪಯೋಗಿ ಇಲಾಖಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಕೆ.ಎಸ್.ಆರ್.ಟಿ.ಸಿ. ವತಿಯಿಂದ ರಾಜ್ಯದ ವಿವಿಧ ಭಾಗಗಳಿಂದ ವಿಶೇಷ ಬಸ್ ಸೌಲಭ್ಯ ಒದಗಿಸುವುದಾಗಿ ಅಧಿಕಾರಿಗಳು ತಿಳಸಿದರು. ಆರೋಗ್ಯ […]

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಅದ್ಧೂರಿ ಲಕ್ಷ ದೀಪೋತ್ಸವ

Friday, November 25th, 2016
Dharmasthala Laksha Deepotsava

ಬೆಳ್ತಂಗಡಿ: ಪ್ರತಿ ವರ್ಷ ಕಾರ್ತಿಕ ಮಾಸದ ನಿಮಿತ್ತ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜರಗುವ ಲಕ್ಷ ದೀಪೋತ್ಸವಕ್ಕೆ ಗುರುವಾರ ಅದ್ಧೂರಿ ಚಾಲನೆ ನೀಡಲಾಯಿತು. ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದೇವಸ್ಥಾನ ಹಾಗೂ ದೇವಸ್ಥಾನದ ಬೀದಿಗಳನ್ನು ಬಣ್ಣ ಬಣ್ಣದ ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿತದೆ. ಸಂಪ್ರದಾಯ ಬದ್ಧವಾಗಿ ನಡೆಸಿಕೊಂಡು ಬರಲಾಗುತ್ತಿರುವ ಲಕ್ಷ ದೀಪೋತ್ಸವ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಕಡೆಯಿಂದ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಈ ಎಲ್ಲ ಭಕ್ತರ ನಡುವೆ ನಿನ್ನೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಇನ್ನು ದೀಪೋತ್ಸವದ ಅಂಗವಾಗಿ ವಿವಿಧ ಸಾಂಸ್ಕೃತಿಕ […]