ಪಿಂಚಣಿ ಮತ್ತು ಪಡಿತರವನ್ನು ನೀಡುವುದಿಲ್ಲ ಎಂದು ನಿರ್ಬಂಧ ಹೇರದೆ ಲಸಿಕೆ ಹಾಕಲು ಜಿಲ್ಲಾಧಿಕಾರಿಗಳಿಗೆ ಸೂಚನೆ

Thursday, September 2nd, 2021
Vaccination

ಬೆಂಗಳೂರು : ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಅಭಿಯಾನವನ್ನು ಕೈಗೊಂಡು ಲಸಿಕೆ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವಂತೆ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಆದೇಶಿಸಿದ್ದಾರೆ. ಕೋವಿಡ್ ಲಸಿಕೆ ಪಡೆಯದ ಸಾರ್ವಜನಿಕರಿಗೆ ಪಿಂಚಣಿ ಮತ್ತು ಪಡಿತರವನ್ನು ನೀಡುವುದಿಲ್ಲವೆಂಬ ವರದಿಗಳು ಪತ್ರಿಕೆಗಳಲ್ಲಿ ವರದಿಯಾಗಿದ್ದು ಸರ್ಕಾರದ ಗಮನಕ್ಕೆ ಬಂದಿದೆ. ಪಿಂಚಣಿ ಹಾಗೂ ಪಡಿತರವನ್ನು ಯಾವುದೇ ಕಾರ್ಯಕ್ರಮ/ ಯೋಜನೆಗಳಿಗೆ ಜೋಡಿಸಿರುವುದಿಲ್ಲ. ಲಸಿಕಾ ಕಾರ್ಯವನ್ನು ತಪ್ಪಾಗಿ ಜೋಡಿಸಿದ್ದಲ್ಲಿ ಕೂಡಲೇ ಕೈಬಿಡಲು ಅವರು ಇಂದು ಹೊರಡಿಸಿರುವ ಸುತ್ತೋಲೆಯಲ್ಲಿ ಸೂಚಿಸಿದ್ದಾರೆ.

ಕೊರೊನಾ ವಿರುದ್ಧ ಹೋರಾಟ- ಕರ್ನಾಟಕ ಸರ್ಕಾರದ ಕ್ರಮಗಳ ಬಗ್ಗೆ ಅಮಿತ್ ಷಾ ಮೆಚ್ಚುಗೆ

Thursday, September 2nd, 2021
Amith Sha

ಬೆಂಗಳೂರು : ದೇಶ ಮತ್ತು ಜಗತ್ತು ಹಿಂದೆಂದೂ ಕಂಡಿರದ, ಮಾನವಕುಲಕ್ಕೇ ಸವಾಲಾಗಿದ್ದ ಕೊರೊನಾ ಮಹಾಮಾರಿಯನ್ನು ಕರ್ನಾಟಕ ಸರ್ಕಾರ ಅತ್ಯುತ್ತಮವಾಗಿ ನಿಯಂತ್ರಣ ಮಾಡುವಲ್ಲಿ ಯಶಸ್ವಿಯಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕ ಸರ್ಕಾರವನ್ನು ಮುಕ್ತಕಂಠದಿಂದ ಪ್ರಶಂಸಿಸಿದರು. ಕರ್ನಾಟಕ ರಾಜ್ಯ ಮೊದಲಿಗೆ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಹಾಗೂ ಈಗ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಕೊರೊನಾ ವಿರುದ್ಧ ಸಮರ್ಥವಾಗಿ ಹೋರಾಡಿದೆ. ಈ ವರೆಗೆ ಸುಮಾರು 5.2 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ. ಆ ಪೈಕಿ 4 ಕೋಟಿ […]

ವಿವಿ ಕಾಲೇಜು: 806 ವಿದ್ಯಾರ್ಥಿಗಳಿಗೆ ಉಚಿತ ಕೊವಿಡ್‌ ಲಸಿಕೆ

Tuesday, July 6th, 2021
UCM

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌.ಎಸ್‌.ಎಸ್‌) ಘಟಕಗಳ ಸಹಯೋಗದೊಂದಿಗೆ ವಿವಿ ಕಾಲೇಜಿನಲ್ಲಿ ಸೋಮವಾರ ವಿದ್ಯಾರ್ಥಿಗಳಿಗೆ ಮತ್ತು ಪ್ರಾಧ್ಯಾಪಕರಿಗಾಗಿ ಹಮ್ಮಿಕೊಳ್ಳಲಾಗಿದ್ದ ಕೊವಿಡ್‌- 19 ಉಚಿತ ಲಸಿಕಾ ಶಿಬಿರದಲ್ಲಿ 806 ಕ್ಕೂ ಹೆಚ್ಚು ಮಂದಿ ಲಸಿಕೆ ಪಡೆದುಕೊಂಡರು. ನಗರದಲ್ಲಿ ಖಾಸಗಿ ಬಸ್‌ಗಳ ಓಡಾಟ ಆರಂಭವಾಗಿರುವುದೂ ವಿದ್ಯಾರ್ಥಿಗಳಿಗೆ ಅನುಕೂಲವಾಗಿ ಪರಿಣಮಿಸಿತು. ವಿಶ್ವವಿದ್ಯಾನಿಲಯ ಕಾಲೇಜು ಮತ್ತು ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜುಗಳ ಪದವಿ ಮತ್ತು ವಿವಿಧ ಸ್ನಾತಕೋತ್ತರ ವಿಭಾಗಗಳ ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರು ಕೊವಿಡ್‌-19 ವಿರುದ್ಧದ […]

ಮುಂದಿನ ಎರಡು ತಿಂಗಳಲ್ಲಿ ಎಲ್ಲರಿಗೂ ಲಸಿಕೆ: ಆರ್ ಅಶೋಕ

Saturday, July 3rd, 2021
R Ashoka

ಬೆಂಗಳೂರು  : ಕೋವಿಡ್ ವಿರುದ್ಧ ಜಯ ಸಾಧಿಸಲು ಮೊದಲು ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬೇಕು. ಇನ್ನು ಎರಡು ತಿಂಗಳಲ್ಲಿ ಎಲ್ಲರಿಗೂ ಲಸಿಕೆ ಒದಗಿಸುವ ಗುರಿ ಹೊಂದಲಾಗಿದೆ. ಶೀಘ್ರದಲ್ಲೇ ನಾವು ಪದ್ಮನಾಭನಗರ ಕ್ಷೇತ್ರದಲ್ಲಿ ವಾರ್ಡ್ ಮಟ್ಟದ ವ್ಯಾಕ್ಸಿನೇಷನ್ ಶಿಬಿರಗಳನ್ನು ಸ್ಥಾಪಿಸುತ್ತೇವೆ. ಕರೋನಾದಂತಹ ಬಿಕ್ಕಟ್ಟಿನ ಈ ಸಮಯದಲ್ಲಿ ಅಗತ್ಯವಿರುವವರಿಗೆ ಕೈಲಾದಷ್ಟು ಸಹಾಯವನ್ನು ಮಾಡಬೇಕೆಂದು ಕಂದಾಯ ಸಚಿವ ಆರ್ ಅಶೋಕ ಹೇಳಿದರು. ಶನಿವಾರ ಪದ್ಮನಾಭನಗರ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಚಿವರು, “ನಾನು ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳದೆ ಇರುವುದಕ್ಕೇ ಇದೇ ಕಾರಣ. ಹೂವಿನ […]

ಗ್ರಾಮ ಪಂಚಾಯತ್ ಮತ್ತು ನಗರ, ಸ್ಥಳೀಯಾಡಳಿತ ಜನಪ್ರತಿನಿಧಿಗಳಿಗೆ ಲಸಿಕೆ ನೀಡಲು ಸರ್ಕಾರಿ ಆದೇಶ – ಸಚಿವ ಕೋಟ ಹೇಳಿಕೆ

Saturday, June 5th, 2021
kota srinivas poojary

ಮಂಗಳೂರು :  ರಾಜ್ಯದಾದ್ಯಂತ 6020ಕ್ಕೂ ಹೆಚ್ಚು ಗ್ರಾಮ ಪಂಚಾಯತ್ ಮತ್ತು ಇತರ ನಗರ, ಸ್ಥಳೀಯಾಡಳಿತ ಸಂಸ್ಥೆಗಳ ಸುಮಾರು 1ಲಕ್ಷ ಜನಪ್ರತಿನಿಧಿಗಳನ್ನು ಕೋವಿಡ್ ವಾರಿಯರ್ಸ್ ಎಂದು ಪರಿಗಣಿಸಿ ತುರ್ತು ಲಸಿಕೆ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಎಂದು ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಹಿಂದೂ ಧಾರ್ಮಿಕ ಮತ್ತು ಧರ್ಮದಾಯ ದತ್ತಿ ಇಲಾಖೆಯ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರು ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪನವರಿಗೆ ಮಾಡಿದ […]

ಸರಕಾರದಲ್ಲಿ18 ವಯಸ್ಸಿನವರಿಗೆ ಲಸಿಕೆ ಇಲ್ಲ, ಖಾಸಗಿ ಆಸ್ಪತ್ರೆಯಲ್ಲಿ 850 ರೂ.ಗೆ ಸಿಗುತ್ತದೆ : ಲುಕ್ಮಾನ್

Tuesday, June 1st, 2021
lukman

ಮಂಗಳೂರು : ಸರಕಾರ 18ರಿಂದ 44ರ ವಯೋಮಾನದವರಿಗೆ ಲಸಿಕೆ ನೀಡುವುದನ್ನು ಸ್ಥಗಿತ ಮಾಡಿದೆ. ಆದರೆ ಖಾಸಗಿ ಆಸ್ಪತ್ರೆಯಲ್ಲಿ ದುಬಾರಿ ದರದಲ್ಲಿ ಲಸಿಕೆ ನೀಡಲಾಗುತ್ತಿದೆ ಇದು ಮೋದಿ ಸರಕಾರ  ಶ್ರೀಮಂತರಿಗೆ ಮಾಡಿಕೊಟ್ಟ ಸವಲತ್ತು ಎಂದು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲುಕ್ಮಾನ್ ಬಂಟ್ವಾಳ ಹೇಳಿದ್ದಾರೆ. ಮಂಗಳವಾರ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯುವಜನರಿಗೆ, ಗ್ರಾಮೀಣ ಪ್ರದೇಶದ ಜನತೆಗೆ, ಬಡವರಿಗೆ ಕೋವಿಡ್ ಲಸಿಕೆ ದೊರೆಯುತ್ತಿಲ್ಲ. ಬಿಜೆಪಿ ಸರಕಾರ ಕೇವಲ ಶ್ರೀಮಂತರಿಗೆ ಮಾತ್ರ ಲಸಿಕೆ ಪೂರೈಸುವ ನೀತಿಯನ್ನು ಅನುಸರಿಸುತ್ತಿದೆ. ಜನ ವಿರೋಧಿ […]

ಧಾರವಾಡ ಜಿಲ್ಲಾ ನ್ಯಾಯಾಧೀಶರಿಗೆ ಮತ್ತು ನ್ಯಾಯಾಲಯ ಸಿಬ್ಬಂದಿಗೆ ಲಸಿಕೆ ಅಭಿಯಾನ

Friday, May 28th, 2021
Vaccination

ಧಾರವಾಡ: ಧಾರವಾಡ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ನ್ಯಾಯಾಧೀಶರು ಮತ್ತು ನ್ಯಾಯಾಲಯದ ಸಿಬ್ಬಂದಿಗೆ ಕೊರೊನಾ ಲಸಿಕೆ ನೀಡಲಾಯಿತು. ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಉಮೇಶ ಅಡಿಗ ಅವರು ಲಸಿಕೀಕರಣದ ಅಭಿಯಾನಕ್ಕೆ ಚಾಲನೆ ನೀಡಿದರು. ಪ್ರಧಾನ ಹಿರಿಯ ನ್ಯಾಯಾಧೀಶ ಹಾಗೂ ಸಿಜೆಎಂ ಸಂಜಯ ಗುಡಗುಡಿ, ವ್ಯೆದ್ಯಾಧಿಕಾರಿಗಳಾದ ಡಾ. ಕೆ.ಎನ್. ತನುಜಾ, ಡಾ.ಕವಿತಾ ಮತ್ತು ಅವರ ಸಿಬ್ಬಂದಿ ಹಾಜರಿದ್ದು ಅಭಿಯಾನವನ್ನು ಯಶಸ್ವಿಗೂಳಿಸಿದರು. 120ಕ್ಕೂ ಹೆಚ್ಚು ಸಿಬ್ಬಂದಿ ಹಾಗೂ ನ್ಯಾಯಾಧೀಶರು ಮೊದಲ ಡೋಸ್ ಲಸಿಕೆ ಪಡೆದರು.

ಆಧ್ಯತಾ ಗುಂಪುಗಳಿಗೆ ಮೊದಲು ಲಸಿಕೆ ನೀಡಿ – ಗದಗ ಡಿಸಿ

Friday, May 28th, 2021
Sundaresh

ಗದಗ : ಸರ್ಕಾರ ತಿಳಿಸಿದ ಆದ್ಯತಾ ಗುಂಪುಗಳ ಅರ್ಹ ಫಲಾನುಭವಿಗಳಿಗೆ ಆದ್ಯತೆಯ ನುಸಾರ ಮೊದಲು ಲಸಿಕೆ ನೀಡುವಂತೆ ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಸೂಚಿಸಿದರು. ಜಿಲ್ಲಾಡಳಿತ ಭವನದ ಜಿ.ಪಂ. ವಿಡಿಯೋ ಸಭಾಂಗಣದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳಿಗಳೊಂದಿಗೆ ಶುಕ್ರವಾರ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರದ ಮಾರ್ಗಸೂಚಿ ಅನುಸಾರ ಲಸಿಕೆ ನೀಡಲು ನಿಗದಿಪಡಿಸಲಾದ ಆದ್ಯತಾ ಗುಂಪುಗಳ ಅರ್ಹ ಫಲಾನುಭವಿಗಳಿಗೆ ಹಾಗೂ ಈಗಾಗಲೇ ಪ್ರಥಮ ಡೋಸ ಲಸಿಕೆ ಪಡೆದ ಫಲಾನುಭವಿಗಳಿಗೆ ಪ್ರಥಮಾದ್ಯತೆ ಮೇರೆಗೆ ಲಸಿಕೆ ನೀಡಬೇಕು. ಈ […]

ಕೋವಿಡ್ 19 ಸೋಂಕಿನ ಮೂರನೇ ಅಲೆ ಅಪಾಯಕಾರಿ ಐಎಂಎ ಎಚ್ಚರಿಕೆ

Wednesday, May 19th, 2021
ima

ನವದೆಹಲಿ: ಕೋವಿಡ್ 19 ಸೋಂಕಿನ ಮೂರನೇ ಅಲೆ ಭಾರತದಲ್ಲಿ ಹರಡುವ ಸಾಧ್ಯತೆ ಇದೆ ಎಂದು ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಬುಧವಾರ ಎಚ್ಚರಿಸಿದ್ದು, ಅಲೆಯನ್ನು ಎದುರಿಸುವುದು ಕಷ್ಟ ಎಂದಿದೆ. ಮಕ್ಕಳು, ವಯಸ್ಸಾದವರು ಎಚ್ಚರಿಕೆಯಿಂದಿರಬೇಕು. ಲಸಿಕೆ ತೆಗೆದುಕೊಳ್ಳವಿಕೆಯೊಂದೇ ದಾರಿಯಾಗಿದೆ ಎಂದು ಸಲಹೆ ನೀಡಿದೆ. ಕೋವಿಡ್ 3ನೇ ಅಲೆಯ ಅಪಾಯದ ಹಿನ್ನೆಲೆಯಲ್ಲಿ ಸಾಮೂಹಿಕವಾಗಿ ಕೋವಿಡ್ ಲಸಿಕೆಯನ್ನು ನೀಡುವುದು ಉತ್ತಮ ಎಂದು ಐಎಂಎ ಸಲಹೆ ನೀಡಿದೆ. ಒಂದು ವೇಳೆ ನಾವು ಬೃಹತ್ ಪ್ರಮಾಣದಲ್ಲಿ ಲಸಿಕೆ ನೀಡಲು ಮುಂದಾಗದಿದ್ದರೆ, ಮೂರನೇ ಅಲೆಯನ್ನು ಎದುರಿಸುವುದು ಕಷ್ಟ ಮತ್ತು […]

ದಕ್ಷಿಣ ಕನ್ನಡ ಜಿಲ್ಲೆ 474 , ಉಡುಪಿಯಲ್ಲಿ 274 ಕೊರೊನಾ ವೈರಸ್‌ ಪ್ರಕರಣಗಳು ಪತ್ತೆ

Friday, April 23rd, 2021
corona

ಮಂಗಳೂರು  : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ವರದಿಯಾದ 474 ಕೊರೊನಾ ವೈರಸ್‌ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ 39,718 ಕ್ಕೆ ಏರಿವೆ. ಈ ಪೈಕಿ 2,825 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ. ಒಟ್ಟು 7,00,688 ಮಾದರಿಗಳನ್ನು ಪರೀಕ್ಷಿಸಲಾಗಿದ್ದು ಅದರಲ್ಲಿ 6,60,970 ಮಾದರಿಗಳು ನೆಗೆಟಿವ್‌‌ ಆಗಿದೆ. ಗುರುವಾರ 121 ಜನರು ಗುಣಮುಖರಾಗಿದ್ದು ಒಟ್ಟು ಗುಣಮುಖರಾದವರ ಸಂಖ್ಯೆ 36,145ಕ್ಕೆ ಏರಿದೆ. ಈವರೆಗೆ ಒಟ್ಟು 745 ಸಾವುಗಳು ಸಂಭವಿಸಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 47,706 ಮಾಸ್ಕ್‌ […]