ಸರ್ವಧರ್ಮದವರನ್ನು ಸಮಾನರನ್ನಾಗಿ ಕಾಣುವ ಮಾಣಿಕ್ಯ ಪದ್ಮರಾಜ್ ಆರ್.

Wednesday, April 24th, 2024
Padmaraj-R

ಮಂಗಳೂರು : ಇವರು ಸದಾ ಹಸನ್ಮುಖಿ… ಎಲ್ಲರಲ್ಲೂ ನಗುಮುಖದಿಂದಲೇ ಮಾತನಾಡಿಸುತ್ತ ಸಮಸ್ಯೆ ಆಲಿಸುವ ಸರಳ ಸಜ್ಜನಿಕೆಯ ಗುಣಹೊಂದಿದವರು ನೇರ ನಡೆನುಡಿಯ ಧೀಮಂತ ವ್ಯಕ್ತಿತ್ವದ ಪದ್ಮರಾಜ್ ಆರ್. ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶ, ಸಮಾಜಸೇವೆಯನ್ನು ಮೈಗೂಡಿಸಿಕೊಂಡು, ಕುದ್ರೋಳಿ ಗೋಕರ್ಣನಾಥ ದೇವಳದ ಬಗ್ಗೆ ಅಪಾರ ಶ್ರದ್ಧೆ ಭಕ್ತಿ ಹೊಂದಿ ಕಿರಿಯ ವಯಸ್ಸಿನಲ್ಲೇ ದೇವಳದ ಬಹು ದೊಡ್ಡ ಜವಾಬ್ದಾರಿ ವಹಿಸಿಕೊಂಡು ಕ್ಷೇತ್ರದ ಏಳಿಗೆಗಾಗಿ ಸದಾ ಹಗಲಿರುಳು ದುಡಿಯುತ್ತಿರುವವರು. ಮಂಗಳೂರು ಮೂಲದ ಎಚ್.ಎಂ.ರಾಮಯ್ಯ ಮತ್ತು ಲಲಿತಾ ದಂಪತಿಯ ದ್ವಿತೀಯ ಪುತ್ರನಾಗಿ ಜನಿಸಿದ ಪದ್ಮರಾಜ್ ರಾಮಯ್ಯರವರು […]

ಲೋಕಸಭಾ ಚುನಾವಣೆ-ಕಾರ್ಮಿಕರಿಗೆ ವೇತನ ಸಹಿತ ರಜೆ

Thursday, April 11th, 2024
ಲೋಕಸಭಾ ಚುನಾವಣೆ-ಕಾರ್ಮಿಕರಿಗೆ ವೇತನ ಸಹಿತ ರಜೆ

ಮಂಗಳೂರು :- ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಇದೇ ಏ.26 ರ ಶುಕ್ರವಾರ ಚುನಾವಣಾ ಮತದಾನ ನಡೆಯಲಿದೆ. ಆ ದಿನದಂದು ಜಿಲ್ಲೆಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳ ಮಾಲೀಕರು ಅರ್ಹ ಮತದಾರರಾಗಿರುವ ಎಲ್ಲಾ ಖಾಯಂ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಒಂದು ದಿನದ ವೇತನ ಸಹಿತ ರಜೆ ನೀಡುವಂತೆ ಹಾಗೂ ತಪ್ಪಿದಲ್ಲಿ ಸಂಬಂಧಪಟ್ಟ ಸಂಸ್ಥೆ/ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ […]

ದ.ಕ.ಲೋಕಸಭಾ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಕಚೇರಿಗೆ‌ ಮುತ್ತಿಗೆ ಯತ್ನ, ಹಲವರ ಬಂಧನ

Saturday, December 26th, 2020
pfi

ಮಂಗಳೂರು : ಸಿಎಫ್ಐ ಕಾರ್ಯಕರ್ತರು‌ ದ.ಕ.ಲೋಕಸಭಾ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಕಚೇರಿಗೆ‌ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಶನಿವಾರ ನಡೆದಿದೆ. ಡಿಸಿ‌ ಕಚೇರಿಯ ‌ಮುಂದೆ ಜಮಾಯಿಸಿದ ಕಾರ್ಯಕರ್ತರು ಕೇಂದ್ರ ಸರಕಾರದ ವಿರುದ್ಧ ‌ಘೋಷಣೆ‌ ಕೂಗಿದರು.‌ ಅಲ್ಲದೆ ಡಿಸಿ ಕಚೇರಿ ದಾಟಿ ಸಂಸದರ ಕಚೇರಿಗೆ ಮುತ್ತಿಗೆ‌ ಹಾಕಲು ಯತ್ನಿಸಿದರು. ಈ ವೇಳೆ‌ ಪೊಲೀಸರು ಪ್ರತಿಭಟನಾಕಾರರ ಪೈಕಿ‌ ನಾಯಕರು‌ ಹಾಗೂ ಹಲವು ಕಾರ್ಯಕರ್ತರನ್ನು‌ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಕ್ಯಾಂಪಸ್ ಫ್ರಂಟ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರವೂಫ್ […]

ಮಂಡ್ಯದಲ್ಲಿ ಬೇರೆ ಪಕ್ಷದವರೂ ನಮ್ಮ ಪಕ್ಷದ ಟಿಕೆಟ್​ಗೆ​​​​​​​ ಬೇಡಿಕೆ ಇಟ್ಟಿದ್ದಾರೆ: ಅಶೋಕ್

Tuesday, October 9th, 2018
r-ashok

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಸ್ಪರ್ಧಿಸಲು ಮೂವರು ಆಕಾಂಕ್ಷಿಗಳಿದ್ದು, ಬೇರೆ ಪಕ್ಷದ ಮುಖಂಡರೊಬ್ಬರು ಟಿಕೆಟ್ ಕೇಳಿದ್ದಾರೆ. ಯಾರಿಗೆ ಟಿಕೆಟ್ ಎಂದು ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರವಾಗಲಿದೆ ಎಂದು ಮಾಜಿ ಡಿಸಿಎಂ ಆರ್.ಅಶೋಕ್ ಹೇಳಿಕೆ ನೀಡಿದ್ದು, ಮಾಜಿ ಸಚಿವ ಚಲುವರಾಯಸ್ವಾಮಿ ಕಾಂಗ್ರೆಸ್ ತೊರೆದು ಬಿಜೆಪಿಯಿಂದ ಸ್ಪರ್ಧಿಸುವ ಸಾಧ್ಯತೆಯ ಸುಳಿವು ನೀಡಿದ್ದಾರೆ. ಯಡಿಯೂರಪ್ಪ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪ ಚುನಾವಣೆಗೆ ಅಭ್ಯರ್ಥಿಗಳ ಕೊರತೆ ಇಲ್ಲ. ಮಂಡ್ಯದಲ್ಲಿ ಸ್ಪರ್ಧಿಸಲು ಮೂವರು ಆಕಾಂಕ್ಷಿಗಳಿದ್ದಾರೆ. ರಾಮನಗರದಿಂದ ಸ್ಪರ್ಧಿಸಲು ಇಬ್ಬರು ಆಕಾಂಕ್ಷಿಗಳಿದ್ದಾರೆ. […]

550 ಕೋಟಿ ಪ್ರಾಜೆಕ್ಟ್​ಗೆ ನರೇಂದ್ರ ಮೋದಿ ಚಾಲನೆ

Tuesday, September 18th, 2018
narendra-modi

ವಾರಣಾಸಿ: ಎರಡು ದಿನಗಳ ವಾರಣಾಸಿ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ. ನಿನ್ನೆ 69ನೇ ಹುಟ್ಟುಹಬ್ಬವನ್ನು ತಮ್ಮ ಲೋಕಸಭಾ ಕ್ಷೇತ್ರವಾದ ವಾರಣಾಸಿಯಲ್ಲಿ ಆಚರಿಸಿಕೊಂಡ ಮೋದಿ, ಮಕ್ಕಳೊಂದಿಗೆ ಸಂವಾದ ನಡೆಸಿ ನಂತರದಲ್ಲಿ ಕಾಶಿ ವಿಶ್ವನಾಥ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದರು. ಪ್ರವಾಸದ ಕೊನೆಯ ದಿನವಾದ ಇಂದು ವಿದ್ಯುತ್ ಅಭಿವೃದ್ಧಿ ಯೋಜನೆ ಸೇರಿದಂತೆ ಸುಮಾರು 550 ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ತಮ್ಮ ಕ್ಷೇತ್ರದಲ್ಲಿ ಕಳೆದ ನಾಲ್ಕು ವರ್ಷದಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದೆ […]

‘ಎಣ್ಣೆ’ ಮೇಲೆ ಅಬಕಾರಿ ಇಲಾಖೆ ಕಣ್ಣು

Thursday, March 13th, 2014
Alcohol

ಬೆಂಗಳೂರು: ಲೋಕಸಭಾ ಚುನಾವಣೆ ವೇಳೆ ಹರಿಯಬಹುದಾದ ಹೆಂಡದ ಹೊಳೆಗೆ ಅಣೆಕಟ್ಟೆ ಕಟ್ಟಲು ಅಬಕಾರಿ ಇಲಾಖೆ ಕಸರತ್ತು ಆರಂಭಿಸಿದೆ. ಮದ್ಯ ಮಾರಾಟ ಮತ್ತು ಸಾಗಣೆ ಮೇಲೆ ಇಲಾಖೆ ಇದೇ ಪ್ರಥಮ ಬಾರಿಗೆ ‘ಎಸ್‌ಎಂಎಸ್ ಅಸ್ತ್ರ’ ಬಳಸಲು ತೀರ್ಮಾನಿಸಿದೆ. ಅಂದರೆ ಪ್ರತಿ ಡಿಸ್ಟಿಲರಿಗಳು ಉತ್ಪಾದಿಸುವ ಮದ್ಯ, ಅದು ಸಾಗಣೆಯಾಗುವ ರೀತಿ ಮತ್ತು ಮದ್ಯದ ಅಂಗಡಿಗಳು ನಡೆಸುವ ಮಾರಾಟದ ಬಗ್ಗೆ ಕ್ಷಣಕ್ಷಣದ ಮಾಹಿತಿ ಪಡೆಯಲಿದೆ. ಡಿಸ್ಟಿಲರಿಗಳು ಮದ್ಯ ಉತ್ಪಾದಿಸಿ, ಅದನ್ನು ಹಂಚಿಕೆ ಮಾಡುವವರೆಗೂ ನಡೆಯುವ ಚಟುವಟಿಕೆ ತಿಳಿಯಲು ಎಲ್ಲಾ ಡಿಸ್ಟಿಲರಿಗಳಲ್ಲೂ ಸಿಸಿ […]

ಲೋಕಸಮರ: ಚಿಕ್ಕಬಳ್ಳಾಪುರದ ಮೇಲೆ ರಾಹುಲ್ ಕಣ್ಣು

Thursday, March 13th, 2014
Rahul-Gandhi

ಬೆಂಗಳೂರು: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಕೇಳಿ ಬರುತ್ತಿದ್ದು, ಇದು ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಉಂಟು ಮಾಡಿದೆ. ರಾಹುಲ್ ಗಾಂಧಿ ಅವರು ತಮ್ಮ ಸ್ವಕ್ಷೇತ್ರ ಉತ್ತರ ಪ್ರದೇಶ ಅಮೇಥಿಯ ಜತೆಗೆ ಚಿಕ್ಕಬಳ್ಳಾಪುರ ಕ್ಷೇತ್ರದಿಂದಲೂ ಸ್ಪರ್ಧಿಸುವ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದು, ಈ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಮುಖಂಡರ ಜತೆ ಈಗಾಗಲೇ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ. ಚಿಕ್ಕಬಳ್ಳಾಪುರದಿಂದ ರಾಹುಲ್ ಗಾಂಧಿ ಸ್ಪರ್ಧೆಗೆ ರಾಜ್ಯ ಕಾಂಗ್ರೆಸ್ ಮುಖಂಡರೂ ಸಹ […]

ಪ್ರತಾಪ್, ಶೋಭಾ ಸೇರಿ 5 ಮಂದಿಗೆ ಟಿಕೆಟ್ ಫೈನಲ್

Thursday, March 13th, 2014
BJP

ಬೆಂಗಳೂರು: ಅಂಕಣಕಾರ ಪ್ರತಾಪ್ ಸಿಂಹ ಸೇರಿದಂತೆ ಐವರು ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಬುಧವಾರ ಅಂತಿಮಗೊಳಿಸಿದ್ದು, 3 ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆ ದಿಲ್ಲಿ ನಾಯಕರ ಅಂಗಳ ತಲುಪಿದೆ. ಬೀದರ್, ತುಮಕೂರು ಹಾಗೂ ಬಳ್ಳಾರಿ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ದಿಲ್ಲಿಯಲ್ಲೇ ಆಗಲಿದೆ. ಗುರುವಾರ ಮಧ್ಯಾಹ್ನ ನಡೆಯುವ ಸಮಿತಿ ಸಭೆಯಲ್ಲಿ ಎಲ್ಲ 8 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಅಧಿಕೃತವಾಗಿ ಹೊರಬೀಳಲಿದೆ. ಇದೇ ಸಂದರ್ಭದಲ್ಲಿ ಬಿಎಸ್‌ಆರ್ ವಿಲೀನ ಪ್ರಕ್ರಿಯೆ ಕುರಿತಂತೆಯೂ ಅಂತಿಮ ನಿರ್ಣಯವಾಗಲಿದೆ. ಬೆಂಗಳೂರಿನಲ್ಲಿ ಬುಧವಾರ ನಡೆದ ರಾಜ್ಯ ಕಾರ್ಯಕಾರಿಣಿಯಲ್ಲಿ ಮೈಸೂರು, […]

ಸಿಎಂ ಸಿದ್ದರಾಮಯ್ಯಗೆ ಬಿತ್ತು ಟಾರ್ಗೆಟ್ ಇಪ್ಪತ್ತು

Wednesday, March 12th, 2014
Siddaramaiah

ಬೆಂಗಳೂರು: ಲೋಕಸಭಾ ಚುನಾವಣೆ ಇನ್ನೂ ಕಾವೇರದ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಪಿಂಗ್ ಮೂಡಿನಲ್ಲಿರುವಾಗ ಕಾಂಗ್ರೆಸ್ ಹೈಕಮಾಂಡ್ ಬಿಸಿ ಮುಟ್ಟಿಸಿದೆ. ಹಾಲಿ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ ಕನಿಷ್ಠ 20 ಸ್ಥಾನಗಳನ್ನು ಪಕ್ಷಕ್ಕಾಗಿ ಗೆಲ್ಲಿಸಿಕೊಡಬೇಕು ಎಂದು ಕಾಂಗ್ರೆಸ್ ಹೈಕಮಾಂಡ್ ಸಿಎಂ ಸಿದ್ದುಗೆ ಸ್ಪಷ್ಟ ಟಾರ್ಗೆಟ್ ನೀಡಿದೆ ಎಂದು ತಿಳಿದುಬಂದಿದೆ. ಸಿಎಂ ಸಿದ್ದರಾಮಯ್ಯಗೆ ಬಿತ್ತು ಟಾರ್ಗೆಟ್ ಇಪ್ಪತ್ತು ಇತ್ತೀಚೆಗೆ ದೆಹಲಿಯಲ್ಲಿ ನಡೆದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕೆಪಿಸಿಸಿ ಅಧ್ಯಕ್ಷ ಡಾ […]

ದಕ್ಷಿಣಾರ್ಧ ಗೆಲವು ನಮ್ಮದೇ: ವೆಂಕಯ್ಯ ನಾಯ್ಡು

Wednesday, March 12th, 2014
M.-Venkaiah-Naidu

ಬೆಂಗಳೂರು: ರಾಷ್ಟ್ರ ಮಟ್ಟದಲ್ಲಿ 272ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಅಭಿಯಾನ ನಡೆಸುತ್ತಿರುವ ಬಿಜೆಪಿ, ದಕ್ಷಿಣ ಭಾರತದ ಲೋಕಸಭಾ ಕ್ಷೇತ್ರಗಳಲ್ಲಿ ಅರ್ಧದಷ್ಟು ಗೆಲ್ಲುವ ಗುರಿ ಹಾಕಿಕೊಂಡಿದೆ. ದಕ್ಷಿಣ ಭಾರತದಲ್ಲಿರುವ 132 ಕ್ಷೇತ್ರಗಳಲ್ಲಿ 66ಕ್ಕೂ ಅಧಿಕ ಸೀಟುಗಳನ್ನು ಎನ್‌ಡಿಎ ಅಥವಾ ಬಿಜೆಪಿ ಗೆಲ್ಲುವ ನಿರೀಕ್ಷೆಯಲ್ಲಿದೆ. ಇದಕ್ಕೆ ಪೂರಕವಾಗಿ ಕರ್ನಾಟಕ, ಕೇರಳ, ಆಂಧ್ರಪ್ರದೇಶ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಬಿಜೆಪಿಯ ಬಲವರ್ಧನೆಯಾಗುತ್ತಿದೆ. ಕೆಲ ರಾಜ್ಯಗಳಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ಹೊಸ ಪಕ್ಷಗಳು ಬರುತ್ತಿವೆ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ವೆಂಕಯ್ಯ ನಾಯ್ಡು ಹೇಳಿದ್ದಾರೆ. ತಮಿಳುನಾಡಿನಲ್ಲಿ […]