ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ: ಏ.26ರ ಮತದಾನ ಕಾರ್ಯಕ್ಕೆ ಸಕಲ ಸಜ್ಜು

Thursday, April 25th, 2024
ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ: ಏ.26ರ ಮತದಾನ ಕಾರ್ಯಕ್ಕೆ ಸಕಲ ಸಜ್ಜು

ಮಂಗಳೂರು : ಲೋಕಸಭೆ ಸಾರ್ವತ್ರಿಕ ಚುನಾವಣೆ ಪ್ರಕ್ರಿಯೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಸಂಬಂಧಿಸಿದ ಮತಗಟ್ಟೆ ಸಿಬ್ಬಂದಿಗಳಿಗೆ ಮತ ಯಂತ್ರಗಳು ಹಾಗೂ ಚುನಾವಣಾ ಸಾಮಗ್ರಿಯನ್ನು ವಿತರಿಸುವ ಪ್ರಮುಖ ಘಟ್ಟವಾಗಿರುವ ಮಸ್ಟರಿಂಗ್ ಕಾರ್ಯ 17-ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಗುರುವಾರ ಅಚ್ಚುಕಟ್ಟಾಗಿ ನೆರವೇರಿದ್ದು, ಮತದಾನ ಕರ್ತವ್ಯಕ್ಕೆ ನಿಯೋಜಿತಗೊಂಡ ಅಧಿಕಾರಿ, ಸಿಬ್ಬಂದಿ ಮತಗಟ್ಟೆಗಳತ್ತ ತೆರಳಿದರು. 200- ಬೆಳ್ತಂಗಡಿ ವಿಧಾನಸಭಾಕ್ಷೇತ್ರದ ಮಸ್ಟರಿಂಗ್ ಕಾರ್ಯ ಬೆಳ್ತಂಗಡಿಯ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಿ.ಯು ಕಾಲೇಜಿನಲ್ಲಿ ನಡೆಯಿತು. 201- ಮೂಡಬಿದ್ರೆ […]

ದಕ್ಷಿಣ ಕನ್ನಡ ಕ್ಷೇತ್ರದ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ನಾಮಪತ್ರ ಸಲ್ಲಿಕೆ

Wednesday, April 3rd, 2024
R-Padmaraj

ಮಂಗಳೂರು: ದಕ್ಷಿಣ ಕನ್ನಡ ಕ್ಷೇತ್ರದ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ಆರ್. ಅವರು ಬುಧವಾರ ಏಪ್ರಿಲ್ 3 ರಂದು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸುವ ಮುನ್ನ ಬುಧವಾರ ಬೆಳಿಗ್ಗೆ ಶರವು ಶ್ರೀ ಮಹಾಗಣಪತಿ ದೇವಸ್ಥಾನ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕಂಕನಾಡಿ ಶ್ರೀ ಬ್ತಹ್ಮಬೈದರ್ಕಳ ಗರೋಡಿಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ನಂತರ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಅರ್ಚನೆ ಸಲ್ಲಿಸಿದ ಬಳಿಕ ಮೆರವಣಿಗೆಗೆ ಚಾಲನೆ ನೀಡಲಾಯಿತು.ಗೊಂಬೆ ಬಳಗ, ಚೆಂಡೆ, ಕೊಂಬು ಸಹಿತ ಮೆರವಣಿಗೆಯಲ್ಲಿ […]

ಬಿಜೆಪಿ ಪರ ಜನತೆಯ ವಿಶ್ವಾಸ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಸಂತಸ

Thursday, July 8th, 2021
Nalin Kumar

ಮಂಗಳೂರು : ರಾಜ್ಯದ ಮತದಾರರು ಬಿಜೆಪಿ ಪರವಾಗಿದ್ದಾರೆ ಎನ್ನುವುದನ್ನು ಬೆಳಗಾವಿ ಲೋಕಸಭೆ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ ಮತ್ತೊಮ್ಮೆ ಸಾಬೀತು ಪಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಾಯಕತ್ವದ ಮೇಲೆ ವಿಶ್ವಾಸ ಇರಿಸಿದ ಜನತೆ ಬಿಜೆಪಿಗೆ ಅಭೂತಪೂರ್ವ ಗೆಲುವು ನೀಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದಾರೆ. ರಾಜ್ಯದಲ್ಲಿ ಈ ಹಿಂದೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ 12 ಸ್ಥಾನಗಳನ್ನು ಗೆಲ್ಲುವ ಮೂಲಕ ಪಾರಮ್ಯ ಮೆರೆದಿತ್ತು. ಈ […]

ಸರ್ಕಾರದ ಯೋಜನೆಗಳ ಪ್ರಚಾರಕ್ಕೆ ಖರ್ಚಾಗಿದ್ದು ಬರೊಬ್ಬರಿ 5 ಸಾವಿರ ಕೋಟಿ..!

Friday, December 28th, 2018
new-delhi

ನವದೆಹಲಿ: ಸರ್ಕಾರದ ಯೋಜನೆಗಳ ಪ್ರಚಾರಕ್ಕೆ ನಾಲ್ಕು ವರ್ಷದಲ್ಲಿ 5000 ಕೋಟಿ ರೂಪಾಯಿ ಹಣ ಉಪಯೋಗಿಸಲಾಗಿದೆ ಎಂದು ಮಾಹಿತಿ ಮತ್ತು ಪ್ರಚಾರ ಸಚಿವ ರಾಜವರ್ಧನ್ ಸಿಂಗ್ ರಾಥೋಡ್ ನಿನ್ನೆ ಲೋಕಸಭೆಗೆ ಅಂಕಿ ಅಂಶಗಳ ಸಮೇತ ವರದಿ ನೀಡಿದ್ದಾರೆ. 2014 ರಿಂದ 2018ರ ಡಿಸೆಂಬರ್ 7ರ ವರೆಗೆ ಸರ್ಕಾರದ ಯೋಜನೆಗಳ ಪ್ರಚಾರ ಕಾರ್ಯಕ್ಕೆ 5,245.73 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ. ವಿವಿಧ ಯೋಜನೆಗಳನ್ನು ಹೊರ ತರುವ ಸಚಿವಾಲಯಗಳಲ್ಲಿನ ಕಾರ್ಯಕ್ರಮಗಳ ಬಗೆಗಿನ ಪ್ರಚಾರಕ್ಕೆ ಪೂರಕವಾಗುವ ಮತ್ತು ಫಲಾನುಭವಿಗಳಿಗೆ ನೀಡಬೇಕಾದ ಮಾಹಿತಿಯನ್ನು ಹೊಂದಿರುತ್ತವೆ. […]

ಲೋಕಸಭೆ ಚುನಾವಣೆಗೆ ಪಂಚರಾಜ್ಯ ಫಲಿತಾಂಶ ಪ್ರಭಾವ ಬೀರದು: ಅರುಣ್​ ಜೇಟ್ಲಿ

Wednesday, December 12th, 2018
arun-jatley

ನವದೆಹಲಿ: ಈ ಬಾರಿಯ ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿಯ ಯಾವುದೇ ಆಟ ನಡೆಯದೆ, ಹೀನಾಯ ಸೋಲು ಒಪ್ಪಿಕೊಂಡಿದೆ. ಇದರ ಬೆನ್ನಲ್ಲೇ ಈ ಚುನಾವಣೆ ಮುಂದಿನ ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂಬ ಮಾತುಗಳನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ತಳ್ಳಿಹಾಕಿದ್ದಾರೆ. 2019ರ ಲೋಕಸಭೆ ಚುನಾವಣೆಗೆ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಯಾವುದೇ ಪ್ರಭಾವ ಬೀರದು. ಕೇಂದ್ರ ಸರ್ಕಾರದ ಕಾರ್ಯ ಆಧರಿಸಿಯೇ ಲೋಕಸಭೆ ಚುನಾವಣೆ ಫಲಿತಾಂಶ ಹೊರಬೀಳಲಿದೆ ಎಂದು ಅವರು ಹೇಳಿದ್ದಾರೆ. ರಾಜ್ಯ ಚುನಾವಣೆಯ ವಿಚಾರಗಳೇ ಬೇರೆ. ಇದೇ ಮೂರು ರಾಜ್ಯಗಳಲ್ಲಿ […]

ಲೋಕಸಭೆ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣನನ್ನು ಹಾಸನ ಅಭ್ಯರ್ಥಿಯಾಗಿ ಕಣಕ್ಕಿಳಿಸುತ್ತೇವೆ: ಎಚ್. ಡಿ. ದೇವೇಗೌಡ

Monday, August 13th, 2018
prajwal-revanna

ಹಾಸನ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣನನ್ನು ಹಾಸನ ಲೋಕಸಭಾ ಅಭ್ಯರ್ಥಿಯಾಗಿ ಕಣಕ್ಕಿಳಿಸುತ್ತೇವೆ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ. ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈ ವಿಚಾರ ತಿಳಿಸಿದರು. ಇನ್ನು ಸ್ಥಳೀಯ ಸಂಸ್ಥೆ ಚುನಾವಣೆಗೆ ಸಂಬಂಧಿಸಿದಂತೆ ನಾನೇ ನಾಲ್ಕೈದು ದಿನ ಹಾಸನದಲ್ಲಿದ್ದು ಕಾರ್ಯಕರ್ತರ ಸಭೆ ಮಾಡುತ್ತೇನೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ನೊಂದಿಗೆ ಮೈತ್ರಿ ಇಲ್ಲ. ಕಾಂಗ್ರೆಸ್ನೊಂದಿಗೆ ಮೈತ್ರಿಗೆ ಅಪಾಯವಾಗದಂತೆ ಸ್ಥಳೀಯ ಸಂಸ್ಥೆ ಚುನಾವಣೆ ಎದುರಿಸುತ್ತೇವೆ. ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ತೊಂದರೆಯಾಗದ ರೀತಿ ಸ್ಥಳೀಯ ಸಂಸ್ಥೆ ಚುನಾವಣೆ […]

ಕೇಂದ್ರ ಲೋಕಸಭೆಯಲ್ಲಿ ಗೆದ್ದಿರಬಹುದು, ಆದರೆ ಜನರ ವಿಶ್ವಾಸ ಕಳೆದುಕೊಳ್ಳಲಿದೆ: ಯು.ಟಿ. ಖಾದರ್

Saturday, July 21st, 2018
congress

ಮಂಗಳೂರು: ಲೋಕಸಭೆಯಲ್ಲಿ ನಡೆದ ಅವಿಶ್ವಾಸ ಮಂಡನೆಯಲ್ಲಿ ಸೋಲಾಗಿರುವ ಬಗ್ಗೆ ಮಂಗಳೂರಿನಲ್ಲಿ ಸಚಿವ ಯು.ಟಿ. ಖಾದರ್ ಪ್ರತಿಕ್ರಿಯೆ ನೀಡಿದ್ದಾರೆ. ಕೇಂದ್ರ ಸರಕಾರಕ್ಕೆ ಲೋಕಸಭೆಯಲ್ಲಿ ನಡೆದ ಅವಿಶ್ವಾಸ ಮಂಡನೆ ವೇಳೆ ಗೆಲುವಾಗಿರಬಹುದು. ಆದರೆ ಜನರ ವಿಶ್ವಾಸ ಅವರು ಕಳೆದುಕೊಳ್ಳಲಿದ್ದಾರೆ ಎಂದರು. ಅವಿಶ್ವಾಸ ಮತ ಮಂಡನೆಯ ಮೂಲಕ ಸರಕಾರವನ್ನು ಎಕ್ಸ್ಪೋಸ್ ಮಾಡಲು ಸಾಧ್ಯವಾಗಿದೆ. ಆದರೆ ನಾಲ್ಕು ವರ್ಷ ಸರಕಾರ ಏನು ಮಾಡಿದೆ? ಏನು ಮಾಡಿಲ್ಲ ಎಂಬುದನ್ನು ತೋರಿಸಿದಂತಾಗಿದೆ ಎಂದು ಸಚಿವರು ಹೇಳಿದರು.

ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಮಸೂದೆಗೆ ರಾಜ್ಯಸಭೆಯ ಅನುಮೋದನೆ

Thursday, August 4th, 2016
GST

ಹೊಸದಿಲ್ಲಿ: ಒಂದು ದೇಶ-ಒಂದೇ ರೀತಿಯ ತೆರಿಗೆ’ ಎಂಬ ಧ್ಯೇಯ ಹೊಂದಿರುವ “ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮಸೂದೆ’ಗೆ ಕೊನೆಗೂ ರಾಜ್ಯಸಭೆಯ ಅನುಮೋದನೆ ಸಿಕ್ಕಿದೆ. ಬುಧವಾರ ಮಧ್ಯಾಹ್ನ ಮಂಡಿಸಲಾದ ಐತಿಹಾಸಿಕ ಮಸೂದೆ ಕುರಿತು ಸತತ 7 ಗಂಟೆಗಳ ಚರ್ಚೆ ನಡೆದು, ಬಳಿಕ ಮಸೂದೆಯನ್ನು ಮತಕ್ಕೆ ಹಾಕಿದಾಗ, ಮಸೂದೆ ಪರ 203 ಮತ್ತು ವಿರುದ್ಧವಾಗಿ ಮತ ಚಲಾವಣೆಯಾದವು. ಈ ಮೂಲಕ ಮಸೂದೆಗೆ ಸದನವು ಬಹುಮತದ ಅನುಮೋದನೆ ನೀಡಿತು. ಮಸೂದೆಗೆ ಎಐಎಡಿಎಂಕೆ ಮಾತ್ರವೇ ವಿರೋಧ ವ್ಯಕ್ತಪಡಿಸಿತ್ತು. ಆದರೆ ಕಾಂಗ್ರೆಸ್‌ ಕೂಡಾ […]

ನಕ್ಸಲರ ವಿರುದ್ಧ ಸೇಡು ತೀರಿಸಿಯೇ ಸಿದ್ಧ: ಸಚಿವ ಶಿಂದೆ

Thursday, March 13th, 2014
Sushil-Kumar-Shinde

ಭೋಪಾಲ್: ಛತ್ತೀಸ್‌ಗಡದಲ್ಲಿ ರಕ್ತದೋಕುಳಿ ಹರಿಸಿದ ನಕ್ಸಲರ ವಿರುದ್ಧ ಸೇಡು ತೀರಿಸಿಯೇ ಸಿದ್ಧ ಎಂದಿದ್ದಾರೆ ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂದೆ. ಬುಧವಾರ ಛತ್ತೀಸ್‌ಗಡದ ಸುಕ್ಮಾ ಜಿಲ್ಲೆಗೆ ಭೇಟಿ ನೀಡಿದ ಶಿಂದೆ, ಘಟನೆಯ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಯೇ ಕೈಗೆತ್ತಿಕೊಳ್ಳಲಿದೆ. ನಕ್ಸಲರು ಎಲ್ಲಿದ್ದಾರೆ ಎಂಬುದು ನಮಗೆ ಗೊತ್ತು. ಅವರನ್ನು ಸದೆಬಡಿಯುವುದು ಹೇಗೆ ಎಂದೂ ಗೊತ್ತು ಎಂದಿದ್ದಾರೆ. ಲೋಕಸಭೆ ಚುನಾವಣೆಗೆ ಅಡ್ಡಿಪಡಿಸಲೆಂದೇ ನಕ್ಸಲರು ಇಂತಹ ಕೃತ್ಯವೆಸಗಿದ್ದಾರೆ. ಆದರೆ, ಅವರ ಪ್ರಯತ್ನಕ್ಕೆ ಫಲ ಸಿಗುವುದಿಲ್ಲ ಎಂದೂ ಅವರು ಹೇಳಿದ್ದಾರೆ. ಏತನ್ಮಧ್ಯೆ, […]

ಪೂಜಾರಿಗೆ ಒಲಿದ ಮತದೇವರು!

Monday, March 10th, 2014
Janardhan-Poojary

ಮಂಗಳೂರು: ಕಾಂಗ್ರೆಸ್ ಆಂತರಿಕ ಚುನಾವಣೆಯಲ್ಲಿ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಗೆಲವು ಸಾಧಿಸಿದ್ದು, ಮಂಗಳೂರು ಲೋಕಸಭೆ ಕ್ಷೇತ್ರದಿಂದ ಅಧಿಕೃತ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಭಾನುವಾರ ನಡೆದ ಆಂತರಿಕ ಚುನಾವಣೆಯಲ್ಲಿ 598 ಮತಗಳ ಪೈಕಿ 547 ಮತಗಳು ಚಲಾವಣೆಯಾಗಿದ್ದು, 7 ಮತಗಳು ಅಸಿಂಧುಗೊಂಡಿವೆ. ಈ ಪೈಕಿ ಜನಾರ್ದನ ಪೂಜಾರಿ 478 ಮತ ಪಡೆದರೆ, ಕಣಚೂರು ಮೋನು 62 ಮತಗಳನ್ನು ಪಡೆದು ಪರಾಭವಗೊಂಡಿದ್ದಾರೆ. 10 ನಿಮಿಷ ತಡವಾಗಿ ಬಂದ ಶಾಸಕ ಮೊಯಿನುದ್ದೀನ್ ಬಾವಾಗೆ ಮತ ಹಾಕುವ ಅವಕಾಶ ನೀಡಲಿಲ್ಲ. […]