ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ ಶೇ.60 ರಷ್ಟು ಮತದಾನ

Friday, April 19th, 2024
vote-1st phase

ನವದೆಹಲಿ: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾರ ನಡೆದಿದ್ದು ವಿವಿಧ ರಾಜ್ಯಗಳ 102 ಕ್ಷೇತ್ರಗಳಲ್ಲಿ ಒಟ್ಟಾರೆ ಶೇ.60 ರಷ್ಟು ಮತದಾನವಾಗಿದೆ. ತಮಿಳುನಾಡಿನಲ್ಲಿ ಶೇ.63.2, ರಾಜಸ್ಥಾನದಲ್ಲಿ ಶೇ.50.3, ಉತ್ತರ ಪ್ರದೇಶದಲ್ಲಿ ಶೇ.57.5 ಮತ್ತು ಮಧ್ಯಪ್ರದೇಶದಲ್ಲಿ ಶೇ.63.3ರಷ್ಟು ಮತದಾನವಾಗಿದೆ. ಪಶ್ಚಿಮ ಬಂಗಾಳದಲ್ಲಿ ಅತಿ ಹೆಚ್ಚು ಮತದಾನವಾಗಿದ್ದು, ಶೇ. 77.57 ರಷ್ಟು ವೋಟಿಂಗ್ ಆಗಿದೆ. 21 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಇಂದು ಮತದಾನ ನಡೆದು, ಸಂಜೆ 6 ಗಂಟೆಗೆ ಮುಕ್ತಾಯವಾಗಿದೆ. ಮತದಾನ ಮುಕ್ತಾಯಗೊಂಡಾಗ ಸುಮಾರು ಶೇ.60 ರಷ್ಟು ಮತದಾನವಾಗಿದೆ […]

ಕೆಎಸ್ ಈಶ್ವರಪ್ಪ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ

Friday, March 15th, 2024
eswarappa

ಶಿವಮೊಗ್ಗ: ಲೋಕಸಭೆ ಚುನಾವಣೆಯಲ್ಲೂ ತಮ್ಮ ಪುತ್ರನಿಗೆ ಟಿಕೆಟ್ ಸಿಗದ್ದಿದ್ದಕ್ಕೆ ಬಿಜೆಪಿ ವಿರುದ್ಧ ತೀವ್ರ ಆಕ್ರೋಶಗೊಂಡಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಸಿಗದೆ ಅಸಮಾಧಾನಗೊಂಡಿದ್ದ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ. ಪುತ್ರ ಕಾಂತೇಶ್ ಗೆ ಹಾವೇರಿ ಲೋಕಸಭೆ ಕ್ಷೇತ್ರದ ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ಪುತ್ರನ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಈಶ್ವರಪ್ಪ ಇದೀಗ ಅಖಾಡಕ್ಕಿಳಿದಿದ್ದಾರೆ. ಇಂದು ಬೆಂಬಲಿಗರು, ಹಿತೈಷಿಗಳು, ಅಭಿಮಾನಿಗಳೊಂದಿಗೆ ನಗರದ ಬಂಜಾರ […]

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಆಯ್ಕೆ

Friday, November 10th, 2023
BY-Vijayendra

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ, ಬಿಜೆಪಿ ಶಾಸಕ ಬಿವೈ ವಿಜಯೇಂದ್ರ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಹಾಗೂ ಬಿಜೆಪಿ ನಾಯಕ ಬಿಎಲ್ ಸಂತೋಷ್ ಅವರಿಗೆ ಬಿವೈ ವಿಜಯೇಂದ್ರ ಟ್ವೀಟ್ ಮೂಲಕ ಧನ್ಯವಾದ ತಿಳಿಸಿದ್ದಾರೆ. ಸಂಘದ ಹಾಗೂ ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಸರ್ವರ ನಿರೀಕ್ಷೆ ಹಾಗೂ ಜನರ ಅಪೇಕ್ಷೆಗೆ ಪೂರಕವಾಗಿ ರಾಜ್ಯದಲ್ಲಿ […]

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ: ನಟ ಕಮಲ್​ ಹಾಸನ್​

Saturday, December 22nd, 2018
kamal-hassan

ಚೆನ್ನೈ: ತಮಿಳಿನ ಖ್ಯಾತ ನಟ ಕಮಲ್ ಹಾಸನ್ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಸ್ವತಃ ಅವರೇ ಹೇಳಿಕೊಂಡಿದ್ದಾರೆ. ರಾಜಕೀಯ ರಂಗ ಪ್ರವೇಶಿಸಿದ ಕಮಲ್, ಮಕ್ಕಳ್ ನಿಧಿ ಮೈಯಂ ಪಕ್ಷ ಸ್ಥಾಪನೆ ಮಾಡಿದ್ದರು. ಮುಂಬರುವ ಲೋಕಸಭೆ ಚುನಾವಣೆಗೆ ತಮ್ಮ ಪಕ್ಷ ಸನ್ನದ್ಧವಾಗಿದೆ ಎಂದೂ ತಮ್ಮ ಹುಟ್ಟುಹಬ್ಬದಂದು ಹೇಳಿದ್ದರು. ಆದರೆ ಅವರು ಸ್ಪರ್ಧಿಸುವ ಬಗ್ಗೆ ಸ್ಪಷ್ಟ ಮಾಹಿತಿ ಹೊರಬಿದ್ದಿರಲಿಲ್ಲ. ಈಗ ಅವರೇ ಹೇಳಿಕೊಂಡಿರುವಂತೆ ಮುಂದಿನ ಲೋಕಸಭೆ ಚುನಾವಣೆಗೆ ಅವರು ಸ್ಪರ್ಧಿಸುತ್ತಿರುವುದು ಖಚಿತ. ಆದರೆ ಯಾವ ಕ್ಷೇತ್ರದಿಂದ […]

ಒಂದು ವರ್ಷ ನನ್ನನ್ನು ಯಾರೂ ಟಚ್ ಮಾಡಲು ಸಾಧ್ಯವಿಲ್ಲ: ಹೆಚ್.ಡಿ. ಕುಮಾರಸ್ವಾಮಿ

Friday, June 15th, 2018
kumarswamy-2

ಬೆಂಗಳೂರು: ಒಂದು ವರ್ಷದವರೆಗೆ ನನ್ನನ್ನೂ ಯಾರೂ ಟಚ್ ಮಾಡಲು ಸಾಧ್ಯವಿಲ್ಲ. ಲೋಕಸಭೆ ಚುನಾವಣೆವರೆಗೆ ನಾನೇ ಸಿಎಂ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಖಡಕ್ ಆಗಿ ಹೇಳಿದ್ದಾರೆ. ಸೆಂಟ್ರಲ್ ಕಾಲೇಜಿನ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ಇಂದು ಹಮ್ಮಿಕೊಂಡಿದ್ದ 15 ನೇ ರಾಜ್ಯಮಟ್ಟದ ಲೆಕ್ಕಪರಿಶೋಧಕರ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಕೃತಿಯು ನನ್ನ ಪರವಾಗಿದೆ. ರಾಜ್ಯದಲ್ಲಿ ಒಳ್ಳೆ ಮಳೆಯಾಗುತ್ತಿದೆ. ನಾನು ಕೆಲಸ ಮಾಡಬೇಕಾದರೆ ಬಹಳಷ್ಟು ಜನ ಕಾಲೆಳೆಯಲು ಇರುತ್ತಾರೆ ಎಂದು ಪರೋಕ್ಷವಾಗಿ ಪ್ರತಿಪಕ್ಷದ ನಾಯಕರಿಗೆ ತಿರುಗೇಟು ನೀಡಿದರು. […]

ದಕ್ಷಿಣ ಕನ್ನಡದಲ್ಲಿ ಈ ಬಾರಿ 22,513 ಹೊಸ ಮತದಾರರು

Monday, March 5th, 2018
election

ಮಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಸಿದ್ಧತೆ ಆರಂಭಿಸಿದೆ. ಈಗಾಗಲೇ ಮತದಾರರ ಪಟ್ಟಿಯನ್ನು ಜಿಲ್ಲಾಡಳಿತ ಸಿದ್ದಪಡಿಸಿದ್ದು ಜಿಲ್ಲೆಯಲ್ಲಿ ಒಟ್ಟು 16,66,814 ಮತದಾರರಿದ್ದಾರೆ. ಇವರಲ್ಲಿ 8,20,764 ಪುರುಷ ಹಾಗೂ 8,46,050 ಮಂದಿ ಮಹಿಳಾ ಮತದಾರರಾಗಿದ್ದಾರೆ. ಈ ಬಾರಿ ಜಿಲ್ಲೆಯಲ್ಲಿ ಒಟ್ಟು 22,513 ಹೊಸ ಮತದಾರರು ಸೇರ್ಪಡೆಗೊಂಡಿದ್ದು, ಇದರಲ್ಲಿ 10,461 ಪುರುಷ ಮತ್ತು 12,053 ಮಹಿಳಾ ಮತದಾರರಾಗಿದ್ದಾರೆ. ನೋಂದಣಿಯಾದ ಮತದಾರರ ಸಂಖ್ಯೆ ಮತ್ತು 2018 ರ ಅಂದಾಜು ಜನಸಂಖ್ಯೆಯ ವಿಶ್ಲೇಷಣೆ ನಡೆಸಿದರೆ ಕ್ರಮವಾಗಿ ಜಿಲ್ಲೆಯಲ್ಲಿ ಶೇ. 73.02 […]

ಲೋಕಸಮರ: ಮಾಜಿ ಸಿಎಂಗಳ ವಿರುದ್ಧ ಮಹಿಳೆಯರ ರಣಕಹಳೆ

Thursday, March 6th, 2014
Lok-Sabha-Election

ಬೆಂಗಳೂರು: ಲೋಕಸಭೆ ಚುನಾವಣೆ ವೇಳಾಪಟ್ಟಿ ಪ್ರಕಟವಾಗುತ್ತಿದ್ದಂತೆಯೇ ಪ್ರಮುಖ ರಾಜಕೀಯ ಪಕ್ಷಗಳ ಚಟುವಟಿಕೆ ಗರಿಗೆದರಿ ನಿಂತಿವೆ. ಅಭ್ಯರ್ಥಿಗಳ ಆಯ್ಕೆಗೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಾಳೆಯದಲ್ಲಿ ಬಿರುಸಿನ ಚಟುವಟಿಕೆಗಳು ನಡೆದಿದ್ದು, ಬಹುತೇಕ ಎಲ್ಲ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಖೈರುಗೊಂಡಿದ್ದರೂ, ಯಾವುದೇ ಪಕ್ಷ ಇದುವರೆಗೂ ಪಟ್ಟಿ ಬಿಡುಗಡೆ ಮಾಡಿಲ್ಲ. ಆದರೆ ಕೆಲವು ಪ್ರಮುಖ ಕ್ಷೇತ್ರಗಳಿಗೆ ಪ್ರಭಾವಿ ಅಭ್ಯರ್ಥಿಗಳ ಆಯ್ಕೆಗೆ ತೆರೆಮರೆಯಲ್ಲಿ ಕಸರತ್ತು ನಡೆದಿದೆ. ಕಾಂಗ್ರೆಸ್‌ನ ಹಿರಿಯ ಮುಖಂಡ ಹಾಗೂ ಕೇಂದ್ರ ಸಚಿವ ಎಂ.ವೀರಪ್ಪ ಮೊಯಿಲಿ ಅವರ ವಿರುದ್ಧ ತಮ್ಮ ಸೊಸೆ […]

ಲೋಕಸಭೆ ಚುನಾವಣೆ ದಿನಾಂಕ ಪ್ರಕಟ: ಏ.7ರಿಂದ ಮೇ, 12ರವರೆಗೆ ಮತದಾನ

Wednesday, March 5th, 2014
S.V.-Sampath

ನವದೆಹಲಿ: 2014ರ ಲೋಕಸಭೆ ಚುನಾವಣೆಯ ದಿನಾಂಕ ಪ್ರಕಟವಾಗಿದ್ದು,  ಏಪ್ರಿಲ್ 7ರಿಂದ 9 ಹಂತಗಳಲ್ಲಿ 16ನೇ ಲೋಕಸಭೆಗೆ ಚುನಾವಣೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ವಿ.ಎಸ್.ಸಂಪತ್ ಅವರು ಬುಧವಾರ ಹೇಳಿದ್ದಾರೆ. ಈ ಸಂಬಂಧ ಇಂದು ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಂಪತ್, ಮೇ 31ಕ್ಕೆ 15ನೇ ಲೋಕಸಭೆಯ ಅವಧಿ ಅಂತ್ಯಗೊಳ್ಳಲಿದ್ದು, ಮೇ 31ರೊಳಗೆ ಚುನಾವಣಾ ಪ್ರಕ್ರಿಯೆಗಳು ಮುಗಿಯಬೇಕು ಮತ್ತು ಜೂನ್ 1ಕ್ಕೆ ಕೇಂದ್ರದಲ್ಲಿ ಹೊಸ ಸರ್ಕಾರ ಅಸ್ಥಿತ್ವಕ್ಕೆ ಬರಬೇಕಿದೆ ಎಂದು ಹೇಳಿದರು. ಏಪ್ರಿಲ್ 7ರಂದು […]