ಲಂಚ ಸ್ವೀಕರಿಸುತ್ತಿದ್ದ ಕುಂದಾಪುರ ಅರಣ್ಯ ಇಲಾಖೆಯ ನೌಕರ ಲೋಕಾಯುಕ್ತ ಪೊಲೀಸರ ಬಲೆಗೆ

Wednesday, November 29th, 2023
B-Manjunath-Poojary

ಕುಂದಾಪುರ : ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಸಂಬಂಧಿಸಿ ಲಂಚ ಸ್ವೀಕರಿಸುತ್ತಿದ್ದ ಕುಂದಾಪುರ ಅರಣ್ಯ ಇಲಾಖೆಯ ನೌಕರರನ್ನು ಲೋಕಾಯುಕ್ತ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿಯವರ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ ಬಿ.ಮಂಜುನಾಥ್ ಪೂಜಾರಿ ಬಂಧಿತ ಆರೋಪಿ. ಆಲೂರಿನ ಆದಿತ್ಯ ಎಂಬವರು ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗಾಗಿ ಮಂಜುನಾಥ್ ಪೂಜಾರಿ 15 ಸಾವಿರ ರೂ. ಲಂಚ ನೀಡುವಂತೆ ಬೇಡಿಕೆ ಮುಂದಿಟ್ಟಿದ್ದನು. ಈ ಬಗ್ಗೆ ಆದಿತ್ಯ ಉಡುಪಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದರು. ಅದರಂತೆ […]

ಅಶ್ಲೀಲ ಮೆಸೇಜ್​ಗಳನ್ನು ಕಳುಹಿಸುತ್ತಿದ್ದ ವಕೀಲ, ಒಂದು ದಿನ ರಾತ್ರಿ ಮಾಡಿದ್ದೇನು ಗೊತ್ತಾ ?

Sunday, October 24th, 2021
North Girl

ಮಂಗಳೂರು: ಮಂಗಳೂರಿನ ಲೋಕಾಯುಕ್ತ ಮತ್ತು ಎಸಿಬಿ ವಿಶೇಷ ವಕೀಲರಾಗಿದ್ದ ಕೆ.ಎಸ್.ಎನ್. ರಾಜೇಶ್ ಭಟ್ ವಿರುದ್ಧ ವಿದ್ಯಾರ್ಥಿನಿ ಗಂಭೀರ ಆರೋಪ ಮಾಡಿದ್ದಾಳೆ. ಇದೀಗ ಈ ಬಗ್ಗೆ ಮಾತನಾಡಿರುವ ಸಂತ್ರಸ್ತೆ, ರಾಜೇಶ್ ಭಟ್ ರಾತ್ರಿ ಎಂಟು ಗಂಟೆಯವರೆಗೂ ಕಚೇರಿಯಲ್ಲೇ ಕೆಲಸ ಮಾಡಲು ಹೇಳಿದ್ದರು. ರಾತ್ರಿ ಅಶ್ಲೀಲ ಮೆಸೇಜ್ಗಳನ್ನು ಕಳುಹಿಸುತ್ತಿದ್ದರು. ಆದರೆ, ತಾನು ಆ ಮೆಸೇಜ್ಗಳಿಗೆ ಪ್ರತಿಕ್ರಿಯಿಸುತ್ತಿರಲಿಲ್ಲ ಎಂದು ಹೇಳಿದ್ದಾರೆ. ಮಂಗಳೂರಿನ ಪ್ರತಿಷ್ಠಿತ ವಕೀಲನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿರುವ ಉತ್ತರ ಪ್ರದೇಶ ಮೂಲದ ಸಂತ್ರಸ್ತೆ ವಿದ್ಯಾರ್ಥಿನಿ, ಇದೀಗ ವಕೀಲ […]

ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಸಾಕಷ್ಟು ಅಕ್ರಮಗಳು ನಡೆದಿದ್ದು, ತನಿಖೆ ಮಾಡಬೇಕಾಗಿದೆ : ಐವನ್

Friday, October 9th, 2020
Ivan

ಮಂಗಳೂರು : ಸ್ಮಾರ್ಟ್ ಸಿಟಿ ಯೋಜನೆಯ ಅಂದಾಜು ವೆಚ್ಚವು ಈ ಯೋಜನೆಯ ಈ ಹಿಂದಿನ ಅಂದಾಜು ವೆಚ್ಚಕ್ಕಿಂತ ಮೂರು ಪಟ್ಟು ಹೆಚ್ಚಾಗಿದೆ  ಈ ಅಕ್ರಮಗಳ ಬಗ್ಗೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಥವಾ ಲೋಕಾಯುಕ್ತ ತನಿಖೆ ನಡೆಸಬೇಕೆಂದು ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಅವರು ಒತ್ತಾಯಿಸಿದ್ದಾರೆ. ಕಾಂಗ್ರೆಸ್ ಕಚೇರಿಯಲ್ಲಿ ಅಕ್ಟೋಬರ್ 8 ರ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು,  ಸ್ಮಾರ್ಟ್ ಸಿಟಿ ಯೋಜನೆಯ ಅಂದಾಜು ವೆಚ್ಚ ಮತ್ತು ಡಿಪಿಆರ್ ಬಗ್ಗೆ ಸಾರ್ವಜನಿಕರಿಗೆ ಅನುಮಾನವಿದೆ. ಸ್ಮಾರ್ಟ್ ಸಿಟಿ […]

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅ.23 ರಂದು ಲೋಕಾಯುಕ್ತರಿಂದ ಸಾರ್ವಜನಿಕರ ದೂರಿನ ಅರ್ಜಿ ಸ್ವೀಕಾರ

Wednesday, October 16th, 2019
lokayukta

ಮಂಗಳೂರು : ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರುಗಳು ಮುಂದಿನ ದಿನಗಳಲ್ಲಿ ದಕ್ಷಿಣ ಕನ್ನಡದ ವಿವಿಧ ತಾಲೂಕುಗಳಲ್ಲಿ ಭೇಟಿ ನೀಡಿ, ಸಾರ್ವಜನಿಕರಿಂದ ದೂರು ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ. ಅಕ್ಟೋಬರ್ 23 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸುಳ್ಯ ತಾಲೂಕು ಕಚೇರಿ ಹಾಗೂ ಬಂಟ್ವಾಳ ತಾಲೂಕು ಕಚೇರಿ, ಅ.24 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಪುತ್ತೂರು ತಾಲೂಕು ಕಚೇರಿ, ಅ. 25 ರಂದು ಬೆಳಗ್ಗೆ 11 ಗಂಟೆಯಿಂದ […]

ನಿರಾಶ್ರಿತರ ಕೇಂದ್ರಕ್ಕೆ ಪರ್ಯಾಯ ನಿವೇಶನ: ಲೋಕಾಯುಕ್ತ ನ್ಯಾಯಮೂರ್ತಿ ಸೂಚನೆ

Saturday, July 20th, 2019
lokayukta

ಮಂಗಳೂರು : ನಗರದ ಪಚ್ಚನಾಡಿಯಲ್ಲಿರುವ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ವಿಶಾಲವಾದ ಬೇರೆ ಜಮೀನು ಮಂಜೂರು ಮಾಡಲು ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ಅವರು ಸೂಚಿಸಿದ್ದಾರೆ. ಅವರು ಶನಿವಾರ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಬಳಿಕ ಮಂಗಳೂರು ತಹಶೀಲ್ದಾರ್‍ಗೆ ಈ ಸೂಚನೆ ನೀಡಿದರು. ಪ್ರಸಕ್ತ ನಿರಾಶ್ರಿತರ ಪರಿಹಾರ ಕೇಂದ್ರವು ಎರಡು ಎಕರೆ ಜಾಗದಲ್ಲಿದ್ದು, ಸುಮಾರು 150ಕ್ಕೂ ಅಧಿಕ ಮಂದಿ ನಿರಾಶ್ರಿತರು ಇಲ್ಲಿ ವಾಸ್ತವ್ಯದಲ್ಲಿದ್ದಾರೆ. ನಿರಾಶ್ರಿತರಿಗೆ ವಾಸ್ತವ್ಯ ತಾಣವಲ್ಲದೇ, ಅವರಿಗೆ ಉಳಿದ ಸಮಯದಲ್ಲಿ ಕೃಷಿ, […]

ಲೋಕಾಯುಕ್ತದಿಂದ ಸಾರ್ವಜನಿಕ ಸಭೆ: ನ್ಯಾ. ವಿಶ್ವನಾಥ ಶೆಟ್ಟಿ

Monday, February 6th, 2017
lokayukta

ಮ0ಗಳೂರು : ಸರಕಾರದ ಸೇವೆಗಳಲ್ಲಿ ವಿಳಂಭ ಸೇರಿದಂತೆ ನಾಗರೀಕರಿಗೆ ಪಾರದರ್ಶಕವಾಗಿ ಸೌಲಭ್ಯಗಳು ದೊರಕುವ ನಿಟ್ಟಿನಲ್ಲಿ ಸಾರ್ವಜನಿಕರ ಅಹವಾಲು ಮತ್ತು ದೂರುಗಳನ್ನು ಆಲಿಸಲು ಲೋಕಾಯುಕ್ತ ಸಂಸ್ಥೆಯಿಂದ ಸಾರ್ವಜನಿಕ ಸಭೆಗಳನ್ನು ಏರ್ಪಡಿಸಲಾಗುವುದು ಎಂದು ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ತಿಳಿಸಿದ್ದಾರೆ. ಅವರು ಸೋಮವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಆಡಳಿತದಲ್ಲಿ ಪಾರದರ್ಶಕತೆ ಅತಿ ಪ್ರಾಮುಖ್ಯವಾಗಿದೆ. ಸರಕಾರಿ ಯೋಜನೆಗಳು ನಾಗರೀಕರಿಗೆ ವೇಗವಾಗಿ ತಲುಪುವುದಿಲ್ಲ ಎಂಬ ದೂರು ಸಾರ್ವತ್ರಿಕವಾಗಿದೆ. ಜನರ ಒಳಿತಿಗಾಗಿ ನಾವು […]

ಲಂಚ ಪಡೆದ ಅಧಿಕಾರಿ ಬಂಧನ

Wednesday, February 5th, 2014
Arrested-bribery

ಉಡುಪಿ: ಸಬ್ಸಿಡಿ ಹಣ ಬಿಡುಗಡೆ ಮಾಡಲು ಸಣ್ಣ ಕೈಗಾರಿಕಾ ಉದ್ಯಮಿಯೊಬ್ಬರಿಂದ ₨ 10 ಸಾವಿರ ಲಂಚ ಪಡೆದ ಆರೋಪದ ಮೇಲೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಪಿ.ನಾಗೇಶ್‌ ಅವರನ್ನು ಲೋಕಾಯುಕ್ತ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಶ್ರೀಕಾಂತ್‌ ಎಂಬುವವರು ಸುಮಾರು ₨ 22 ಲಕ್ಷ ಬಂಡವಾಳದ ಕರಕುಶಲ ಕೈಗಾರಿಕೆ ಆರಂಭಿಸಲು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದರು. ಬಂಡವಾಳದ ಒಟ್ಟು ಮೊತ್ತಕ್ಕೆ ಅನುಗುಣವಾಗಿ, ಅವರಿಗೆ ₨ 8.75 ಲಕ್ಷ ಸಹಾಯಧನ ಇಲಾಖೆಯಿಂದ ಸಂದಾಯವಾಗಬೇಕಿತ್ತು. ಆದರೆ, ಸಹಾಯಧನ ಬಿಡುಗಡೆ ಮಾಡಬೇಕಾದರೆ,  […]

ಶ್ರೀಮಂತಿಕೆ ಹೊಂದಲು ಭ್ರಷ್ಟಾಚಾರದ ಆದಿ ಹಿಡಿಯುವುದು ತಪ್ಪು : ನ್ಯಾ| ಹೆಗೆಡೆ

Sunday, October 16th, 2011
Anti-Corruption

ಮಂಗಳೂರು: ಭ್ರಷ್ಟಾಚಾರ ವಿರೋಧಿ ಸಮಿತಿ ಮಂಗಳೂರು ಹಾಗೂ ಕೆನರಾ ಕಾಲೇಜಿನ ಸಹಯೋಗದಲ್ಲಿ ನಗರದಲ್ಲಿ ಶನಿವಾರ ಟಿ.ವಿ ರಮಣ ಪೈ ಹಾಲ್ ನಲ್ಲಿ ಜರಗಿದ ಭ್ರಷ್ಟಾಚಾರ ವಿರೋಧಿ ಪ್ರತಿಜ್ಞಾ ಸ್ವೀಕಾರ ಸಮಾರಂಭವನ್ನು ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ, ಮಾಜಿ ಲೋಕಾಯುಕ್ತ ನ್ಯಾ| ಎನ್‌. ಸಂತೋಷ್‌ ಕುಮಾರ್ ಹೆಗೆಡೆ ಅವರು ದೀಪ ಬೆಳಗಿಸಿ ಉಧ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು ಭ್ರಷ್ಟಾಚಾರ ಹಾಗೂ ದುರಾಡಳಿತದ ವಿರುದ್ಧ ವಿದ್ಯಾರ್ಥಿಗಳು, ಯುವಜನತೆ ಎಚ್ಚೆತ್ತುಕೊಂಡು ಹೋರಾಟ ನಡೆಸದಿದ್ದರೆ ಈ ದೇಶ ಭವಿಷ್ಯದಲ್ಲಿ ದೊಡ್ಡ […]

ಕರ್ನಾಟಕದ ನೂತನ ಲೋಕಾಯುಕ್ತರಾಗಿ ಸುಪ್ರೀಂಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ವಿ.ಪಾಟೀಲ್ ನೇಮಕ

Tuesday, July 26th, 2011
Justice Shivraj V. Patil, ನಿವೃತ್ತ ನ್ಯಾಯಮೂರ್ತಿ ಶಿವರಾಜ್ ವಿ. ಪಾಟೀಲ್

ಬೆಂಗಳೂರು: ಕರ್ನಾಟಕದ ನೂತನ ಲೋಕಾಯುಕ್ತರಾಗಿ ಸುಪ್ರೀಂಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ವಿ. ಪಾಟೀಲ್ ಮಂಗಳವಾರ ನೇಮಕಗೊಂಡಿದ್ದಾರೆ. 11.1.2005ರಲ್ಲಿ ಸುಪ್ರೀಂಕೋರ್ಟಿನ ನ್ಯಾಯಮೂರ್ತಿಯಾಗಿ ನಿವೃತ್ತರಾದ ನ್ಯಾ. ಪಾಟೀಲ್ ಅವರು 1962ರಲ್ಲಿ ಗುಲ್ಬರ್ಗಾದಲ್ಲಿ ವಕೀಲಿ ವೃತ್ತಿ ಆರಂಭಿಸಿ, 1979 ರವರೆಗೂ ಅಲ್ಲಿ ನ್ಯಾಯವಾದಿಯಾಗಿದ್ದರು. ಗುಲ್ಬರ್ಗಾದ ಸೇಠ್ ಶಂಕರಲಾಲ್ ಲಹೋಟಿ ಕಾನೂನು ಕಾಲೇಜಿನಲ್ಲಿ ಅರೆಕಾಲಿಕ ಕಾನೂನು ಉಪನ್ಯಾಸಕರಾಗಿದ್ದರು. 1975ರಿಂದ 78ರವರೆಗೂ ಇದೇ ಕಾಲೇಜಿನಲ್ಲಿ ಪ್ರಿನ್ಸಿಪಾಲರಾಗಿಯೂ ಸೇವೆ ಸಲ್ಲಿಸಿದ್ದರು. ಹೈದರಾಬಾದಿನ ಶ್ರೀ ಶರಣ ಬಸವೇಶ್ವರ ಸಂಸ್ಥಾನದ ಕರ್ನಾಟಕ ಶಿಕ್ಷಣ ಸಂಸ್ಥೆಯ ಕಾನೂನು ಸಲಹೆಗಾರಾಗಿದ್ದರು. 1940ರ […]

ಲೋಕಾಯುಕ್ತ ಬಲೆಗೆ ಬಿದ್ದ ಬಿಬಿಎಂಪಿ ಸದಸ್ಯ

Friday, October 1st, 2010
ಲೋಕಾಯುಕ್ತ ಬಲೆಗೆ ಬಿದ್ದ ಬಿಬಿಎಂಪಿ ಸದಸ್ಯ

ಬೆಂಗಳೂರು :  ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಪುತ್ರ, ಬಿಬಿಎಂಪಿ ಸದಸ್ಯ ಜಗದೀಶ್ ನಾಯ್ಡು ಕೆಐಎಡಿಬಿ ಪ್ರಕರಣದ ಸಾಕ್ಷಿದಾರೊಬ್ಬರಿಗೆ ಗಾಂಧಿನಗರದ ಕಚೇರಿಯಲ್ಲಿ ಒಂದು ಲಕ್ಷ ರೂಪಾಯಿ ಲಂಚ ನೀಡುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಗುರುವಾರ ನಡೆದಿದೆ. ಲೋಕಾಯುಕ್ತ ಪೊಲೀಸರು ದಿಢೀರನೆ ನಡೆಸಿದ ಕಾರ್ಯಾಚರಣೆಯಲ್ಲಿ ಕಟ್ಟಾ ಜಗದೀಶ್ ನಾಯ್ಡು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವುದು ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರ ರಾಜಕೀಯ ಭವಿಷ್ಯದ ಮೇಲೆ ಪರಿಣಾಮ ಬೀರಿದೆ. ಬುಧವಾರ ಬಿಬಿಎಂಪಿ ಸಭೆಯಲ್ಲಿ  ಜಗದೀಶ್ ನಾಯ್ಡುವನ್ನು […]