ವಕ್ಫ್ ಆಸ್ತಿ ಸಮೀಕ್ಷೆಗೆ ಆದೇಶ: ಶಶಿಕಲಾ ಅ. ಜೊಲ್ಲೆ

Thursday, November 11th, 2021
Jolle

ಬೆಂಗಳೂರು  : ರಾಜ್ಯದಲ್ಲಿ ವಕ್ಫ್ ಆಸ್ತಿ ಸಂರಕ್ಷಣೆ ಹಿತದೃಷ್ಟಿಯಿಂದ ವಕ್ಫ್ ಆಸ್ತಿಗಳ ಸಮೀಕ್ಷೆಗೆ ಆದೇಶಿಸಲಾಗಿದೆ ಎಂದು ರಾಜ್ಯ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶ್ರೀಮತಿ ಶಶಿಕಲಾ ಅ. ಜೊಲ್ಲೆ ತಿಳಿಸಿದ್ದಾರೆ. ಬುಧವಾರ ವಿಕಾಸಸೌಧದಲ್ಲಿ ಕೇಂದ್ರ ವಕ್ಫ ಪರಿಷತ್ತಿನ ಸದಸ್ಯರೊಂದಿಗೆ ನಡೆದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 46 ಸಾವಿರಕ್ಕೂ ವಕ್ಫ್ ಆಸ್ತಿಗಳಿದ್ದು, ಅವುಗಳ ಸಂರಕ್ಷಣೆಯ ಹಿನ್ನೆಲೆಯಲ್ಲಿ ಸಮೀಕ್ಷೆಗೆ ಆದೇಶಿಸಲಾಗಿದೆ ಎಂದರು. ರಾಜ್ಯದಲ್ಲಿ 32,300ಕ್ಕಿಂತ ಹೆಚ್ಚು ವಕ್ಫ್ ಸಂಸ್ಥೆಗಳಿದ್ದು, 46 ಸಾವಿರಕ್ಕಿಂತ ಹೆಚ್ಚು ಆಸ್ತಿಗಳಿವೆ. ಈ […]

ಪ್ರತಿಪಕ್ಷಗಳ ಆರೋಪ ನಿರಾಧಾರ -ಆರೋಗ್ಯ ಸಚಿವ ಬಿ.ಶ್ರೀರಾಮುಲು

Monday, July 20th, 2020
sriramulu

ಬೆಂಗಳೂರು: ಮಾರಕ ಕೋವಿಡ್-19 ಸಾಂಕ್ರಾಮಿಕ ರೋಗದ ಸಮಯದಲ್ಲಿ ಚಿಕಿತ್ಸೆಗಾಗಿ ಅಗತ್ಯವಿರುವ ಆರೋಗ್ಯ ಸಂಬಂಧಿತ ಉಪಕರಣಗಳ ಖರೀದಿಯಲ್ಲಿ ರಾಜ್ಯ ಸರ್ಕಾರ ಅವ್ಯವಹಾರ ನಡೆಸಿದೆ ಎನ್ನುವ ಪ್ರತಿಪಕ್ಷಗಳ ಆರೋಪ ನಿರಾಧಾರವಾಗಿದ್ದು, ಇಂತಹ ಯಾವುದೇ ಪ್ರಕರಣಗಳು ನಡೆದಿರುವುದಿಲ್ಲ, ಅವ್ಯವಹಾರ ಸಾಭೀತದಾದಲ್ಲಿ ತಕ್ಷಣವೇ ರಾಜಿನಾಮೆ ನೀಡಲು ಸಿದ್ಧ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರು ಸ್ಪಷ್ಟಪಡಿಸಿದ್ದಾರೆ. ಪ್ರತಿಪಕ್ಷಗಳ ಆರೋಪ ಕುರಿತು ಇಂದು ವಿಕಾಸಸೌಧದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿನ್ನು ಉದ್ದೇಶಿಸಿ ಮಾತನಾಡಿದ ಅವರು ಪ್ರತಿಪಕ್ಷಗಳು ಕಳೆದ ಮಾರ್ಚ್‍ನಲ್ಲಿ ಇದ್ದ ರಾಜ್ಯದ ಪರಿಸ್ಥಿತಿಯನ್ನು […]