ಜನವರಿ 1 ರಿಂದ ಎಸ್‌ಎಸ್‌ಎಲ್ಸಿ, ಪಿಯು ಕಾಲೇಜುಗಳು ಹಾಗೂ ವಿದ್ಯಾಗಮ ತರಗತಿಗಳು ಆರಂಭ

Thursday, December 24th, 2020
Suresh Kumar

ಬೆಂಗಳೂರು: ಕೊರೋನಾ ಹಿನ್ನಲೆಯಲ್ಲಿ ಮುಚ್ಚುಗಡೆಯಾಗಿದ್ದ ಶಾಲೆಗಳು ಜನವರಿ 1 ರಿಂದ ಆರಂಭಗೊಳ್ಳಲಿದೆ.  ಶಾಲೆ ಆರಂಭದ ನಿರ್ಧಾರದಲ್ಲಿ ಬದಲಾವಣೆ ಇಲ್ಲ. ಮುಂದಿನ ದಿನಗಳಲ್ಲಿ ಅಗತ್ಯವಿದ್ದರೆ ಸಭೆ ನಡೆಸಿ ಪರಿಶೀಲನೆ ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ವಿದ್ಯಾರ್ಥಿಗಳಿಗೆ ಜನವರಿ 1 ರಿಂದಲೇ ಸಮವಸ್ತ್ರ ಮತ್ತು ಶೂ ವಿತರಣೆ ಮಾಡಲಾಗುವುದು ಹಾಗೂ ಈ ವರ್ಷ 8ನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಮಾಡಲಾಗುವುದಿಲ್ಲ. ಶಾಲೆ ಆರಂಭಕ್ಕೆ ಮೂರು ದಿನ ಮೊದಲು ಸಿಬ್ಬಂದಿ, ಶಿಕ್ಷಕರಿಗೆ ಕೋವಿಡ್ ಪರೀಕ್ಷೆ ನೆಗೆಟಿವ್ ಕಡ್ಡಾಯವಾಗಿರುತ್ತದೆ. […]

ಮಗಳ ಪ್ರಯತ್ನಕ್ಕೆ ಸರ್ಕಾರ ಸ್ಪಂದಿಸಿ ದರೂ, ಕೊರೋನಾ ಆ ಶಿಕ್ಷಕಿಯ ಪ್ರಾಣವನ್ನೇ ಕಸಿದುಕೊಂಡಿತು

Friday, October 16th, 2020
Padamkshi

ಮೂಡಬಿದಿರೆ: ವಿವಿಧ ಸ್ಥಳಗಳಿಗೆ ಭೇಟಿ ನೀಡುವ ರಾಜ್ಯ ಸರ್ಕಾರದ ‘ವಿದ್ಯಾಗಮ’ ಯೋಜನೆಯಡಿ ಕರ್ತವ್ಯ ನಿರ್ವಹಿಸುತಿದ್ದ  ಪ್ರೌಢಶಾಲೆಯ  ಶಿಕ್ಷಕಿಯೊಬ್ಬರು  ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಮೂಡಬಿದಿರೆಯ ಜವಾಹರಲಾಲ್ ನೆಹರೂ ಅನುದಾನಿತ ಪ್ರೌಢಶಾಲೆಯ ಶಿಕ್ಷಕಿಯಾಗಿದ್ದ ಪದ್ಮಾಕ್ಷಿ ಎನ್ ಅವರು ವಿವಿಧ ಸ್ಥಳಗಳಿಗೆ ಭೇಟಿ ನೀಡುವ ಮೂಲಕ ‘ವಿದ್ಯಾಗಮ’ ಯೋಜನೆಯಡಿ ವಿದ್ಯಾರ್ಥಿಗಳಿಗೆ ಕಲಿಸುತ್ತಿದ್ದರು. ಅಂತಹ ಭೇಟಿಗಳ ಸಮಯದಲ್ಲಿ ಶಿಕ್ಷಕಿ ಅನಾರೋಗ್ಯಕ್ಕೆ ಒಳಗಾಗಿದ್ದರು. ಸೆಪ್ಟೆಂಬರ್ 29 ರಂದು ಅವರು ಕೋವಿಡ್ ಪಾಸಿಟಿವ್ ವರದಿ ಪಡೆದಿದ್ದರು. ಆಕೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ […]

ಶಿಕ್ಷಕಿ ಕೊರೋನಾ ಚಿಕಿತ್ಸೆಗೆ ಸ್ಪಂದಿಸಿದ ಸಿಎಂ ಹಾಗೂ ಶಿಕ್ಷಣ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಅಭಯಚಂದ್ರ ಜೈನ್

Thursday, October 15th, 2020
Abhayachandra Jain

ಮಂಗಳೂರು : ದೇಶ ಕೊರೊನದಿಂದ ಆರ್ಥಿಕ ಸಂಕಷ್ಟಕ್ಕೊಳಗಾಗಿದ್ದರೂ  ಪ್ರಧಾನಿ ಮೋದಿಯವರು 8 ಸಾವಿರ ಕೋಟಿ ರೂ.ಯ ವಿಮಾನ ಖರೀದಿಸಿದ್ದಾರೆ. ಕೊರೊನಾ ಸಂಕಷ್ಟದ ಕಾಲದಲ್ಲಿಯೂ ಈ ರೀತಿಯ ಖರೀದಿ ಎಷ್ಟು ಸಮಂಜಸ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಪ್ರಶ್ನಿಸಿದ್ದಾರೆ. ನಗರದಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಕೊರೊನಾದಲ್ಲಿ ಬಳಲುತ್ತಿರುವ ಜನತೆಗೆ ಸಂತಾಪ ಹಾಗೂ ಅವರ ಆಸ್ಪತ್ರೆಗಳ ಖರ್ಚು-ವೆಚ್ಚಗಳನ್ನು‌ ಸರ್ಕಾರ ಭರಿಸಿ, ಸಾಂತ್ವನ ಹೇಳಬೇಕಾಗಿರುವ ಕಾರ್ಯ ಈಗ ಆಗಬೇಕಾಗಿದೆ ಎಂದು ಹೇಳಿದರು. ಸಾವಿರಾರು ಸಂಖ್ಯೆಯಲ್ಲಿ ಶಿಕ್ಷಕರು ತಮ್ಮ ಜೀವವನ್ನು […]