ಸೆಪ್ಟೆಂಬರ್ 23 ರೊಳಗೆ ರಾಜ್ಯ ವಿಧಾನಸಭಾ ಅಧಿವೇಶನ : ಸಭಾಧ್ಯಕ್ಷರಿಂದ ಪರಿಶೀಲನೆ

Thursday, August 6th, 2020
Kageri

ಬೆಂಗಳೂರು :ಕಳೆದ ಮಾರ್ಚ್‍ನಲ್ಲಿ ರಾಜ್ಯ ವಿಧಾನ ಸಭಾ ಅಧಿವೇಶನವು ನಡೆದಿದ್ದು, ಸಂವಿಧಾನಬದ್ದವಾಗಿ ಆರು ತಿಂಗಳ ಒಳಗೆ ಅಂದರೆ ಸೆಪ್ಟೆಂಬರ್ 23 ರೊಳಗೆ, ಮತ್ತೊಮ್ಮೆ ಸಮಾವೇಶಗೊಳ್ಳಬೇಕಿರುವ ಹಿನ್ನೆಲೆಯಲ್ಲಿ ಸದನದಲ್ಲಿ ರಾಜ್ಯ ಸಚಿವ ಸಂಪುಟದ ಸದಸ್ಯರು ಮತ್ತು ಸದನದ ಸದಸ್ಯರು, ಸದನದಲ್ಲಿ ಹಾಜರಿರುವ ಅಧಿಕಾರಿಗಳು ಹಾಗೂ ಮಾಧ್ಯಮದವರ ಆರೋಗ್ಯಕ್ಕೆ ಕೋವಿಡ್-19 ರ ಸೋಂಕು ತಗುಲದಂತೆ ಕ್ರಮ ವಹಿಸುವುದು ಹೇಗೆ ? ಎಂಬುದರ ಕುರಿತು ರಾಜ್ಯ ವಿಧಾನ ಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಲ್ಲಿ ಇಂದು ಸದನದಲ್ಲಿನ ವ್ಯವಸ್ಥೆಗಳನ್ನು […]

ಲಾಲ್ ಬಹುದ್ದೂರ್ ಶಾಸ್ತ್ರೀ ಜನ್ಮದಿನಾಚರಣೆ : ಗೌರವ ಸಲ್ಲಿಸಿದ ಬಿ.ಎಸ್ ಯಡಿಯೂರಪ್ಪ

Wednesday, October 2nd, 2019
lal-bahuddur-shastri

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಮಾಜಿ ಪ್ರಧಾನಿ ಲಾಲ್ ಬಹುದ್ದೂರ್ ಶಾಸ್ತ್ರೀ ಜನ್ಮದಿನದ ಪ್ರಯುಕ್ತ ವಿಧಾನ ಸೌಧದ ಆವರಣದಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಅವರ ಪ್ರತಿಮೆ ಬಳಿ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಹಾಗು ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಎಸ್.ಆರ್ ವಿಶ್ವನಾಥ್, ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಸರ್ಕಾರದ ಕಾರ್ಯದರ್ಶಿ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್ ಉಪಸ್ಥಿತರಿದ್ದರು.    

ಸಾಲ ಮನ್ನಾ ಬಗ್ಗೆ ಬಿಜೆಪಿ ಬ್ಲ್ಯಾಕ್‌ಮೇಲ್ ಮಾಡಲು ಸಾಧ್ಯವಿಲ್ಲ: ಡಿ.ಕೆ.ಶಿವಕುಮಾರ್

Friday, May 25th, 2018
d-k--shivkumar

ಬೆಂಗಳೂರು: ಸಾಲ ಮನ್ನಾ ವಿಚಾರವಾಗಿ ಬಿಜೆಪಿ ಡೆಡ್‌ಲೈನ್ ಕೊಡಲು ಸಾಧ್ಯವಿಲ್ಲ. ಬಹುಮತ ಸಾಬೀತು ವೇಳೆ ವಾಕ್ ಔಟ್ ಮಾಡುವ ಮೂಲಕ ಬಿಜೆಪಿ ಪ್ರಜಾಪ್ರಭುತ್ವಕ್ಕೆ ಅಪಮಾನ ಮಾಡಿದ್ದಾರೆ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು. ವಿಧಾನ ಸೌಧದಲ್ಲಿ ಮಾತನಾಡಿದ ಅವರು, ರೈತರು ಶಾಂತಿಯುತವಾಗಿ ವರ್ತಿಸಬೇಕು. ಯಡಿಯೂರಪ್ಪಗೆ ಸಿಎಂ ಆಗಲು ಅಡ್ಡಿಯಾಗಿದ್ದು, ಕಾಂಗ್ರೆಸ್ ಶಕ್ತಿ. ನನ್ನಿಂದ ಮಾತ್ರ ಅದು ಆಗಿಲ್ಲವೆಂದು ಸ್ಪಷ್ಟಪಡಿಸಿದರು. ಯಡಿಯೂರಪ್ಪ ಅವರು ಇಂದು ಕೆಟ್ಟ ಸಂಸದೀಯ ವ್ಯವಹಾರವನ್ನು ಶುರು ಮಾಡಿದ್ದಾರೆ. ಬಂದ್ ಮಾಡುತ್ತೇವೆ ಎಂದು ಹೇಳುವ […]