ವಿಮಾನದಲ್ಲಿ ಬಂದು ರೈಲಿನಲ್ಲಿ ಕಳ್ಳತನ ಮಾಡುತ್ತಿದ್ದ ಐಷಾರಾಮಿ ಕಳ್ಳರನ್ನು ಬಂಧಿಸಿದ ಪೊಲೀಸರು

Thursday, October 5th, 2023
mirjapur-thieves

ಮಂಗಳೂರು : ಉತ್ತರ ಪ್ರದೇಶದಿಂದ ವಿಮಾನದಲ್ಲಿ ಆಗಮಿಸಿ ನಗರದಲ್ಲಿ ರೈಲು ಪ್ರಯಾಣಿಕರ ಚಿನ್ನಾಭರಣಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ರೈಲ್ವೆ ಪೊಲೀಸರು ಬಂಧಿಸಿದ್ದು ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯ ಅಭಯರಾಜ್ ಸಿಂಗ್ (26) ಹಾಗೂ ರಾಜ್‌ಪುರದ ಹರಿಶಂಕರ್ ಗಿರಿ(25) ಬಂಧಿತ ಆರೋಪಿಗಳಾಗಿದ್ದಾರೆ. ಪ್ರಯಾಣಿಕರಿಂದ ಕಳವು ಮಾಡಿದ 125 ಗ್ರಾಂ ಚಿನ್ನಾಭರಣಗಳನ್ನು ರೈಲ್ವೆ ಪೊಲೀಸರು ಆರೋಪಿಗಳಿಂದ ವಶಪಡಿಸಿಕೊಂಡಿದ್ದಾರೆ. ಸೆಪ್ಟೆಂಬರ್ 28ರಂದು ಮಂಗಳೂರು ಮತ್ತು ಸುರತ್ಕಲ್ ನಡುವೆ ಸಂಚರಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಕರ ಚಿನ್ನಾಭರಣ ಕಳವು […]