ಹಚ್ಚಹಸಿರು ಕ್ಯಾಂಪಸ್ : ವಿಶಿಷ್ಟ ರೀತಿಯಲ್ಲಿ ವಿಶ್ವ ಪರಿಸರ ದಿನದ ಆಚರಣೆ

Friday, June 4th, 2021
World Environment

ಗದಗ : ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಹಾಗೂ ಜಿಲ್ಲಾ ಅರಣ್ಯ ಇಲಾಖೆ ಇವರ ಸಹಯೋಗದೊಂದಿಗೆ ಪ್ರತಿ ವರ್ಷ ಜೂನ್ 05 ರಂದು ಆಚರಿಸಲಾಗುವ ವಿಶ್ವ ಪರಿಸರ ದಿನದ ಈ ಸುಸಂದರ್ಭದಲ್ಲಿ ಹಚ್ಚಹಸಿರು ಕ್ಯಾಂಪಸ್ ನಿರ್ಮಿಸುವ ನಿಟ್ಟಿನಲ್ಲಿ ನಾಗಾವಿ ಹತ್ತಿರದ ಗುಡ್ಡಬೆಟ್ಟಗಳ ನಯನ ಮನೋಹರ ತಾಣದಲ್ಲಿ ಸ್ಥಾಪಿಸಲ್ಪಟ್ಟ ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್ ಅನ್ನು ಹಚ್ಚಹಸಿರು ಕ್ಯಾಂಪಸ ಆಗಿ ನಿರ್ಮಿಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಈ ನೂತನ ಕ್ಯಾಂಪಸ್ನ ಸಬರಮತಿ ಆಶ್ರಮ, ಸ್ಮೃತಿವನ, ಜೀವ […]

ಗಾಂಧೀಜಿ ಕನಸು ನನಸಾಗಿಸುವ ಮುಖ್ಯ ಉದ್ದೇಶದೊಂದಿಗೆ ವಿಶ್ವವಿದ್ಯಾಲಯ ಕಾರ್ಯನಿರ್ವಹಿಸಬೇಕು: ಸಚಿವ ಕೆ.ಎಸ್.ಈಶ್ವರಪ್ಪ

Wednesday, November 11th, 2020
eswarappa gadag

ಗದಗ: ಗ್ರಾಮಗಳ ಅಭಿವೃದ್ಧಿ ಹಾಗೂ ಗಾಂಧಿಜಿಯವರ ಕನಸು ನನಸಾಗಿಸುವ ಮುಖ್ಯ ಉದ್ದೇಶದೊಂದಿಗೆ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಕಾರ್ಯನಿರ್ವಹಿಸಬೇಕೆಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಗಾಂಧೀಜಿಯರವರು ಗದಗ ಜಿಲ್ಲೆಗೆ ಭೇಟಿ ನೀಡಿದ ಶತಮಾನೋತ್ಸವ ಸಮಾರಂಭದ ಅಂಗವಾಗಿ ಗದಗನಲ್ಲಿ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಿಂದ ವಿವಿ ನೂತನ ಆವರಣದಲ್ಲಿ ಬುಧವಾರ ಆಯೋಜಿಸಲಾದ ಸಬರಮತಿ ಆಶ್ರಮದ ಪ್ರತಿಕೃತಿ ಕಟ್ಟಡದ ಲೋಕಾರ್ಪಣೆ ನೆರವೇರಿಸಿ ಸಚಿವರು ಮಾತನಾಡಿದರು. […]

ಸಣ್ಣ ವೆಚ್ಚಕ್ಕೂ ನಿಯಂತ್ರಣ ಹಾಕಿದರೆ ಆಂತರಿಕ ಸಂಪನ್ಮೂಲ ಕ್ರೋಡೀಕರಿಸಬಹುದು : ವಿವಿ ಕುಲಪತಿ

Tuesday, February 11th, 2020
VV-Kulapati

ಮಂಗಳೂರು : ಮಂಗಳೂರು ವಿಶ್ವವಿದ್ಯಾಲಯದಲ್ಲಿ ದುಂದುವೆಚ್ಚಕ್ಕೆ ಕಡಿವಾಣ ಹಾಕುವುದರೊಂದಿಗೆ, ಸಣ್ಣ ವೆಚ್ಚಕ್ಕೂ ನಿಯಂತ್ರಣ ಹಾಕಿದರೆ ಸಾಕಷ್ಟು ಆಂತರಿಕ ಸಂಪನ್ಮೂಲ ಕ್ರೋಡೀಕರಿಸಬಹುದು. ವಿವಿಧ ಕಾರ್ಪೋರೇಟ್ ಸಂಸ್ಥೆಗಳ ಸಿಎಸ್‌ಆರ್ ಮೊತ್ತವನ್ನು ತಂದು ವಿವಿ ಸೇರಿದಂತೆ ಕೊಣಾಜೆ ಗ್ರಾಮದ ಅಭಿವೃದ್ಧಿಗೂ ವಿವಿಧ ಯೋಜನೆಗಳನ್ನು ರೂಪಿಸಲಾಗುವುದು ಎಂದು ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಪತ್ರಿಕಾಭವನದಲ್ಲಿ ಮಂಗಳವಾರ ಪತ್ರಿಕಾ ಸಂವಾದಲ್ಲಿ ಅವರು ಮಾತನಾಡಿದರು. ಪ್ರತಿ ನಿರ್ಧಾರ ತೆಗೆದುಕೊಳ್ಳುವ ಮೊದಲು ಅದರ […]

ದುಷ್ಕರ್ಮಿಗಳು ವಿದ್ಯಾರ್ಥಿನಿಯರೊಂದಿಗೆ ಅಶ್ಲೀಲವಾಗಿ ವರ್ತಿಸಿರುವ ಘಟನೆಗೆ ಕ್ರಮ ಜರಿಗಿಸಿ

Thursday, September 6th, 2018
Abvp

ಮಂಗಳೂರು :  ವಿಶ್ವವಿದ್ಯಾಲಯದಲ್ಲಿ ದಿನಾಂಕ 29.08.2018 ರಂದು ವಿದ್ಯಾರ್ಥಿನಿಯೊಂದಿಗೆ ಕೆಲವು ದುಷ್ಕಮರ್ಿಗಳು ಅಶ್ಲೀಲವಾಗಿ ವರ್ತಿಸಿರುವುದು ನಾಗರೀಕ ಸಮಾಜ ತಲೆತಗ್ಗಿಸುವಂತಹ ಘಟನೆಯಾಗಿದೆ. ಈ ಘಟನೆಯನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತೀವ್ರವಾಗಿ ಖಂಡಿಸುತ್ತದೆ. ಅಲ್ಲದೇ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದಿರುವ ಈ ಘಟನೆ ವಿಶ್ವವಿದ್ಯಾಲಯದಲ್ಲಿ ವಿದ್ಯಾಭ್ಯಾಸವನ್ನು ನಡೆಸುತ್ತಿರುವ ವಿದ್ಯಾರ್ಥಿನಿಯರ ಭದ್ರತೆ ಮತ್ತು ರಕ್ಷಣೆಯ ಬಗ್ಗೆ ಪ್ರಶ್ನೆಯನ್ನು ಮಾಡುವಂತಿದೆ. ಕ್ಯಾಂಪಸ್ನಲ್ಲಿ ಈ ಘಟನೆಗಳು ನಡೆಯುತ್ತಿದ್ದರು ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಯಾವುದೇ ದಿಟ್ಟ ಕ್ರಮಗಳನ್ನು ಕೈಗೊಂಡಿಲ್ಲ. ಅಲ್ಲದೇ ಮೊನ್ನೆ ನಡೆದ ಘಟನೆಗೆ ಸಂಬಂದಿಸಿದಂತೆ […]

ಯುವಿಸಿಇಗೆ ವಿವಿ ಮಾನ್ಯತೆ ಬಯಕೆ

Friday, February 7th, 2014
Bangalore-University

ಬೆಂಗಳೂರು: ಖಾಸಗಿ ಕಾಲೇಜುಗಳಿಗೆ ಮಾತ್ರವಲ್ಲ ಬೆಂಗಳೂರು ವಿವಿ ವ್ಯಾಪ್ತಿಯ ಕಾಲೇಜಿಗೂ ‘ವಿಶ್ವವಿದ್ಯಾಲಯ’ ಎಂಬ ನಾಮಫಲಕ ಧರಿಸಬೇಕೆಂಬ ಆಕಾಂಕ್ಷೆ ಮೂಡಿದೆ. ಮಹಾನಗರದಲ್ಲಿರುವ ಸಾಕಷ್ಟು ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳು ‘ವಿಶ್ವವಿದ್ಯಾಲಯ’ ಎಂಬ ಮಾನ್ಯತೆ ಪಡೆದುಕೊಳ್ಳುತ್ತಿವೆ. ಈ ಸಂದರ್ಭವನ್ನೇ ಬಳಸಿಕೊಳ್ಳುತ್ತಿರುವ ಬೆಂಗಳೂರು ವಿವಿ ವ್ಯಾಪ್ತಿಯ ‘ವಿಶ್ವೇಶ್ವರಯ್ಯ ಕಾಲೇಜ್ ಆಫ್ ಎಂಜಿನಿಯರಿಂಗ್‌’ (ಯುವಿಸಿಇ) ಪ್ರತ್ಯೇಕ ವಿಶ್ವವಿದ್ಯಾಲಯ ಮ್ಯಾನತೆ ಪಡೆದುಕೊಳ್ಳಲು ಚಿಂತಿಸಿದೆ. ಇದೀಗ ಈ ಕಾಲೇಜು ಬೆಂಗಳೂರು ವಿವಿ ವ್ಯಾಪ್ತಿಯಲ್ಲಿದ್ದು ನೂತನ ಕೋರ್ಸ್‌ಗಳ ಪರಿಚಯಿಸಿ ಹಾಗೂ ಹಾಲಿ ಇರುವ ಕಟ್ಟಡಗಳ ರಿಪೇರಿ ಸೇರಿದಂತೆ ನೂತನ […]