ಮಂಗಳೂರಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ
Friday, October 18th, 2019ಮಂಗಳೂರು : ದ.ಕ ಜಿಲ್ಲಾಡಳಿತ , ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಸಹಯೋಗದೊಂದಿಗೆ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಸಭಾಂಗಣದಲ್ಲಿ ಶುಕ್ರವಾರ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಆಚರಿಸಲಾಯಿತು. ನ್ಯಾಯಾಧೀಶ ಕಡ್ಲೂರು ಸತ್ಯ ನಾರಾಯಣಾಚಾರ್ಯ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಾಮಾಜಿಕ ಆರ್ಥಿಕ ಕಾರಣಗಳು, ಕೆಟ್ಟ ವ್ಯಸನಗಳು ನಮ್ಮ ಮಾನಸಿಕ ಆರೋಗ್ಯದ ಮೇಲೆ ಗರಿಷ್ಠ ಪ್ರಭಾವ ಬೀರುತ್ತದೆ ಎಂದು ಅವರು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಯುವ ಜನರನ್ನು ಸರಿದಾರಿ ಯಲ್ಲಿ […]