ಕನ್ನಡದ ಹಿರಿಯ ನಟಿ ‘ಅಭಿನವ ಶಾರದೆ’ ಜಯಂತಿ ನಿಧನ

Monday, July 26th, 2021
Jayanthi died

ಬೆಂಗಳೂರು : ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ, ಅಭಿನಯ ಶಾರದೆ ಎಂದು ಪ್ರೀತಿಯಿಂದ ಅಭಿಮಾನಿಗಳಿಂದ ಕರೆಸಿಕೊಳ್ಳುತ್ತಿದ್ದ ಜಯಂತಿ ನಿಧನರಾಗಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದಲ್ಲಿ ಅವರು ಸೋಮವಾರ ನಸುಕಿನ ಜಾವ ಕೊನೆಯುಸಿರೆಳೆದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ವರ್ಷಗಳಿಂದ ಅಸ್ತಮಾ, ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಹಿರಿಯ ನಟಿ ಕಳೆದ ವರ್ಷ ಕೋವಿಡ್-19 ಸಮಯದಲ್ಲಿ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ 40 ದಿನಗಳ ಕಾಲ ಇದ್ದು ಚೇತರಿಸಿಕೊಂಡು ಮನೆಗೆ ಹಿಂತಿರುಗಿದ್ದರು. ಆದರೆ ಇಂದು ಕೊನೆಯುಸಿರೆಳೆದಿದ್ದಾರೆ. ಕನ್ನಡ […]

ಮುಂದೆ ಗಲಾಟೆ ನಡೆಯುತ್ತಿದೆ ಎಂದು ಚಿನ್ನಾಭರಣ ದರೋಡೆ ಮಾಡುತ್ತಿದ್ದ ನಾಲ್ವರ ಬಂಧನ

Thursday, October 22nd, 2020
chain snatchers

ಉಡುಪಿ : ಉಡುಪಿ ಡಿಸಿಐಬಿ ಪೊಲೀಸ್ ಇನ್‌ಸ್ಪೆಕ್ಟರ್ ಮಂಜಪ್ಪ ಡಿ.ಆರ್. ನೇತೃತ್ವದಲ್ಲಿ  ನಾಲ್ವರು ಅಂತರ್ ‌ರಾಜ್ಯ ಸರ ಕಳವು ಆರೋಪಿಗಳನ್ನು ಪೊಲೀಸರು ಉಡುಪಿ ಶ್ರೀಕೃಷ್ಣ ಮಠ ಪಾರ್ಕಿಂಗ್ ಸ್ಥಳದ ಬಳಿ ಬಂಧಿಸಿದ್ದಾರೆ. ಉಡುಪಿ ಸೇರಿದಂತೆ ರಾಜ್ಯದ ವಿವಿಧೆಡೆಗಳಲ್ಲಿ ವಯಸ್ಸಾದ ಒಂಟಿ ಹೆಂಗಸರು ಹಾಗೂ ಗಂಡಸರನ್ನು ನಯವಾದ ಮಾತುಗಳಿಂದ ವಂಚಿಸಿ ಚಿನ್ನಾಭರಣಗಳನ್ನು ಆರೋಪಿಗಳು ಕಳವು ಮಾಡುತಿದ್ದರು. ಬಂಧಿತರನ್ನು ಇರಾನಿ ಗ್ಯಾಂಗ್‌ಗೆ ಸೇರಿದ ಅಂತಾರಾಜ್ಯ ವಂಚಕರಾದ ಮಹಾರಾಷ್ಟ್ರ ರಾಜ್ಯದ ಅಹ್ಮದ್‌ನಗರ ಜಿಲ್ಲೆ ಶ್ರೀರಾಮಪುರದ ಝಾಕಿರ್ ಹುಸೈನ್ (26), ಕಂಬರ್ ರಹೀಮ್ […]

ಉಡಾಫೆ ಮುಖ್ಯಮಂತ್ರಿ ಎಂದ ವಿಷ್ಣುವರ್ಧನ್​ ಅಳಿಯ: ಅನಿರುದ್ಧ್’ಗೆ ಸಿಎಂ ಕುಮಾರಸ್ವಾಮಿ ತಿರುಗೇಟು

Wednesday, November 28th, 2018
anirudh

ಬೆಂಗಳೂರು: ಸಾಹಸ ಸಿಂಹ ವಿಷ್ಣು ವರ್ಧನ್ ಅವರ ಸ್ಮಾರಕ ನಿರ್ಮಿಸುವ ವಿಚಾರದಲ್ಲಿ ಸರ್ಕಾರ ಹುಡುಗಾಟಿಕೆಯಾಡುತ್ತಿದೆ, ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಸ್ಮಾರಕ ನಿರ್ಮಾಣ ಮಾಡಲಿ ಅಂತಾ ವಿಷ್ಣುವರ್ಧನ್ ಅಳಿಯ ಅನಿರುದ್ಧ್ ಗುಡುಗಿದ್ದಾರೆ. ಅನಿರುದ್ಧ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಕುಮಾರ ಸ್ವಾಮಿ, ಕಲಾವಿದರು ಮಾಡಿದ ಕೆಲಸಕ್ಕೆ ಸರ್ಕಾರ ಗೌರವ ಕೊಟ್ಟಿದ್ದೇವೆ .ವಿಷ್ಣುವರ್ಧನ್ ಅವರು ನಿಧನರಾದಾಗ ನಾನು ಸಿಎಂ ಆಗಿರಲಿಲ್ಲ. ನಿಧನದ ಸುದ್ದಿ ತಿಳಿದಾಗ ನಾನು ಅವರ ಮನೆಗೆ ಹೋಗಿ ದರ್ಶನ ಪಡೆದಿದ್ದೇನೆ. ಆ ವೇಳೆ ಭಾರತಿ ವಿಷ್ಣುವರ್ಧನ್ […]

ವಿಷ್ಣುವರ್ಧನ್ ಸ್ಮಾರಕ ಕುರಿತು ಒಂದು ವಾರದಲ್ಲಿ ಸಭೆ

Tuesday, June 5th, 2018
bharti-vishnuvardhan

ಬೆಂಗಳೂರು: ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಹಾಗೂ ನಟ ಅನಿರುದ್ಧ್ ಇಂದು ಸಿಎಂ ಹೆಚ್.ಡಿ. ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಶುಭ ಕೋರಿದರು. ಜೆ.ಪಿ. ನಗರ ಸಿಎಂ ನಿವಾಸದಲ್ಲಿ ಇಂದು ಭೇಟಿ ಮಾಡಿದ ನಟಿ ಭಾರತಿ ವಿಷ್ಣುವರ್ಧನ್ ಮತ್ತು ಅನಿರುದ್ಧ್ ಕೆಲಹೊತ್ತು ಸಿಎಂ ಜೊತೆ ಚರ್ಚಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರಿಗೆ ಶುಭಕೋರಲು ಬಂದಿರುವುದಾಗಿ ಹೇಳಿದರು. ಇದೇ ವೇಳೆ ಡಾ. ವಿಷ್ಣುವರ್ಧನ್ ಸ್ಮಾರಕ ಕುರಿತು ಒಂದು ವಾರದಲ್ಲಿ ಸಭೆ ಕರೆಯುವುದಾಗಿ ಕುಮಾರಸ್ವಾಮಿಯವರು ತಿಳಿಸಿದ್ದಾರೆ ಎಂದರು. ಆ ಸಭೆಯಲ್ಲಿ […]