ರೋಗಿಗಳಿಗೆ ಉಚಿತವಾಗಿ ಸೇವೆ ಮಾಡುತ್ತಿದ್ದ ಆಪದ್ಬಾಂಧವ ಸಂಘಟನೆಯ ಕಾರ್ಯಕರ್ತನನ್ನು ಬಂಧಿಸಿದ ಪೊಲೀಸರು

Thursday, October 12th, 2023
ರೋಗಿಗಳಿಗೆ ಉಚಿತವಾಗಿ ಸೇವೆ ಮಾಡುತ್ತಿದ್ದ ಆಪದ್ಬಾಂಧವ ಸಂಘಟನೆಯ ಕಾರ್ಯಕರ್ತನನ್ನು ಬಂಧಿಸಿದ ಪೊಲೀಸರು

ಮಂಗಳೂರು : ನಗರದ ವೆನ್ಲಾಕ್ ಆಸ್ಪತ್ರೆಯ ಮಹಿಳಾ ಸೆಕ್ಯುರಿಟಿ ಸಿಬಂದಿ ಮೇಲೆ ಆಪದ್ಬಾಂಧವ ಸಂಘಟನೆಯ ಆಸೀಫ್‌ ಅನುಚಿತ ವರ್ತನೆ ತೋರಿದ್ದಾರೆಂದು ಹಲ್ಲೆ ದೂರು ದಾಖಲಾಗಿದ್ದು, ಪ್ರಕರಣದ ದಾಖಲಿಸಿದ ಪೊಲೀಸರು ಆಸಿಫ್ ಅವರನ್ನು ಬಂಧಿಸಿದ್ದಾರೆ. ಆಸಿಫ್ ಬುಧವಾರ ಸಂಜೆ ವೆನ್ಲಾಕ್ ಆಸ್ಪತ್ರೆಗೆ ಇಬ್ಬರು ರೋಗಿಗಳನ್ನು ಕರೆತಂದಿದ್ದರು. ಹೊರಗಡೆ ಆಂಬುಲೆನ್ಸ್ ನಿಲ್ಲಿಸಿ ರೋಗಿಗಳನ್ನು ಒಳಗಡೆ ಕರೆದೊಯ್ದು ಅಡ್ಮಿಶನ್ ಮಾಡುತ್ತಿದ್ದಾಗ ಸೆಕ್ಯುರಿಟಿ ಗಾರ್ಡ್ ಸಿಬಂದಿ ವಾಹನವನ್ನು ಹೊರಗೆ ಒಯ್ಯುವಂತೆ ಸೂಚಿಸಿದ್ದಾರೆ. ಆದರೆ ರೋಗಿಗಳನ್ನು ಅಡ್ಮಿಶನ್ ಮಾಡುತ್ತಿದ್ದೇನೆ, ಸ್ವಲ್ಪ ಹೊತ್ತು ಕಾಯಿರಿ ಎಂದು […]

ಮಂಗಳೂರಿಗೂ ಕಾಲಿಟ್ಟ ಬ್ಯ್ಲಾಕ್ ಫಂಗಸ್, ಓರ್ವ ಮೃತ್ಯು

Wednesday, May 19th, 2021
Mucormycosis

ಮಂಗಳೂರು : ಇದೊಂದು ಕೊರೋನಾ ಜೊತೆಗೇನೆ ಬರುವ ಖಾಯಿಲೆಯಾಗಿದ್ದು, ಕೊರೊನಾ ಪೀಡಿತರಲ್ಲಿ ಮತ್ತು ಸೋಂಕಿಗೆ ತುತ್ತಾಗಿ ಗುಣಮುಖರಾಗುತ್ತಿರುವವರಲ್ಲಿ ಬ್ಯ್ಲಾಕ್ ಫಂಗಸ್ ಅತಿ ಹೆಚ್ಚು ಪ್ರಮಾಣದಲ್ಲಿ ಕಾಣಿಸಿಕೊಳ್ಳುತ್ತಿದೆ. ಬ್ಯ್ಲಾಕ್ ಫಂಗಸ್ ಭಾದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಈವರೆಗೆ 6 ಮಂದಿಯಲ್ಲಿ ಕಾಣಿಸಿಕೊಂಡಿದೆ . ಶಂಕಿತ ಬ್ಯ್ಲಾಕ್ ಫಂಗಸ್ ಗೆ ತುತ್ತಾದ ಒಬ್ಬರು ಖಾಸಗಿ ಆಸ್ಪತ್ರೆಯಲ್ಲಿಈಗಾಗಲೇ ಮೃತಪಟ್ಟಿದ್ದಾರೆ. ಸದ್ಯ ವೆನ್ಲಾಕ್ ಆಸ್ಪತ್ರೆಯಲ್ಲಿ ಮೂವರು ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ಮೂವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಗಳೂರಿನ ವೆನ್ಲಾಕ್ ನಲ್ಲೂ ಇದಕ್ಕೆ ಚಿಕಿತ್ಸೆ ನೀಡಲಾಗುತ್ತದೆ, […]

ಕಾಂಗ್ರೆಸ್ ಜಿಲ್ಲೆಗೆ ಕೆಟ್ಟ ಹೆಸರು ತರುವುದಲ್ಲದೆ, ಸರಕಾರಿ ಆಸ್ಪತ್ರೆಗೆ ಬರದಂತೆ ಜನರಲ್ಲಿ ಭಯ ತುಂಬುತ್ತಿದೆ

Saturday, May 8th, 2021
vedavyas kamath

ಮಂಗಳೂರು : ವೆನ್ಲಾಕ್ ಆಸ್ಪತ್ರೆಯ ಬಗ್ಗೆ ಇಲ್ಲಸಲ್ಲದ ಹೇಳಿಕೆ ನೀಡಿ ಜಿಲ್ಲೆಗೆ ಕೆಟ್ಟ ಹೆಸರು ತರುವುದಲ್ಲದೆ, ಜನತೆ ವೆನ್ಲಾಕ್‌ಗೆ ಬರಲು ಭಯಪಡುವ ವಾತಾವರಣವನ್ನು ಕಾಂಗ್ರೆಸ್ ನಿರ್ಮಿಸುತ್ತಿದೆ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೆನ್ಲಾಕ್ ಆಸ್ಪತ್ರೆಯಲ್ಲಿ ಬಡವರಿಗೆ ಬೇಕಾದ ಎಲ್ಲಾ ವ್ಯವಸ್ಥೆಗಳಿವೆ. ಆದರೆ ಕಾಂಗ್ರೆಸ್ ಜನತೆಯ ದಿಕ್ಕು ತಪ್ಪಿಸುತ್ತಿದ್ದು, ಬಡವರು ಸರಕಾರಿ ಆಸ್ಪತ್ರೆಗೆ ಬರದಂತೆ ಭಯ ತುಂಬುತ್ತಿದೆ. ಆರೋಗ್ಯ ವಿಷಯದ ಈ ರೀತಿಯ ರಾಜಕಾರಣ ಕಾಂಗ್ರೆಸ್‌ಗೆ […]

ಆಕ್ಸಿಜನ್ ಕೊರತೆಯನ್ನು ನೀಗಿಸಲು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಪ್ಲಾಂಟ್

Monday, April 26th, 2021
Mangalore DC

ಮಂಗಳೂರು : ಆಕ್ಸಿಜನ್ ಕೊರತೆಯನ್ನು ನೀಗಿಸಲು  ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಪ್ಲಾಂಟ್ ನಿರ್ಮಿಸಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಜಿಲ್ಲೆಯ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ಹಾಗೂ ಸಕಾಲದಲ್ಲಿ ಆಕ್ಸಿಜನ್ ಪೂರೈಕೆಗೆ ಸಂಬಂಧಿಸಿ ದ.ಕ. ಜಿಲ್ಲಾಧಿಕಾರಿಯ ಕಚೇರಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ದೊಡ್ಡ ಪ್ರಮಾಣದಲ್ಲಿ ಆಕ್ಸಿಜನ್ ಉತ್ಪಾದಿಸಲು ವೆನ್ಲಾಕ್ ಆಸ್ಪತ್ರೆಯಲ್ಲಿ ಹೊಸದಾಗಿ ಆಕ್ಸಿಜನ್ ಪ್ಲಾಂಟ್ ನಿರ್ಮಾಣದ ಬಗ್ಗೆ ಯೋಜನೆ ರೂಪಿಸಲಾಗಿದೆ. ಮುಂದಿನ 50 […]

ವಿದ್ಯುತಾಘಾತ : ವೆನ್ಲಾಕ್ ಆಸ್ಪತ್ರೆಯಲ್ಲಿ ಯುವಕ ಸಾವು

Monday, March 8th, 2021
Wenlock Canteen

ಮಂಗಳೂರು : ವೆನ್ಲಾಕ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಶಾರ್ಟ್ ಸರ್ಕ್ಯೂಟ್ ನಿಂದ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಕೋಟೆಕಾರ್ ಬೀರಿ ನಿವಾಸಿ ಅನೀಶ್ (20) ಮೃತ ಯುವಕ. ಕ್ಯಾಂಟೀನ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದಾಗ ಶಾರ್ಕ್ ಸರ್ಕ್ಯೂಟ್ ಸಂಭವಿಸಿ ದುರ್ಘಟನೆ ನಡೆದಿದೆ. ಮೃತ ಯುವಕನು ಕೆಪಿಟಿ ಕಾಲೇಜಿನಲ್ಲಿ ಓದುತ್ತಾ ವೆನ್ಲಾಕ್ ಆಸ್ಪತ್ರೆಯಲ್ಲಿ ಕೆಲಸ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ. ಈ ಬಗ್ಗೆ ಮಂಗಳೂರು ದಕ್ಷಿಣ (ಪಾಂಡೇಶ್ವರ) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯುವಕನೋರ್ವನ ಮೇಲೆ ದುಷ್ಕರ್ಮಿಗಳ ತಲವಾರು ದಾಳಿ

Wednesday, December 16th, 2020
Tajuddin

ಮಂಗಳೂರು: ಮೂವರು ದುಷ್ಕರ್ಮಿಗಳ ತಂಡ ಯುವಕನೋರ್ವನ‌ ಮೇಲೆ ಅಡ್ಡೂರಿನಲ್ಲಿ ತಲವಾರು ದಾಳಿ ನಡೆಸಿದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಅಡ್ಡೂರು ನಿವಾಸಿ ಮುಹಮ್ಮದ್ ತಾಜುದ್ದೀನ್ (30) ತಲವಾರು ದಾಳಿಯಿಂದ‌ ಗಾಯಗೊಂಡವರು ಎಂದು ತಿಳಿದುಬಂದಿದೆ. ತಾಜುದ್ದೀನ್ ಮಂಗಳವಾರ ತಡರಾತ್ರಿ ಅಡ್ಡೂರಿನಿಂದ ಮನೆ ಕಡೆಗೆ ತೆರಳುತ್ತಿದ್ದು, ಈ ವೇಳೆ‌ ಮೂವರಿದ್ದ ದುಷ್ಕರ್ಮಿಗಳ ತಂಡ ಯುವಕನ‌ ಮೇಲೆ ತಲವಾರು ಬೀಸಿದ್ದಾರೆ. ಪರಿಣಾಮ ಯುವಕನ ತೊಡೆ ಭಾಗ, ಕೈ ಸಹಿತ ವಿವಿಧೆಡೆ ಗಾಯಗಳಾಗಿವೆ. ಹಳೆ‌ ವೈಷಮ್ಯದಿಂದಲೇ ದಾಳಿ ನಡೆದಿದೆ ಎಂದು ಶಂಕೆ ವ್ಯಕ್ತವಾಗಿದೆ. ಗಾಯಾಳುವನ್ನು […]

ಹಾಲು ಸಾಗಾಟ ವಾಹನದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ

Tuesday, October 13th, 2020
meat

ಮಂಗಳೂರು: ಹಾಲು ಸಾಗಾಟ ಮಾಡುವ ವಾಹನದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದವರನ್ನು ಬಜರಂಗದಳದ ಕಾರ್ಯಕರ್ತರು ಪತ್ತೆ ಹಚ್ಚಿ ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳವಾರ ಬೆಳಿಗ್ಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆ ಬಳಿ ನಡೆದಿದೆ. ಆರೋಪಿಗಳು ಹಾಸನದಿಂದ ಕುದ್ರೋಳಿಗೆ ಹಾಲಿನ ವಾಹನದಲ್ಲಿ ಗೋಮಾಂಸ ಸಾಗಾಟ ಮಾಡುತ್ತಿದ್ದರು ಎಂದು ವರದಿಗಳು ತಿಳಿಸಿದೆ. ವಾಹನದಲ್ಲಿ ಮೂವರಿದ್ದು, ಇದರಲ್ಲಿ ಇಬ್ಬರು ದಾಳಿ ವೇಳೆ ಪರಾರಿಯಾಗಿದ್ದಾರೆ. ಓರ್ವನನ್ನು ಹಿಡಿದ ಬಜರಂಗದಳ ಕಾರ್ಯಕರ್ತರು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಗೋಮಾಂಸ ಸಾಗಾಟ ಮಾಡುತ್ತಿದ್ದ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. […]

ವೆನ್ಲಾಕ್ ಆಸ್ಪತ್ರೆಯಲ್ಲಿ 37 ಐಸಿಯು ಕೊಠಡಿಗಳ ನಿರ್ಮಾಣಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಿಂದ ಹಣ : ಸಚಿವ ಬೈರತಿ

Monday, July 13th, 2020
Bairati Basavaraj

ಮಂಗಳೂರು: ಸ್ಮಾರ್ಟ್ ಸಿಟಿ ಯೋಜನೆಯ ಪ್ರಗತಿ ಯ ಕುರಿತು ಸಭೆ ನಡೆಸಿ ಉಳಿದ ಕಾಮಗಾರಿಗಳಿಗೆ ವೇಗ ನೀಡುವಂತೆ ಅಧಿಕಾರಿಗಳಿಗೆ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಅವರು ಸೂಚನೆ ನೀಡಿದರು. ನಗರದಾದ್ಯಂತ 60 ಸಾವಿರ ಎಲ್ಇಡಿ ಲೈಟ್ ಅಳವಡಿಸಲಾಗುತ್ತಿದೆ. ಕೆಲವೇ ದಿನಗಳಲ್ಲಿ ಅದಕ್ಕೆ ನಾನೇ ಬಂದು ಚಾಲನೆ ನೀಡಲಿದ್ದೇನೆ. ಸರ್ಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ 37 ಐಸಿಯು ಕೊಠಡಿಗಳ ನಿರ್ಮಾಣಕ್ಕೆ ₹ 3.40 ಕೋಟಿ ವೆಚ್ಚದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಿಂದ ಹಣ ಒದಗಿಸಲಾಗುತ್ತದೆ ಎಂದರು. ನಗರದ ಸರ್ಕ್ಯೂಟ್ ಹೌಸ್ನಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳೊಂದಿಗೆ ಮಂಗಳೂರು ನಗರದ […]

ಜಿಲ್ಲಾ ವೈದ್ಯಾಧಿಕಾರಿ ಡಾ.ರಾಜೇಶ್ವರಿ ದೇವಿ ಬಂಟ್ವಾಳಕ್ಕೆ ವರ್ಗಾವಣೆ

Thursday, March 26th, 2020
RajeshwariDevi

ಮಂಗಳೂರು : ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕಿ ಡಾ.ರಾಜೇಶ್ವರಿ ದೇವಿ ಅವರನ್ನು ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಆಗಿ ವರ್ಗಾಯಿಸಲಾಗಿದೆ. ಅವರ ಸ್ಥಾನಕ್ಕೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಸದಾಶಿವ ಅವರನ್ನು ನಿಯುಕ್ತಿಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ವೆನ್ಲಾಕ್ ಆಸ್ಪತ್ರೆ ಕೋವಿಡ್-19 ಆಸ್ಪತ್ರೆಯನ್ನಾಗಿ ಮಾರ್ಪಾಡು, ಅಲ್ಲಿದ್ದ ಹೋರ ರೋಗಿಗಳು ಖಾಸಗಿ ಆಸ್ಪತ್ರೆಗೆ ವರ್ಗಾವಣೆ

Thursday, March 26th, 2020
Wenlock Corona

ಮಂಗಳೂರು:  ವೆನ್ಲಾಕ್ ಆಸ್ಪತ್ರೆಯನ್ನು ಸಂಪೂರ್ಣವಾಗಿ ಕೋವಿಡ್-19 ರೋಗಿಗಳ ಆಸ್ಪತ್ರೆಯನ್ನಾಗಿ ಮಾರ್ಪಾಡುಗೊಳಿಸಿ ಇಲ್ಲಿರುವ ಇತರ ಹೋರ ರೋಗಿಗಳನ್ನು ಖಾಸಗಿ ಆಸ್ಪತ್ರೆಗೆ ವರ್ಗಾಯಿಸಲು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆದೇಶ ನೀಡಿದ್ದಾರೆ. ಗುರುವಾರ ಪತ್ರಿಕಾಗೋಷ್ಟಿ ನಡೆಸಿ ಈ ಮಾಹಿತಿ ನೀಡಿದ ಉಸ್ತುವಾರಿ ಸಚಿವರು, ವೆನ್ಲಾಕ್ ಆಸ್ಪತ್ರೆಯಲ್ಲಿರುವ ಇತರ ರೋಗಿಗಳನ್ನು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುವುದು. ಮತ್ತು ಉಚಿತವಾಗಿಯೇ ಚಿಕಿತ್ಸೆ ನೀಡಲಾಗುವುದು ಎಂದಿದ್ದಾರೆ. ವೆನ್ಲಾಕ್ ಆಸ್ಪತ್ರೆಯ 250 ಹಾಸಿಗೆಗಳ ಕಟ್ಟಡವನ್ನು ಸಂಪೂರ್ಣವಾಗಿ ಕೋವಿಡ್-19 ಪಾಸಿಟಿವ್ ರೋಗಿಗಳ ಚಿಕಿತ್ಸೆಗಾಗಿ ಮೀಸಲಿಡಲಾಗುವುದು. ಆಸ್ಪತ್ರೆಯ […]