ಜೊತೆಯಾಗಿ ಕೆಲಸ ಮಾಡುವ ಪ್ರಧಾನಿ ಮೋದಿ ಪ್ರಸ್ತಾಪವನ್ನು ತಿರಸ್ಕರಿಸಿದ ಶರದ್ ಪವಾರ್

Tuesday, December 3rd, 2019
Modi

ಮುಂಬೈ : ಭಾರತದ ಪ್ರಧಾನಿ ಮೋದಿ ಅವರು ನಾವು ಒಟ್ಟಿಗೆ ಕೆಲಸ ಮಾಡಬೇಕೆಂದು ಬಯಸಿದ್ದರು. ಆದರೆ ನಾನು ಅವರ ಪ್ರಸ್ತಾಪವನ್ನು ತಿರಸ್ಕಾರ ಮಾಡಿದೆ ಎಂದು ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಹೇಳಿದ್ದಾರೆ. ಮಹಾರಾಷ್ಟ್ರದ ಸ್ಥಳೀಯ ಮಾಧ್ಯಮಕ್ಕೆ ನೀಡಿದ ಸಂದರ್ಶನವೊಂದರಲ್ಲಿ, ಮೋದಿ ನಾವು ಒಟ್ಟಿಗೆ ಕೆಲಸ ಮಾಡಬೇಕೆಂದು ಬಯಸಿದ್ದರು. ಆದರೆ ನಮ್ಮ ವೈಯಕ್ತಿಕ ಜೀವನದಲ್ಲಿ ನಮ್ಮಿಂಬ್ಬರ ಸಂಬಂಧ ಚೆನ್ನಾಗಿದೆ. ಅದು ಹಾಗೆಯೇ ಇರುತ್ತದೆ. ಆದರೆ ನಾವು ಒಟ್ಟಿಗೆ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಹೇಳಿದೆ ಎಂದು ಪವಾರ್ […]

ಶಿವಸೇನಾ ಜತೆ ಮೈತ್ರಿ ಬಗ್ಗೆ ಉಲ್ಟಾ ಹೊಡೆದ ಶರದ್ ಪವಾರ್

Monday, November 18th, 2019
Sharad

ನವದೆಹಲಿ : ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಜತೆ ಎನ್ ಸಿಪಿ ವರಿಷ್ಠ ಶರದ್ ಪವಾರ್ ಸೋಮವಾರ ಮಾತುಕತೆ ನಡೆಸುವ ಮುನ್ನವೇ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ಸಂಬಂಧಿಸಿದಂತೆ ಉಲ್ಟಾ ಹೊಡೆದಿದ್ದು, ಸರ್ಕಾರ ರಚನೆ ಬಗ್ಗೆ ಬಿಜೆಪಿ ಮತ್ತು ಶಿವಸೇನಾ ತಮ್ಮ ದಾರಿಯನ್ನು ಆಯ್ಕೆ ಮಾಡಿಕೊಳ್ಳಲಿವೆ ಎಂದು ತಿಳಿಸಿದ್ದಾರೆ. ಲೋಕಸಭೆಯ ಆವರಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಚುನಾವಣೆಯಲ್ಲಿ ಬಿಜೆಪಿ-ಶಿವಸೇನಾ ಜತೆಯಾಗಿ ಸ್ಪರ್ಧಿಸಿದ್ದವು. ನಾವು ಕೂಡಾ ಎನ್ ಸಿಪಿ, ಕಾಂಗ್ರೆಸ್ ಜತೆಯಾಗಿಯೇ ಸ್ಪರ್ಧಿಸಿದ್ದೇವೆ. ಹೀಗಾಗಿ ಅವರು […]

ಹರ್ಯಾಣ, ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಅಂತಿಮ ಫಲಿತಾಂಶ

Friday, October 25th, 2019
maharashtra

ನವದೆಹಲಿ : ಮಹಾರಾಷ್ಟ್ರ ಮತ್ತು ಹರ್ಯಾಣ ರಾಜ್ಯಗಳ ವಿಧಾನಸಭೆ ಚುನಾವಣೆಯ ಅಂತಿಮ ಫಲಿತಾಂಶ ಮಧ್ಯರಾತ್ರಿ ಹೊರಬಿದ್ದಿದೆ. ಯಾವ ರಾಜ್ಯದಲ್ಲಿ ಯಾವ ಪಕ್ಷ ಎಷ್ಟು ಕ್ಷೇತ್ರಗಳನ್ನು ಗೆದ್ದುಕೊಂಡಿದೆ ಎಂಬ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ. ಗುರುವಾರ ರಾತ್ರಿ 11.15ರ ಸುಮಾರಿಗೆ ಹರ್ಯಾಣ ವಿಧಾನಸಭೆಯ ಫಲಿತಾಂಶವನ್ನು ಚುನಾವಣಾ ಆಯೋಗ ಅಂತಿಮಗೊಳಿಸಿದೆ. ಒಟ್ಟು ವಿಧಾನಸಭಾ ಚುನಾವಣೆಯ ಒಟ್ಟು 90 ಕ್ಷೇತ್ರಗಳ ಪೈಕಿ ಆಡಳಿತಾರೂಢ ಬಿಜೆಪಿ 40 ಸ್ಥಾನವನ್ನಷ್ಟೇ ಗೆದ್ದುಕೊಳ್ಳಲು ಶಕ್ತವಾಗಿದೆ. ಉಳಿದಂತೆ ಕಾಂಗ್ರೆಸ್ 31, ಜೆಜೆಪಿ 10, ಹರ್ಯಾಣ ಲೋಕಹಿತ ಪಕ್ಷ ಒಂದು, […]

ಪ್ರಧಾನಿ ಮೋದಿಗೆ ನಾಚಿಕೆಯಾಗಬೇಕು: ಮನಮೋಹನ್ ಸಿಂಗ್ ವಿರುದ್ಧ ಆರೋಪಕ್ಕೆ ಶರದ್ ಪವಾರ್ ಕಿಡಿ

Wednesday, December 13th, 2017
shard-power

ನಾಗ್ಪುರ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಗುಜರಾತ್ ನಲ್ಲಿ ಬಿಜೆಪಿಯನ್ನು ಸೋಲಿಸಲು ಪಾಕಿಸ್ತಾನದ ಜತೆಗೆ ಪಿತೂರಿ ನಡೆಸಿದ್ದಾರೆ ಎಂದು ಆರೋಪ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾಚಿಕೆಯಾಗಬೇಕು ಎಂದು ಎನ್ಸಿಪಿ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಶರದ್ ಪವಾರ್ ಹೇಳಿದ್ದಾರೆ. ಮನಮೋಹನ್ ಸಿಂಗ್ ಬೆಂಬಲಕ್ಕೆ ನಿಂತಿರುವ ಪವಾರ್, ವಿಶ್ವದಲ್ಲಿ ಯಾರು ಕೂಡಾ ಮನಮೋಹನ್ ಸಿಂಗ್ ಅವರ ಕಡೆ ಬೊಟ್ಟು ಮಾಡಲಾಗದಂತ ವ್ಯಕ್ತಿತ್ವ ಅವರದ್ದು ಅಂತಹವರ ವಿರುದ್ಧ ನರೇಂದ್ರ ಮೋದಿ ಅವರು ಕೀಳುಮಟ್ಟದ ಆರೋಪ […]