ಶಿಕ್ಷಕನ ಅವಮಾನ ತಾಳಲಾರದೆ ಇಲಿ ಪಾಷಾಣ ಸೇವಿಸಿದ್ದ ವಿದ್ಯಾರ್ಥಿನಿ ಮೃತ್ಯು

Tuesday, February 13th, 2024
trisha

ಬೆಳ್ತಂಗಡಿ : ಶಿಕ್ಷಕ ಕಳುಹಿಸಿದ ಮೊಬೈಲ್ ಸಂದೇಶದಿಂದ ಅವಮಾನಗೊಂಡು ವಿಷ (ಇಲಿ ಪಾಷಾಣ) ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಧರ್ಮಸ್ಥಳದ ಪಿಜತ್ತಡ್ಕದ ಕಿಶೋರ್-ಸೌಮ್ಯಾ ದಂಪತಿ ಪುತ್ರಿ ತ್ರಿಶಾ(16) ಮೃತ ವಿದ್ಯಾರ್ಥಿನಿ. ಫೆ.7ರಂದು ವಿಷ ಸೇವಿಸಿದ್ದ ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಎರಡು ದಿನಗಳ ಹಿಂದೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ಕೊನೆಯುಸಿರೆಳೆದಿದ್ದಾಳೆ. ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ […]

ಅಕ್ಟೋಬರ್ 25ರಿಂದ 1ರಿಂದ 5ನೇ ತರಗತಿ ಶಾಲೆ ಆರಂಭ

Monday, October 18th, 2021
school re open

ಮಂಗಳೂರು : ಕೊರೋನಾ ಮಹಾಮಾರಿಯಿಂದ ಮುಚ್ಚಲಾಗಿದ್ದ ಶಾಲೆಗಳ ಆರಂಭ ಕ್ರಮವಾಗಿ ನಡೆಯುತ್ತಿದ್ದು ಇದೀಗ ಅಕ್ಟೋಬರ್ 25ರಿಂದ 1ರಿಂದ 5ನೇ ತರಗತಿ ಶಾಲೆ ಆರಂಭ ಆಗಲಿದೆ. ರಾಜ್ಯದಲ್ಲಿ ಕೊರೋನಾ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳ ಆರಂಭಕ್ಕೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ನೀಡಿದ್ದರಿಂದ ಶಾಲೆ ಆರಂಭಿಸುವುದಕ್ಕೆ ಶಿಕ್ಷಣ ಇಲಾಖೆ ತೀರ್ಮಾನಿಸಿದೆ. ಇನ್ನು ಶಾಲೆಗಳ ಆರಂಭ ಕುರಿತಂತೆ ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ಅದರಂತೆ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರ ಅನುಮತಿ ಕಡ್ಡಾಯ. ಮಕ್ಕಳಿಗೆ ಶಾಲೆ ಹಾಜರಾತಿ ಕಡ್ಡಾಯವಿಲ್ಲ. ಶಿಕ್ಷಕರು ಮತ್ತು […]

ನಗರದ ಕನಕ ವಿದ್ಯಾಸಂಸ್ಥೆಯ ಶಿಕ್ಷಕರಿಗೆ ಹೆಚ್.ಡಿ.ಕೆ ಮಲ್ನಾಡ್ ಬ್ರಿಗೇಡ್ ನಿಂದ “ಪುಡ್ ಕಿಟ್” ವಿತರಣೆ

Tuesday, June 8th, 2021
HDK Kit

ಶಿವಮೊಗ್ಗ : ರಾಮ ಮನೋಹರ ಲೋಹಿಯ ನಗರದಲ್ಲಿರುವ ಕನಕ ವಿದ್ಯಾಸಂಸ್ಥೆಯ ಶಿಕ್ಷಕರಿಗೆ ಹೆಚ್.ಡಿ.ಕೆ ಮಲ್ನಾಡ್ ಬ್ರಿಗೇಡ್ ನಿಂದ “ಪುಡ್ ಕಿಟ್” ವಿತರಿಸಲಾಯಿತು. ಜೂನ್,08ರ ಬುದವಾರದಂದು ಹಮ್ಮಿಕೊಳ್ಳಲಾಗಿದ್ದ ಖಾಸಗಿ ಶಾಲಾ ಶಿಕ್ಷಕರಿಗೆ “ಪುಡ್ ಕಿಟ್” ವಿತರಣೆಯ ನೇತೃತ್ವ ವಹಿಸಿ ಮಾತನಾಡಿದ ಹೆಚ್.ಡಿ.ಕೆ ಮಲ್ನಾಡ್ ಬ್ರಿಗೇಡ್ ನ ಎನ್.ಎಮ್ ಸಿಗ್ಬತ್ ಉಲ್ಲಾರವರು ಕೋವಿಡ್-19 ನಂತರ ಪರಿಸ್ಥಿತಿಯಲ್ಲಿ ಶಿಕ್ಷಕರ ವರ್ಗ ಸಂಕಷ್ಟಕ್ಕೆ ಸಿಲುಕಿದೆ. ಲಾಕ್ಡೌನ್-ಸೀಲ್ಡೌನ್ ನಿಂದಾಗಿ ಈ ವರ್ಗದ ಶಿಕ್ಷಕರನ್ನು ಸರಕಾರವಾಗಲಿ, ಸ್ಥಳೀಯ ಮಹಾನಗರ ಪಾಲಿಕೆಯಾಗಲಿ ಯಾವುದೇ ಪ್ಯಾಕೇಜ್ ಘೋಷಿಸದೇ ವಂಚಿತರನ್ನಾಗಿಸಿದೆ […]

ಶಿಕ್ಷಕರ ಬೋಧನೆ, ಉತ್ತಮ ನಡತೆ ವಿದ್ಯಾರ್ಥಿಗಳ ಜೀವನದ ದಾರಿದೀಪ

Saturday, May 29th, 2021
Boodishwara

ಗದಗ : ಶಿಕ್ಷಕರ ಬೋಧನೆ ಹಾಗೂ ಉತ್ತಮ ನಡತೆ ವಿದ್ಯಾರ್ಥಿಗಳಿಗೆ ದಾರಿದೀಪವಾಗುತ್ತದೆ ಎಂದು ಹೊಸಳ್ಳಿಮಠದ ಶ್ರೀ ಬೂದೀಶ್ವರ ಮಹಾಸ್ವಾಮಿಗಳು ನುಡಿದರು. ಅವರು ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಶಿಕ್ಷಕರ ಸಂಘಗಳ ಸಹಯೋಗದೊಂದಿಗೆ ಶುಕ್ರವಾರದಂದು ಹಮ್ಮಿಕೊಳ್ಳಲಾದ ಶಿಕ್ಷಕರಿಗೆ ಆತ್ಮಸ್ಥೈರ್ಯ ತುಂಬುವ ವರ್ಚುವಲ್ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು. ಶಿಕ್ಷಕ ಕರ್ಮಯೋಗಿ ವಿಷಯ ಕುರಿತು ಉಪನ್ಯಾಸ ನೀಡುತ್ತಾ ವಸಂತ ಋತು ಎಂದರೆ ಹೊಸದು. ಹಳೆಯದನ್ನು ಕಳೆದುಕೊಂಡು ಹೊಸದನ್ನು ಪಡೆದುಕೊಳ್ಳುವುದಾಗಿದೆ. ಮನುಷ್ಯನು ಸೇರಿದಂತೆ ಭೂಮಿಯ ಮೇಲೆ ಒಟ್ಟು 14 ಲಕ್ಷ ಜೀವರಾಶಿಗಳಿವೆ. […]

ಮನೆಯವರಿಗೆ ಕೊರೊನಾ ಸೋಂಕು ಬರಬಹುದು ಎಂದು ಹೆದರಿ ಶಿಕ್ಷಕ ಆತ್ಮಹತ್ಯೆ

Tuesday, May 25th, 2021
mahantesh

ಗದಗ: ಜಕ್ಕಲಿ ಗ್ರಾಮದ ಸರ್ಕಾರಿ ಶಾಲೆ ಶಿಕ್ಷಕ ರೋರ್ವರು ಮನೆಯವರಿಗೆ ಕೊರೊನಾ ಸೋಂಕು ಬರಬಹುದು ಎಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಿಲ್ಲೆಯ ರೋಣ ತಾಲೂಕಿನ ಜಕ್ಕಲಿ ಗ್ರಾಮದ ಮಹಾಂತೇಶ್ ಕುದರಿ (32) ಮನೆಯಲ್ಲಿ ನೇಣಿಗೆ ಶರಣಾದವರು. ಮಹಾಂತೇಶ್ ಕುರ್ತಕೋಟಿ ಸರ್ಕಾರಿ ಶಾಲೆಯಲ್ಲಿ ಸಹ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಮಹಾಂತೇಶ್ ಅವರಿಗೆ ಕೊರೊನಾ ಸೋಂಕು ಇರುವುದು ದೃಢವಾಗಿತ್ತು. ಆದರೆ ಶಿಕ್ಷಕ ಮಾತ್ರ ತನ್ನ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದರು. ಕೊರೊನಾ ಪಾಸಿಟಿವ್ ಆಗಿದ್ದರಿಂದಾಗಿ ಮನೆ ಮಂದಿಗೆಲ್ಲಾ ಬರಬಹುದು ಎಂದು ಮನನೊಂದು ನೇಣು […]

ಶಿಕ್ಷಕರನ್ನು ಸರಕಾರಿ, ಅನುದಾನಿತ, ಖಾಸಗಿ ಅನುದಾನ ರಹಿತ, ಅತಿಥಿ ಶಿಕ್ಷಕರೆಂಬ ಭೇದಭಾವ ಮಾಡದೇ ಶಿಕ್ಷಕರಿಗೆ ಎಲ್ಲ ಸೌಲಭ್ಯ ನೀಡಿ

Monday, May 24th, 2021
Horatti

ಬೆಂಗಳೂರು : ರಾಜ್ಯದಲ್ಲಿ ಸುಮಾರು 60 ಸಾವಿರಕ್ಕೂ ಹೆಚ್ಚು ಶಿಕ್ಷಕರು ಕೋವಿಡ್ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರಲ್ಲಿ ಸರಕಾರಿ, ಅನುದಾನಿತ ಹಾಗೂ ಖಾಸಗಿ ಅನುದಾನ ರಹಿತ ಮತ್ತು ಅತಿಥಿ (ಗುತ್ತಿಗೆ) ಶಿಕ್ಷಕರು ಸೇರಿದ್ದಾರೆ. ಈ ಎಲ್ಲಾ ಶಿಕ್ಷಕರನ್ನು ಆಸ್ಪತ್ರೆ, ರೈಲು ಮತ್ತು ಬಸ್ ನಿಲ್ದಾಣ, ಚೆಕ್‍ಪೋಸ್ಟ್‍ಗಳಲ್ಲಿ ಶಿಕ್ಷಕರನ್ನು ನಿಯೋಜಿಸಲಾಗಿದೆ, ಕೋವಿಡ್ ವಾರ್‍ರೂಮ್, ಸಹಾಯವಾಣಿಯಲ್ಲಿ ಇವರು ಕೆಲಸ ಮಾಡುತ್ತಿರುವುದಲ್ಲದೇ ಸೋಂಕಿತರ ಮನೆಗೇ ಹೋಗಿ, ಅವರ ಮತ್ತು ಪ್ರಾಥಮಿಕ, ದ್ವಿತೀಯ ಸಂಪರ್ಕಿತರ ವಿವರಗಳನ್ನು ಸಂಗ್ರಹಿಸಿ, ಅವರ ಕುಟುಂಬದವರೊಂದಿಗೆ ಫೋಟೋ ತೆಗೆಸಿ, ಅದನ್ನು […]

ಕೊರೋನಾಗೆ ಹೆದರಿ ಪತ್ನಿ ಮನೆ ಬಳಿ ಬೈಕ್ ನಿಲ್ಲಿಸಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಕೊಂಡ ಶಿಕ್ಷಕ

Tuesday, May 18th, 2021
lokesh

ಮೈಸೂರು: ಕೊರೋನಾ ಅದೆಂತಹ ಸಾಂಕ್ರಾಮಿಕ ನೋಡಿ. ಇಲ್ಲೊಬ್ಬ ಶಿಕ್ಷಕ ಕೊರೋನಾ  ಪಾಸಿಟಿವ್ ಬಂದಿದ್ದಕ್ಕೆ ಮನನೊಂದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಕೊಂಡ ಘಟನೆ ಕೆ.ಆರ್. ನಗರದಲ್ಲಿ ನಡೆದಿದೆ. ಮೈಸೂರು ಜಿಲ್ಲೆ ಕೆ.ಆರ್.ನಗರದ ಕೋಗಿಲೂರು ಗ್ರಾಮದ ಲೋಕೇಶ್ ಮೃತ ದುರ್ದೈವಿ. ಲೋಕೇಶ್ಗೆ ಕಳೆದ ವರ್ಷ ಮದುವೆ ಆಗಿತ್ತು. ಇವರಿಗೆ ಇತ್ತೀಚಿಗೆ ಕೊರೋನಾ ಸೋಂಕು ದೃಢಪಟ್ಟಿತ್ತು. ಕುಟುಂಬಸ್ಥರು‌ ಆತ್ಮಸ್ಥೈರ್ಯ ತುಂಬಿದ್ದರು. ವಾರ್ ರೂಂನಿಂದ ಕರೆ‌ ಮಾಡಿ ಆತಂಕ ಪಡಬೇಡಿ ಎಂದು ತಿಳಿಸಿದ್ದರು. ಪತ್ನಿ‌ ಮನೆಗೆ ಹೋಗುವುದಾಗಿ ತನ್ನ ಮನೆಯಲ್ಲಿ ಹೇಳಿದ್ದ ಲೋಕೇಶ್, ಪತ್ನಿ ಮನೆ […]

ಬೈಕಾಡಿ ಜನಾರ್ದನ ಆಚಾರ್ ನಿಧನ

Sunday, September 13th, 2020
Baikady Janardhana-Achar

ಮಂಗಳೂರು : ಆದರ್ಶ ಶಿಕ್ಷಕ, ಶಿಕ್ಷಣ ತಜ್ಞ ಬೈಕಾಡಿ ಜನಾರ್ದನ ಆಚಾರ್ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ರವಿವಾರ ಬೆಳಗ್ಗೆ ನಿಧನರಾದರು. ಅವರು ಕೆನರಾ ಹೈ ಸ್ಕೂಲ್‌ನಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ. ಚೆನ್ನರಾಯಣ ಪಟ್ಟಣದ ಮಲನಾಡು ಪಿಯು ಕಾಲೇಜು ಸೇರಿದಂತೆ ಹಲವಾರು ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಅಲ್ಲದೆ, ವಿಶ್ವ ಹಿಂದೂ ಪರಿಷತ್‌ನಲ್ಲೂ ಗುರುತಿಸಿಕೊಂಡಿದ್ದರು. ಎಸ್‌ಕೆಜಿಐ ಸೊಸೈಟಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಶಕ್ತಿ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿಯಾಗಿದ್ದ ಅವರು ಆಗಸ್ಟ್ ತಿಂಗಳಲ್ಲಿ ನಿವೃತ್ತಿ ಹೊಂದಿದ್ದರು. ಶಾಲಾ ದಿನಗಳಿಂದಲೇ ಅನೇಕರಿಗೆ […]

ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು : ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.

Saturday, September 5th, 2020
Teachers Day

ಮಂಗಳೂರು : ದಕ್ಷಿಣ ಕನ್ನಡ ಜಿಪಂ, ಸಾರ್ವಜನಿಕ ಶಿಕ್ಷಣ ಇಲಾಖೆ, ದ.ಕ. ಜಿಲ್ಲಾ ಉಪನಿರ್ದೇಶಕರ ಕಚೇರಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಮಂಗಳೂರು ಉತ್ತರ ವಲಯ ಶಿಕ್ಷಕರ ದಿನಾಚರಣೆ ಸಮಿತಿ ಮತ್ತು ಶಿಕ್ಷಕರ ಕಲ್ಯಾಣ ನಿಧಿ,ಬೆಂಗಳೂರು  ಸಹಯೋಗದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನೋತ್ಸವ ಹಾಗೂ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಉರ್ವ ಕೆನರಾ ಹೈಸ್ಕೂಲ್ ಸಭಾಂಗಣದಲ್ಲಿ ನಡೆಯಿತು. ಮಕ್ಕಳಿಗೆ ಶಿಕ್ಷಕರೇ ಹೀರೋಗಳು, ಪ್ರತಿಯೋರ್ವರ ಯಶಸ್ಸಿನ ಹಿಂದೆ ಗುರುಗಳ ಪಾತ್ರ ಇದ್ದೇ ಇರುತ್ತದೆ. ಹಾಗಾಗಿ ಮಕ್ಕಳ ಭವಿಷ್ಯ […]

ಶ್ರೀಮತಿ ಸುಂದರಿ ಶೀನ ಶೆಟ್ಟಿ ವಳಕಾಡು ನಿಧನ

Thursday, July 16th, 2020
Sundari-Sheena-Shetty

ಉಡುಪಿ : ಇಲ್ಲಿನ ವಳಕಾಡು ಹೆಸರಾಂತ ಶಿಕ್ಷಕ ದಿ.ಶೀನ ಶೆಟ್ಟಿ ಇವರ ಧರ್ಮಪತ್ನಿ ಬೈಲೂರು ಮೂಲತಃ ಶ್ರೀಮತಿ ಸುಂದರಿ ಶೀನ ಶೆಟ್ಟಿ (83)  ಮಂಗಳವಾರ ರಾತ್ರಿ ತನ್ನ ವಳಕಾಡು ಸ್ವನಿವಾಸ ಶ್ರೀ ಗುರುಛಾಯಾ ನಿವಾಸದಲ್ಲಿ ವೃದ್ಧಾಪ್ಯ ಸಹಜತೆಯಿಂದ ನಿಧನರಾದರು. ಬೃಹನ್ಮುಂಬಯಲ್ಲಿನ ಹೆಸರಾಂತ ಉದ್ಯಮಿ, ಕೊಡುಗೈದಾನಿ, ಸಮಾಜ ಸೇವಕ, ಉಡುಪಿ ಮೂಲದ ಮುಂಬಯಿ ವಾಸಿ ಬಿ.ಆರ್ ರೆಸ್ಟೋರೆಂಟ್ಸ್ ಪ್ರೈವೇಟ್ ಲಿಮಿಟೆಡ್‌ನ ಆಡಳಿತ ನಿರ್ದೇಶಕ ಬಿ.ಆರ್ ಶೆಟ್ಟಿ ಸೇರಿದಂತೆ ನಾಲ್ಕು ಗಂಡು, ಎರಡು ಹೆಣ್ಣು ಹಾಗೂ ಅಪಾರ ಬಂಧು-ಬಳಗ ಅಗಲಿದ್ದಾರೆ.