ಕೆಎಸ್ ಈಶ್ವರಪ್ಪ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ

Friday, March 15th, 2024
eswarappa

ಶಿವಮೊಗ್ಗ: ಲೋಕಸಭೆ ಚುನಾವಣೆಯಲ್ಲೂ ತಮ್ಮ ಪುತ್ರನಿಗೆ ಟಿಕೆಟ್ ಸಿಗದ್ದಿದ್ದಕ್ಕೆ ಬಿಜೆಪಿ ವಿರುದ್ಧ ತೀವ್ರ ಆಕ್ರೋಶಗೊಂಡಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಸಿಗದೆ ಅಸಮಾಧಾನಗೊಂಡಿದ್ದ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ. ಪುತ್ರ ಕಾಂತೇಶ್ ಗೆ ಹಾವೇರಿ ಲೋಕಸಭೆ ಕ್ಷೇತ್ರದ ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ಪುತ್ರನ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಈಶ್ವರಪ್ಪ ಇದೀಗ ಅಖಾಡಕ್ಕಿಳಿದಿದ್ದಾರೆ. ಇಂದು ಬೆಂಬಲಿಗರು, ಹಿತೈಷಿಗಳು, ಅಭಿಮಾನಿಗಳೊಂದಿಗೆ ನಗರದ ಬಂಜಾರ […]

ಆದಿಚುಂಚನಗಿರಿ ಕಾಲೇಜಿನ ಕಟ್ಟಡದ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

Tuesday, December 5th, 2023
Meghashree

ಶಿವಮೊಗ್ಗ: ಇಲ್ಲಿನ ಆದಿಚುಂಚನಗಿರಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯೊವಳು ಕಟ್ಟಡದ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೇಘಾಶ್ರೀ (18) ಮೃತ ವಿದ್ಯಾರ್ಥಿನಿ. ಈಕೆ ಶಿವಮೊಗ್ಗದ ಶರಾವತಿ ನಗರದಲ್ಲಿರುವ ಆದಿ ಚುಂಚನಗಿರಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಮೇಘಾಶ್ರೀ ಹೋಂ ಸಿಕ್‍ಗೆ ಒಳಗಾಗಿದ್ದಳು. ಇದೇ ಕಾರಣದಿಂದ ಈಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇತ್ತ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೇಘಾ ಶ್ರೀ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ದೊಡ್ಡಪೇಟೆ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಶಿವಮೊಗ್ಗ ಘಟನೆಯ ಸಂಚಿನಲ್ಲಿ ಮುಸ್ಲಿಂ ಮಹಿಳೆಯರ ಪಾತ್ರವಿರುವ ವಿಚಾರ ಗಂಭೀರವಾದುದು : ಶರಣ್ ಪಂಪ್ ವೆಲ್

Friday, October 6th, 2023
sharn-pumpwel

ಮಂಗಳೂರು : ಶಿವಮೊಗ್ಗದಲ್ಲಿ ಪ್ರತಿ ಬಾರಿ ಶಾಂತಿ ಕದಡುವ ಯತ್ನ ನಡೆಯುತ್ತಿದೆ. ದೇಶದ ಯಾವುದೇ ಮೂಲೆಯಲ್ಲಿ ಭಯೋತ್ಪಾದಕ ಕೃತ್ಯ ನಡೆದರೂ ಅದರ ಬೇರು ಶಿವಮೊಗ್ಗವನ್ನು ತೋರಿಸುತ್ತದೆ. ರಾಜ್ಯದ ಮಲೆನಾಡು ಶಿವಮೊಗ್ಗವನ್ನು ಉಗ್ರರು ಕಾರಸ್ಥಾನ ಮಾಡಿಕೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ರಕ್ಷಣೆಗಾಗಿ ವಿಶ್ವ ಹಿಂದು ಪರಿಷತ್ತಿನಿಂದ ಉತ್ತರ ಪ್ರದೇಶ ಮಾದರಿಯಲ್ಲಿ ಮಹಾ ಪಂಚಾಯತ್ ಸಂಘಟಿಸಲು ಯೋಜನೆ ಹಾಕಿದ್ದೇವೆ ಎಂದು ವಿಹಿಂಪ ಪ್ರಾಂತ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಹೇಳಿದ್ದಾರೆ. ಮಂಗಳೂರಿನ ವಿಹಿಂಪ ಕಚೇರಿಯಲ್ಲಿ ಶುಕ್ರವಾರ ಶರಣ್ ಪಂಪ್ ವೆಲ್, ಮಾತನಾಡಿ […]

ಅನ್ಯಧರ್ಮದ ಯುವಕ ಮತ್ತು ಯುವತಿ ಮೇಲೆ ಬಸ್‌ನಲ್ಲಿ ಹಲ್ಲೆ, ನಾಲ್ವರ ಬಂಧನ

Saturday, December 11th, 2021
Bus Love

ಮಂಗಳೂರು : ನಗರದ ಸರ್ವೀಸ್ ಬಸ್ ನಿಲ್ದಾಣದಲ್ಲಿ ಶುಕ್ರವಾರ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಗೆ ಅವಾಚ್ಯವಾಗಿ ಬೈದು ಕೈಯಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಬಂಧಿಸಲಾಗಿದೆ. ಬಂಧಿತರನ್ನು ಪ್ರಕಾಶ್, ರಾಘವೇಂದ್ರ, ರಂಜಿತ್, ಪವನ್ ಎಂದು ಗುರುತಿಸಲಾಗಿದೆ. ಅನ್ಯಧರ್ಮದ ಯುವಕ ಮತ್ತು ಯುವತಿ ಬಸ್‌ನಲ್ಲಿ ಕುಳಿತುಕೊಂಡಿದ್ದ ಸಂದರ್ಭದಲ್ಲಿ 5-6 ಮಂದಿ ಐಡಿ ಪ್ರೂಫ್ ಕೇಳಿ ಅವರ ಮನೆಯವರ ಬಗ್ಗೆ ವಿಚಾರಿಸಿ ಅವಾಚ್ಯ ಶಬ್ಧಗಳಿಂದ ಬೈದು ಕೈಗಳಿಂದ ಹಲ್ಲೆ ನಡೆಸಿದ್ದಾರೆ. ಮಾತ್ರವಲ್ಲದೆ ಯುವತಿಯ ಗೌರವಕ್ಕೆ ಧಕ್ಕೆ ಬರುವ ರೀತಿಯಲ್ಲಿ ವರ್ತಿಸಿದ್ದ […]

ಟಿವಿ ನೋಡಲು ಬಂದ ಎಂಟು ವರ್ಷದ ಬಾಲಕಿಯ ಅತ್ಯಾಚಾರಕ್ಕೆ ಯತ್ನ, ಆರೋಪಿಯ ಬಂಧನ

Thursday, August 26th, 2021
Ramakrishna

ಮಂಗಳೂರು : ಮನೆಗೆ ಟಿವಿ ನೋಡಲು ಬಂದ ಎಂಟು ವರ್ಷದ ಬಾಲಕಿಯ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಲ್ಲಿ ಮನೆಯ ಮಾಲೀಕನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಕಟೀಲು ಪೆರ್ಮುದೆಯ ರಾಮಕೃಷ್ಣ ಬಂಧಿತ ಆರೋಪಿ. ಶಿವಮೊಗ್ಗ ಮೂಲದ ಮಹಿಳೆಯು ಕಟೀಲು ಪೆರ್ಮುದೆಯ ರಾಮಕೃಷ್ಣ ಎಂಬವರ ಮನೆಯಲ್ಲಿ ಬಾಡಿಗೆಗೆ ವಾಸವಾಗಿದ್ದರು. ಆ.21ಕ್ಕೆ ಬಾಲಕಿಯ ತಾಯಿ ಕೆಲಸದ ನಿಮಿತ್ತ ಶಿವಮೊಗ್ಗಕ್ಕೆ ಪ್ರಯಾಣಿಸಿದ್ದಾರೆ. ಆಗ ತನ್ನ ಮೂವರು ಮಕ್ಕಳನ್ನು ಪೆರ್ಮುದೆಯ ಬಾಡಿಗೆ ಮನೆಯಲ್ಲೇ ಬಿಟ್ಟು ಹೋಗಿದ್ದಾರೆ ಎಂದು ತಿಳಿದುಬಂದಿದೆ. ಮಹಿಳೆಯ ಮೂವರು ಮಕ್ಕಳು ಅದೇ ದಿನ […]

ಜೂನ್ 28 ರಿಂದ ವಿಶ್ವ ಪ್ರಸಿದ್ಧ ಜೋಗ ಜಲಪಾತ ಪ್ರವಾಸಿಗರ ವೀಕ್ಷಣೆಗೆ ಮುಕ್ತ

Sunday, June 27th, 2021
Jog falls

ಶಿವಮೊಗ್ಗ: ಕಳೆದ ಎರಡು ತಿಂಗಳಿನಿಂದ ಮುಚ್ಚಲಾಗಿದ್ದ ಜಿಲ್ಲೆಯ ಸಾಗರ ತಾಲೂಕಿನ ವಿಶ್ವ ಪ್ರಸಿದ್ಧ ಜೋಗ ಜಲಪಾತ ಸೋಮವಾರದಿಂದ ಮತ್ತೆ ಪ್ರವಾಸಿಗರ ವೀಕ್ಷಣೆಗೆ ಮುಕ್ತವಾಗಲಿದೆ. ಕಳೆದ ಒಂದು ವಾರದಿಂದ ಮಲೆನಾಡು ಪ್ರದೇಶಗಳಲ್ಲಿ ಸುರಿಯುತ್ತಿರುವ ಮುಂಗಾರು ಮಳೆಯು ಜೋಗ ಜಲಪಾತದ ಸೊಬಗು ಹೆಚ್ಚಿಸಿದೆ. ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಜಲಪಾತ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಪ್ರವಾಸಿಗರು ಮಾಸ್ಕ್‌ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಸ್ಯಾನಿಟೈಸರ್‌ ಬಳಸುವುದು ಕಡ್ಡಾಯವಾಗಿದೆ. ಲಾಕ್‌ಡೌನ್‌ ಕಾರಣದಿಂದಾಗಿ ಪ್ರವಾಸಿಗರಿಲ್ಲದೇ ಸ್ಥಳೀಯ ವ್ಯಾಪಾರ, ವಹಿವಾಟು ಕುಂಠಿತಗೊಂಡಿತ್ತು. ಇದೀಗ […]

ಶಿವಮೊಗ್ಗದಲ್ಲಿ ತಲೆ ಎತ್ತಲಿರುವ ‘ಕಮಲ’ ಆಕೃತಿಯ ಅತಿ ದೊಡ್ಡ ವಿಮಾನ ನಿಲ್ದಾಣ

Sunday, June 13th, 2021
shivamogga Airport

ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿ  ಪ್ರಗತಿಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪರಿಶೀಲನೆ ನಡೆಸಿದ್ದು, ಇದೇ ವೇಳೆ ವಿಮಾನ ನಿಲ್ದಾಣ ಕಟ್ಟಡ ವಿನ್ಯಾಸವನ್ನು ಅನಾವರಣೆ ಮಾಡಿದ್ದಾರೆ. ಮುಖ್ಯಮಂತ್ರಿಗಳು ಅನಾವರಣಗೊಳಿಸಿದ ಕಟ್ಟಡದ ವಿನ್ಯಾಸವು ಕಮಲದ ಆಕೃತಿಯಲ್ಲಿರುವುದರಿಂದ ವಿಮಾನ ನಿಲ್ದಾಣಕ್ಕೂ ಕೇಸರಿ ಸ್ಪರ್ಶವನ್ನು ನೀಡಲಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಶಿವಮೊಗ್ಗದ ಪಿಡಬ್ಲ್ಯುಡಿಯ ಕಾರ್ಯನಿರ್ವಾಹಕ ಎಂಜಿನಿಯರ್ (ವಿಶೇಷ ವಿಭಾಗ) ಸಂಪತ್ ಅವರು ಈ ಕುರಿತು ಪ್ರತಿಕ್ರಿಯೆ ನೀಡಿ, ಕಟ್ಟಡದ ವಿನ್ಯಾಸವನ್ನು ಮೊದಲ ಬಾರಿಗೆ ಶನಿವಾರ ಅನಾವರಣಗೊಳಿಸಲಾಗಿದ್ದು, ಇದು ಬಹುತೇಕ ಅಂತಿಮಗೊಂಡಿದೆ. ಬೆಂಗಳೂರಿನ […]

ಶಿವಮೊಗ್ಗ ಜಿಲ್ಲೆಯಲ್ಲಿ ಕವಾಸಕಿ ರೋಗಕ್ಕೆ ನಾಲ್ವರು ಮಕ್ಕಳು ಬಲಿ

Tuesday, June 8th, 2021
Kawasaki Disease

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಮಕ್ಕಳಲ್ಲಿ ಕವಾಸಕಿ ರೋಗ ಕಾಣಿಸಿಕೊಂಡಿದ್ದು ಶಿವಮೊಗ್ಗದ ಖಾಸಗಿ ಆಸ್ಪತ್ರೆಯೊಂದರಲ್ಲಿಯೇ ದಾಖಲಾದ 8 ಮಕ್ಕಳಲ್ಲಿ ನಾಲ್ವರು ಮಕ್ಕಳು ಬಲಿಯಾಗಿದ್ದಾರೆ. ರಾಜ್ಯದ ಎಲ್ಲೆಡೆ ಕವಾಸಕಿ ರೋಗ ಭೀತಿ ಉಲ್ಬಣಿಸಿದ್ದು, ಈ ಕವಾಸಕಿ ರೋಗಕ್ಕೆ ಶಿವಮೊಗ್ಗ ಜಿಲ್ಲೆಯಲ್ಲಿ ನಾಲ್ವರು ಮಕ್ಕಳು ಮೃತಪಟ್ಟಿದ್ದಾರೆ. ಕಳೆದ 15 ದಿನದಲ್ಲಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಯೊಂದರಲ್ಲಿಯೇ 8 ಮಕ್ಕಳಲ್ಲಿ ರೋಗ ಕಾಣಿಸಿಕೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ನಾಲ್ಕು ಮಕ್ಕಳು ಮೃತಪಟ್ಟಿದ್ದಾರೆ. ಕೊರೊನಾ ಸೋಂಕಿಗೆ ತುತ್ತಾಗಿ ಚೇತರಿಸಿಕೊಂಡ, ಅಪೌಷ್ಠಿಕತೆ ಸಮಸ್ಯೆ ಇರುವ ಮಕ್ಕಳಲ್ಲಿ ಕವಾಸಕಿ ರೋಗ […]

ಶಿವಮೊಗ್ಗ ಜಿಲ್ಲೆಯಾದ್ಯಂತ ಮೇ31ರಿಂದ ಒಂದು ವಾರ ಕಠಿಣ ಲಾಕ್‍ಡೌನ್ ಜಾರಿ

Sunday, May 30th, 2021
Eswarappa

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಾದ್ಯಂತ ಮೇ 31ರಿಂದ ಜೂನ್ 7ರವರೆಗೆ ಕಠಿಣ ಲಾಕ್‍ಡೌನ್ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್ ಪ್ರಮಾಣ ನಿರಂತರವಾಗಿ ಕಡಿಮೆಯಾಗುತ್ತಿದ್ದರೂ, ನಿರೀಕ್ಷಿತ ವೇಗದಲ್ಲಿ ಕಡಿಮೆಯಾಗುತ್ತಿಲ್ಲ. ಲಾಕ್‍ಡೌನ್ ಜಾರಿಯಲ್ಲಿದ್ದರೂ, ಜನರು ಅನಗತ್ಯವಾಗಿ ಓಡಾಡುತ್ತಿರುವ ಪ್ರಕರಣಗಳು ಕಂಡು ಬರುತ್ತಿವೆ. ಈ ಹಿನ್ನೆಲೆಯಲ್ಲಿ ಸೋಮವಾರ 10ಗಂಟೆಯಿಂದ ಒಂದು ವಾರ ಕಾಲ ಕಟ್ಟುನಿಟ್ಟಿನಿಂದ ಲಾಕ್‍ಡೌನ್ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದರು. ಈ ಅವಧಿಯಲ್ಲಿ […]

ಅಕ್ಕನ ಮಗಳನ್ನು ಮದುವೆಯಾಗಿ ಕೆಎಎಸ್​ ಅಧಿಕಾರಿಯನ್ನಾಗಿ ಮಾಡಿದ ವ್ಯಕ್ತಿ ಕೊರೊನಾಗೆ ಬಲಿ

Thursday, May 27th, 2021
seena

ಶಿವಮೊಗ್ಗ:  ಹೆಂಡತಿಯನ್ನ ಚೆನ್ನಾಗಿ ಓದಿಸಿ ಕೆಎಎಸ್ ಅಧಿಕಾರಿ ಮಾಡಲು ಶ್ರಮ ವಹಿಸಿದ್ದ ವ್ಯಕ್ತಿ  ಮಹಾಮಾರಿ ಕರೊನಾಗೆ ಬಲಿಯಾಗಿದ್ದಾನೆ. ಶಿವಮೊಗ್ಗದ ಸವಾರ್ ಲೈನ್ ರಸ್ತೆಯ ಸೀನಾ ಅಲಿಯಾಸ್ ಕಡ್ಡಿ ಸೀನಾ ಮೃತ ದುರ್ದೈವಿ. ಕಡ್ಡಿ ಸೀನಾ ತನ್ನ ಅಕ್ಕನ ಮಗಳು ಅಶ್ವಿನಿಯನ್ನು ಮದುವೆಯಾಗಿದ್ದ. ಆತ ಓದಿರಲಿಲ್ಲ ಅದಕ್ಕಾಗಿ ಹೆಂಡತಿಯಾದರೂ ಓದಿ ಕೆಎಎಸ್ ಅಧಿಕಾರಿ ಆಗಲಿ ಎಂದು ಬಯಸಿದ್ದ. ಹೀಗಾಗಿ ಹೆಂಡತಿಗೆ ಕೆಎಎಸ್ ಪೂರ್ವಬಾವಿ ತರಬೇತಿ ಕೊಡಿಸಿದ್ದ. ಆತನ ಹೆಂಡತಿ ಅಶ್ವಿನಿ 2020 ರಲ್ಲಿ ಕೆಎಎಸ್ ಪಾಸ್ ಮಾಡಿ ಆರು ತಿಂಗಳ […]