ಮಂಗಳೂರು ಜೈಲಿನೊಳಗೆ ಭೇಟಿಯ ನೆಪದಲ್ಲಿ ಗಾಂಜಾ ಪೂರೈಸುತ್ತಿದ್ದ ಯುವತಿ ಅಂದರ್

Friday, October 12th, 2018
jail

ಮಂಗಳೂರು: ಇಲ್ಲಿನ ಜಿಲ್ಲಾ ಕಾರಾಗೃಹದಲ್ಲಿ ಗಾಂಜಾ ಪೂರೈಕೆ ಮಾಡುತ್ತಿದ್ದ ಯುವತಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಮತ್ತು ಬರ್ಕೆ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ನಗರದ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯನ್ನು ಭೇಟಿ ಮಾಡುವ ನೆಪದಲ್ಲಿ ಈಕೆ ಗಾಂಜಾ ಪೂರೈಕೆ ಮಾಡುತ್ತಿದ್ದಳು. ಮಂಗಳೂರು ಜೈಲ್ ರಸ್ತೆಯಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿರುವ ವಿಚಾರಣಾಧೀನ ಕೈದಿಗಳನ್ನು ಭೇಟಿ ಮಾಡುವ ಸಮಯದಲ್ಲಿ ಅಕ್ರಮವಾಗಿ ನಿಷೇಧಿತ ವಸ್ತುವಾದ ಗಾಂಜಾವನ್ನು ನೀಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು, ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮುಸ್ತಾಫ […]

ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಲು ನಲಿಕೆ ಸಮಾಜ ಒತ್ತಾಯ

Wednesday, April 11th, 2018
kaladka-prabhakar

ಮಂಗಳೂರು: ಕೈರಂಗಳದಲ್ಲಿ ನಡೆದ ಪ್ರತಿಭಟನೆಯೊಂದರಲ್ಲಿ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ ಬೂತ ಕಟ್ಟುವವರ ವಿರುದ್ಧ ಸಾರ್ವಜನಿಕವಾಗಿ ನಿಂದಿಸಿ ಅವಮಾನಿಸಿದ್ದಾರೆ. ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಕ್ರಿಮಿನಲ್ ಪ್ರಕರಣ ದಾಖಲಿಸಿ, ಜೈಲಿಗಟ್ಟಬೇಕು ಎಂದು ಬೆಳ್ತಂಗಡಿಯ ನಲಿಕೆ ಸಮಾಜ ಸೇವಾ ಸಂಘ ಒತ್ತಾಯಿಸಿದೆ. ಸುದ್ದಿಗೋಷ್ಠಿಯಲ್ಲಿಂದು ಈ ಬಗ್ಗೆ ಒತ್ತಾಯ ಮಾಡಿದ ಬೆಳ್ತಂಗಡಿ ತಾಲೂಕು ಸಮಿತಿಯ ಅಧ್ಯಕ್ಷ ಎಸ್. ಪ್ರಭಾಕರ್ ಶಾಂತಿಕೋಡಿ, ಚುನಾವಣಾ ನೀತಿ ಸಂಹಿತೆಯನ್ನು ಬಹಿರಂಗವಾಗಿ ಪ್ರಶ್ನಿಸುವ ಮೂಲಕ ಪ್ರಭಾಕರ ಭಟ್ ಚುನಾವಣಾ ಆಯೋಗವನ್ನು ಕೂಡಾ ಕಪಿಮುಷ್ಟಿಯಲ್ಲಿರಿಸಲು ಪ್ರಯತ್ನಿಸಿದ್ದಾರೆ. […]

ವೇಶ್ಯಾವಾಟಿಕೆ ದಂಧೆ… ಮಂಗಳೂರಿನ ಮಸಾಜ್ ಪಾರ್ಲರ್‌‌ ಮೇಲೆ ಪೊಲೀಸರ ದಾಳಿ

Monday, April 9th, 2018
arrested

ಮಂಗಳೂರು: ವೇಶ್ಯಾವಾಟಿಕೆಗೆ ಪ್ರೆರೇಪಿಸುತ್ತಿದ್ದ ಮಸಾಜ್ ಸೆಂಟರ್‌ ಮೇಲೆ ಮಂಗಳೂರು ಸಿಸಿಬಿ ಪೊಲೀಸರು ಹಾಗೂ ಬರ್ಕೆ ಠಾಣೆಯ ಪೊಲೀಸರು ದಾಳಿ ಮಾಡಿ 3 ಜನರನ್ನು ಬಂಧಿಸಿರುವ ಘಟನೆ ಭಾನುವಾರ ನಗರದಲ್ಲಿ ನಡೆದಿದೆ. ಮಂಗಳೂರು ನಗರದ ಬಿಜೈ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಬಳಿಯಿರುವ ಕಮರ್ಷಿಯಲ್ ಕಾಂಪ್ಲೆಕ್ಸ್‌ನಲ್ಲಿ ನಡೆಸುತ್ತಿದ್ದ ಮಸಾಜ್ ಸೆಂಟರ್‌ನಲ್ಲಿ ಯುವತಿಯರು ಹಾಗೂ ಮಹಿಳೆಯರನ್ನು ಇಟ್ಟುಕೊಂಡು ಬಾಡಿ ಮಸಾಜ್ ಹೆಸರಿನಲ್ಲಿ ವೇಶ್ಯಾವಾಟಿಕೆಗೆ ನಡೆಸಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿತ್ತು. ಖಚಿತ ಮಾಹಿತಿಯ ಆದಾರದ ಮೇಲೆ ದಾಳಿ ನಡೆಸಿದ ಪೊಲೀಸರು ಉಮೇಶ್, ಜಗದೀಶ್, […]

ಮಂಗಳೂರಲ್ಲಿ ನಕಲಿ ಅಂಕಪಟ್ಟಿ ಮಾರಾಟ: ಓರ್ವನ ಬಂಧನ

Thursday, March 15th, 2018
markscard

ಮಂಗಳೂರು: ತೊಕ್ಕೊಟ್ಟು ಟಿ.ಸಿ. ರಸ್ತೆಯಲ್ಲಿರುವ ಮಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಕಲ್ ಸೈನ್ಸ್ (ಎಂಐಟಿಎಸ್) ಹೆಸರಿನ ಸಂಸ್ಥೆಯಲ್ಲಿ ನಕಲಿ ಅಂಕಪಟ್ಟಿಯನ್ನು ತಯಾರಿಸಿ ಹಣಕ್ಕಾಗಿ ಮಾರಾಟ ಮಾಡುತ್ತಿದ್ದವನನ್ನು ನಗರ ಸಿಸಿಬಿ ಪೊಲೀಸರು ಬಂಧಿಸಿ ನಕಲಿ ಅಂಕಪಟ್ಟಿಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತನನ್ನು ಉಳ್ಳಾಲ ಟಿ.ಸಿ. ರಸ್ತೆಯ ಗೋಡ್ವಿನ್ ಡಿ.ಸೋಜಾ (33) ಎಂದು ಗುರುತಿಸಲಾಗಿದೆ. ನಕಲಿ ಅಂಕಪಟ್ಟಿ ಮತ್ತು ಪ್ರಮಾಣಪತ್ರವನ್ನು ತಯಾರಿಸಿ 10,000 ರಿಂದ 45,000 ರೂ.ವರೆಗೆ ಮಾರಾಟ ಮಾಡಿ ವಂಚಿಸುತ್ತಿದ್ದ. ಆರೋಪಿ ಎಂಐಟಿಎಸ್‌ಲ್ಲಿ ಕೆಲಸ ಮಾಡುತ್ತಿದ್ದಾನೆ. ಈತ 2016ರಿಂದ ಸಂಸ್ಥೆಯನ್ನು ನಡೆಸುತ್ತಲೇ ಎಸ್ಎಸ್ಎಲ್‌ಸಿ, […]

ಮಂಗಳೂರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ: ಮಹಿಳಾ ಪಿಂಪ್ ಸಹಿತ ಇಬ್ಬರ ಸೆರೆ

Tuesday, February 27th, 2018
hitech

ಮಂಗಳೂರು: ನಗರದ ಹೃದಯ ಭಾಗದಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಯೊಂದನ್ನು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಭೇದಿಸಿದ್ದಾರೆ. ನಗರದ ಕೊಡಿಯಾಲ್ ಗುತ್ತು ಎಂಬಲ್ಲಿನ ಫ್ಲಾಟ್‌ವೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿತ್ತು. ದಾಳಿ ನಡೆಸಿದ ಸಿಸಿಬಿ ಪೊಲೀಸರು ಮಹಿಳಾ ಪಿಂಪ್ ಹಾಗೂ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕುಶ ಅಪಾರ್ಟ್‌ಮೆಂಟಿನ ಮೇಲೆ ದಾಳಿ ನಡೆಸಲಾಗಿದ್ದು, ಕೋಲ್ಕತ್ತಾ ಮೂಲದ ಯುವತಿಯನ್ನು ರಕ್ಷಣೆ ಮಾಡಲಾಗಿದೆ. ಬಂಧಿತ ಆರೋಪಿಗಳನ್ನು ರೆಹಮತ್ ಮಂಜಿಲ್‌ನ ರಿಯಾಜ್ ಅಹ್ಮದ್ ಎಂದು ಗುರುತಿಸಲಾಗಿದೆ. ಈತನ ಜೊತೆ ಮಹಿಳಾ ಪಿಂಪ್‌ನ್ನು ಬಂಧಿಸಲಾಗಿದೆ. ಈ ಕೃತ್ಯದಲ್ಲಿ […]